Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ

by admin July 8, 2024
written by admin July 8, 2024 0 comments 2 minutes read
0FacebookTwitterPinterestEmail
281

ಬೆಂಗಳೂರು:ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಅರ್ಹರಿಗೆ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಇಂದಿಲ್ಲಿ ಆದೇಶ ಮಾಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ.

ಶೇ.80 ಕುಟುಂಬಗಳ ಬಳಿ ಬಿಪಿಎಲ್ ಕಾರ್ಡ್

ಶೇಕಡ 80ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿವೆ, ತಮಿಳುನಾಡಿನಲ್ಲಿ ಶೇಕಡ 40ರಷ್ಟಿದೆ, ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇಕಡ 5.67 ಇರಬೇಕು.

ಆದರೆ, ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಿದ್ದೇವೆ, ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ.

ಹೊಸ ಪಡಿತರ ಚೀಟಿ ನೀಡುವುದೂ ಸೇರಿದಂತೆ ಸಮಸ್ಯೆಗಳ ಪರಿಹಾರಕ್ಕಾಗಿ ನಿಮ್ಮ ಕಚೇರಿಗೆ ಬರುವ ಜನರನ್ನು ಅನಗತ್ಯವಾಗಿ ಅಲೆದಾಡಿಸಬೇಡಿ, ಅವರ ದೂರುಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕೊಡಿ ಎಂದು ಆದೇಶ ಮಾಡಿದರು.

ಜಿಲ್ಲಾಧಿಕಾರಿಗಳು ಮಹಾರಾಜರಲ್ಲ ಜನ ಸೇವಕರು
ಜಿಲ್ಲಾಧಿಕಾರಿಗಳ ಖಾತೆಯಲ್ಲಿ 783 ಕೋಟಿ ರೂ.

ರಾಜ್ಯದಲ್ಲಿ ಈ ಬಾರಿ ಬರ ನಿರ್ವಹಣೆಯನ್ನು ಉತ್ತಮವಾಗಿ ಮಾಡಿದ್ದೇವೆ, ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸಮಸ್ಯಾತ್ಮಕ ಗ್ರಾಮಗಳನ್ನು ಮೊದಲೇ ಗುರುತಿಸಿ ಪರ್ಯಾಯ ವ್ಯವಸ್ಥೆ ಮಾಡಿದ ಕಾರಣ ಎಲ್ಲೂ ಹೆಚ್ಚು ತೊಂದರೆಯಾಗಿಲ್ಲ, ಬರ ನಿರ್ವಹಣೆಗೆ 85 ಕೋಟಿ ರೂ. ವೆಚ್ಚವಾಗಿದ್ದು, ಪಾರದರ್ಶಕವಾಗಿ ಮಾಡಲಾಗಿದೆ, 783ಕೋಟಿ ರೂ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಲಭ್ಯವಿದೆ.

ರಾಜ್ಯದಲ್ಲಿ ಪ್ರಸ್ತುತ ಮುಂಗಾರು ಅವಧಿಯಲ್ಲಿ ಇದುವರೆಗೆ ಶೇ.7ರಷ್ಟು ಹೆಚ್ಚು ಮಳೆಯಾಗಿದೆ, ಈ ವರ್ಷ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅತಿವೃಷ್ಟಿಯಿಂದ ಸಮಸ್ಯೆಯಾಗುವ ಗ್ರಾಮಗಳನ್ನು ಗುರುತಿಸಲಾಗಿದೆ, 225 ಅಂತಹ ಜಲಗ್ರಾಮಗಳನ್ನು 1,247 ಗ್ರಾಮ ಪಂಚಾಯತ್‌ನಲ್ಲಿ ಗುರುತಿಸಲಾಗಿದೆ.

ಪ್ರತಿಯೊಂದು ಗ್ರಾಮ ಪಂಚಾಯತ್‌ನಲ್ಲಿ ಟಾಸ್ಕ್ ಫೋರ್ಸ್ ರಚನೆ, ಕಂದಾಯ ಇಲಾಖೆ, ಪಂಚಾಯತ್, ಪೋಲಿಸ್, ಅಗ್ನಿಶಾಮಕ, ಆರೋಗ್ಯ ಸೇರಿದಂತೆ ತಾಲೂಕು ಒಬ್ಬರಂತೆ ನೋಡಲ್ ಅಧಿಕಾರಿ ನೇಮಕ, ಎಲ್ಲಾ ಕಡೆ ಅಣಕು ಪ್ರದರ್ಶನ ಮಾಡಲಾಗುತ್ತಿದೆ, ಎಲ್ಲಾ ಸಲಕರಣೆ ಲಭ್ಯವಾಗಿಡುವಂತೆ ಸೂಚನೆ ನೀಡಲಾಯಿತು.

ಪ್ರಾಣ ಹಾನಿ ತಪ್ಪಿಸುವುದು ಆದ್ಯತೆ

ಬೆಳೆ ಹಾನಿ, ಮನೆ ಹಾನಿ ಎಸ್‌ಡಿಆರ್‌ಎಫ್ ಪ್ರಕಾರ ನೀಡಲು ಸೂಚನೆ ನೀಡಲಾಗಿದೆ, ಜಿಲ್ಲಾಡಳಿತ ಮುಂಜಾಗರೂಕತೆ ವಹಿಸಲು ಸೂಚನೆ ನೀಡಲಾಗಿದೆ, ಪ್ರಾಣ ಹಾನಿ ತಪ್ಪಿಸುವುದು ಆದ್ಯತೆಯಾಗಬೇಕು.

ರಾಜ್ಯದ 27 ಜಿಲ್ಲೆಗಳ 177 ತಾಲೂಕುಗಳು, 1,247 ಗ್ರಾಮ ಪಂಚಾಯತ್‌ಗಳಲ್ಲಿ ಅತಿವೃಷ್ಟಿಗೆ ತುತ್ತಾಗುವುದನ್ನು ಗುರುತಿಸಲಾಗಿದ್ದು, ಪ್ರತಿ ಕಡೆ ಟಾಸ್ಕ್ ಫೋರ್ಸ್ ರಚಿಸಬೇಕು, 20,38,334 ಜನರು ಪದೇ ಪದೇ ಪ್ರವಾಹಕ್ಕೆ ತುತ್ತಾಗುವುದನ್ನು ಗುರುತಿಸಲಾಗಿದೆ, ಅಂತಹ ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸಿ ಮನೆ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು, 2,225 ಗ್ರಾಮಗಳು 2,242 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ, ಉತ್ತಮವಾಗಿ ಮಳೆಯಾಗಿರುವ ಕಾರಣ ಎಲ್ಲಾ ಜಲಾಶಯಗಳಲ್ಲಿ ಒಟ್ಟು 293 ಟಿಎಂಸಿ ನೀರು ಸಂಗ್ರಹವಿದೆ.

ಈ ಬಾರಿ ಪೂರ್ವ ಮುಂಗಾರಿನಲ್ಲಿ 3,714 ಮನೆಗಳಿಗೆ ಹಾನಿ ಉಂಟಾಗಿದ್ದು, ಎಸ್‌ಡಿಆರ್‌ಎಫ್ ಮಾನದಂಡ ಪ್ರಕಾರ ಪರಿಹಾರವನ್ನು ತಕ್ಷಣ ಒದಗಿಸಬೇಕು.

ಹವಾಮಾನ ಇಲಾಖೆಯೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಸೂಚಿಸಿದರು.

ರಾಜ್ಯಕ್ಕೆ 3 ಖಾಸಗಿ ಹೊಸ ವೈದ್ಯಕೀಯ ಕಾಲೇಜು
ಪರಿಹಾರಕ್ಕೆ ವಿಳಂಬ ಸಲ್ಲದು

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಒದಗಿಸುವಲ್ಲಿ ವಿಳಂಬ ಸಲ್ಲದು, ಕಾನೂನು ಪ್ರಕಾರ ಪರಿಶೀಲಿಸಿ 1003 ಅರ್ಹ ಪ್ರಕರಣಗಳಲ್ಲಿ 994 ರೈತರ ಕುಟುಂಬಕ್ಕೆ ಪರಿಹಾರ ಒದಗಿಸಲಾಗಿದೆ.

ರೈತರ ಸಭೆ ನಡೆಸಿ ಜಾಗೃತಿ, ಆತ್ಮವಿಶ್ವಾಸ ಮೂಡಿಸುವ ಕಾರ್ಯ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಜಮೀನು ಮಾರ್ಗಸೂಚಿ ದರಕ್ಕಿಂತ ಕಡಿಮೆ ಬೆಲೆಗೆ ನೊಂದಣಿ ಅಗುತ್ತಿರುವ ಪ್ರಕರಣಗಳು ಕಂಡು ಬಂದಿದ್ದು, ಬಾಕಿ ರಾಜಸ್ವ ವಸೂಲು ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ಕಳೆದ 30 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗಿದೆ, ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಇಂತಹ 24,519 ಪ್ರಕರಣಗಳು ಬಾಕಿಯಿದ್ದು, 310 ಕೋಟಿ ರೂ. ರಾಜಸ್ವ ವಸೂಲಾತಿ ಮಾಡಬೇಕಾಗಿದೆ, ಇದನ್ನು ತ್ವರಿತವಾಗಿ ಮಾಡಲು ಸೂಚನೆ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
80 persent bpl card holders in the statecancel fake bpl cardstake precationary measures in the monsoon
0 FacebookTwitterPinterestEmail
admin

previous post
ರಾಜ್ಯಕ್ಕೆ 3 ಖಾಸಗಿ ಹೊಸ ವೈದ್ಯಕೀಯ ಕಾಲೇಜು
next post
ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್

You may also like

ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

September 19, 2026

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

September 18, 2026

ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

September 17, 2026

ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

September 16, 2026

ಸಚಿವ ಸತೀಶ್ ಜಾರಕಿಹೊಳಿಗೆ ಇ.ಡಿ. ಬಂಧನ ಭೀತಿ ?

September 15, 2026

ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

September 12, 2026

ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

September 11, 2026

ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

September 10, 2026

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

September 9, 2026

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (571)
  • ಅಂಕಣ (109)
  • ಉದ್ಯೋಗ (352)
  • ದಿನ ಭವಿಷ್ಯ (110)
  • ರಾಜಕೀಯ (2,064)
  • ರಾಜ್ಯ (2,379)
  • ರಾಷ್ಟ್ರ (2,343)
  • ವಿಶ್ಲೇಷಣೆ (202)
  • ಶಿಕ್ಷಣ (410)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

    September 19, 2026
  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026

KMS Special

  • ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

    September 19, 2026
  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ...

September 19, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ