Thursday, September 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, September 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

by admin September 10, 2026
written by admin September 10, 2026 0 comments 2 minutes read
0FacebookTwitterPinterestEmail
2

ಬೆಂಗಳೂರು:ಮುಂದಿನ 500 ದಿನಗಳ ಆಡಳಿತದಲ್ಲಿ ಯುವಸಮುದಾಯಕ್ಕೆ ಒಂದು ಲಕ್ಷ ಸರ್ಕಾರಿ ಉದ್ಯೋಗ, ಅಲ್ಲದೆ, ಖಾಸಗಿ ಕ್ಷೇತ್ರಗಳಲ್ಲಿ ಐದು ಲಕ್ಷ ಕೆಲಸ ಕೊಡಿಸುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಘೋಷಿಸಿದರು.

ಮುಖ್ಯಮಂತ್ರಿಯಾಗಿ ತಮ್ಮ 100 ದಿನಗಳ ಆಡಳಿತದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ಆಯೋಜಿಸಿದ್ದ ದೃಢ ಕರ್ನಾಟಕ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳ ಆಡಳಿತಾವಧಿಯಲ್ಲಿ ರಾಜ್ಯದ ಜನರ ಒಳಿತು ಮತ್ತು ಅಭಿವೃದ್ಧಿಗೆ ರೂಪಿಸಿರುವ ಪಟ್ಟಿ ನೀಡಿದರು.

ಟೆಲಿ ಐಸಿಯು ಕೇಂದ್ರ

ತಾಲ್ಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ವೈದ್ಯಕೀಯ ಸೌಲಭ್ಯ ದೊರೆಯುವಂತೆ ಮಾಡುವುದಲ್ಲದೆ, ಟೆಲಿ ಐಸಿಯು ಕೇಂದ್ರ ಆರಂಭಿಸುವುದಾಗಿಯೂ ಪ್ರಕಟಿಸಿದರು.

ಈಗಾಗಲೇ ಘೋಷಿಸಿರುವಂತೆ ಸಣ್ಣ ಹಿಡುವಳಿದಾರರಿಗೆ ನೇಗಿಲ ಯೋಗಿ ಯೋಜನೆಯನ್ನು ಪ್ರತಿ ಜಿಲ್ಲೆಯ ೨ ತಾಲ್ಲೂಕುಗಳಲ್ಲಿ ಮೊದಲ ಹಂತದಲ್ಲಿ ಕೈಗೆತ್ತಿಕೊಳ್ಳಲಾಗುವುದು.

ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇ.7.5 ಮೀಸಲಾತಿ, ಪಬ್ಲಿಕ್ ಶಾಲೆಗಳ ಸಂಖ್ಯೆ 1000ಕ್ಕೆ ಏರಿಕೆ ಹಾಗೂ ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ ಜಾರಿಗೆ ತರಲಾಗುವುದು.

ಒಂದು ಟ್ರಿಲಿಯನ್ ಆರ್ಥಿಕತೆ

2037ರ ವೇಳೆಗೆ ರಾಜ್ಯದ ಆರ್ಥಿಕತೆ 1 ಟ್ರಿಲಿಯನ್‌ಗೆ ಹೆಚ್ಚಿಸುವ ಮಹಾ ಸಂಕಲ್ಪ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯದ ಕೈಗಾರಿಕಾ ಪ್ರಗತಿಗೆ ವೇಗ ನೀಡಲು ಆದ್ಯತೆ ನೀಡಲಾಗಿದ್ದು, 100 ದಿನಗಳಲ್ಲಿ 43,214 ಕೋಟಿ ರೂ. ಹೂಡಿಕೆಗೆ ಅನುಮೋದನೆ ನೀಡಲಾಗಿದೆ.

ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗ್ರಾಮೀಣ ನೈಜ ಬದುಕಿನ ಸೊಗಡು ತಿಳಿಸುವ ಪ್ರವಾಸ ಕೈಗೊಳ್ಳಲಾಗುವುದು.

’ರೈಜ್’ ಅಭಿಯಾನ

ರಾಜ್ಯದಲ್ಲಿ ಮಾದಕ ವಸ್ತು ಅಕ್ರಮ ಸಾಗಣೆ ಮತ್ತು ಮಾರಾಟ ತಡೆಗೆ ’ರೈಜ್’ ಅಭಿಯಾನ ಆರಂಭಿಸಲಾಗುವುದು.

ಪ್ರತಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ನಿಗ್ರಹ ವಿಶೇಷ ದಳ ಸ್ಥಾಪಿಸುವುದಾಗಿ ಘೋಷಿಸಿದ ಮುಖ್ಯಮಂತ್ರಿ, ಇದರಿಂದ ಸಂಘಟಿತ ಅಪರಾಧ, ಗೂಂಡಾಗಿರಿ, ಸುಲಿಗೆ ಮತ್ತು ಚಾಳಿ ಬಿದ್ದ ಅಪರಾಧಿಗಳನ್ನು ಮಟ್ಟಹಾಕಲಾಗುವುದು.

ನಾಗರಿಕರು ಭಯಮುಕ್ತರಾಗಿ ಬದುಕಲು ರೌಡಿಸಂ ಮಟ್ಟ ಹಾಕುವ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ.

ಐದು ಲಕ್ಷ ಸೂರು

ಗ್ರಾಮೀಣ ಕರ್ನಾಟಕದ ಮನೆರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಐದು ಲಕ್ಷ ಕುಟುಂಬಗಳಿಗೆ ಸೂರು ಕಲ್ಪಿಸುವ ಘೋಷಣೆ ಮಾಡಿದರು.

ಪರಿಶಿಷ್ಟ ಜಾತಿ ಮತ್ತು ವರ್ಗದವರ ಕಾಲೋನಿಗಳಿಗೆ ರಸ್ತೆ, ಚರಂಡಿ ಸೇರಿದಂತೆ ಮೂಲಸೌಕರ್ಯ ಒದಗಿಸಲಾಗುವುದು.

ಬೆಂಗಳೂರು ಗಡಿಯಾಚಿಗಿನ ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಕಲಬುರಗಿ ಮಹಾನಗರ ಪಾಲಿಕೆಗಳಲ್ಲಿ ಜಾಗತಿಕ ಮಟ್ಟದ ತಂತ್ರಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

1.5 ಲಕ್ಷ ಕೋಟಿ ರೂ. ಬಂಡವಾಳ

ಕರ್ನಾಟಕದ ಬೆಳವಣಿಗೆ ಬಲಪಡಿಸಲು ವಿವಿಧ ವಲಯಗಳಲ್ಲಿ ಮೂಲಸೌಕರ್ಯ ಮತ್ತು ಇತರ ಚಟುವಟಿಕೆ ಕೈಗೊಳ್ಳಲು ತಮ್ಮ ಮುಂದಿನ 500 ದಿನಗಳ ಆಡಳಿತದಲ್ಲಿ 1.5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ತಿಳಿಸಿದರು.

ತಮ್ಮ ಮುಂದಿನ 500 ದಿನಗಳ ಅಧಿಕಾರಾವಧಿಯಲ್ಲಿ ಕರ್ನಾಟಕವನ್ನು ಬಡತನ ಮುಕ್ತಗೊಳಿಸುವ ಹಾಗೂ ಶಾಲೆ ತೊರೆಯುವವರ ಸಂಖ್ಯೆ ಶೂನ್ಯಕ್ಕೆ ತರುವುದಾಗಿ ತಿಳಿಸಿದರು.

ಕರ್ನಾಟಕವನ್ನು ದೇಶದಲ್ಲೇ ವೇಗವಾಗಿ ಬೆಳೆಯುತ್ತಿರುವ ರಾಜ್ಯವನ್ನಾಗಿಸುವುದಕ್ಕಷ್ಟೇ ನನ್ನ ದೃಷ್ಟಿಕೋನ ಸೀಮಿತವಾಗಿಲ್ಲ, ಬದಲಿಗೆ ನಾಳಿನ ಭಾರತಕ್ಕೆ ನಮ್ಮ ರಾಜ್ಯವನ್ನು ಮಾದರಿಯಾಗಿ ಮಾಡುವುದೇ ಗುರಿ ಎಂದರು.

ಗ್ಯಾರಂಟಿಗಳಿಗೆ 1.45 ಲಕ್ಷ ಕೋಟಿ ರೂ.

ಕಳೆದ ಮೂರು ವರ್ಷಗಳಲ್ಲಿ ಜನ, ನೀತಿ, ಪ್ರಗತಿಯ ಮೂಲ ವಿಚಾರದ ಮೇಲೆ ರಾಜ್ಯವನ್ನು ಕಟ್ಟಿದ್ದು, ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆಗಳಿಗೆ 1.45 ಲಕ್ಷ ಕೋಟಿ ರೂ. ನೀಡಿದ್ದೇವೆ.

ಮೂರು ವರ್ಷಗಳಲ್ಲಿ 2.53 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗಿದೆ, ವಿದೇಶಿ ಬಂಡವಾಳ ಹೂಡಿಕೆ ಆಕರ್ಷಣೆಯಲ್ಲಿ ರಾಜ್ಯ ದೇಶದಲ್ಲೇ 2ನೇ ಸ್ಥಾನ ಪಡೆದಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
100 days rulecm d k shivakumarnext 500 days ruleone lakh govt. jobssix lakh jobs in private sector
0 FacebookTwitterPinterestEmail
admin

previous post
ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

You may also like

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

September 9, 2026

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (564)
  • ಅಂಕಣ (109)
  • ಉದ್ಯೋಗ (349)
  • ದಿನ ಭವಿಷ್ಯ (110)
  • ರಾಜಕೀಯ (2,057)
  • ರಾಜ್ಯ (2,372)
  • ರಾಷ್ಟ್ರ (2,336)
  • ವಿಶ್ಲೇಷಣೆ (202)
  • ಶಿಕ್ಷಣ (410)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

    September 10, 2026
  • ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

    September 9, 2026
  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026

KMS Special

  • ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

    September 10, 2026
  • ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

    September 9, 2026
  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

September 9, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ