Friday, November 20, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, November 20, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ರಾಜ್ಯ ಬಿಜೆಪಿಯಲ್ಲಿ ಮಹತ್ತರ ಬದಲಾವಣೆಗೆ ನಿರ್ಧಾರ

by KM Shivaraju November 19, 2026
written by KM Shivaraju November 19, 2026 0 comments 1 minutes read
0FacebookTwitterPinterestEmail
8

ಬೆಂಗಳೂರು:ಮುಂಬರುವ ವಿಧಾನಸಭಾ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಪಕ್ಷವನ್ನು ಮತ್ತಷ್ಟು ಬಲಪಡಿಸಲು ರಾಜ್ಯ ಬಿಜೆಪಿಯಲ್ಲಿ ಮಹತ್ತರ ಬದಲಾವಣೆಗೆ ದೆಹಲಿ ವರಿಷ್ಠರು ಮುಂದಾಗಿದ್ದಾರೆ.

ಈ ಸಂಬಂಧ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವ ಉದ್ದೇಶದಿಂದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ವರಿಷ್ಠರು ದೆಹಲಿಗೆ ಕರೆಸಿಕೊಂಡಿದ್ದಾರೆ.

ಪ್ರಮುಖರೊಂದಿಗೆ ಸಮಾಲೋಚನೆ

ರಾಜ್ಯ ಉಸ್ತುವಾರಿ ಹರೀಶ್‌ ಚಂದ್ರ ದ್ವಿವೇದಿ ಒಂದು ವಾರ ನಗರದಲ್ಲೇ ಬಿಡಾರ ಹೂಡಿ ಪಕ್ಷದ ಮುಖಂಡರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಪ್ರಮುಖರೊಂದಿಗೆ ಸಮಾಲೋಚಿಸಿ, ಸಂಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದಿದ್ದರು.

ದ್ವಿವೇದಿ ನೀಡಿರುವ ವರದಿ ಆಧರಿಸಿ ವರಿಷ್ಠರು ರಾಜ್ಯ ನಾಯಕತ್ವದಲ್ಲಿ ಕೆಲವು ಬದಲಾವಣೆ ತೀರ್ಮಾನ ಕೈಗೊಳ್ಳಲಿದ್ದು, ಒಂದೆರಡು ದಿನದಲ್ಲೇ ಸ್ಪಷ್ಟ ಚಿತ್ರಣ ಹೊರಬೀಳಲಿದೆ.

ಹಾಲಿ ಅಧ್ಯಕ್ಷ ವಿಜಯೇಂದ್ರ ಅವರ ಅವಧಿ ನವೆಂಬರ್‌ ಮೂರನೇ ವಾರಕ್ಕೆ ಅಂತ್ಯಗೊಳ್ಳಲಿದ್ದು, ಅವರನ್ನೇ ಎರಡನೇ ಅವಧಿಗೆ ಮುಂದುವರಸುವರೇ ಅಥವಾ ಹೊಸಬರನ್ನು ಆ ಸ್ಥಾನಕ್ಕೆ ತರಬೇಕೇ ಎಂಬ ಕುರಿತು ನಿರ್ಧಾರವಾಗಲಿದೆ.

ಸಂಶೋಧನೆ ಹೆಸರಲ್ಲಿ ಬಸವಣ್ಣನ ವಿಚಾರ-ತತ್ವಕ್ಕೆ ಅಪಚಾರ
ಯಡಿಯೂರಪ್ಪ ಕಡೆಗಣನೆಗೆ ಧೈರ್ಯ ಇಲ್ಲ

ಕರ್ನಾಟಕದ ಬಿಜೆಪಿಯ ಕೆಲವು ಹಿರಿಯ ನಾಯಕರು ವಿಜಯೇಂದ್ರ ಬದಲಾವಣೆಗೆ ಒತ್ತಾಯ ತರುತ್ತಿದ್ದಾರೆ, ಆದರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕಡೆಗಣಿಸಿ ವಿಧಾನಸಭಾ ಚುನಾವಣೆ ಎದುರಿಸುವ ಧೈರ್ಯ ವರಿಷ್ಠರಿಗಿಲ್ಲ.

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಬಸವರಾಜ ಬೊಮ್ಮಾಯಿ ಅವರನ್ನು ಕೂರಿಸಿದ ನಂತರ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಬೇಕಾಯಿತು.

ಇದನ್ನು ಮನಗಂಡ ವರಿಷ್ಠರು ವಿಜಯೇಂದ್ರ ಅವರನ್ನು ಪ್ರಮುಖ ಸ್ಥಾನದಲ್ಲಿ ಉಳಿಸಿಕೊಂಡೇ ರಾಜ್ಯ ಬಿಜೆಪಿಯನ್ನು ಬಲಿಷ್ಠಗೊಳಿಸಲು ಮುಂದಾಗಿದ್ದಾರೆ.

ಹೊಸ ಮುಖಗಳಿಗೆ ಅವಕಾಶ

ಪಕ್ಷ ಬಲಪಡಿಸುವಲ್ಲಿ ಬಿಜೆಪಿ ಪುನರ್‌ ರಚನೆ ವೇಳೆ ಕೆಲವರು ಅಧಿಕಾರ ಕಳೆದುಕೊಳ್ಳಲಿದ್ದು, ಹೊಸ ಮುಖಗಳಿಗೆ ಅವಕಾಶ ದೊರೆಯಲಿದೆ.

ವಿಧಾನಸಭೆಯ ಪ್ರತಿಪಕ್ಷ ನಾಯಕನ ಬದಲಾವಣೆ ಬಗ್ಗೆಯೂ ದೆಹಲಿಯ ಬಿಜೆಪಿ ಅಂಗಳದಲ್ಲಿ ಬಿರುಸಿನ ಚರ್ಚೆ ನಡೆದಿದ್ದು, ಯಾರು ಯಾವ ಸ್ಥಾನಕ್ಕೆ ಬರುತ್ತಾರೆ ಎಂಬ ಚಿತ್ರಣ ಒಂದೆರಡು ದಿನದಲ್ಲಿ ಹೊರಬೀಳಲಿದೆ.

ವಿಜಯೇಂದ್ರ ಅವರನ್ನು ಕೆಳಗಿಳಿಸಿ ಆ ಸ್ಥಾನ ಪಡೆಯುವ ರೇಸಿನಲ್ಲಿ ವಿ.ಸೋಮಣ್ಣ, ಸುನೀಲ್‌ ಕುಮಾರ್‌, ಮುರುಗೇಶ್‌ ನಿರಾಣಿ, ಮಹೇಶ್‌ ಟೆಂಗಿನಕಾಯಿ ಹೆಸರುಗಳು ಚಾಲ್ತಿಯಲ್ಲಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b s yadiyurappab y vijayendrachanges in the partydelhi bjp leaders on discussionstate bjp leadershipsunilkumarv.somanna
0 FacebookTwitterPinterestEmail
KM Shivaraju

previous post
ಸಂಶೋಧನೆ ಹೆಸರಲ್ಲಿ ಬಸವಣ್ಣನ ವಿಚಾರ-ತತ್ವಕ್ಕೆ ಅಪಚಾರ

You may also like

ಸಂಶೋಧನೆ ಹೆಸರಲ್ಲಿ ಬಸವಣ್ಣನ ವಿಚಾರ-ತತ್ವಕ್ಕೆ ಅಪಚಾರ

November 19, 2026

ಗ್ರಾಮೀಣ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ

November 18, 2026

ಕಾಂಗ್ರೆಸ್‌ ವಲಯದಲ್ಲಿ ಕುಸಿದ ಸಿದ್ದರಾಮಯ್ಯ ವರ್ಚಸ್ಸು

November 17, 2026

ಕುಮಾರಕೃಪದ ʼಗಂಗಾʼ ಮುಖ್ಯಮಂತ್ರಿ ಅಧಿಕೃತ ನಿವಾಸ

November 16, 2026

ಕಾವೇರಿ ನೀರೇ ತಮಿಳುನಾಡಿಗೆ ರಾಜಕೀಯ ಅಸ್ತ್ರ

November 14, 2026

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ತಾರತಮ್ಯ ಮಾಡಿಲ್ಲ

November 13, 2026

ಕೆಪಿಎಸ್‌ಸಿ ಪ್ರೊಬೇಷನರ್‌ ಪರೀಕ್ಷೆಗೆ ಸರ್ಪಗಾವಲು

November 12, 2026

ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಬಜೆಟ್‌ನಲ್ಲಿ ಘೋಷಣೆ

November 11, 2026

ಮುಂದಿನ 6 ತಿಂಗಳು ಸ್ಥಳೀಯ ಸಂಸ್ಥೆ ಚುನಾವಣೆ ಇಲ್ಲ

November 9, 2026

ಸಂಪುಟಕ್ಕೆ ಬಹುಕೋಟಿ ಹಗರಣ ಆರೋಪಿ ನಾಗೇಂದ್ರ

November 7, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (617)
  • ಅಂಕಣ (109)
  • ಉದ್ಯೋಗ (366)
  • ದಿನ ಭವಿಷ್ಯ (110)
  • ರಾಜಕೀಯ (2,109)
  • ರಾಜ್ಯ (2,425)
  • ರಾಷ್ಟ್ರ (2,389)
  • ವಿಶ್ಲೇಷಣೆ (202)
  • ಶಿಕ್ಷಣ (420)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ರಾಜ್ಯ ಬಿಜೆಪಿಯಲ್ಲಿ ಮಹತ್ತರ ಬದಲಾವಣೆಗೆ ನಿರ್ಧಾರ

    November 19, 2026
  • ಸಂಶೋಧನೆ ಹೆಸರಲ್ಲಿ ಬಸವಣ್ಣನ ವಿಚಾರ-ತತ್ವಕ್ಕೆ ಅಪಚಾರ

    November 19, 2026
  • ಗ್ರಾಮೀಣ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ

    November 18, 2026

KMS Special

  • ರಾಜ್ಯ ಬಿಜೆಪಿಯಲ್ಲಿ ಮಹತ್ತರ ಬದಲಾವಣೆಗೆ ನಿರ್ಧಾರ

    November 19, 2026
  • ಸಂಶೋಧನೆ ಹೆಸರಲ್ಲಿ ಬಸವಣ್ಣನ ವಿಚಾರ-ತತ್ವಕ್ಕೆ ಅಪಚಾರ

    November 19, 2026
  • ಗ್ರಾಮೀಣ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದೃಢೀಕರಣ

    November 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಶೋಧನೆ ಹೆಸರಲ್ಲಿ ಬಸವಣ್ಣನ ವಿಚಾರ-ತತ್ವಕ್ಕೆ ಅಪಚಾರ

November 19, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ