Sunday, October 18, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, October 18, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

by admin October 17, 2026
written by admin October 17, 2026 0 comments 1 minutes read
0FacebookTwitterPinterestEmail
5

ದಸರಾ ಮುಕ್ತಾಯಕ್ಕೂ ಮುನ್ನ ಕಿಂಗ್‌ ಪಿನ್‌ ಬಂಧಿಸಬೇಕು: ಕುಮಾರಸ್ವಾಮಿ ಗಡುವು

ಬೆಂಗಳೂರು:ನಾಡಹಬ್ಬ ದಸರಾ ಹಬ್ಬ ಮುಕ್ತಾಯಕ್ಕೂ ಮುನ್ನ ಸ್ಟಿಂಗ್‌ ಆಪರೇಷನ್‌ ಕಿಂಗ್‌ ಪಿನ್‌ ಬಂಧಿಸದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕಿಂಗ್‌ ಪಿನ್‌ ಬಂಧನಕ್ಕೆ ನೀಡಿದ್ದ ಎರಡು ದಿನದ ಗಡುವು ಮುಗಿದ ಹಿನ್ನೆಲ್ಲೆಯಲ್ಲಿ ಇಂದು ಪೋಲಿಸ್‌ ಮಹಾನಿರ್ದೇಶಕರ ಕಚೇರಿ ಮುತ್ತಿಗೆಗೆ ಅವರು ಮುಂದಾಗಿದ್ದರು.

ಪೋಲಿಸ್‌ ಮಹಾನಿರ್ದೇಶಕರ ಭೇಟಿ

ಈ ಸಂದರ್ಭದಲ್ಲಿ ಪಕ್ಷದ ಕಚೇರಿಯಿಂದ ಕಾಲ್ನಡಿಗೆ ಮೂಲಕ ನೃಪತುಂಗ ರಸ್ತೆಯಲ್ಲಿನ ಪೋಲಿಸ್‌ ಮಹಾನಿರ್ದೇಶಕರ (ಡಿಜಿಪಿ) ಕಚೇರಿಗೆ ತೆರಳುತ್ತಿದ್ದ ಮಾರ್ಗದಲ್ಲಿ ಪೋಲಿಸ್‌ ಸಿಬ್ಬಂದಿ ಕುಮಾರಸ್ವಾಮಿ ಅವರನ್ನು ತಡೆದು ಮನವೊಲಿಸಿ, ಪೋಲಿಸ್‌ ಮಹಾನಿರ್ದೇಶಕರ ಭೇಟಿಗೆ ಕರೆದೊಯ್ದರು.

ಜೆಡಿಎಸ್‌ನ ಕೆಲವು ಶಾಸಕರ ಜೊತೆ ಪೋಲಿಸ್‌ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಕುಮಾರಸ್ವಾಮಿ ತಕ್ಷಣವೇ ಹಗರಣದ ಕಿಂಗ್‌ ಪಿನ್‌ ಬಂಧನ ಮಾಡಬೇಕು, ಕಾನೂನಾತ್ಮಕವಾಗಿ ತನಿಖೆ ನಡೆಸಬೇಕು, ಇಲ್ಲವಾದರೆ, ದಸರಾ ಹಬ್ಬ ಮುಗಿಯುತ್ತಿದ್ದಂತೆ ರಾಜ್ಯಾದ್ಯಂತ ಉಗ್ರ ಹೋರಾಟಕ್ಕೆ ನಾವು ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.

ರಾಜಕಾರಣಿಗಳು, ಅಧಿಕಾರಿಗಳು ಹಾಗೂ ಉದ್ಯಮಿಗಳ ಸ್ಟಿಂಗ್‌ ಆಪರೇಷನ್‌ ಮಾಡಿ ಕೋಟ್ಯಂತರ ರೂ. ಲೂಟಿ ಮಾಡಿರುವುದಲ್ಲದೆ, ಹಗರಣದ ಕಿಂಗ್‌ ಪಿನ್‌ ಪರ್ಯಾಯ ಆಡಳಿತ ನಡೆಸುತ್ತಿದ್ದು, ಈ ವ್ಯಕ್ತಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬೆಂಬಲ ಇದೆ, ಆದ್ದರಿಂದ ರಾಜಾರೋಷವಾಗಿ ಈ ಕೃತ್ಯ ಎಸಗುತ್ತಿದ್ದಾನೆ ಎಂದರು.

ನನ್ನ ವೈಯಕ್ತಿಕ ಹೋರಾಟವಲ್ಲ

ಇದು ನನ್ನ ವೈಯಕ್ತಿಕ ಹೋರಾಟವಲ್ಲ, ಸಾರ್ವಜನಿಕವಾಗಿ ಎದುರಾಗಿರುವ ಈ ಕಂಟಕವನ್ನು ಹೋಗಲಾಡಿಸಲು ನಾನು ಬೀದಿಗೆ ಇಳಿದಿದ್ದೇನೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್‌ ಆಪರೇಷನ್‌ ಮಾಡಿದ್ದು ನಾನೇ ಎಂದು ಕಿಂಗ್‌ ಪಿನ್‌ ಹೇಳಿಕೊಂಡಿದ್ದರೂ ಇದುವರೆಗೆ ಆತನನ್ನು ಏಕೆ ಬಂಧಿಸಿಲ್ಲ.

ಪೋಲಿಸರು ಒತ್ತಡಕ್ಕೆ ಮಣಿದು ಕಿಂಗ್‌ ಪಿನ್ ಬಂಧಿಸಲಿಲ್ಲ ಎಂದರೆ, ಮುಂದಾಗುವ ಅನಾಹುತಗಳಿಗೆ ನಾನು ಹೊಣೆ ಅಲ್ಲ ಎಂದು ಎಚ್ಚರಿಸಿದ್ದಾರೆ.

ಡಿಜಿಪಿ ಕಚೇರಿ ಮುತ್ತಿಗೆ ನಿರ್ಧಾರ

ಇದಕ್ಕೂ ಮುನ್ನ ಕುಮಾರಸ್ವಾಮಿ, ಪಕ್ಷ‌ದ ಕಚೇರಿಯಲ್ಲಿ ಶಾಸಕರು ಮತ್ತು ಮುಖಂಡರ ಜೊತೆ ಚರ್ಚೆ ನಡೆಸಿ, ಪೋಲಿಸ್‌ ಮಹಾನಿರ್ದೇಶಕರ ಕಚೇರಿ ಮುತ್ತಿಗೆ ನಿರ್ಧಾರ ಕೈಗೊಂಡರು.

ಪಕ್ಷದ ಕಚೇರಿಯಲ್ಲಿ ನೆರೆದಿದ್ದ ಕಾರ್ಯಕರ್ತರ ಜೊತೆ ಪೋಲಿಸ್‌ ಮಹಾನಿರ್ದೇಶಕರ ಕಚೇರಿ ಮುತ್ತಿಗೆಗೆ ಕುಮಾರಸ್ವಾಮಿ ಮುಂದಾದರು.

ಈ ವೇಳೆ ಫ್ರೀಡಂ ಪಾರ್ಕ್‌ ಬಳಿ ಕುಮಾರಸ್ವಾಮಿ ಮತ್ತು ಇತರ ಮುಖಂಡರನ್ನು ತಡೆದ ಹಿರಿಯ ಪೋಲಿಸ್‌ ಅಧಿಕಾರಿಗಳು ಅವರ ಮನವೊಲಿಸಿ ಡಿಜಿಪಿ ಕಚೇರಿಗೆ ಕರೆದೊಯ್ದರು.

ಬಂಧನಕ್ಕೆ ಮುಖ್ಯಮಂತ್ರಿ ಬಿಡುತ್ತಿಲ್ಲ  

ಡಿಜಿಪಿ ಕಚೇರಿಗೆ ತೆರಳುವುದಕ್ಕೂ ಮುನ್ನ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಕಿಂಗ್‌ ಪಿನ್ ಬಂಧನಕ್ಕೆ ನೀಡಿದ್ದ ಗಡುವು ಮುಗಿದಿದೆ, ಆತನ ಬಂಧಿಸಲು ಮುಖ್ಯಮಂತ್ರಿ ಶಿವಕುಮಾರ್‌ ಬಿಡುತ್ತಿಲ್ಲ.

ಆರೋಪಿಯನ್ನು ಪದೇ ಪದೇ ಭೇಟಿ ಮಾಡಿ ಸ್ಟಿಂಗ್‌ ಆಪರೇಷನ್‌ಗೆ ಅವರೇ ಕುಮ್ಮಕ್ಕು ನೀಡುತ್ತಿರುವಂತಿದೆ, ತಪ್ಪಿತಸ್ಥರ ಮೇಲೆ ಕ್ರಮಕೈಗೊಳ್ಳಿ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಒತ್ತಾಯಿಸಿದರೆ, ನನ್ನ ಆರೋಗ್ಯವನ್ನೇ ಶಪಿಸುತ್ತಾ ಅನಾಗರೀಕವಾಗಿ ವರ್ತಿಸುತ್ತಿದ್ದಾರೆ.

ಕೂಡಲೇ ಹಗರಣದ ಕಿಂಗ್‌ ಪಿನ್‌ ಬಂಧಿಸಬೇಕು, ಈ ವಿಷಯಕ್ಕೆ ಅಂತ್ಯ ಕಾಣಿಸುವವರೆಗೂ ನನ್ನ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
arrest king pinbengaluruDGPH D Kumaraswamyjds officeoperation stingpolice
0 FacebookTwitterPinterestEmail
admin

previous post
ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

You may also like

ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

October 16, 2026

ಸ್ಟಿಂಗ್‌ ಆಪರೇಷನ್‌: ಹೋರಾಡಲು ಅಖಾಡಕ್ಕೆ ಬನ್ನಿ

October 15, 2026

ಡಿಸೆಂಬರ್‌ ಒಳಗೆ 17,000 ಶಾಲಾ ಶಿಕ್ಷಕರ ನೇಮಕ

October 14, 2026

ಸ್ಟಿಂಗ್ ಆಪರೇಷನ್‌ ಆರೋಪ ಸಿಬಿಐ ತನಿಖೆ ಆಗಬೇಕು

October 13, 2026

ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

October 12, 2026

2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

October 10, 2026

ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

October 7, 2026

ಚುನಾವಣಾ ವ್ಯವಸ್ಥೆ ದುರ್ಬಳಕೆ: ಬಿಜೆಪಿ ಕುತಂತ್ರ

October 6, 2026

ಶೀಘ್ರದಲ್ಲೇ ಬಸ್ ಪ್ರಯಾಣ ದರ ಶೇ.25ರಿಂದ ಶೇ.50 ಏರಿಕೆ

October 5, 2026

ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

October 3, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (592)
  • ಅಂಕಣ (109)
  • ಉದ್ಯೋಗ (356)
  • ದಿನ ಭವಿಷ್ಯ (110)
  • ರಾಜಕೀಯ (2,085)
  • ರಾಜ್ಯ (2,400)
  • ರಾಷ್ಟ್ರ (2,364)
  • ವಿಶ್ಲೇಷಣೆ (202)
  • ಶಿಕ್ಷಣ (413)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026
  • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026
  • ಸ್ಟಿಂಗ್‌ ಆಪರೇಷನ್‌: ಹೋರಾಡಲು ಅಖಾಡಕ್ಕೆ ಬನ್ನಿ

    October 15, 2026

KMS Special

  • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026
  • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026
  • ಸ್ಟಿಂಗ್‌ ಆಪರೇಷನ್‌: ಹೋರಾಡಲು ಅಖಾಡಕ್ಕೆ ಬನ್ನಿ

    October 15, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

October 16, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ