Monday, October 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, October 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ಡಬಲ್ ಬಿಲ್ ಅಧಿಕಾರಿಗಳನ್ನು ಬಡಿದುಹಾಕುತ್ತೇನೆ

by admin August 11, 2026
written by admin August 11, 2026 0 comments 2 minutes read
0FacebookTwitterPinterestEmail
87

ಬೆಂಗಳೂರು:ಡಬಲ್ ಬಿಲ್, ನಕಲಿ ಬಿಲ್ ಮಾಡುವ ಅಧಿಕಾರಿಗಳನ್ನು ಬಡಿದುಹಾಕುವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಎಚ್ಚರಿಸಿದ್ದಾರೆ.

ಭಷ್ಟಾಚಾರ ವಿಷಯದಲ್ಲಿ ರಾಜೀ ಇಲ್ಲ, ಅಧಿಕಾರಿಗಳ ಪ್ರತಿ ಹೆಜ್ಜೆ ಪರಿಶೀಲಿಸುತ್ತೇನೆ, ನೀವು ಪ್ರತೀ ಫಲಾನುಭವಿಯ ಮಾಹಿತಿ ಇಟ್ಟುಕೊಳ್ಳಬೇಕು, ಅವರು ಅದನ್ನು ಹೇಗೆ ಬಳಸುತ್ತಿದ್ದಾರೆ ಎಂಬುದನ್ನು ನೋಡಿಕೊಳ್ಳಬೇಕು.

ನಕಲಿ ಬಿಲ್‌ಗಳಿಗೆ ಅವಕಾಶ ಇಲ್ಲ

ನಮ್ಮಲ್ಲಿ ಡಬಲ್ ಬಿಲ್ ಮಾಡುವ ಕೆಲಸ ಮಾಡುತ್ತಿದ್ದಾರೆ, ಅಂತಹವರನ್ನು ಬಡಿದುಹಾಕುತ್ತೇನೆ, ನಕಲಿ ಬಿಲ್‌ಗಳಿಗೆ ಅವಕಾಶ ಇಲ್ಲ.

ದಾಖಲೆ ತಿದ್ದುವುದಕ್ಕೆ ಬ್ರೇಕ್ ಹಾಕಲು ಆಸ್ತಿ ದಾಖಲೆ ಡಿಜಿಟಲೀಕರಣ ಮಾಡಲಾಗುತ್ತಿದೆ ಎಂದರು.

ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ನಡೆದ ಸರ್ಕಾರಿ ನೌಕರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಸರ್ಕಾರಿ ನೌಕರರನ್ನು ಉದ್ದೇಶಿಸಿ ಮಾತನಾಡಿದ ಪರಿ ಇದಾಗಿದೆ.

ದಿನದ ಕಾರ್ಯಕ್ರಮ ವಿವರ ನೀಡಬೇಕು

ಪ್ರತಿ ತಾಲ್ಲೂಕು ಅಧಿಕಾರಿಗಳು ತಮ್ಮ ದಿನದ ಕಾರ್ಯಕ್ರಮದ ವಿವರ ಹಿರಿಯ ಅಧಿಕಾರಿಗಳಿಗೆ ನೀಡಬೇಕು.

ಸಹಕಾರ, ಕಂದಾಯ ಅಧಿಕಾರಿಗಳಿಗೆ ನ್ಯಾಯ ನೀಡುವ ಅಧಿಕಾರ ಇರುತ್ತದೆ, ನ್ಯಾಯಪೀಠದಿಂದ ಅನ್ಯಾಯ ಆಗಬಾರದು, ಯಾರ ಒತ್ತಡಕ್ಕೂ ಮಣಿಯದೆ ಕೆಲಸ ಮಾಡಿ.

ವಿಧಾನಮಂಡಲದ ಅಧಿವೇಶನ ಮುಗಿಯುತ್ತಿದ್ದಂತೆ, ಪ್ರತೀ ತಾಲ್ಲೂಕಿಗೂ ತೆರಳಿ, ಕೆಳಮಟ್ಟದ ಕಚೇರಿಯಿಂದ ಶಾಲೆ, ಆಸ್ಪತ್ರೆಗಳಿಗೂ ಭೇಟಿ ನೀಡಿ ನಿಮ್ಮ ಕಾರ್ಯವೈಖರಿಯನ್ನು ಖುದ್ದಾಗಿ ತಿಳಿಯುತ್ತೇನೆ ಎಂದರು.

ನೌಕರರಿಂದ ಮಾಹಿತಿ ಸಂಗ್ರಹ

ಬ್ಯಾಂಕ್ವೆಟ್‌ಹಾಲ್‌ನಲ್ಲಿ ಇಲಾಖಾ ಕಾರ್ಯದರ್ಶಿಗಳೂ, ಪ್ರಧಾನ ಕಾರ್ಯದರ್ಶಿಗಳೂ ಅಲ್ಲದೆ, ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ನೌಕರರನ್ನು ಉದ್ದೇಶಿಸಿ ಮಾತನಾಡಿ, ಅವರಿಂದ ಕೆಲವು ಮಾಹಿತಿಗಳನ್ನು ಪಡೆದರು.

ಮುಂದುವರೆದು ಮಾತನಾಡಿದ ಅವರು, ನಾನೂ ಸೇರಿದಂತೆ ನನ್ನ ಮಂತ್ರಿಮಂಡಲ, ಅಧಿಕಾರಿಗಳು, ಎಲ್ಲರೂ ಸರ್ಕಾರಿ ನೌಕರರು, ನಮ್ಮದು ಟೀಮ್ ಕರ್ನಾಟಕ, ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ, ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಕಲ್ಯಾಣ ಮಾಡುವುದೇ ನಮ್ಮ ಗುರಿ ಎಂದರು.

ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಕಾಲದಿಂದ ಇಲ್ಲಿಯವರೆಗೆ ಎಲ್ಲ ಮುಖ್ಯಮಂತ್ರಿಗಳು ತಮ್ಮದೇ ರೀತಿಯಲ್ಲಿ, ತಮ್ಮದೇ ಅನುಭವ ಸಿದ್ಧಾಂತದ ಮೇಲೆ ಆಡಳಿತ ಮಾಡಿದ್ದಾರೆ.

ಇತಿಹಾಸ ಸೃಷ್ಟಿಸ ಬಯಸುತ್ತೇನೆ

ನಮ್ಮ, ನಿಮ್ಮ ಮೇಲೆ ಜನರ ಬದುಕಿನಲ್ಲಿ, ಬದಲಾವಣೆ ತರುವ ಜವಾಬ್ದಾರಿ ಇದೆ, ನಾನು ಇತಿಹಾಸ ಓದಲು ಬರೆಯಲು ಇಚ್ಚಿಸುವುದಿಲ್ಲ, ಇತಿಹಾಸ ಸೃಷ್ಟಿಸಲು ಬಯಸುತ್ತೇನೆ, ಸರ್ಕಾರಿ ನೌಕರರ ಸೇವೆಯಿಂದಲೇ ನಮ್ಮ ರಾಜ್ಯ ಈ ಹಂತಕ್ಕೆ ಬೆಳೆದಿದೆ ಎಂದರು.

ನಮ್ಮಲ್ಲಿರುವ ಶಿಕ್ಷಣ, ಆರೋಗ್ಯ ಸೌಲಭ್ಯ ಬೇರೆ ಎಲ್ಲೂ ಇಲ್ಲ, ನಾನು ನನ್ನ ಮೇಲೇ ಕಣ್ಣು ಇಟ್ಟುಕೊಂಡಿದ್ದೇನೆ, ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಶಾಸಕರು ಯಾವ ರೀತಿ ಕೆಲಸ ಮಾಡುವ ಕುರಿತು ಪರಿಶೀಲನೆ ಮಾಡುತ್ತೇವೆ, ನಾವು ಕೆಲಸ ಮಾಡುವುದೇ ಜನರಿಗಾಗಿ, ಬೇರೆಯವರಿಗೆ ಒಪ್ಪಿಸದಿದ್ದರೂ ನಿಮ್ಮ ಆತ್ಮಸಾಕ್ಷಿಗೆ ಒಪ್ಪುವಂತೆ ಕೆಲಸ ಮಾಡಿ ಎಂದರು.

ಅಧಿಕಾರ ಜವಾಬ್ದಾರಿಯ ಸಂಕೇತ, ಇದು ಸಿಂಹಾಸನ ಅಲ್ಲ, ಅವಕಾಶ, ಮೂರ್ತಿಗೆ ಬೆಲೆ ಕಟ್ಟಿದರೂ ಭಗವಂತನಿಗೆ ಬೆಲೆ ಕಟ್ಟಲು ಆಗಲ್ಲ, ಜನರಲ್ಲೇ ದೇವರನ್ನು ಕಾಣಬಹುದು, ಗ್ಯಾರಂಟಿ ಬಗ್ಗೆ ಶಾಸಕರು, ವಿರೋಧ ಪಕ್ಷದವರು ಟೀಕೆ ಮಾಡುತ್ತಿದ್ದಾರೆ, ಪ್ರಧಾನಮಂತ್ರಿಗಳು ಟೀಕಿಸಿದರೂ ನಂತರ ಅವರೇ ಪಾಲಿಸುವಂತಾಗಿದೆ, ನಮ್ಮ ಮಾದರಿ ದೇಶಕ್ಕೆ ಮಾದರಿಯಾಗಿದೆ ಎಂದರು.

ಶಾಸಕರು ಪ್ರಜಾಸೇವೆ ಮಾಡಬೇಕು

ಪ್ರಜಾಸೇವೆ ಇಲಾಖೆ ಮೂಲಕ ಜಿಲ್ಲಾ ಮಂತ್ರಿ, ಶಾಸಕರು 2 ವಾರಕ್ಕೊಮ್ಮೆ ತಾಲ್ಲೂಕಿಗೆ ಹೋಗಿ ಪ್ರಜಾಸೇವೆ ಕೆಲಸ ಮಾಡಬೇಕು, ತಿಂಗಳ ಮೊದಲ ಹಾಗೂ ಮೂರನೇ ಶನಿವಾರ, ನಂತರ ಪಂಚಾಯತ್ ಮಟ್ಟದಲ್ಲಿ ಮಾಡಬೇಕು, ಶಾಸಕರು ಹೋಬಳಿ ಮಟ್ಟದಲ್ಲಿ ಮಾಡಬೇಕು, ಜನರ ಸಂಕಷ್ಟಕ್ಕೆ ಕಾನೂನು ಚೌಕಟ್ಟಿನಲ್ಲಿ ಸಹಾಯ ಮಾಡಿ.

ಬಡವರಿಗೆ ಸೂರಿನ ಆಧಾರ ನೀಡುತ್ತಿದ್ದೇವೆ, ಅವರು ಕಷ್ಟ ಪಟ್ಟು ಸಂಪಾದಿಸಿದ ಆಸ್ತಿಗೆ ಭದ್ರತೆ ನೀಡುತ್ತಿದ್ದೇವೆ, ಜನಸೇವೆ ನಮ್ಮ ನಿಮ್ಮ ಮೂಲ ಉದ್ದೇಶವಾಗಿರಬೇಕು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm d k shivakumardouble bill officers will be punishedgovt. workers meetministers and mla's must meet grassroots peoplemla's should serve peopleno place for duplicate billsreport to higher officersteam karnataka
0 FacebookTwitterPinterestEmail
admin

previous post
ಸಂಪುಟಕ್ಕೆ ಸಣ್ಣ ಸರ್ಜರಿ ಅನುಮತಿಗೆ ಡಿಕೆಶಿ ದೆಹಲಿಗೆ
next post
ಗುಟ್ಕಾ, ತಂಬಾಕು ಮಿಶ್ರಿತ ಮಸಾಲಾ ಮಾರಾಟ ಬಂದ್

You may also like

ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

October 3, 2026

ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

October 1, 2026

ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

September 30, 2026

ನೈಸ್‌ ಯೋಜನೆ: ಡಿಕೆಶಿ ಕುಟುಂಬ 3 ಲಕ್ಷ ಕೋಟಿ ಲೂಟಿ

September 29, 2026

ವರಿಷ್ಠರ ಜೊತೆ ಡಿಕೆಶಿ ಸಂಪುಟ ಪುನರ್ ರಚನೆ ಚರ್ಚೆ

September 28, 2026

ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಹೋರಾಟ

September 26, 2026

ಸಚಿವ ಜಾರಕಿಹೊಳಿ-ಕುಮಾರಸ್ವಾಮಿ ರಹಸ್ಯ ಚರ್ಚೆ ?

September 25, 2026

ರಾಜಕೀಯ ಸಂದಿಗ್ಧತೆಯಲ್ಲಿ ಸಚಿವ ಜಾರಕಿಹೊಳಿ

September 24, 2026

ಆಡಳಿತ ಶಾಸಕರ ರಾಜೀನಾಮೆಗೆ ಡಿಕೆಶಿ ಸಮರ್ಥನೆ

September 23, 2026

ಅಸಮಾಧಾನ ಶಾಸಕರ ಓಲೈಕೆಗೆ ತಲಾ 100 ಕೋಟಿ ರೂ.

September 22, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (582)
  • ಅಂಕಣ (109)
  • ಉದ್ಯೋಗ (354)
  • ದಿನ ಭವಿಷ್ಯ (110)
  • ರಾಜಕೀಯ (2,075)
  • ರಾಜ್ಯ (2,390)
  • ರಾಷ್ಟ್ರ (2,354)
  • ವಿಶ್ಲೇಷಣೆ (202)
  • ಶಿಕ್ಷಣ (411)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

    October 3, 2026
  • ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

    October 1, 2026
  • ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

    September 30, 2026

KMS Special

  • ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

    October 3, 2026
  • ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

    October 1, 2026
  • ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

    September 30, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ...

October 3, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ