Wednesday, November 18, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, November 18, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್‌ ವಲಯದಲ್ಲಿ ಕುಸಿದ ಸಿದ್ದರಾಮಯ್ಯ ವರ್ಚಸ್ಸು

by KM Shivaraju November 17, 2026
written by KM Shivaraju November 17, 2026 0 comments 1 minutes read
0FacebookTwitterPinterestEmail
5

ಬೆಂಗಳೂರು:ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುತ್ತಿದ್ದಂತೆ ರಾಷ್ಟ್ರೀಯ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಪ್ರಭಾವ ಕಡಿಮೆ ಆಯಿತೇ ಎಂಬ ಮಾತುಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ.

ಸೋಮವಾರ ದೆಹಲಿಯಲ್ಲಿ ನಡೆದ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರಿಗೆ ನೀಡಲಾದ ಆಸನ ವ್ಯವಸ್ಥೆಯೇ ಈ ಎಲ್ಲಾ ಚರ್ಚೆಗೆ ಗ್ರಾಸ ಒದಗಿಸಿದೆ.

ಆರನೇ ಸಾಲಿನಲ್ಲಿ ಆಸನ

ಸಮಾರಂಭಕ್ಕೆ ಇಂಡಿಯಾ ಒಕ್ಕೂಟದ ಆಯ್ದ ಗಣ್ಯರಿಗೆ ಆಹ್ವಾನ ನೀಡಲಾಗಿತ್ತು, ಸಿದ್ದರಾಮಯ್ಯ ಅವರಿಗೆ ಆರನೇ ಸಾಲಿನಲ್ಲಿ ಆಸನ ವ್ಯವಸ್ಥೆ ಮಾಡಲಾಗಿತ್ತು.

ಮೊದಲ ಸಾಲಿನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ, ತಮಿಳುನಾಡು ಮುಖ್ಯಮಂತ್ರಿ ಜೋಸೆಫ್‌ ವಿಜಯ್‌, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಲೇಶ್‌ ಯಾದವ್‌, ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ಅವರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿತ್ತು.

ಎರಡನೇ ಸಾಲಿನಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಬರ್ಟ್‌ ವಾದ್ರಾ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ, ಕೇರಳಂ ಮುಖ್ಯಮಂತ್ರಿ ವಿ.ಡಿ.ಸತೀಶನ್‌ ಸೇರಿದಂತೆ ಹಲವು ನಾಯಕರಿಗೆ ಆಸನ ಕಲ್ಪಿಸಲಾಗಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ

ನಂತರದ ಸಾಲುಗಳಲ್ಲಿ ವಿಶೇಷ ಆಹ್ವಾನಿತರಿಗೆ ಸ್ಥಾನಗಳನ್ನು ನೀಡಲಾಗಿತ್ತು, ಸಿದ್ದರಾಮಯ್ಯ ಅವರಿಗೂ ಇವರ ನಡುವೆ ಆಸನ ವ್ಯವಸ್ಥೆ ಕಲ್ಪಿಸಿದ್ದುದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸ ಮಾಡಿದೆ.

ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿದು ಕೇವಲ ಐದು ತಿಂಗಳಷ್ಟೇ ಕಳೆದಿದೆ, ಮುಖ್ಯಮಂತ್ರಿ ಆಗಿದ್ದಾಗ, ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರ ಎಡ ಅಥವಾ ಬಲ ಭಾಗದಲ್ಲಿ ಆಸೀನರಾಗಿರುತ್ತಿದ್ದರು.

ಇದೀಗ ಅವರು ಹಿಂದಿನ ಸಾಲಿಗೆ ತಳ್ಳಲ್ಪಟ್ಟಿರುವುದು ಎಐಸಿಸಿ ನಾಯಕರ ದೃಷ್ಟಿಯಲ್ಲಿ ಕಡೆಗಾಣಿಸಲ್ಪಟ್ಟಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ.

ಅಸಮಾಧಾನ ತೋರ್ಪಡಿಸಿಕೊಳ್ಳಲಿಲ್ಲ

ಸಮಾರಂಭದಲ್ಲಿನ ತಮಗೆ ಕಲ್ಪಿಸಲಾದ ಆಸನ ವ್ಯವಸ್ಥೆ ಬಗ್ಗೆ ಸಿದ್ದರಾಮಯ್ಯ ಅವರಲ್ಲಿ ಅಸಮಾಧಾನ ಇದ್ದರೂ, ಅವರು ಅದನ್ನು ತೋರ್ಪಡಿಸಿಕೊಳ್ಳಲಿಲ್ಲ.

ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ನಂತರ ಏರ್ಪಡಿಸಿದ್ದ ಚಹಾ ಕೂಟದಲ್ಲಿ ಹೆಸರಿಗೆ ಮಾತ್ರ (ನಾಮ್‌ ಕಾ ವಾಸ್ತೆ) ಎಂಬಂತೆ ಪಾಲ್ಗೊಂಡು ಏನನ್ನೂ ಸ್ವೀಕರಿಸದೆ, ಕರ್ನಾಟಕ ಭವನಕ್ಕೆ ಹಿಂತಿರುಗಿದರು.

ಈ ಎಲ್ಲ ಬೆಳವಣಿಗೆ ನಡುವೆ ದೆಹಲಿಯಲ್ಲಿ ಇಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮವಿತ್ತು, ಅದರಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದೇನೆ ಎಂದರು.

ಕರ್ನಾಟಕ ರಾಜಕೀಯಕ್ಕೆ ಸಂಬಂಧಿಸಿದ ಚರ್ಚೆ ಏನಾದರೂ ನಡೆಯಿತೇ ಎಂಬ ಪ್ರಶ್ನೆಗೆ ಅಂತಹ ಯಾವುದೇ ಮಾತುಕತೆ ಆಗಿಲ್ಲ ಎಂದಿಷ್ಟೇ ಉತ್ತರಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aicc levelcongres partysiddaramaiah popularity downsocial media
0 FacebookTwitterPinterestEmail
KM Shivaraju

previous post
ಕುಮಾರಕೃಪದ ʼಗಂಗಾʼ ಮುಖ್ಯಮಂತ್ರಿ ಅಧಿಕೃತ ನಿವಾಸ

You may also like

ಕುಮಾರಕೃಪದ ʼಗಂಗಾʼ ಮುಖ್ಯಮಂತ್ರಿ ಅಧಿಕೃತ ನಿವಾಸ

November 16, 2026

ಕಾವೇರಿ ನೀರೇ ತಮಿಳುನಾಡಿಗೆ ರಾಜಕೀಯ ಅಸ್ತ್ರ

November 14, 2026

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ತಾರತಮ್ಯ ಮಾಡಿಲ್ಲ

November 13, 2026

ಕೆಪಿಎಸ್‌ಸಿ ಪ್ರೊಬೇಷನರ್‌ ಪರೀಕ್ಷೆಗೆ ಸರ್ಪಗಾವಲು

November 12, 2026

ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಬಜೆಟ್‌ನಲ್ಲಿ ಘೋಷಣೆ

November 11, 2026

ಮುಂದಿನ 6 ತಿಂಗಳು ಸ್ಥಳೀಯ ಸಂಸ್ಥೆ ಚುನಾವಣೆ ಇಲ್ಲ

November 9, 2026

ಸಂಪುಟಕ್ಕೆ ಬಹುಕೋಟಿ ಹಗರಣ ಆರೋಪಿ ನಾಗೇಂದ್ರ

November 7, 2026

ಹೆಚ್ಚು ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಧಕ್ಕೆ

November 6, 2026

ಬಸ್‌ ಪ್ರಯಾಣ ದರ ಶೇ.23ರಿಂದ ಶೇ.37ರಷ್ಟು ಹೆಚ್ಚಳ

November 4, 2026

ನೋಟಿಸ್‌ ನೀಡಿ ಬಂಧಿಸಲಿ, ನನ್ನ ತಾಕತ್ತು ತೋರಿಸುವೆ

November 3, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (614)
  • ಅಂಕಣ (109)
  • ಉದ್ಯೋಗ (365)
  • ದಿನ ಭವಿಷ್ಯ (110)
  • ರಾಜಕೀಯ (2,106)
  • ರಾಜ್ಯ (2,422)
  • ರಾಷ್ಟ್ರ (2,386)
  • ವಿಶ್ಲೇಷಣೆ (202)
  • ಶಿಕ್ಷಣ (419)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ವಲಯದಲ್ಲಿ ಕುಸಿದ ಸಿದ್ದರಾಮಯ್ಯ ವರ್ಚಸ್ಸು

    November 17, 2026
  • ಕುಮಾರಕೃಪದ ʼಗಂಗಾʼ ಮುಖ್ಯಮಂತ್ರಿ ಅಧಿಕೃತ ನಿವಾಸ

    November 16, 2026
  • ಕಾವೇರಿ ನೀರೇ ತಮಿಳುನಾಡಿಗೆ ರಾಜಕೀಯ ಅಸ್ತ್ರ

    November 14, 2026

KMS Special

  • ಕಾಂಗ್ರೆಸ್‌ ವಲಯದಲ್ಲಿ ಕುಸಿದ ಸಿದ್ದರಾಮಯ್ಯ ವರ್ಚಸ್ಸು

    November 17, 2026
  • ಕುಮಾರಕೃಪದ ʼಗಂಗಾʼ ಮುಖ್ಯಮಂತ್ರಿ ಅಧಿಕೃತ ನಿವಾಸ

    November 16, 2026
  • ಕಾವೇರಿ ನೀರೇ ತಮಿಳುನಾಡಿಗೆ ರಾಜಕೀಯ ಅಸ್ತ್ರ

    November 14, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕುಮಾರಕೃಪದ ʼಗಂಗಾʼ ಮುಖ್ಯಮಂತ್ರಿ ಅಧಿಕೃತ ನಿವಾಸ

November 16, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ