Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜಿಲ್ಲಾಧಿಕಾರಿಗಳು ಮಹಾರಾಜರಲ್ಲ ಜನ ಸೇವಕರು

by admin July 8, 2024
written by admin July 8, 2024 0 comments 2 minutes read
0FacebookTwitterPinterestEmail
258

ಬೆಂಗಳೂರು:ಜಿಲ್ಲಾಧಿಕಾರಿಗಳು ಮಹಾರಾಜರಲ್ಲ, ಇಂತಹ ಭಾವನೆಯಿಂದ ಅಭಿವೃದ್ಧಿ ಸಾಧ್ಯವಿಲ್ಲ, ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎಂಬುದನ್ನು ನೆನಪಿನಲ್ಲಿ ಇಟ್ಟುಕೊಂಡು ಜನಸೇವೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳು, ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಅವರು, ಡಿಸಿ-ಎಸ್‌ಪಿ-ಸಿಇಒಗಳು ಕ್ರಿಯಾಶೀಲರಾಗಿ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು ಸಾಧ್ಯ ಎಂದರು.

ಡೆಂಗ್ಯೂ ನಿಯಂತ್ರಿಸಿ

ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಿ, ಡಿಸಿ, ಡಿಎಚ್‌ಒಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಕ್ಷಿಪ್ರವಾಗಿ ಕಾರ್ಯಪ್ರವೃತ್ತರಾಗಿ.

ಇದುವರೆಗೆ ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳಹಂತದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತಿತ್ತು, ಇನ್ನು ಮುಂದೆ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳಾಗುವುದು ಎಂದು ಎಚ್ಚರಿಸಿದರು.

ಉತ್ಸಾಹದಿಂದ ಕೆಲಸ ಮಾಡಬೇಕು

ಡಿಸಿ-ಸಿಇಒಗಳು ತಮ್ಮ ಜಿಲ್ಲೆಯ ಸಮಗ್ರ ಮಾಹಿತಿಯನ್ನು ಅಂಗೈಯಲ್ಲಿ ಇಟ್ಟುಕೊಂಡು ಉತ್ಸಾಹದಿಂದ ಕೆಲಸ ಮಾಡಬೇಕು, ನಲವತ್ತು ವರ್ಷಗಳ ಹಿಂದೆ ಕೆಲಸ ನಿರ್ವಹಿಸುತ್ತಿದ್ದ ರೀತಿಗೂ, ಇಂದು ಕರ್ತವ್ಯ ನಿರ್ವಹಿಸುವ ರೀತಿಗೂ ಹೋಲಿಸಿದರೆ ಕಾರ್ಯಾಂಗ ಮತ್ತು ಶಾಸಕಾಂಗ ಹೆಚ್ಚು ಪರಿಣಾಮಕಾರಿ ಹಾಗೂ ಗುಣಾತ್ಮಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಬಹಳ ಬೇಸರದ ಸಂಗತಿ.

ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ಪರಸ್ಪರ ಪೂರಕ, ಒಂದು ಇಲ್ಲದಿದ್ದರೆ ಮತ್ತೊಂದು ಸಾಧ್ಯವಿಲ್ಲ. ಕರ್ನಾಟಕ ಗುಡ್ ಗೌರ್ನೆನ್ಸ್‌ನಲ್ಲಿ ಮಾದರಿ ರಾಜ್ಯವಾಗಿದೆ, ಈ ಹೆಗ್ಗಳಿಕೆ ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ.

ಜಿಲ್ಲಾಧಿಕಾರಿಗಳು ಯಾವುದೇ ಜಿಲ್ಲೆಗೆ ಹೋಗುವ ಮೊದಲು ಆಯಾ ಜಿಲ್ಲೆಗಳ ಮಾನವ ಅಭಿವೃದ್ಧಿ ಸೂಚ್ಯಂಕಗಳ ಜೊತೆಗೆ ಜಿಲ್ಲೆಯ ಸಮಗ್ರ ಮಾಹಿತಿ ತಿಳಿದುಕೊಳ್ಳಬೇಕು.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತ

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕೆಲವು ಜಿಲ್ಲೆಗಳಲ್ಲಿ ಕುಸಿತ ಕಂಡಿದೆ, ಮುಖ್ಯಮಂತ್ರಿಗಳು, ಈ ಬಾರಿ ಪರೀಕ್ಷೆಯಲ್ಲಿ ನಕಲು ಮಾಡುವುದನ್ನು ಸಂಪೂರ್ಣ ತಡೆಗಟ್ಟಿರುವುದು ಶ್ಲಾಘನೀಯ, ಈ ಕಾರಣಕ್ಕೆ ಫಲಿತಾಂಶ ಕುಸಿತ ಆಯಿತು ಎನ್ನುವ ಸಮರ್ಥನೆ ಸರಿಯಲ್ಲ ಎಂದರು.

ಜಿಲ್ಲಾಧಿಕಾರಿಗಳು, ಮುಖ್ಯಕಾರ್ಯನಿರ್ವಾಹಕ ಅಧಿಕಾರಿ, ಇಲಾಖಾ ಕಾರ್ಯದರ್ಶಿಗಳು ಜವಾಬ್ದಾರಿಯ ಆತ್ಮಾವಲೋಕನ ಮಾಡಿಕೊಂಡು ಪರಿಸ್ಥಿತಿ ಸುಧಾರಿಸಲು ಪ್ರಯತ್ನಿಸಲೇಬೇಕು.

ಡಿಡಿಪಿಐ, ಡಿಸಿ, ಸಿಇಒಗಳು ಒಟ್ಟಿಗೆ ಕುಳಿತು ಚರ್ಚಿಸಿ ಪರಿಸ್ಥಿತಿ ಸುಧಾರಿಸಬೇಕು, ಜನಸ್ಪಂದನ ಸಭೆಗಳಲ್ಲಿ 15 ರಿಂದ 20 ಸಾವಿರ ಅರ್ಜಿಗಳು ಬರುತ್ತವೆ, ನೀವು ಸ್ಥಳೀಯವಾಗಿ ಕೆಲಸ ನಿರ್ವಹಿಸಿದರೆ ಇಷ್ಟೊಂದು ಮಂದಿ ನನ್ನ ಬಳಿಗೆ ಏಕೆ ಬರುತ್ತಿದ್ದರು.

ಜನಸಂಪರ್ಕ ಸಭೆ

ಜಿಲ್ಲಾಧಿಕಾರಿಗಳು, ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಇರುವುದು ಜನಸಂಪರ್ಕ ಸಭೆಗಳಿಗೆ ಬಂದ ಅರ್ಜಿಗಳನ್ನು ಮುಂದಿನ ಅಧಿಕಾರಿಗೆ ಕಳುಹಿಸಿ ಕೊಟ್ಟು ಕೈತೊಳೆದುಕೊಳ್ಳುವುದಕ್ಕಲ್ಲ.

ಜನರ ಸಮಸ್ಯೆಗಳ ಅರ್ಜಿಗಳು ಸಕಾರಾತ್ಮಕವಾಗಿ, ಗುಣಾತ್ಮಕವಾಗಿ ವಿಲೇವಾರಿ ಆಗಿಲ್ಲವೆಂದರೆ, ನಿಮ್ಮ ವಿರುದ್ಧ ಕ್ರಮ ಖಚಿತ ಎಂದು ಎಚ್ಚರಿಸಿದರು.

ತಹಶೀಲ್ದಾರ್, ಜಿಲ್ಲಾಧಿಕಾರಿಗಳ ಸಮೇತ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳೂ ಜನರನ್ನು ನೇರ ಭೇಟಿ ಮಾಡುತ್ತಿಲ್ಲ, ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಕಡೆಯೇ ಉಳಿಯಬೇಕು ಎಂಬ ತಮ್ಮ ಸೂಚನೆ ಸರಿಯಾಗಿ ಪಾಲನೆಯಾಗುತ್ತಿಲ್ಲ, ಪಿಡಿಒಗಳು, ಗ್ರಾಮ ಲೆಕ್ಕಿಗರು ಕೆಲಸದ ಜಾಗದಲ್ಲೇ ಉಳಿಯಬೇಕು, ಈ ಬಗ್ಗೆ ಜಿಲ್ಲಾಧಿಕಾರಿಗಳು, ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಗಮನಹರಿಸಬೇಕು.

ಕುರಿಗಳಿಗೆ ಲಸಿಕೆ-ಚುಚ್ಚುಮದ್ದು

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಬೇಕು, ಕುರಿ-ಮೇಕೆಗಳ ಬಿಡಾರ ಸ್ಥಳಕ್ಕೇ ತೆರಳಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ನೀಡಬೇಕು, ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವುದು ಕಡ್ಡಾಯ, ಕುರಿ ಕಳ್ಳತನ ತಡೆಯಲು ಇದು ಅಗತ್ಯ.

ಮಣ್ಣಿನ ಫಲವತ್ತತೆ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವ ಜೊತೆಗೆ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್‌ನ್ನು ಕಡ್ಡಾಯವಾಗಿ ನೀಡಬೇಕು, ಪ್ರತೀ ಎರಡು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ನಡೆಸಬೇಕು, ಈ ಎಲ್ಲಾ ಕೆಲಸಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಮಾಡಬೇಕು.

ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 8,234 ಪ್ರಕರಣಗಳು ಬಾಕಿ ಇವೆ, ಉಪವಿಭಾಗಾಧಿಕಾರಿಗಳ ಬಳಿ ಹಕ್ಕು ಬದಲಾವಣೆ (ಆರ್‌ಆರ್‌ಟಿ) ಪ್ರಕರಣಗಳು 37,587 ಬಾಕಿ ಇವೆ, ಇವುಗಳಲ್ಲಿ 5 ವರ್ಷಕ್ಕೂ ಮೇಲ್ಪಟ್ಟವು 7,522 ಪ್ರಕರಣಗಳಿವೆ, ಜಿಲ್ಲಾಧಿಕಾರಿಗಳ ಬಳಿ 10,838 ಪ್ರಕರಣಗಳು ಬಾಕಿ ಇವೆ, 5 ವರ್ಷಕ್ಕೂ ಮೇಲ್ಪಟ್ಟವು 4,207 ಪ್ರಕರಣಗಳಿವೆ, ಜಿಲ್ಲಾಧಿಕಾರಿಗಳೇ ಬಾಕಿ ಉಳಿಸಿಕೊಂಡರೆ, ಎಸಿ ಮತ್ತು ತಹಶೀಲ್ದಾರ್‌ಗಳಿಗೆ ಏನು ಸೂಚನೆ ಕೊಡುತ್ತೀರಿ.

ಕೆಲವು ಜಿಲ್ಲಾಧಿಕಾರಿಗಳ ಬಳಿ ಒಂದೂ ಪ್ರಕರಣಗಳೂ ಬಾಕಿ ಇಲ್ಲ, ಉಳಿದ ಜಿಲ್ಲಾಧಿಕಾರಿಗಳಿಂದ ಇದು ಏಕೆ ಸಾಧ್ಯವಾಗಿಲ್ಲ, ಜನ ಡಿಸಿ, ಎಸಿ, ತಹಶೀಲ್ದಾರ್ ಕಚೇರಿಗಳಿಗೆ ಅಲೆದರೂ ಅಧಿಕಾರಿಗಳು ಸಿಗದೇ ಇದ್ದರೆ, ಏನು ಮಾಡಬೇಕು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm meets dc - ceo'sfollow ruleswork hard
0 FacebookTwitterPinterestEmail
admin

previous post
ಸೀಕ್ರೆಟ್ ಟಾಸ್ಕ್ ಆಫ್ ಅಗರ್ವಾಲ್
next post
ರಾಜ್ಯಕ್ಕೆ 3 ಖಾಸಗಿ ಹೊಸ ವೈದ್ಯಕೀಯ ಕಾಲೇಜು

You may also like

ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

September 19, 2026

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

September 18, 2026

ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

September 17, 2026

ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

September 16, 2026

ಸಚಿವ ಸತೀಶ್ ಜಾರಕಿಹೊಳಿಗೆ ಇ.ಡಿ. ಬಂಧನ ಭೀತಿ ?

September 15, 2026

ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

September 12, 2026

ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

September 11, 2026

ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

September 10, 2026

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

September 9, 2026

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (571)
  • ಅಂಕಣ (109)
  • ಉದ್ಯೋಗ (352)
  • ದಿನ ಭವಿಷ್ಯ (110)
  • ರಾಜಕೀಯ (2,064)
  • ರಾಜ್ಯ (2,379)
  • ರಾಷ್ಟ್ರ (2,343)
  • ವಿಶ್ಲೇಷಣೆ (202)
  • ಶಿಕ್ಷಣ (410)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

    September 19, 2026
  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026

KMS Special

  • ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

    September 19, 2026
  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ...

September 19, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ