Thursday, September 3, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, September 3, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

by KM Shivaraju September 2, 2026
written by KM Shivaraju September 2, 2026 0 comments 1 minutes read
0FacebookTwitterPinterestEmail
8

ಬೆಂಗಳೂರು:ಬಿ.ನಾಗೇಂದ್ರ ನಂತರ ಇದೀಗ ವಸತಿ ಸಚಿವ ಜಮೀರ್ ಅಹಮದ್ ಖಾನ್ ತಲೆದಂಡ ಸನ್ನಿಹಿತವಾಗಿದೆ.

ಅಕ್ರಮ ಆಸ್ತಿ ಗಳಿಕೆ ಹಾಗೂ ಹಣಕಾಸು ವಹಿವಾಟಿಗೆ ಸಂಬಂಧಿಸಿದಂತೆ ಜಮೀರ್ ವಿಚಾರಣೆ (ಪ್ರಾಸಿಕ್ಯೂಷನ್) ನಡೆಸಲು ಅನುಮತಿ ದೊರಕಿಸುವಂತೆ ಜಾರಿ ನಿರ್ದೇಶನಾಲಯ (ಇ.ಡಿ.) ರಾಜ್ಯಪಾಲರ ಮೊರೆ ಹೋಗಿದೆ.

ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರ ವಿಚಾರಣೆ ಅಗತ್ಯವಿದೆ, ರಾಜ್ಯ ಸರ್ಕಾರಕ್ಕೆ ಆದೇಶಿಸಿ, ಅನುಮತಿ ದೊರಕಿಸಬೇಕೆಂದು ಕೋರಿದೆ.

ಇ.ಡಿ., ಸಿಬಿಐ ಮನವಿ

ಇ.ಡಿ. ಜೊತೆ ಸಿಬಿಐ ಸಹಾ ಇದೇ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಅವಕಾಶ ಕೋರಿದೆ.

ಕೇಂದ್ರ ತನಿಖಾ ದಳದ ಮನವಿ ಹಾಗೂ ವರದಿ ಆಧಾರದ ಮೇಲೆ ರಾಜ್ಯಪಾಲರು ಆಗಸ್ಟ್ 24ರಂದು ರಾಜ್ಯ ಮುಖ್ಯಕಾರ್ಯದರ್ಶಿ ಅವರಿಗೆ ಪತ್ರ ಬರೆದು ಜಮೀರ್ ವಿಚಾರಣೆಗೆ ಅನುಮತಿ ನೀಡುವಂತೆ ಸೂಚಿಸಿದ್ದರು.

ರಾಜ್ಯಪಾಲರ ಪ್ರಸ್ತಾಪದಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಂಕಷ್ಟ ಎದುರಾಗಿದೆ.

ಸಂಪುಟ ತೀರ್ಮಾನ ಅಗತ್ಯ

ಈ ವಿಷಯವನ್ನು ಸಂಪುಟದ ಮುಂದಿಟ್ಟು, ಅನುಮತಿ ನೀಡುವ ಇಲ್ಲವೇ ನಿರಾಕರಿಸುವ ತೀರ್ಮಾನ ಮಾಡಬೇಕಿದೆ.

ಆದರೆ, ಎಐಸಿಸಿ ನಿಲುವುಗಳೇ ಬೇರೆ ಆಗಿರುವುದರಿಂದ ಮುಖ್ಯಮಂತ್ರಿ ಅವರು ರಾಜ್ಯಪಾಲರ ಸೂಚನೆಯನ್ನು ನಿರಾಕರಿಸಲು ಸಾಧ್ಯವಾಗುತ್ತಿಲ್ಲ.

ಸದ್ಯಕ್ಕೆ ಜಮೀರ್ ರಾಜೀನಾಮೆ ಪಡೆದು ವಿವಾದ ತಿಳಿಗೊಂಡ ನಂತರದ ದಿನಗಳಲ್ಲಿ ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳುವ ಕುರಿತು ಆಪ್ತರೊಂದಿಗೆ ಸಮಾಲೋಚಿಸಿದ್ದಾರೆ.

ಎರಡು ಬಾರಿ ಸಮಾಲೋಚನೆ

ಇಂದು ಬೆಳಗ್ಗೆ ಜಮೀರ್ ಅವರನ್ನು ಎರಡು ಬಾರಿ ಕರೆಸಿಕೊಂಡು ಸಮಾಲೋಚನೆ ನಡೆಸಿದರು.

ಮೊದಲಿಗೆ ಜಮೀರ್ ಅವರನ್ನು ಮಾಜಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಕರೆದುಕೊಂಡು ಬಂದರೆ, ಮತ್ತೊಮ್ಮೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ಸಲಹೆಗಾರ ಶಾಸಕ ಎ.ಎಸ್.ಪೊನ್ನಣ್ಣ ಕರೆತಂದು ಚರ್ಚಿಸಿದರು.

ನಂತರ ಮುಖ್ಯಮಂತ್ರಿ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾನೂನು ತಜ್ಞರನ್ನು ಕರೆಸಿಕೊಂಡು ಜಮೀರ್ ವಿಷಯ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಅಕ್ರಮ ಆಸ್ತಿ ಗಳಿಕೆ

ಅಕ್ರಮ ಆಸ್ತಿ ಗಳಿಕೆ ಹಾಗೂ ಹಣ ವಹಿವಾಟಿಗೆ ಸಂಬಂಧಿಸಿದಂತೆ ಜಮೀರ್ ಅಹಮದ್ ವಿರುದ್ಧ ೨೦೨೧ರ ಆಗಸ್ಟ್ ೫ರಂದು ಇ.ಡಿ. ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿ ಕೆಲವು ದಾಖಲೆಗಳನ್ನು ವಶಕ್ಕೆ ಪಡೆದಿತ್ತು.

ಇದಾದ ನಂತರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಸಹಾ ನೀಡಿತ್ತು.

ಪ್ರಕರಣದ ತನಿಖೆ ಸಂದರ್ಭದಲ್ಲೇ ಜಮೀರ್ ಪಾಲುದಾರಿಕೆಯ ಖಾಸಗಿ ಸಾರಿಗೆ ಸಂಸ್ಥೆ ಕೋಟ್ಯಂತರ ರೂ. ವಂಚಿಸಿದೆ ಎಂಬ ಆರೋಪದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ ನಡೆಸಿ, ದಾಖಲೆ ವಶಪಡಿಸಿಕೊಂಡಿತ್ತು.

ರಾಜ್ಯಪಾಲರ ಮೊರೆ

ಕೋಟ್ಯಂತರ ರೂ. ಅವ್ಯವಹಾರ ಬಯಲಾಗುತ್ತಿದ್ದಂತೆ ಇ.ಡಿ. ಹಾಗೂ ಸಿಬಿಐ ವಿಚಾರಣೆಗೆ ಮುಂದಾಗಿದ್ದು, ರಾಜ್ಯಪಾಲರ ಮೊರೆ ಹೋಗಿದೆ.

ರಾಜ್ಯದಲ್ಲಿ ಸಿಬಿಐ ತನಿಖೆಗೆ ಮುಕ್ತ ಅವಕಾಶ ಇಲ್ಲದಿರುವುದರಿಂದ ಇ.ಡಿ. ಮುಖೇನ ಪ್ರಕರಣ ಕೈಗೆತ್ತಿಕೊಳ್ಳಲು ಮುಂದಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cabinetcbicm d k shivakumarenforcement directorate-EDgovernorjameer ahamad khanlokabhavanastate congres govt.
0 FacebookTwitterPinterestEmail
KM Shivaraju

previous post
ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

You may also like

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

August 25, 2026

ಮುಖ್ಯಮಂತ್ರಿ ಶಿವಕುಮಾರ್‌ಗೆ ಸಚಿವ ನಾಗೇಂದ್ರ ಕಂಟಕ !

August 24, 2026

ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ನಿರ್ಧಾರ

August 22, 2026

’ಬಿ’ ಯಿಂದ ’ಎ’ ಖಾತಾ ಕಾಯ್ದೆ ರಾಜ್ಯಾದ್ಯಂತ ವಿಸ್ತರಣೆ

August 21, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (555)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,048)
  • ರಾಜ್ಯ (2,363)
  • ರಾಷ್ಟ್ರ (2,328)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

    September 2, 2026
  • ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

    September 1, 2026
  • ‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

    August 31, 2026

KMS Special

  • ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

    September 2, 2026
  • ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

    September 1, 2026
  • ‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

    August 31, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ