Thursday, November 12, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, November 12, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರಶಿಕ್ಷಣ

ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಬಜೆಟ್‌ನಲ್ಲಿ ಘೋಷಣೆ

by KM Shivaraju November 11, 2026
written by KM Shivaraju November 11, 2026 0 comments 3 minutes read
0FacebookTwitterPinterestEmail
10

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಸಾಹಿತಿ ಡಾ.ಎಂ.ವೀರಪ್ಪ ಮೊಯಿಲಿ ನೇತೃತ್ವದಲ್ಲಿ 2027ರಲ್ಲಿ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಕುರಿತು ಮುಂದಿನ ಬಜೆಟ್‌ನಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕಟಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯಿಲಿ ಅವರ “ವಿಶ್ವಸಂಸ್ಕೃತಿಯ ಮಹಾಯಾನ (ಸಂಪುಟ 4)- ಗದ್ಯ ಮಹಾಕಾವ್ಯವನ್ನು ಮೈಸೂರಿನ ಊಟಿ ರಸ್ತೆಯ ಜೆಎಸ್ಎಸ್ ವಿದ್ಯಾಸಂಸ್ಥೆಯಲ್ಲಿ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, “ಕನ್ನಡ ಭಾಷೆ ಮತ್ತು ಸಂಸ್ಕೃತಿ ಉಳಿಸಿ ಬೆಳೆಸುವ ಉದ್ದೇಶದಿಂದ ವಿದೇಶಗಳಲ್ಲಿ ಕನ್ನಡಕ್ಕೆ ಅಪಾರ ಗೌರವ ನೀಡುತ್ತಿರುವ ಕನ್ನಡಿಗರನ್ನು ಒಂದೆಡೆ ಸೇರಿಸಿ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಉದ್ದೇಶವಿದೆ ಎಂದರು.

ಶಿಕ್ಷಣ, ಸಾಹಿತ್ಯ ಶಕ್ತಿಶಾಲಿ ಸಾಧನ

ಜಗತ್ತು ಒಂದಾಗಬೇಕಾದರೆ ಮೊದಲು ಮನುಷ್ಯರು ಒಂದಾಗಬೇಕು, ಮನುಷ್ಯನನ್ನು ನಿಜವಾದ ಮನುಷ್ಯನನ್ನಾಗಿ ರೂಪಿಸುವುದೇ ಧರ್ಮ ಮತ್ತು ಸಂಸ್ಕೃತಿ, ರಾಜಕೀಯದಲ್ಲಿರುವ ನಮ್ಮ ಹೆಸರುಗಳು ಭವಿಷ್ಯದಲ್ಲಿ ಮರೆಯಾಗಬಹುದು, ಆದರೆ, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರ ಹೆಸರು ಮತ್ತು ಅವರ ಚಿಂತನೆಗಳು ಶಾಶ್ವತವಾಗಿ ಉಳಿಯುತ್ತವೆ, ಶಿಕ್ಷಣ ಮತ್ತು ಸಾಹಿತ್ಯ ಜಗತ್ತಿನ ಅತ್ಯಂತ ಶಕ್ತಿಶಾಲಿ ಸಾಧನಗಳಾಗಿವೆ.

ಸಾಹಿತ್ಯ ಮತ್ತು ರಾಜಕಾರಣದ ನಂಟು ಹೊಸದೇನಲ್ಲ, ಅಧಿಕಾರ ಬಳಸಿಕೊಂಡು ಜನರ ಬದುಕಿನಲ್ಲಿ ಬದಲಾವಣೆ ತರಬಹುದು, ಆದರೆ, ಸಾಹಿತ್ಯದ ಮೂಲಕ ಜನರ ಆಲೋಚನೆಗಳನ್ನೇ ಬದಲಾಯಿಸಬಹುದು, ಅಧಿಕಾರಾವಧಿ ಸೀಮಿತವಾದರೂ ಸಾಹಿತ್ಯದ ಪ್ರಭಾವ ಶಾಶ್ವತ, ಒಬ್ಬ ವ್ಯಕ್ತಿಯ ಬದುಕು ಮುಗಿದರೂ ಆತ ಬರೆದ ಚಿಂತನೆಗಳಿಗೆ ಸಾವಿಲ್ಲ.

ಮನುಷ್ಯ ಬದುಕಲು ಆಹಾರ ಎಷ್ಟು ಮುಖ್ಯವೋ, ಆತ್ಮ ತೃಪ್ತಿಗೆ ಸಾಹಿತ್ಯ ಮತ್ತು ಕಲೆ ಅಷ್ಟೇ ಮುಖ್ಯ, ಕತ್ತಲೆ ದೂರ ಮಾಡಲು ಬೆಳಕು ಬೇಕು, ಅಜ್ಞಾನ ದೂರ ಮಾಡಲು ಸಾಹಿತ್ಯ ಮತ್ತು ಸಂಸ್ಕೃತಿ ಬೇಕು, ಅಭಿವೃದ್ಧಿಗೆ ಸಂಪತ್ತು ಅಗತ್ಯವಾದರೆ, ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಮೌಲ್ಯಗಳು ಅಗತ್ಯ, ಸಂಸ್ಕೃತಿ ನಮ್ಮ ಗುರುತು, ಮಾನವೀಯತೆ ನಮ್ಮ ಅಸ್ತಿತ್ವ, ನಮ್ಮ ಕಾಯಕಗಳು ಬೇರೆ ಬೇರೆಯಾಗಿರಬಹುದು, ಆದರೆ, ಮಾನವೀಯ ಭಾವನೆಗಳು ಒಂದೇ ಆಗಿರಬೇಕು.

ಎಲ್ಲ ಧರ್ಮಗಳಲ್ಲಿ ಮಾನವೀಯತೆ

ಎಲ್ಲ ಭಾಷೆಗಳ ಸಾಹಿತ್ಯ, ಕಾವ್ಯ, ಶಾಯರಿ ಮತ್ತು ಸಂಗೀತಗಳಲ್ಲಿ ಮಾನವೀಯ ಭಾವನೆಗಳ ಅಭಿವ್ಯಕ್ತಿ ಕಾಣಬಹುದು, ಎಲ್ಲ ಧರ್ಮಗಳಲ್ಲಿ ಮಾನವೀಯತೆ ಮತ್ತು ಸಂಸ್ಕೃತಿ ಬೆಸೆಯುವ ಮೌಲ್ಯಗಳಿವೆ, ಇಂತಹ ಮೌಲ್ಯಗಳನ್ನು ಉಳಿಸಿ-ಬೆಳೆಸುವಲ್ಲಿ ಸಾಹಿತ್ಯ ಲೋಕದ ಪಾತ್ರ ಬಹಳ ದೊಡ್ಡದು.

ವೀರಪ್ಪ ಮೊಯಿಲಿ ಅವರ ಸಾಹಿತ್ಯಿಕ ಹಾಗೂ ರಾಜಕೀಯ ಕೊಡುಗೆಗಳು ಅಪಾರ, 1985ರಲ್ಲಿ ತಮಗೆ, ಎಚ್.ಎಂ.ರೇವಣ್ಣ, ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಯುವನಾಯಕರಿಗೆ ರಾಜೀವ್ ಗಾಂಧಿ ಜೊತೆ ಮಾತನಾಡಿ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ದೊರಕಿಸಿಕೊಡುವಲ್ಲಿ ಮೊಯಿಲಿ ಪ್ರಮುಖ ಪಾತ್ರ ವಹಿಸಿದ್ದರು, ರಾಜಕೀಯ ಜೀವನದಲ್ಲಿ ಹಲವು ಯುವನಾಯಕರಿಗೆ ಅವಕಾಶ ಕಲ್ಪಿಸಿದ ಅವರು, ಇಂದು ಸಾಹಿತ್ಯ ಲೋಕದಲ್ಲಿಯೂ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದಾರೆ.

ವೀರಪ್ಪ ಮೊಯಿಲಿ ನಾಲ್ಕನೇ ತರಗತಿಯಲ್ಲಿದ್ದಾಗಲೇ ಕವಿತೆ ಬರೆಯುವ ಮೂಲಕ ಸಾಹಿತ್ಯದ ಒಲವು ಬೆಳೆಸಿಕೊಂಡವರು, ರಾಜಕೀಯ ಮತ್ತು ಸಾಹಿತ್ಯ ಎರಡನ್ನೂ ಸಮರ್ಥವಾಗಿ ನಿಭಾಯಿಸುತ್ತಿರುವ ಅವರ ಸಾಧನೆ ವಿಶೇಷವಾದದು, ದಕ್ಷಿಣ ಕನ್ನಡ ಜಿಲ್ಲೆಯ ಹಳ್ಳಿಯಿಂದ ಬಂದು ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ ಅವರು, ರಾಜಕೀಯದ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿಯೂ ಮಹತ್ವದ ಸಾಧನೆ ಮಾಡಿದ್ದಾರೆ.

ಮೊಯಿಲಿ ಕೊಡುಗೆ ಸ್ಮರಣೀಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳಿಸಲು ಪ್ರೇರಣೆ ನೀಡಿದವರಲ್ಲಿ ಮೊಯಿಲಿ ಪ್ರಮುಖರು, ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಋಣ ತೀರಿಸಲು ಶ್ರಮಿಸಿದ ಅವರು, ಸಿಇಟಿ ವ್ಯವಸ್ಥೆ ಜಾರಿಗೆ ತರುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಶಿಕ್ಷಣ ಪಡೆಯಲು ಹೊಸ ಅವಕಾಶ ಕಲ್ಪಿಸಿದರು, ಎಲೆಕ್ಟ್ರಾನಿಕ್ ಸಿಟಿ ಮತ್ತು ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಯಲ್ಲೂ ಅವರ ಕೊಡುಗೆ ಸ್ಮರಣೀಯ.

ಮೊಯಿಲಿ ಅವರು 30ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದು, ಅವರ ‘ರಾಮಾಯಣ ಮಹಾನ್ವೇಷಣಂ’ ಕೃತಿಗೆ ಸರಸ್ವತಿ ಸಮ್ಮಾನ್ ಪ್ರಶಸ್ತಿ ಲಭಿಸಿದೆ, ಕರ್ನಾಟಕದ ಸ್ವಾತಂತ್ರ್ಯ ಹೋರಾಟದ ಇತಿಹಾಸ ಕುರಿತಂತೆ ಅವರು ಬರೆದಿರುವ ಭಾಗವನ್ನು ಪ್ರತ್ಯೇಕ ಪುಸ್ತಕವಾಗಿ ಪ್ರಕಟಿಸುವಂತೆ ಮನವಿ ಮಾಡಿದ್ದೇನೆ, ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ, ಅವರಿಗೆ ಜ್ಞಾನಪೀಠ ಸೇರಿದಂತೆ ಇನ್ನಷ್ಟು ಪ್ರತಿಷ್ಠಿತ ಸಾಹಿತ್ಯ ಪ್ರಶಸ್ತಿಗಳು ಲಭಿಸಲಿ ಎಂಬುದು ನಮ್ಮೆಲ್ಲರ ಆಶಯ.

ರಾಜಕಾರಣಿಗಳಿಗೆ ಸಾರ್ವಜನಿಕ ಕೆಲಸಗಳ ಒತ್ತಡದ ನಡುವೆ ಸಾಹಿತ್ಯ ಮತ್ತು ಸಂಸ್ಕೃತಿಗೆ ಸಮಯ ಮೀಸಲಿಡುವುದು ಸುಲಭವಲ್ಲ, ಆದರೆ, ಮೊಯಿಲಿ ರಾಜಕೀಯ ಜೀವನದ ನಡುವೆಯೂ ಸಾಹಿತ್ಯ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವುದು ಎಲ್ಲರಿಗೂ ಮಾದರಿಯಾಗಿದೆ, ರಾಜಕಾರಣಿಗಳಾದ ಎಂ.ಪಿ.ಪ್ರಕಾಶ್, ಎಸ್.ಬಂಗಾರಪ್ಪ, ಎಸ್.ಎಂ.ಕೃಷ್ಣ ಸೇರಿದಂತೆ ಅನೇಕ ಹಿರಿಯ ನಾಯಕರು ಸಾಹಿತ್ಯ ಪ್ರೇಮಿಗಳಾಗಿದ್ದರು.

ಕನ್ನಡ ಧ್ವಜಕ್ಕೆ ಅಧಿಕೃತ ಮಾನ್ಯತೆ

ಕನ್ನಡ ಭಾಷೆ ಮತ್ತು ಕನ್ನಡ ಧ್ವಜಕ್ಕೆ ಅಧಿಕೃತ ಮಾನ್ಯತೆ ನೀಡುವ ವಿಚಾರಕ್ಕೆ ಸರ್ಕಾರ ಬದ್ಧವಾಗಿದೆ, ಈ ಹಿಂದೆ ಸಿದ್ದರಾಮಯ್ಯ ಕನ್ನಡ ಧ್ವಜದ ವಿಚಾರವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದರು, ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಿ ಅಗತ್ಯ ಕಾನೂನು ರೂಪಿಸುವಲ್ಲಿ ಕ್ರಮ ಕೈಗೊಳ್ಳಲಾಗುವುದು, ಸಂವಿಧಾನದಲ್ಲಿ ಇದಕ್ಕೆ ಯಾವುದೇ ನಿರ್ಬಂಧವಿಲ್ಲ, ಕನ್ನಡ ಭಾಷೆ ಮತ್ತು ಕನ್ನಡ ಬಾವುಟಕ್ಕೆ ವಿಶೇಷ ಗುರುತು ಹಾಗೂ ಗೌರವ ದೊರಕಿಸುವುದು ಕಾಂಗ್ರೆಸ್ ಸರ್ಕಾರದ ಬದ್ಧತೆಯಾಗಿದೆ.

ಕನಕಪುರದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಸುಮಾರು 55 ನಿಮಿಷಗಳ ಕಾಲ ಮಾಡಿದ ಅದ್ಭುತ ಸಾಹಿತ್ಯಿಕ ಭಾಷಣದಿಂದ ನಾನು ಪ್ರಭಾವಿತನಾಗಿದ್ದೆ, ಆ ಭಾಷಣವನ್ನು ಪುಸ್ತಕ ರೂಪದಲ್ಲಿ ಪ್ರಕಟಿಸುವಂತೆ ಅವರ ಪುತ್ರ ಮಹಿಮಾ ಪಟೇಲ್ ಅವರಿಗೂ ಮನವಿ ಮಾಡಿದ್ದೆ.

ಜವಹರಲಾಲ್‌ ನೆಹರು ಜೈಲಿನಲ್ಲಿದ್ದಾಗಲೂ ಅನೇಕ ಪುಸ್ತಕಗಳನ್ನು ಬರೆದಿದ್ದರು, ಸೋನಿಯಾ ಗಾಂಧಿ ಆತ್ಮಕಥೆ ಈಗ ದೇಶದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ, ನಾನು ನೀರಾವರಿ ಸಚಿವನಾಗಿದ್ದಾಗಿನ ಒಂದಷ್ಟು ಅನುಭವಗಳನ್ನು ಆಧರಿಸಿ ‘ನೀರಿನ ಹೆಜ್ಜೆ’ ಎಂಬ ಪುಸ್ತಕ ಬರೆದು ಸಿದ್ದರಾಮಯ್ಯ ಅವರಿಂದ ಬಿಡುಗಡೆ ಮಾಡಿಸಿದ್ದೆ.

ಗಾಂಧಿ ಭಾರತ ಪುಸ್ತಕ

ಮಹಾತ್ಮ ಗಾಂಧಿಯ ನೂರು ವರ್ಷಗಳ ಇತಿಹಾಸ ಮತ್ತು ಬೆಳಗಾವಿಯಲ್ಲಿ ನಡೆದ ಗಾಂಧಿ ಭಾರತ ಕಾರ್ಯಕ್ರಮ ಕುರಿತು ಮತ್ತೊಂದು ಪುಸ್ತಕ ಸಿದ್ಧಪಡಿಸಿದ್ದು, ಸೂಕ್ತ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುವುದು.

ಹಿರಿಯ ನಾಯಕ ವೀರಪ್ಪ ಮೊಯಿಲಿ ತಮ್ಮ ಜೀವನದ ಪ್ರತಿಯೊಂದು ಹಂತದಲ್ಲಿಯೂ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿದಿದ್ದಾರೆ, ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತು ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿರುವ ಹಿರಿಯ ನಾಯಕನಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ, ಅವರ ಅನುಭವ ಮತ್ತು ಸೇವೆ ರಾಜ್ಯಕ್ಕೆ ಇನ್ನಷ್ಟು ದೊರೆಯಬೇಕು ಎಂಬ ಆಶಯದಿಂದ ನಾವೆಲ್ಲರೂ ಅವರಿಗೆ ಬೆಂಬಲ ಮತ್ತು ಪ್ರೋತ್ಸಾಹ ನೀಡಲು ಬಂದಿದ್ದೇವೆ ಎಂದರು.

ಕತ್ತಿಗಿಂತ ಲೇಖನಿ ಹರಿತ ಎಂಬ ಮಾತಿನಂತೆ ಸಾಹಿತ್ಯಕ್ಕೆ ಸಮಾಜವನ್ನು ಬದಲಿಸುವ ಶಕ್ತಿಯಿದೆ, ಸುತ್ತೂರು ಶ್ರೀಗಳು ನೂರಾರು ಬರಹಗಾರರನ್ನು ಪ್ರೋತ್ಸಾಹಿಸಿ, ಅನೇಕ ಪುಸ್ತಕಗಳ ರಚನೆಗೆ ಪ್ರೇರಣೆ ನೀಡಿದ್ದಾರೆ, ಸಾಹಿತ್ಯ, ಆಧ್ಯಾತ್ಮಿಕ ಚಿಂತನೆ ಮತ್ತು ಸಂಸ್ಕೃತಿಯ ಸಂರಕ್ಷಣೆಗೆ ಹಿರಿಯರು ನೀಡುತ್ತಿರುವ ಕೊಡುಗೆ ಅಪಾರ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
announcement in the next budgetcm d k shivakumardr.m.veerappa moilythree day conventionworld kannada convention
0 FacebookTwitterPinterestEmail
KM Shivaraju

previous post
ಮುಂದಿನ 6 ತಿಂಗಳು ಸ್ಥಳೀಯ ಸಂಸ್ಥೆ ಚುನಾವಣೆ ಇಲ್ಲ

You may also like

ಮುಂದಿನ 6 ತಿಂಗಳು ಸ್ಥಳೀಯ ಸಂಸ್ಥೆ ಚುನಾವಣೆ ಇಲ್ಲ

November 9, 2026

ಸಂಪುಟಕ್ಕೆ ಬಹುಕೋಟಿ ಹಗರಣ ಆರೋಪಿ ನಾಗೇಂದ್ರ

November 7, 2026

ಹೆಚ್ಚು ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಧಕ್ಕೆ

November 6, 2026

ಬಸ್‌ ಪ್ರಯಾಣ ದರ ಶೇ.23ರಿಂದ ಶೇ.37ರಷ್ಟು ಹೆಚ್ಚಳ

November 4, 2026

ನೋಟಿಸ್‌ ನೀಡಿ ಬಂಧಿಸಲಿ, ನನ್ನ ತಾಕತ್ತು ತೋರಿಸುವೆ

November 3, 2026

ಪ್ರಜ್ವಲ್‌ ಪೆನ್‌ಡ್ರೈವ್‌ ಹಗರಣದಲ್ಲಿ ಡಿ.ಕೆ.ಶಿ. ಷಡ್ಯಂತ್ರ

November 2, 2026

ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಸಮ್ಮತಿ

October 31, 2026

ನಿಯಮ ಮೀರಿ ಪಟಾಕಿ ಸಿಡಿಸಿದರೆ ಕಠಿಣ ಕ್ರಮ

October 30, 2026

ನವೆಂಬರ್‌ನಿಂದ ಹಾಲು-ಬಸ್‌ ಪ್ರಯಾಣ ದರ ಹೆಚ್ಚಳ

October 29, 2026

ಪರಿಷತ್‌ ಫಲಿತಾಂಶ 2028ರ ಚುನಾವಣೆ ಜನಾದೇಶ ಅಲ್ಲ

October 28, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (609)
  • ಅಂಕಣ (109)
  • ಉದ್ಯೋಗ (363)
  • ದಿನ ಭವಿಷ್ಯ (110)
  • ರಾಜಕೀಯ (2,101)
  • ರಾಜ್ಯ (2,417)
  • ರಾಷ್ಟ್ರ (2,381)
  • ವಿಶ್ಲೇಷಣೆ (202)
  • ಶಿಕ್ಷಣ (417)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಬಜೆಟ್‌ನಲ್ಲಿ ಘೋಷಣೆ

    November 11, 2026
  • ಮುಂದಿನ 6 ತಿಂಗಳು ಸ್ಥಳೀಯ ಸಂಸ್ಥೆ ಚುನಾವಣೆ ಇಲ್ಲ

    November 9, 2026
  • ಸಂಪುಟಕ್ಕೆ ಬಹುಕೋಟಿ ಹಗರಣ ಆರೋಪಿ ನಾಗೇಂದ್ರ

    November 7, 2026

KMS Special

  • ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಬಜೆಟ್‌ನಲ್ಲಿ ಘೋಷಣೆ

    November 11, 2026
  • ಮುಂದಿನ 6 ತಿಂಗಳು ಸ್ಥಳೀಯ ಸಂಸ್ಥೆ ಚುನಾವಣೆ ಇಲ್ಲ

    November 9, 2026
  • ಸಂಪುಟಕ್ಕೆ ಬಹುಕೋಟಿ ಹಗರಣ ಆರೋಪಿ ನಾಗೇಂದ್ರ

    November 7, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಂದಿನ 6 ತಿಂಗಳು ಸ್ಥಳೀಯ ಸಂಸ್ಥೆ ಚುನಾವಣೆ...

November 9, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ