155
ಬೆಂಗಳೂರು:ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರ ಆರೋಗ್ಯದಲ್ಲಿ ಬಹಳಷ್ಟು ಸುಧಾರಣೆ ಕಂಡಿದೆ.
ಕಳೆದ ಕೆಲವು ತಿಂಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಈಗ ಪೂರ್ಣ ಗುಣಮುಖರಾಗಿದ್ದು, ಕೆಲವೇ ದಿನಗಳಲ್ಲಿ ಮನೆಗೆ ಹಿಂತಿರುಗಲಿದ್ದಾರೆ.
ಇನ್ನೂ ಕೆಲವು ದಿನ ವಿಶ್ರಾಂತಿ
ಅವರಲ್ಲಿ ನಿಶ್ಯಕ್ತಿ ಸುಧಾರಣೆ ಆಗಬೇಕಿರುವುದರಿಂದ ಇನ್ನೂ ಕೆಲವು ದಿನದ ಮಟ್ಟಿಗೆ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.
ಉಸಿರಾಟದ ತೊಂದರೆಯಿಂದ ಸುಮಾರು ಎರಡು ತಿಂಗಳ ಕಾಲ ಐಸಿಯುನಲ್ಲಿ ತಜ್ಞ ವೈದ್ಯರು ಚಿಕಿತ್ಸೆ ನೀಡಿದ್ದರು.
ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ, ವಿಧಾನಸಭಾಧ್ಯಕ್ಷರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ್ದ ಅವರು, ಕೇಂದ್ರದಲ್ಲಿ ರಾಜ್ಯ ಹಾಗೂ ಸಂಪುಟ ದರ್ಜೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿ, ಇದೀಗ ರಾಜಕೀಯ ನಿವೃತ್ತಿ ಹೊಂದಿ ವಿಶ್ರಾಂತಿ ಜೀವನ ನಡೆಸುತ್ತಿದ್ದಾರೆ.