Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಿಎಂ ಜೋಸೆಫ್ ವಿಜಯ್‌ಗೆ ದುಂಡುಮೇಜಿನ ಸ್ವಾಗತ

by KM Shivaraju July 29, 2026
written by KM Shivaraju July 29, 2026 0 comments 1 minutes read
0FacebookTwitterPinterestEmail
88

ಬೆಂಗಳೂರು:ಕಾವೇರಿ ಜಲ ವಿವಾದ ಹಾಗೂ ಮೇಕೆದಾಟು ಯೋಜನೆ ಕುರಿತು ದ್ವಿಪಕ್ಷೀಯ ಮಾತುಕತೆಗೆ ಕರ್ನಾಟಕಕ್ಕೆ ಆಗಮಿಸುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಅದ್ದೂರಿ ಸ್ವಾಗತ ನೀಡಲು ಕರ್ನಾಟಕ ಸರ್ಕಾರ ಸಿದ್ಧತೆ ನಡೆಸಿದೆ.

ವಿಜಯ್, ಆಗಸ್ಟ್ 3ರಂದು ಒಂದು ದಿನದ ರಾಜ್ಯ ಪ್ರವಾಸ ಕೈಗೊಂಡು ವಿಧಾನಸೌಧದಲ್ಲಿ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಜಲ ವಿವಾದ ಪರಿಹಾರ ಕುರಿತಂತೆ ಮಾತುಕತೆ ನಡೆಸಲಿದ್ದಾರೆ.

ವಿಧಾನಸೌಧ ಶೃಂಗಾರ

ಈ ಸಭೆಗಾಗಿ ಇಡೀ ವಿಧಾನಸೌಧದ ಡಿಪಿಆರ್ ಮತ್ತು ಲೋಕೋಪಯೋಗಿ ಇಲಾಖೆ ಸ್ವಚ್ಛತೆ ಮತ್ತು ಶೃಂಗಾರ ಕಾಮಗಾರಿ ಕೈಗೊಂಡಿದೆ.

ವಿಧಾನಸೌಧದ 3ನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣವನ್ನೇ ಅದ್ದೂರಿಯಾಗಿ ಶೃಂಗರಿಸಲಾಗುತ್ತಿದೆ.

ಉಭಯ ರಾಜ್ಯಗಳ ಇಬ್ಬರು ಮುಖ್ಯಮಂತ್ರಿಗಳು, ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳೂ ಸೇರಿದಂತೆ 25 ಮಂದಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರವೇಶ ನಿಷಿದ್ಧ

ಇವರನ್ನು ಹೊರತುಪಡಿಸಿ ಉಳಿದವರಿಗೆ ಅಂದು ವಿಧಾನಸೌಧ ಪ್ರವೇಶ ನಿಷಿದ್ಧ, ಸಭೆಗಾಗಿ ದುಂಡುಮೇಜಿನ ಮಾದರಿಯಲ್ಲಿ ಆಸನ ವ್ಯವಸ್ಥೆ ಮಾಡಲಾಗುತ್ತಿದೆ.

ವಿಧಾನಸೌಧದ ಪೂರ್ವ ದ್ವಾರದಿಂದ ವಿಜಯ್ ಪ್ರವೇಶಕ್ಕೆ ಸಮ್ಮೇಳನ ಸಭಾಂಗಣದವರೆಗೆ ಸಂಪೂರ್ಣ ಕೆಂಪು ಹಾಸುಗಂಬಳಿಯಿಂದ ಶೃಂಗರಿಸಲಾಗುತ್ತಿದೆ.

ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಕುಳಿತುಕೊಳ್ಳುವ ಆಸನದ ಹಿಂಬದಿಯಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ಅಧಿಕೃತ ಲಾಂಛನ ಒಳಗೊಂಡ ಧ್ವಜಗಳನ್ನು ಅಳವಡಿಸಲಾಗುತ್ತಿದೆ.

ಮೇಕೆದಾಟು ಯೋಜನೆ

ಕಾವೇರಿ ವಿವಾದಕ್ಕಿಂತ ಮಿಗಿಲಾಗಿ ಮೇಕೆದಾಟು ಯೋಜನೆ ಕುರಿತು ವಿಜಯ್ ನಮ್ಮ ಮುಖ್ಯಮಂತ್ರಿ ಅವರನ್ನು ಸಂಪರ್ಕಿಸಿ ಮಾತುಕತೆಗೆ ಬರುವುದಾಗಿ ತಿಳಿಸಿದ್ದರು.

ತದನಂತರ ತಮಿಳುನಾಡು ಸರ್ಕಾರದ ಮುಖ್ಯಕಾರ್ಯದರ್ಶಿ ಅವರು, ಕರ್ನಾಟಕದ ಮುಖ್ಯಕಾರ್ಯದರ್ಶಿ ಅವರಿಗೆ ಪತ್ರ ಬರೆದು, ತಮ್ಮ ರಾಜ್ಯದ ಮುಖ್ಯಮಂತ್ರಿ, ಸಚಿವರು ಹಾಗೂ ಅಧಿಕಾರಿಗಳ ತಂಡ ಮಾತುಕತೆಗೆ ಬರುತ್ತಿರುವುದಾಗಿ ತಿಳಿಸಿದ್ದರು.

ವಿಜಯ್ ಕಾರ್ಯಾಲಯದ ಸಂದೇಶ ಬರುತ್ತಿದ್ದಂತೆ ಸ್ವತಃ ಮುಖ್ಯಮಂತ್ರಿ ಮೇಲ್ವಿಚಾರಣೆ ವಹಿಸಿಕೊಂಡು, ಸಮ್ಮೇಳನ ಸಭಾಂಗಣವನ್ನು ಬೇರೆ ಯಾವ ಕಾರ್ಯಕ್ರಮಕ್ಕೂ ಬಳಸದಂತೆ ಹಾಗೂ ಸಭಾಂಗಣವನ್ನು ಅದ್ದೂರಿಯಾಗಿ ಶೃಂಗರಿಸಲು ಸೂಚಿಸಿದರು.

ಗೌರವಯುತ ಸ್ವಾಗತ

ಅಲ್ಲದೆ, ಅತಿಥಿಗಳನ್ನು ಅತ್ಯಂತ ಗೌರವಯುತವಾಗಿ ಬರಮಾಡಿಕೊಳ್ಳಲು ಅಗತ್ಯ ಸಿದ್ಧತೆ ಮಾಡುವಂತೆ ಮುಖ್ಯಕಾರ್ಯದರ್ಶಿ ಅವರಿಗೆ ಮುಖ್ಯಮಂತ್ರಿ ಆದೇಶಿಸಿದರು.

ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಈ ಹಿಂದೆ ತಮಿಳುನಾಡು ಮುಖ್ಯಮಂತ್ರಿ ಎಂ.ಕರುಣಾನಿಧಿ ಎರಡು ಬಾರಿ ಹಾಗೂ ಜಯಲಲಿತಾ ಒಂದು ಬಾರಿ ಕರ್ನಾಟಕಕ್ಕೆ ಆಗಮಿಸಿ ಬೆಂಗಳೂರಿನಲ್ಲಿ ರಾಜ್ಯದ ಅಂದಿನ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದರು.

ದ್ವಿಪಕ್ಷೀಯ ಮಾತುಕತೆ

ಕರುಣಾನಿಧಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡರೆ, ಜಯಲಲಿತಾ ಶಕ್ತಿಸೌಧಕ್ಕೆ ಬರಲು ನಿರಾಕರಿಸಿದ ಹಿನ್ನೆಲೆಯಲ್ಲಿ ಎಚ್‌ಎಎಲ್ ವಿಮಾನ ನಿಲ್ದಾಣ ಸಮೀಪದ ಪಂಚತಾರಾ ಹೋಟೆಲ್ ಒಂದರಲ್ಲಿ ಸಿದ್ಧಪಡಿಸಿದ್ದ ವೇದಿಕೆಗೆ ಆಗಮಿಸಿ ದ್ವಿಪಕ್ಷೀಯ ಮಾತುಕತೆಯಲ್ಲಿ ಪಾಲ್ಗೊಂಡಿದ್ದರು.

ಲೀಲಾ ಪ್ಯಾಲೇಸ್‌ನಲ್ಲಿ ನಡೆದ ಈ ಸಭೆಗೆ ಜಯಲಲಿತಾ ತಾವು ಕುಳಿತುಕೊಳ್ಳುವ ಮುಖ್ಯಮಂತ್ರಿ ಆಸನವನ್ನೇ ವಿಶೇಷ ವಿಮಾನದಲ್ಲಿ ತರಿಸಿಕೊಂಡಿದ್ದನ್ನು ಸ್ಮರಿಸಬಹುದು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
d k shivakumarjosef vijaykarnatakakaveri water disputemekedaturound table conferencetamilunadutwo state chief ministers meetvidhana soudha
0 FacebookTwitterPinterestEmail
KM Shivaraju

previous post
ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ
next post
ಕಾವೇರಿ ಸಂಕಷ್ಟ: ಕರ್ನಾಟಕದ ಮೇಲ್ಮನವಿ ತಿರಸ್ಕೃತ

You may also like

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

September 18, 2026

ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

September 17, 2026

ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

September 16, 2026

ಸಚಿವ ಸತೀಶ್ ಜಾರಕಿಹೊಳಿಗೆ ಇ.ಡಿ. ಬಂಧನ ಭೀತಿ ?

September 15, 2026

ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

September 12, 2026

ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

September 11, 2026

ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

September 10, 2026

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

September 9, 2026

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (570)
  • ಅಂಕಣ (109)
  • ಉದ್ಯೋಗ (351)
  • ದಿನ ಭವಿಷ್ಯ (110)
  • ರಾಜಕೀಯ (2,063)
  • ರಾಜ್ಯ (2,378)
  • ರಾಷ್ಟ್ರ (2,342)
  • ವಿಶ್ಲೇಷಣೆ (202)
  • ಶಿಕ್ಷಣ (410)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026
  • ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

    September 16, 2026

KMS Special

  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026
  • ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

    September 16, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ...

September 18, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ