Tuesday, October 20, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, October 20, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

by admin October 19, 2026
written by admin October 19, 2026 0 comments 2 minutes read
0FacebookTwitterPinterestEmail
5

ಬೆಂಗಳೂರು:ರಾಜ್ಯದಲ್ಲಿನ ತೀವ್ರ ಬರ ಪರಿಸ್ಥಿತಿಯಿಂದ ಭವಿಷ್ಯದಲ್ಲಿ ಜನರಿಗೆ ಆಹಾರಧಾನ್ಯ ಕೊರತೆ ಹಾಗೂ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಇಂದಿಲ್ಲಿ ಎಚ್ಚರಿಸಿದ್ದಾರೆ.

ಕಂದಾಯ ಇಲಾಖೆ ಹೊಂದಿರುವ ಡಾ.ಪರಮೇಶ್ವರ್‌ ಸುದ್ದಿಗಾರರೊಂದಿಗೆ ಮಾತನಾಡಿ, ಮುಂಗಾರು ಮಳೆ ವೈಫಲ್ಯದಿಂದ ಶೇ.82ರಷ್ಟು ಆಹಾರ ಉತ್ಪಾದನೆ ಕುಂಠಿತಗೊಂಡಿದ್ದು, ಆಹಾರ ಕೊರತೆಗೆ ಕಾರಣವಾಗಿದೆ ಎಂದರು.

ಜಲ ಮೂಲಗಳೇ ಬತ್ತುತ್ತಿವೆ

ಜಾನುವಾರುಗಳಿಗೆ ಅಗತ್ಯ ಮೇವಿನ ಲಭ್ಯತೆ ಕಡಿಮೆ ಆಗಿದ್ದು, ಕುಡಿಯುವ ಜಲ ಮೂಲಗಳೇ ಬತ್ತಿರುವಾಗ ನೀರು ಪೂರೈಕೆ ಮಾಡುವುದಾದರೂ ಎಲ್ಲಿಂದ ಎಂದರು.

ಈ ಸಂಕಷ್ಟ ನಿಭಾಯಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದ್ದು, ಕೇಂದ್ರ ಸರ್ಕಾರದಿಂದ ಬರ ಪರಿಹಾರ ಅನುದಾನ ಪಡೆಯಲು ನಿರಂತರ ಪ್ರಯತ್ನ ನಡೆಸಲಾಗುತ್ತಿದೆ.

ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಪರಿಶೀಲಿಸಿದ್ದು, ರೈತರೊಂದಿಗೂ ಚರ್ಚೆ ನಡೆಸಲಾಗಿದೆ, ಇತ್ತೀಚೆಗೆ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದ್ದರೂ ರಾಜ್ಯದ ಬಹುತೇಕ ಭಾಗಗಳಲ್ಲಿ ಬರದ ತೀವ್ರತೆ ಕಡಿಮೆಯಾಗಿಲ್ಲ.

ನೀರು ಪೂರೈಕೂ ಕಷ್ಟ

ಈಗಾಗಲೇ ಹಲವೆಡೆ ಟ್ಯಾಂಕರ್‌ಗಳು ಮತ್ತು ಖಾಸಗಿ ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ, ಜಲ ಮೂಲಗಳೇ ಬತ್ತಿದರೆ ಟ್ಯಾಂಕರ್‌ಗಳಿಗೆ ನೀರು ತುಂಬಿಸಿ ಪೂರೈಸುವುದೂ ಕಷ್ಟವಾಗಲಿದೆ, ಪರಿಸ್ಥಿತಿ ಆ ಹಂತಕ್ಕೆ ತಲುಪುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.

ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿಗಳ ಪ್ರಕಾರ ಬರಪೀಡಿತ ಪ್ರದೇಶಗಳನ್ನು ಘೋಷಿಸಿ, ಬೆಳೆ ಹಾಗೂ ಇತರ ನಷ್ಟಗಳ ಅಂದಾಜು ಸಿದ್ಧಪಡಿಸಲಾಗುತ್ತದೆ, ಇದರ ಆಧಾರದಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ನಿಧಿ ಮಾರ್ಗಸೂಚಿಗಳ ಅನ್ವಯ ಕೇಂದ್ರ ಸರ್ಕಾರದಿಂದ ಪರಿಹಾರದ ಅನುದಾನ ಕೋರಲಾಗುತ್ತದೆ.

ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿದ್ದು, ಮೂರನೇ ಮನವಿಪತ್ರ ಸಿದ್ಧತೆ ಕಾರ್ಯ ನಡೆಯುತ್ತಿದೆ, ಇನ್ನೆರಡು ದಿನಗಳಲ್ಲಿ ಸಿದ್ಧವಾಗಲಿದ್ದು, ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.

ಕೇಂದ್ರಕ್ಕೆ ಮನವಿಪತ್ರ

ಕೇಂದ್ರಕ್ಕೆ ಮನವಿಪತ್ರ ಸಲ್ಲಿಸಲು ಮುಖ್ಯಮಂತ್ರಿ, ನಾನು ಅಥವಾ ನಿಯೋಗ ತೆರಳುವ ಕುರಿತು ಮುಖ್ಯಮಂತ್ರಿ ಅವರೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ, ಸರ್ವಪಕ್ಷ ನಿಯೋಗ ಕರೆದೊಯ್ಯುವ ಪ್ರಸ್ತಾಪವನ್ನು ಈ ಹಿಂದೆ ಮುಖ್ಯಮಂತ್ರಿ ಮಾಡಿದ್ದರು, ವಿರೋಧ ಪಕ್ಷದವರು ನಿಯೋಗದಲ್ಲಿ ಭಾಗವಹಿಸುವ ಕುರಿತು ಭಿನ್ನ ನಿಲುವು ವ್ಯಕ್ತಪಡಿಸಿರುವುದರಿಂದ ಮುಂದಿನ ಕ್ರಮದ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು.

ಕೇಂದ್ರ ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಯಾದರೆ ಸಂಕಷ್ಟದಲ್ಲಿರುವ ರೈತರು ಹಾಗೂ ಇತರ ಸಂತ್ರಸ್ತರಿಗೆ ನೆರವು ಒದಗಿಸಲು ಅನುಕೂಲವಾಗಲಿದೆ, ಕೇಂದ್ರ ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡಬೇಕಿದೆ.

ಕೇಂದ್ರ ಸರ್ಕಾರದ ಅನುದಾನಕ್ಕಾಗಿ ಕಾಯದೆ ರಾಜ್ಯ ಸರ್ಕಾರ ತನ್ನ ಸಂಪನ್ಮೂಲಗಳಿಂದಲೇ ಬರ ಪರಿಹಾರ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುತ್ತಿದ್ದು, ಕುಡಿಯುವ ನೀರು ಪೂರೈಕೆಗೆ ಈಗಾಗಲೇ ಅನುದಾನ ಒದಗಿಸಲಾಗಿದೆ.

ಅಧಿಕಾರಿಗಳಿಂದ ಪರಿಸ್ಥಿತಿ ನಿರ್ವಹಣೆ

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾ ಅಧಿಕಾರಿಗಳು ಪರಿಸ್ಥಿತಿ ನಿರ್ವಹಿಸುತ್ತಿದ್ದು, ಅಗತ್ಯವಿರುವ ಕಡೆಗಳಲ್ಲಿ ಟ್ಯಾಂಕರ್‌ ಹಾಗೂ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಸಲಾಗುತ್ತಿದೆ ಎಂದರು.

ವಿಬಿ-ಜಿ-ರಾಮ್-ಜಿ ಯೋಜನೆಯಡಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಇದುವರೆಗೆ ಒಂದು ಪೈಸೆಯೂ ಅನುದಾನ ಬಂದಿಲ್ಲ, ಆದರೂ, ರಾಜ್ಯ ಸರ್ಕಾರವೇ ತನ್ನ ಸಂಪನ್ಮೂಲಗಳಿಂದ ಹಣ ಒದಗಿಸಿ ಕಾಮಗಾರಿಗಳನ್ನು ಮುಂದುವರಿಸುತ್ತಿದೆ.

ರೈತರಿಗೆ ತಲಾ 2,500 ರೂ. ನೀಡಲು ರಾಜ್ಯ ಸರ್ಕಾರಕ್ಕೆ ಸುಮಾರು 1,250 ಕೋಟಿ ರೂ. ವೆಚ್ಚವಾಗುತ್ತಿದೆ, ಇಷ್ಟೊಂದು ಆರ್ಥಿಕ ಹೊರೆ ನಡುವೆಯೂ ಜನರು ಹಾಗೂ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dr.g.parameshwardrought in karnatakafood scarcityin futurewater scarcity
0 FacebookTwitterPinterestEmail
admin

previous post
ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

You may also like

ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

October 17, 2026

ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

October 16, 2026

ಸ್ಟಿಂಗ್‌ ಆಪರೇಷನ್‌: ಹೋರಾಡಲು ಅಖಾಡಕ್ಕೆ ಬನ್ನಿ

October 15, 2026

ಡಿಸೆಂಬರ್‌ ಒಳಗೆ 17,000 ಶಾಲಾ ಶಿಕ್ಷಕರ ನೇಮಕ

October 14, 2026

ಸ್ಟಿಂಗ್ ಆಪರೇಷನ್‌ ಆರೋಪ ಸಿಬಿಐ ತನಿಖೆ ಆಗಬೇಕು

October 13, 2026

ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

October 12, 2026

2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

October 10, 2026

ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

October 7, 2026

ಚುನಾವಣಾ ವ್ಯವಸ್ಥೆ ದುರ್ಬಳಕೆ: ಬಿಜೆಪಿ ಕುತಂತ್ರ

October 6, 2026

ಶೀಘ್ರದಲ್ಲೇ ಬಸ್ ಪ್ರಯಾಣ ದರ ಶೇ.25ರಿಂದ ಶೇ.50 ಏರಿಕೆ

October 5, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (593)
  • ಅಂಕಣ (109)
  • ಉದ್ಯೋಗ (357)
  • ದಿನ ಭವಿಷ್ಯ (110)
  • ರಾಜಕೀಯ (2,086)
  • ರಾಜ್ಯ (2,401)
  • ರಾಷ್ಟ್ರ (2,365)
  • ವಿಶ್ಲೇಷಣೆ (202)
  • ಶಿಕ್ಷಣ (413)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026
  • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026

KMS Special

  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026
  • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

October 17, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ