Tuesday, September 1, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 1, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

by KM Shivaraju August 31, 2026
written by KM Shivaraju August 31, 2026 0 comments 1 minutes read
0FacebookTwitterPinterestEmail
8

ನವದೆಹಲಿ:ಬೃಹತ್ ನೀರಾವರಿ ಸಚಿವ ಎನ್.ಚಲುವರಾಯಸ್ವಾಮಿ ಅಥವಾ ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ ಇವರಲ್ಲಿ ಒಬ್ಬರನ್ನು ಸಂಪುಟದಿಂದ ಕೈಬಿಟ್ಟು ಎಂ.ಕೃಷ್ಣಪ್ಪ (ಲೇಔಟ್) ಅವರನ್ನು ಮಂತ್ರಿಮಂಡಲಕ್ಕೆ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಎಐಸಿಸಿ ವರಿಷ್ಠರು ಸೂಚಿಸಿದ್ದಾರೆ.

ಸಣ್ಣ ಪ್ರಮಾಣದಲ್ಲಿ ಸಂಪುಟ ಪುನರ್ ರಚನೆ ಮಾಡಲು ನಮ್ಮ ಅಭ್ಯಂತರ ಇಲ್ಲ, ಆದರೆ, ಮಹಿಳೆಯರಿಗೆ ಸ್ಥಾನ ನೀಡುವುದರ ಜೊತೆಗೆ ಕೃಷ್ಣಪ್ಪ ಅವರನ್ನು ಮಂತ್ರಿಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕೆಂಬ ಸಲಹೆ ನೀಡಿದ್ದಾರೆ.

ಗೌಪ್ಯ ಸಮಾಲೋಚನೆ

ಪುನರ್ ರಚನೆ ಹಾಗೂ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಸಂಬಂಧ ಭಾನುವಾರ ಸಂಜೆ ದಿಢೀರನೆ ದೆಹಲಿಗೆ ತೆರಳಿದ ಮುಖ್ಯಮಂತ್ರಿ, ಗೌಪ್ಯವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಸಮಾಲೋಚಿಸಿದ್ದರು.

ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿ ಬಹುತೇಕ ಅಂತಿಮಗೊಂಡಿದೆ, ಸಂಪುಟ ಪುನರ್ ರಚನೆಗೂ ಷರತ್ತುಬದ್ಧ ಅನುಮತಿ ದೊರೆತಿದೆ, ಆದರೆ, ಇದನ್ನು ಅನುಷ್ಟಾನಕ್ಕೆ ತರಲು ಮುಖ್ಯಮಂತ್ರಿ ಸೆಪ್ಟೆಂಬರ್ ೩ರವರೆಗೂ ಕಾಯಬೇಕಿದೆ.

ವಿದೇಶ ಪ್ರವಾಸದಲ್ಲಿರುವ ಎಐಸಿಸಿ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೆಪ್ಟೆಂಬರ್ 3ರಂದು ದೆಹಲಿಗೆ ಹಿಂತಿರುಗಲಿದ್ದಾರೆ.

ಎಐಸಿಸಿಯೇ ಪಟ್ಟಿ ನೀಡಲಿದೆ

ಅವರು ಹಿಂತಿರುಗಿದ ನಂತರ ನೀವು ಮತ್ತೆ ದೆಹಲಿಗೆ ಬನ್ನಿ, ಚರ್ಚಿಸಿದ ನಂತರ ಎಐಸಿಸಿಯೇ ಎರಡೂ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ಶಿವಕುಮಾರ್ ಅವರಿಗೆ ಸುರ್ಜೇವಾಲ ತಿಳಿಸಿದ್ದಾರೆ.

ಮಂತ್ರಿಮಂಡಲದಲ್ಲಿ ಎರಡು ಸ್ಥಾನ ಖಾಲಿ ಇವೆ, ಅವನ್ನು ತುಂಬಲು ಯಾವುದೇ ತಕರಾರು ಇಲ್ಲ, ಆದರೆ, ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಮೊಕದ್ದಮೆ ಹೂಡಲು ಅನುಮತಿ ನೀಡುವಂತೆ ರಾಜ್ಯಪಾಲರು ಕೋರಿದ್ದು, ಈ ವಿಷಯವನ್ನೂ ಅಂದೇ ಪರಿಹರಿಸೋಣ ಎಂದು ತಿಳಿಸಿದ್ದಾರೆ.

ಕೃಷ್ಣಪ್ಪ ಸೇರ್ಪಡೆಗೆ ಸುರ್ಜೇವಾಲ ಪಟ್ಟು ಹಿಡಿದಿದ್ದಾರೆ, ಅವರಿಗೆ ಮಾತು ಕೊಟ್ಟಿದ್ದೇವೆ, ಪಕ್ಷದ ನಿಷ್ಠಾವಂತ, ಅವರನ್ನು ನಾವು ಕಳೆದುಕೊಳ್ಳುವುದು ಬೇಡ, ಅವರಿಗೆ ಪುನರ್ ರಚನೆ ವೇಳೆ ಅವಕಾಶ ಮಾಡಿಕೊಡಲೇಬೇಕು ಎಂದು ಮುಖ್ಯಮಂತ್ರಿ ಅವರಿಗೆ ಕಟ್ಟಾದೇಶ ಮಾಡಿದ್ದಾರಂತೆ.

ಒಕ್ಕಲಿಗರ ಕೋಟಾ ಮುಗಿದಿದೆ

ಮಂತ್ರಿಮಂಡಲದಲ್ಲಿ ಒಕ್ಕಲಿಗರ ಪ್ರಾತಿನಿಧ್ಯ ಕೋಟಾ ಮುಗಿದಿದೆ, ಕೃಷ್ಣಪ್ಪ ಅವರಿಗೆ ಅವಕಾಶ ಮಾಡಿಕೊಡಲು, ಅದೇ ಸಮುದಾಯಕ್ಕೆ ಸೇರಿದವರನ್ನು ಕೈಬಿಟ್ಟು ಇವರಿಗೆ ಅವಕಾಶ ಮಾಡಿಕೊಡಬೇಕಿದೆ.

ಈ ಸಮುದಾಯಕ್ಕೆ ಸೇರಿದ ಬಾಲಕೃಷ್ಣ ಇಲ್ಲವೇ ಚಲುವರಾಯಸ್ವಾಮಿ, ಇವರಲ್ಲಿ ಒಬ್ಬರನ್ನು ಕೈಬಿಟ್ಟು ಕೃಷ್ಣಪ್ಪ ಅವರಿಗೆ ಅವಕಾಶ ಮಾಡಿಕೊಡಿ, ಇದನ್ನು ನಿಮ್ಮ ತೀರ್ಮಾನಕ್ಕೆ ಬಿಟ್ಟಿದ್ದೇನೆ ಎಂದು ಮುಖ್ಯಮಂತ್ರಿ ಅವರಿಗೆ ಸುರ್ಜೇವಾಲ ಸ್ಪಷ್ಟವಾಗಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಅವರಿಗೆ ಸಂಪುಟದಿಂದ ಇಬ್ಬರನ್ನೂ ಬಿಡಲು ಇಷ್ಟವಿಲ್ಲ, ಆದರೆ, ಸುರ್ಜೇವಾಲ ಅವರ ಖಡಕ್ ಆದೇಶ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aiccbengaluruboards and corporationscabinet reshuffleHigh Commandnewdelhione out-two inpresidents list ready
0 FacebookTwitterPinterestEmail
KM Shivaraju

previous post
ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

You may also like

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

August 25, 2026

ಮುಖ್ಯಮಂತ್ರಿ ಶಿವಕುಮಾರ್‌ಗೆ ಸಚಿವ ನಾಗೇಂದ್ರ ಕಂಟಕ !

August 24, 2026

ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ನಿರ್ಧಾರ

August 22, 2026

’ಬಿ’ ಯಿಂದ ’ಎ’ ಖಾತಾ ಕಾಯ್ದೆ ರಾಜ್ಯಾದ್ಯಂತ ವಿಸ್ತರಣೆ

August 21, 2026

ಕರ್ನಾಟಕಕ್ಕೆ ನ್ಯಾಯಯುತ ಅನುದಾನ ನೀಡಿ: ಡಿಕೆಶಿ

August 20, 2026

ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

August 19, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (553)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,046)
  • ರಾಜ್ಯ (2,361)
  • ರಾಷ್ಟ್ರ (2,326)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

    August 31, 2026
  • ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

    August 29, 2026
  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026

KMS Special

  • ‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

    August 31, 2026
  • ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

    August 29, 2026
  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ