Monday, October 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, October 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕರ್ನಾಟಕಕ್ಕೆ ನ್ಯಾಯಯುತ ಅನುದಾನ ನೀಡಿ: ಡಿಕೆಶಿ

by admin August 20, 2026
written by admin August 20, 2026 0 comments 2 minutes read
0FacebookTwitterPinterestEmail
59

ಮಹಾಬಲಿಪುರಂ (ತಮಿಳುನಾಡು):ಕರ್ನಾಟಕಕ್ಕೆ ನ್ಯಾಯಯುತವಾಗಿ ದೊರಕಬೇಕಾದ ಅನುದಾನ ನೀಡಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರವನ್ನು ಮತ್ತೊಮ್ಮೆ ಆಗ್ರಹಿಸಿದ್ದಾರೆ.

ತಮಿಳುನಾಡಿನ ಮಹಾಬಲಿಪುರಂನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅಧ್ಯಕ್ಷತೆಯಲ್ಲಿ ನಡೆದ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ಇಲ್ಲಿಗೆ ದೂರು ನೀಡಲು ಬಂದಿಲ್ಲ, ಆರ್ಥಿಕತೆ ಮುನ್ನಡೆಸುತ್ತಿರುವ ರಾಜ್ಯಗಳಿಗೆ ಸಲ್ಲಬೇಕಾದ ಗೌರವ, ನ್ಯಾಯಯುತ ಅಂಶಗಳನ್ನು ತಿಳಿಸಲು ಬಂದಿದ್ದೇವೆ, ನಮ್ಮೊಂದಿಗೆ ಹೆಜ್ಜೆ ಹಾಕಿ, ನಾವು ಭಾರತದ ಭವಿಷ್ಯ ಬೆಳಗುವ ಅವಕಾಶಗಳನ್ನು ಮುಂದುವರೆಸಿಕೊಂಡು ಹೋಗುತ್ತೇವೆ ಎಂದರು.

ಐಟಿ-ಬಿಟಿ ದೇಶದಲ್ಲೇ ಮೊದಲು

ಐಟಿ-ಬಿಟಿ ರಫ್ತಿನಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ, ಎಲ್ಲ ರಾಜ್ಯಗಳಿಗಿಂತ ಹೆಚ್ಚು ತೆರಿಗೆ ಪಾಲನ್ನು ಕೇಂದ್ರಕ್ಕೆ ನೀಡುತ್ತಿದ್ದೇವೆ.

ನಾವು ಪಾವತಿಸುತ್ತಿರುವ ತೆರಿಗೆಯಲ್ಲಿ ಸೂಕ್ತ ಪ್ರಮಾಣದ ಪಾಲು ನಮಗೆ ದೊರೆಯುತ್ತಿಲ್ಲ.

ಕರ್ನಾಟಕ ಬಲಿಷ್ಠವಾಗಿದ್ದರೆ ದಕ್ಷಿಣ ಭಾರತ ಬಲಿಷ್ಠವಾಗಿರುತ್ತದೆ, ದಕ್ಷಿಣ ಭಾರತ ಬಲಿಷ್ಠವಾದರೆ ರಾಷ್ಟ್ರವೇ ಬಲಿಷ್ಠವಾಗುತ್ತದೆ.

ನಮ್ಮ ಪಾಲಿನ ಅನುದಾನ ಕೊಡಿ

ನಮ್ಮ ಪಾಲಿನ ನ್ಯಾಯಯುತ ಅನುದಾನ ದೊರೆತರೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯ, ಹೊಸ ಯೋಜನೆಗಳು ಅನುಷ್ಟಾನಗೊಂಡರೆ, ಅದು ರಾಷ್ಟ್ರದ ಭಾಗವಾಗುತ್ತದೆ, ಇದನ್ನು ಗಮನದಲ್ಲಿ ಇಟ್ಟುಕೊಂಡು ದಕ್ಷಿಣ ರಾಜ್ಯಗಳ ಅನುದಾನ ನೀಡಿ ಎಂದರು.

15ನೇ ಹಣಕಾಸು ಆಯೋಗದ ಅವಧಿಯಲ್ಲಿ ವಿಭಜಿಸಬಹುದಾದ ತೆರಿಗೆ ಭಾಗದಲ್ಲಿ ಕರ್ನಾಟಕದ ಪಾಲು ಶೇ.4.7ರಿಂದ ಶೇ.3.6ಕ್ಕೆ ಇಳಿಕೆಯಾಯಿತು, ಇದು ಸುಮಾರು ಶೇ.23ರಷ್ಟು ಕಡಿತವಾಗಿದ್ದು, ಆರು ವರ್ಷಗಳ ಅವಧಿಯಲ್ಲಿ ರಾಜ್ಯಕ್ಕೆ ಅಂದಾಜು 65,000 ಕೋಟಿ ರೂ. ನಷ್ಟ ಉಂಟಾಗಿದೆ.

15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ಮತ್ತು 6,000 ಕೋಟಿ ರೂ. ರಾಜ್ಯ ನಿರ್ದಿಷ್ಟ ಅನುದಾನ ಶಿಫಾರಸು ಮಾಡಿತ್ತು, ಆದರೆ, ಎರಡೂ ಶಿಫಾರಸು ಅನುದಾನಗಳು ಬಿಡುಗಡೆಯಾಗಿಲ್ಲ, ಈ ಅನ್ಯಾಯ ಸರಿಪಡಿಸಿ ಎಂದರು.

ನಮ್ಮ ಪಾಲು ಶೇ.4.7ಕ್ಕೆ ಹೆಚ್ಚಿಸಿ

16ನೇ ಹಣಕಾಸು ಆಯೋಗ ನಮ್ಮ ರಾಜ್ಯಕ್ಕೆ ಭಾಗಶಃ ನ್ಯಾಯ ಒದಗಿಸಿದ್ದು, ಕರ್ನಾಟಕದ ಪಾಲನ್ನು ಶೇ.3.64ರಿಂದ ಶೇ.4.131ಕ್ಕೆ ಹೆಚ್ಚಿಸುವ ಮೂಲಕ ಕೆಲವು ಮಟ್ಟಿಗೆ ಮರುಸ್ಥಾಪಿಸಿದೆ, ಆದಾಗ್ಯೂ, ನಮ್ಮ ಪಾಲನ್ನು ಸಂಪೂರ್ಣವಾಗಿ ಶೇ.4.7ಕ್ಕೆ ನಿಲ್ಲಿಸಬೇಕಿದೆ.

ಕರ್ನಾಟಕ ಜಿಎಸ್‌ಟಿ ಮತ್ತು ಆದಾಯ ತೆರಿಗೆಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ರಾಜ್ಯವಾಗಿದೆ, ಬೆಳವಣಿಗೆ ಮತ್ತು ಆದಾಯದ ವಿಷಯದಲ್ಲಿ ಉತ್ತಮ ಸಾಧನೆ ಮಾಡುವ ರಾಜ್ಯವನ್ನು ಪ್ರೋತ್ಸಾಹಿಸಬೇಕೇ ಹೊರತು, ದಂಡಿಸಬಾರದು.

ರಾಜ್ಯಗಳ ಪಾಲು ಅಂತಿಮಗೊಂಡಿರುವ ಸಂದರ್ಭದಲ್ಲಿ, ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು ಯೋಜನೆ, ಎಸ್‌ಟಿಟಿಆರ್‌ಆರ್ ದಕ್ಷಿಣ ಭಾಗ, ರಾಯಚೂರಿಗೆ ಎಐಐಎಂಎಸ್ ಹಾಗೂ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್‌ನಂತಹ ಹೆಚ್ಚುವರಿ ಕೇಂದ್ರ ಯೋಜನೆಗಳ ಮೂಲಕ ಕರ್ನಾಟಕಕ್ಕೆ ನ್ಯಾಯ ಒದಗಿಸಬೇಕು.

ನದಿ ನೀರಿನ ಹಂಚಿಕೆ ವಿಭಜಿಸಬಾರದು

ನಮ್ಮ ಧ್ವನಿಯಲ್ಲಿ ನ್ಯಾಯಯುತತೆ ಒಂದು ಭಾಗವಾದರೆ, ನಮ್ಮ ಸಂಪನ್ಮೂಲಗಳಲ್ಲಿ ನ್ಯಾಯಯುತ ಪಾಲು ಇನ್ನೊಂದು ಭಾಗವಾಗಿದೆ, ಈ ಸಭೆಯಲ್ಲಿರುವ ಪ್ರತಿಯೊಂದು ರಾಜ್ಯಕ್ಕೂ ನೀರಿಗಿಂತ ಮಹತ್ವದ ಸಂಪನ್ಮೂಲ ಮತ್ತೊಂದಿಲ್ಲ, ನಮ್ಮ ನದಿಗಳು ರಾಜಕೀಯ ಗಡಿಗಳನ್ನು ಗುರುತಿಸುವುದಿಲ್ಲ, ಕಾವೇರಿ, ಕೃಷ್ಣಾ, ತುಂಗಭದ್ರಾ, ಪೆನ್ನಾರ್ ಮತ್ತು ಪಾಲಾರ್ ನದಿಗಳು ದಕ್ಷಿಣ ಪರ್ಯಾಯ ದ್ವೀಪದ ಜೀವನಾಡಿಗಳಾಗಿವೆ, ನೀರು ನಮ್ಮನ್ನು ಒಗ್ಗೂಡಿಸಬೇಕು, ವಿಭಜಿಸಬಾರದು, ನೀರಿನ ಹಂಚಿಕೆಯಿಂದ ನೀರಿನ ಸಹಕಾರದತ್ತ ಸಾಗುವ ಸಮಯ ಈಗ ಬಂದಿದೆ.

ಪ್ರತಿಯೊಂದು ನದಿಪಾತ್ರದ ರಾಜ್ಯಕ್ಕೂ ತನ್ನದೇ ಆದ ನ್ಯಾಯಸಮ್ಮತ ಅಗತ್ಯಗಳಿವೆ ಎಂಬುದನ್ನು ಒಪ್ಪಿಕೊಳ್ಳುತ್ತೇವೆ ಮತ್ತು ನಮ್ಮ ನಿಲುವು ಮೂರು ತತ್ತ್ವಗಳ ಮೇಲೆ ಆಧಾರಿತವಾಗಿದೆ, ಸಮಾನತೆ, ಪಾರದರ್ಶಕತೆ, ಸಹಕಾರ, ಆದರೆ, ಸಹಕಾರ ಎರಡೂ ದಿಕ್ಕಿನಿಂದ ಇರಬೇಕು.

ಕರ್ನಾಟಕದ ಹಕ್ಕುಗಳನ್ನು ಗೌರವಿಸಿ

ಕರ್ನಾಟಕ ಸದಾ ತನ್ನ ನೆರೆ ರಾಜ್ಯಗಳ ಹಕ್ಕುಗಳನ್ನು ಗೌರವಿಸಿದೆ, ಅದೇ ರೀತಿ ನಮ್ಮ ಹಕ್ಕುಗಳನ್ನೂ ಗೌರವಿಸಬೇಕೆಂದು ಬಯಸುತ್ತೇವೆ, ನ್ಯಾಯಮಂಡಳಿಗಳ ತೀರ್ಪುಗಳಡಿ ನಮಗೆ ಕಾನೂನುಬದ್ಧವಾಗಿ ದೊರೆಯಬೇಕಾದ ನೀರಿನ ಪಾಲು ಹಾಗೂ ನಮ್ಮ ರೈತರಿಗೆ ನೀರನ್ನು ತಲುಪಿಸುವ ಯೋಜನೆಗಳ ಸಮಯೋಚಿತ ಪೂರ್ಣಗೊಳಿಸುವಿಕೆಯನ್ನು ನಾವು ನಿರೀಕ್ಷಿಸುತ್ತೇವೆ.

ಕೇಂದ್ರ ಕಾಯಿದೆಯು ಪ್ರಮುಖ ಖನಿಜಗಳ ಮೇಲೆ ತೆರಿಗೆ ವಿಧಿಸುವ ರಾಜ್ಯಗಳ ಹಕ್ಕನ್ನು ಕಸಿದುಕೊಳ್ಳುತ್ತಿದೆ, ಈ ಹಕ್ಕನ್ನು ಸುಪ್ರೀಂಕೋರ್ಟ್‌ನ 9 ನ್ಯಾಯಮೂರ್ತಿಗಳ ಪೀಠ ರಾಜ್ಯಗಳಿಗೆ ನೀಡಿದೆ.

ಹೆಚ್ಚುತ್ತಿರುವ ಮಾದಕ ವಸ್ತುಗಳ ಕಳ್ಳಸಾಗಣೆ ಸವಾಲಾಗಿದೆ, ಇದನ್ನು ತಡೆಯಲು ನಮಗೆ ಬಲಿಷ್ಠ ಕಾನೂನುಗಳು, ಬಲಿಷ್ಠ ಜಾರಿ ವ್ಯವಸ್ಥೆ ಮತ್ತು ಕಳ್ಳಸಾಗಣೆದಾರರ ವಿರುದ್ಧ ಅತ್ಯಂತ ಕಠಿಣ ಕ್ರಮಗಳ ಅಗತ್ಯವಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
31st south zone council meetcentral minister amit shahcm d k shivakumarcm josef vijaykarnatakamahabalipuramstate chief ministerstamilunadu
0 FacebookTwitterPinterestEmail
admin

previous post
ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್
next post
’ಬಿ’ ಯಿಂದ ’ಎ’ ಖಾತಾ ಕಾಯ್ದೆ ರಾಜ್ಯಾದ್ಯಂತ ವಿಸ್ತರಣೆ

You may also like

ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

October 3, 2026

ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

October 1, 2026

ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

September 30, 2026

ನೈಸ್‌ ಯೋಜನೆ: ಡಿಕೆಶಿ ಕುಟುಂಬ 3 ಲಕ್ಷ ಕೋಟಿ ಲೂಟಿ

September 29, 2026

ವರಿಷ್ಠರ ಜೊತೆ ಡಿಕೆಶಿ ಸಂಪುಟ ಪುನರ್ ರಚನೆ ಚರ್ಚೆ

September 28, 2026

ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಹೋರಾಟ

September 26, 2026

ಸಚಿವ ಜಾರಕಿಹೊಳಿ-ಕುಮಾರಸ್ವಾಮಿ ರಹಸ್ಯ ಚರ್ಚೆ ?

September 25, 2026

ರಾಜಕೀಯ ಸಂದಿಗ್ಧತೆಯಲ್ಲಿ ಸಚಿವ ಜಾರಕಿಹೊಳಿ

September 24, 2026

ಆಡಳಿತ ಶಾಸಕರ ರಾಜೀನಾಮೆಗೆ ಡಿಕೆಶಿ ಸಮರ್ಥನೆ

September 23, 2026

ಅಸಮಾಧಾನ ಶಾಸಕರ ಓಲೈಕೆಗೆ ತಲಾ 100 ಕೋಟಿ ರೂ.

September 22, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (582)
  • ಅಂಕಣ (109)
  • ಉದ್ಯೋಗ (354)
  • ದಿನ ಭವಿಷ್ಯ (110)
  • ರಾಜಕೀಯ (2,075)
  • ರಾಜ್ಯ (2,390)
  • ರಾಷ್ಟ್ರ (2,354)
  • ವಿಶ್ಲೇಷಣೆ (202)
  • ಶಿಕ್ಷಣ (411)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

    October 3, 2026
  • ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

    October 1, 2026
  • ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

    September 30, 2026

KMS Special

  • ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

    October 3, 2026
  • ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

    October 1, 2026
  • ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

    September 30, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ...

October 3, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ