Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ಮೈಸೂರು-ಕನಕಪುರ ನಡುವೆ ಇನ್ನೊಂದು ಏರ್‌ಪೋರ್ಟ್

by admin July 10, 2024
written by admin July 10, 2024 0 comments 2 minutes read
0FacebookTwitterPinterestEmail
246

ಬೆಂಗಳೂರು:ಮೈಸೂರು-ಕನಕಪುರ ನಡುವೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಯಾಗುವ ಸಾಧ್ಯತೆ ಇದೆ.

ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಿರುವ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದಲ್ಲಿ ಇನ್ನೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬರಲಿದೆ.

ಐದಾರು ಸ್ಥಳ ಗುರುತಿಸಲಾಗಿದೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೂಲಸೌಕರ್ಯ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಹೊಸ ವಿಮಾನ ನಿಲ್ದಾಣ ಸ್ಥಾಪನೆಗೆ ಐದಾರು ಸ್ಥಳಗಳನ್ನು ಗುರುತಿಸಲಾಗಿದೆ, ಹಾಲಿ ವಿಮಾನ ನಿಲ್ದಾಣಕ್ಕೆ 60 ರಿಂದ 70 ಕಿಲೋ ಮೀಟರ್ ದೂರದಲ್ಲಿ ಹೊಸ ವಿಮಾನ ನಿಲ್ದಾಣ ಸ್ಥಾಪಿಸಲು ಸರ್ಕಾರ ಮುಂದಾಗಿದೆ ಎಂದರು.

ಯಾವ ಸ್ಥಳ ಸೂಕ್ತ ಎಂಬ ಬಗ್ಗೆ ನಮಗೆ ಪ್ರಾಥಮಿಕ ವರದಿ ಸಿಕ್ಕಿದೆ, ಆದರೆ, ತಾಂತ್ರಿಕ ತಜ್ಞರನ್ನು ನೇಮಿಸಿ ಅವರಿಂದ ವರದಿ ಪಡೆದು ಚಾಲನೆ ನೀಡಲಾಗುವುದು.

ನಮ್ಮವರೇ ಕೇಂದ್ರದಲ್ಲಿ ಕೈಗಾರಿಕಾ ಸಚಿವರು ಇರುವುದರಿಂದ ಹೊಸ ವಿಮಾನ ನಿಲ್ದಾಣಕ್ಕೆ ತ್ವರಿತಗತಿಯಲ್ಲಿ ಅನುಮೋದನೆ ದೊರೆಯಬಹುದೆಂಬ ವಿಶ್ವಾಸ ವ್ಯಕ್ತಪಡಿಸಿದರು.

ಆನೇಕಲ್‌ನ ಜಿಗಣಿ, ಕನಕಪುರ, ಮೈಸೂರು ರಸ್ತೆ, ತುಮಕೂರು ಸೇರಿದಂತೆ ಹಲವು ಸ್ಥಳಗಳನ್ನು ಗುರುತಿಸಿದ್ದೇವೆ.

ರಸ್ತೆ, ರೈಲು, ಮೆಟ್ರೊ ಸಂಪರ್ಕ

ಪ್ರಯಾಣಿಕರು ಹೆಚ್ಚು ಎಲ್ಲಿ ಲಭಿಸುತ್ತಾರೆ ಎಂಬುದಲ್ಲದೆ, ರಸ್ತೆ, ರೈಲು ಮತ್ತು ಮೆಟ್ರೊ ರೈಲಿನ ಸಂಪರ್ಕ ಇರುವ ಪ್ರದೇಶವನ್ನು ಗುರುತಿಸಿ, ಅಲ್ಲಿ ವಿಮಾನ ನಿಲ್ದಾಣ ಸ್ಥಾಪಿಸುವ ಉದ್ದೇಶ ಸರ್ಕಾರದ್ದು ಎಂದರು.

ಜಪಾನ್ ಮತ್ತು ದಕ್ಷಿಣ ಕೊರಿಯಾಕ್ಕೆ ಎರಡು ವಾರಗಳ ತಮ್ಮ ಭೇಟಿಯಿಂದ 6,450 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಬದ್ಧತೆ ಪಡೆದುಕೊಳ್ಳಲಾಗಿದೆ, ಈ ಬದ್ಧತೆ ಹಾಗೂ ಒಪ್ಪಂದಗಳ ಫಲವಾಗಿ ರಾಜ್ಯದಲ್ಲಿ 1,000 ಉದ್ಯೋಗಾವಕಾಶ ಸೃಷ್ಟಿಯಾಗುವ ನಿರೀಕ್ಷೆಯಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಕರ್ನಾಟಕದ ನಿಯೋಗ ಅಲ್ಲಿನ ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗಾಗಿ (ಎಸ್‌ಎಂಇ) ಬಂಡವಾಳ ಹೂಡಿಕೆ ಪ್ರಾತ್ಯಕ್ಷಿಕೆಗಳನ್ನು ನಡೆಸಿತು, ತಯಾರಿಕಾ ವಲಯಕ್ಕೆ ರಾಜ್ಯದಲ್ಲಿ ಇರುವ ಉತ್ತೇಜಕರ ಪೂರಕ ಸೌಲಭ್ಯಗಳ ಮಾಹಿತಿ ವಿನಿಮಯ ಮಾಡಿಕೊಂಡಿತು.

ವಾಲ್ಮೀಕಿ ನಿಗಮ, ಮುಡಾ ಹಗರಣ ಸದನದಲ್ಲಿ ಚರ್ಚೆ
ಇನ್ವೆಸ್ಟ್ ಕರ್ನಾಟಕ-2025

35 ಉದ್ಯಮಗಳ ಪ್ರಮುಖರನ್ನು ಭೇಟಿ ಮಾಡಿದ ನಿಯೋಗ, ಮುಂದಿನ ವರ್ಷ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ 2025ರಲ್ಲಿ ಭಾಗವಹಿಸಲು ಟೋಕಿಯೊ ಮತ್ತು ಸೋಲ್‌ನಲ್ಲಿ ನಡೆದ ಪ್ರಾತ್ಯಕ್ಷಿಕೆಗಳಲ್ಲಿ 200ಕ್ಕೂ ಹೆಚ್ಚು ಕಂಪನಿಗಳಿಗೆ ಆಹ್ವಾನ ನೀಡಲಾಯಿತು ಎಂದರು.

ಜಪಾನ್‌ನಲ್ಲಿ ನಡೆದ ಸಭೆಗಳಲ್ಲಿ ರೆನೆಸಾಸ್ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್, ಟೊಯೊಟಾ ಮೋಟರ್ ಕಾರ್ಪೊರೇಷನ್, ಯಮಹಾ ಮೋಟರ್ ಕಂಪನಿ, ಸುಮಿಟೊಮೊ ಹೆವಿ ಇಂಡಸ್ಟ್ರೀಸ್, ಪ್ಯಾನಾಸೋನಿಕ್ ಎನರ್ಜಿ, ನಿಡೆಕ್ ಕಾರ್ಪೊರೇಷನ್, ನಿಸಾನ್ ಮೋಟರ್ ಕಾರ್ಪೊರೇಷನ್, ಬ್ರದರ್ ಇಂಡಸ್ಟ್ರೀಸ್, ಶಿಮಾಡ್ಜು ಕಾರ್ಪೊರೇಷನ್, ಹಿಟಾಚಿ ಮತ್ತಿತರ ಕಂಪನಿಗಳು ಪ್ರಮುಖವಾಗಿವೆ.

ದಕ್ಷಿಣ ಕೊರಿಯಾದಲ್ಲಿ ವ್ಯಾಪಾರ, ಕೈಗಾರಿಕೆ ಮತ್ತು ಇಂಧನ ಸಚಿವಾಲಯದ ಉಪಮಂತ್ರಿ, ಕೊರಿಯಾದ ಜಿಯೊಂಗಿ ಪ್ರಾಂತ್ಯದ ವೈಸ್ ಗವರ್ನರ್ ಮತ್ತು ಸೋಲ್ ಮೆಟ್ರೊಪಾಲಿಟನ್ ಸರ್ಕಾರದಲ್ಲಿ ಆರ್ಥಿಕ ನೀತಿಯ ಉಪಮೇಯರ್ ಸೇರಿದಂತೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಸಭೆಗಳನ್ನು ನಡೆಸಲಾಯಿತು.

25,000 ಕೋಟಿ ರೂ. ಬಂಡವಾಳ

ದಕ್ಷಿಣ ಕೊರಿಯಾದಲ್ಲಿ ನಡೆದ ಸಭೆಗಳಲ್ಲಿ ಸ್ಯಾಮ್ಸಂಗ್ ಎಲೆಕ್ಟ್ರಾನಿಕ್ಸ್, ಎಲ್‌ಜಿ ಎನರ್ಜಿ ಸೊಲ್ಯೂಷನ್ಸ್, ಎಲ್‌ಎಕ್ಸ್ ಎಲೆಕ್ಟ್ರಾನಿಕ್ಸ್, ನಿಫ್ಕೊ ಕೊರಿಯಾ, ಒಸಿಐ ಹೋಲ್ಡಿಂಗ್ಸ್, ಕ್ರಾಫ್ಟನ್, ಎಚ್‌ವೈಎಸಿ, ಹುಂಡೈ ಮೋಟರ್ಸ್, ವೈಜಿ-೧, ಹೊಯ್ಸಂಗ್ ಅಡ್ವಾನ್ಸಡ್ ಮಟೇರಿಯಲ್ಸ್ ಮುಂತಾದವು ಸೇರಿವೆ.

ತಕ್ಷಣದ ಈ ಹೂಡಿಕೆಗಳನ್ನು ಹೊರತುಪಡಿಸಿ, ವಾಹನ ತಯಾರಿಕೆ, ಎಲೆಕ್ಟ್ರಾನಿಕ್ಸ್ ಮತ್ತು ಇಂಧನ ಪರಿಹಾರ ವಲಯಗಳಲ್ಲಿ 25,000 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಸಾಧ್ಯತೆಗಳನ್ನೂ ರಾಜ್ಯ ನಿಯೋಗ ಗುರುತಿಸಿದೆ. ಈ ಹೂಡಿಕೆ ನಿರೀಕ್ಷೆ, ಕರ್ನಾಟಕ ಜಾಗತಿಕ ಹೂಡಿಕೆದಾರರ ಪಾಲಿಗೆ ಆಕರ್ಷಕ ತಾಣವಾಗಿರುವುದರ ಮಹತ್ವ ಸೂಚಿಸುತ್ತದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
between mysuru and kanakapura 2nd international airportfive places markedminister mb patil
0 FacebookTwitterPinterestEmail
admin

previous post
ವಾಲ್ಮೀಕಿ ನಿಗಮ, ಮುಡಾ ಹಗರಣ ಸದನದಲ್ಲಿ ಚರ್ಚೆ
next post
ಮಾಜಿ ಸಚಿವ ಬಿ.ನಾಗೇಂದ್ರ, ಶಾಸಕ ದದ್ದಲ್ ಇಡಿ ವಶಕ್ಕೆ?

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ