Saturday, October 31, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, October 31, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜ್ಯರಾಷ್ಟ್ರಶಿಕ್ಷಣ

ನಿಯಮ ಮೀರಿ ಪಟಾಕಿ ಸಿಡಿಸಿದರೆ ಕಠಿಣ ಕ್ರಮ

by admin October 30, 2026
written by admin October 30, 2026 0 comments 1 minutes read
0FacebookTwitterPinterestEmail
8

ಬೆಂಗಳೂರು:ದೀಪಾವಳಿ ಹಬ್ಬ ಆಚರಣೆ ವೇಳೆ ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು, ನಿಗದಿತ ಸಮಯ ಮೀರಿ ಪಟಾಕಿ ಸಿಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅರಣ್ಯ ಮತ್ತು ಪರಿಸರ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಇಂದಿಲ್ಲಿ ಎಚ್ಚರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ಪಟಾಕಿಗಳಿಂದ ಉಂಟಾಗುವ ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯ ನಿಯಂತ್ರಣ ಉದ್ದೇಶದಿಂದ ಈ ನಿಯಮ ಅನಿರ್ವಾಯ ಎಂದಿದ್ದಾರೆ.

ಸುಪ್ರೀಂ ಕೋರ್ಟ್‌-ಹೈಕೋರ್ಟ್‌ ಆದೇಶ

ಸುಪ್ರೀಂ ಕೋರ್ಟ್‌ ಹಾಗೂ ಹೈಕೋರ್ಟ್‌ ಆದೇಶಗಳ ಅನ್ವಯ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ, ಇದನ್ನು ಅಧಿಕಾರಿಗಳು ಯಥಾವತ್ತಾಗಿ ಪಾಲಿಸಬೇಕು.

ಜಿಲ್ಲಾಧಿಕಾರಿ ಮತ್ತು ಪೋಲಿಸ್‌ ವರಿಷ್ಠಾಧಿಕಾರಿ ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಸಾರ್ವಜನಿಕರು ಈ ನಿಯಮ ಉಲ್ಲಂಘಿಸಿದರೆ ಕಾನೂನು ರೀತ್ಯ ಕ್ರಮ ಕೈಗೊಳ್ಳಿ.

ಜಿಲ್ಲಾಡಳಿತ, ಹಬ್ಬಕ್ಕೂ ಮುನ್ನವೇ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸುವ ಕೆಲಸ ಮಾಡಬೇಕು, ಸಾರ್ವಜನಿಕರೂ ಸಹಾ ಸರ್ಕಾರದ ನಿರ್ಧಾರಗಳಿಗೆ ಸಹಕರಿಸಿ ವಾಯುಮಾಲಿನ್ಯ ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿಬೇಕು ಎಂದು ಮನವಿ ಮಾಡಿದರು.

ಗೋದಾಮುಗಳಿಗೆ ತೆರಳಿ ಪರಿಶೀಲಿಸಿಬೇಕು

ನ್ಯಾಯಾಲಯದ ಆದೇಶದಂತೆ ಹಸಿರು ಪಟಾಕಿಗಳಿಗೆ ಮಾತ್ರ ಮನ್ನಣೆ ನೀಡಿ, ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯ ಉಂಟುಮಾಡುವ ಪಟಾಕಿಗಳ ಬಗ್ಗೆ ಅಧಿಕಾರಿಗಳು ಗೋದಾಮುಗಳಿಗೆ ತೆರಳಿ ಪರಿಶೀಲಿಸಿಬೇಕು ಎಂದರು.

ಚಿಕ್ಕಮಕ್ಕಳಿಗೆ ಪಟಾಕಿ ಸಿಡಿಸುವ ಆಸೆ ಇರುತ್ತದೆ. ನಾವೂ ಚಿಕ್ಕವರಿದ್ದಾಗ ಪಟಾಕಿ ಸಿಡಿಸುತ್ತಿದ್ದೆವು, ಆದರೆ ಇತ್ತೀಚಿನ ದಿನಗಳಲ್ಲಿ ಪಟಾಕಿಗಳ ಬಳಕೆ ಹೆಚ್ಚಾಗಿದ್ದು, ಇದರಿಂದ ಪರಿಸರಕ್ಕೆ ಸಾಕಷ್ಟು ಹಾನಿಯಾಗುತ್ತಿದೆ ಎಂದರು.

ಕೇಂದ್ರ ಸರ್ಕಾರ ಸೂಚನೆ

ಪಟಾಕಿಗಳ ತಯಾರಿಕೆಯಲ್ಲಿ ಮೆಟಲ್, ಅಲ್ಯೂಮಿನಿಯಂ ಸೇರಿದಂತೆ ವಿವಿಧ ರಾಸಾಯನಿಕ ವಸ್ತುಗಳನ್ನು ಬಳಸಲಾಗುತ್ತಿದೆ, ಇದರಿಂದ ವಾಯುಮಾಲಿನ್ಯ ಹೆಚ್ಚಾಗುತ್ತಿದೆ, ಕೇಂದ್ರ ಸರ್ಕಾರ ಹಸಿರು ಪಟಾಕಿಗಳ ಬಳಕೆಗೆ ಸೂಚನೆ ನೀಡಿದೆ, ಹಸಿರು ಪಟಾಕಿಗಳಿಂದಲೂ ಶೇ.30ರಷ್ಟು ಮಾತ್ರ ಮಾಲಿನ್ಯ ನಿಯಂತ್ರಿಸಲು ಸಾಧ್ಯ ಎಂದರು.

ಪಕ್ಷಿ ಗಣತಿ ಪೂರ್ಣಗೊಂಡ ಬಳಿಕ ಲಭ್ಯವಾಗುವ ಅಂಕಿ-ಅಂಶಗಳ ಆಧಾರದ ಮೇಲೆ ಮಾಹಿತಿ ನೀಡಲಾಗುವುದು, ಕಾರ್ಯಕ್ರಮದ ಮೂಲಕ ಪಕ್ಷಿಗಳ ವೈವಿಧ್ಯತೆ ಮತ್ತು ಅವುಗಳ ಸಂರಕ್ಷಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶವ ಇದಾಗಿದೆ ಎಂದರು.

ಎಲ್ಲಾ ಹಸಿರು ಪಟಾಕಿಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿನ್ನೆಯಿರುತ್ತದೆ ಹಾಗೂ ಕ್ಯೂಆರ್ ಕೋಡ್ ಇರುತ್ತದೆ, ಚಿಹ್ನೆ ಬಗ್ಗೆ ಸಂಬಂಧಪಟ್ಟ ಜಿಲ್ಲೆಯ ಪರಿಸರ ಅಧಿಕಾರಿಗಳಿಂದ ಖಚಿತ ಪಡಿಸಿಕೊಳ್ಳಬೇಕು, ಚಿನ್ನ ಇಲ್ಲದ ಯಾವುದೇ ಪಟಾಕಿ ಹಸಿರು ಪಟಾಕಿಯೆನಿಸುವುದಿಲ್ಲ ಮತ್ತು ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ‎

ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು

‎ದೀಪಾವಳಿ ಹಬ್ಬ ಆಚರಣೆ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗು ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು. ‎

‎ಸ್ಥಳೀಯ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ, ನಿಷೇಧಿತ ಪ್ರದೇಶದಲ್ಲಿ ಯಾವುದೇ ರೀತಿಯ ಪಟಾಕಿಗಳನ್ನು ಸ್ಫೋಟಿಸುವಂತಿಲ್ಲ ಅಥವಾ ಬಳಸುವಂತಿಲ್ಲ.

‎ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ನಿಷೇಧಿತ ಪಟಾಕಿಗಳ ಸಾಗಾಟ ಮಾಡುತ್ತಿದ್ದಲ್ಲಿ ಕೂಡಲೆ ವಾಣಿಜ್ಯ ತೆರಿಗೆ ಇಲಾಖೆ ರಾಜ್ಯದ ಗಡಿಗಳಲ್ಲಿರುವ ತಮ್ಮ ತನಿಖಾ ಠಾಣೆಗಳ ಮುಖಾಂತರ ನಿಷೇಧಿತ ಪಟಾಕಿ ಹಾಗೂ ಸಂಬಂಧಿತ ವಸ್ತುಗಳನ್ನು, ಸಾಗಾಟ ಮಾಡುವ ವಾಹನವನ್ನು ಸಾರಿಗೆ ಇಲಾಖೆಯಿಂದ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
deepavali festivalfire crackersfollow rulesminister ramalinga reddiofficers to take action
0 FacebookTwitterPinterestEmail
admin

previous post
ನವೆಂಬರ್‌ನಿಂದ ಹಾಲು-ಬಸ್‌ ಪ್ರಯಾಣ ದರ ಹೆಚ್ಚಳ

You may also like

ನವೆಂಬರ್‌ನಿಂದ ಹಾಲು-ಬಸ್‌ ಪ್ರಯಾಣ ದರ ಹೆಚ್ಚಳ

October 29, 2026

ಪರಿಷತ್‌ ಫಲಿತಾಂಶ 2028ರ ಚುನಾವಣೆ ಜನಾದೇಶ ಅಲ್ಲ

October 28, 2026

ಎಸ್‌ಐಆರ್‌ ನಂತರ 99.32 ಲಕ್ಷ ಮತದಾರರ ಹೆಸರು ಕಡಿತ

October 27, 2026

ಕಬ್ಬು ಬೆಳೆಗಾರರಿಗೆ ಸ್ಪಂದಿಸಿ ಬೇಡಿಕೆಗಳ ಈಡೇರಿಸಿ

October 26, 2026

ಸ್ಟಿಂಗ್ ಆರೋಪಿಗಳು ಸಚಿವ ಕುಮಾರಸ್ವಾಮಿ ಬಂಟರು

October 24, 2026

ಸ್ಟಿಂಗ್‌ ಕಾರಣಕರ್ತರ ವಿರುದ್ಧ ಕ್ರಮಕ್ಕೆ ಡಿಕೆಶಿಗೆ ತಾಕೀತು

October 23, 2026

ಸಚಿವರ ತಡೆದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆದೇಶ

October 22, 2026

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026

ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

October 17, 2026

ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

October 16, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (601)
  • ಅಂಕಣ (109)
  • ಉದ್ಯೋಗ (359)
  • ದಿನ ಭವಿಷ್ಯ (110)
  • ರಾಜಕೀಯ (2,093)
  • ರಾಜ್ಯ (2,409)
  • ರಾಷ್ಟ್ರ (2,373)
  • ವಿಶ್ಲೇಷಣೆ (202)
  • ಶಿಕ್ಷಣ (415)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ನಿಯಮ ಮೀರಿ ಪಟಾಕಿ ಸಿಡಿಸಿದರೆ ಕಠಿಣ ಕ್ರಮ

    October 30, 2026
  • ನವೆಂಬರ್‌ನಿಂದ ಹಾಲು-ಬಸ್‌ ಪ್ರಯಾಣ ದರ ಹೆಚ್ಚಳ

    October 29, 2026
  • ಪರಿಷತ್‌ ಫಲಿತಾಂಶ 2028ರ ಚುನಾವಣೆ ಜನಾದೇಶ ಅಲ್ಲ

    October 28, 2026

KMS Special

  • ನಿಯಮ ಮೀರಿ ಪಟಾಕಿ ಸಿಡಿಸಿದರೆ ಕಠಿಣ ಕ್ರಮ

    October 30, 2026
  • ನವೆಂಬರ್‌ನಿಂದ ಹಾಲು-ಬಸ್‌ ಪ್ರಯಾಣ ದರ ಹೆಚ್ಚಳ

    October 29, 2026
  • ಪರಿಷತ್‌ ಫಲಿತಾಂಶ 2028ರ ಚುನಾವಣೆ ಜನಾದೇಶ ಅಲ್ಲ

    October 28, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ನವೆಂಬರ್‌ನಿಂದ ಹಾಲು-ಬಸ್‌ ಪ್ರಯಾಣ ದರ ಹೆಚ್ಚಳ

October 29, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ