Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಎಸ್‌ಸಿಪಿ/ಟಿಎಸ್‌ಪಿ ಹಣ ಗ್ಯಾರಂಟಿಗೆ ಬಳಸಿದರೆ ತಪ್ಪಿಲ್ಲ

by admin July 11, 2024
written by admin July 11, 2024 0 comments 1 minutes read
0FacebookTwitterPinterestEmail
194

ಬೆಂಗಳೂರು:ಎಸ್‌ಸಿಪಿ/ಟಿಎಸ್‌ಪಿ ಅನುದಾನ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶದಲ್ಲಿ ಆಂಧ್ರ ಪ್ರದೇಶದ ನಂತರ ಕರ್ನಾಟಕದಲ್ಲಿ ಪರಿಶಿಷ್ಟರ ಕಲ್ಯಾಣಕ್ಕಾಗಿ ಪ್ರತ್ಯೇಕ ಅನುದಾನ ನೀಡಿ ಬಳಸಲು ಕಾಯ್ದೆ ತಂದಿದ್ದೇವೆ, ರಾಷ್ಟ್ರೀಯ ಆಯೋಗ ನೊಟೀಸ್ ಜಾರಿ ಮಾಡುವುದಿದ್ದರೆ ಕೇಂದ್ರ ಸರ್ಕಾರಕ್ಕೆ ನೀಡಬೇಕು, ಅನುದಾನವನ್ನು ನಮ್ಮ ಸರ್ಕಾರ ಪರಿಶಿಷ್ಟ ಜಾತಿಗೆ ವಿನಿಯೋಗಿಸುತ್ತಿದೆ, ಇದಕ್ಕೆ ನೊಟೀಸ್ ನೀಡಿರುವ ರಾಷ್ಟ್ರೀಯ ಆಯೋಗಕ್ಕೆ ನಾಚಿಕೆಯಾಗಬೇಕು ಎಂದರು.

ಸತ್ಯಾಸತ್ಯತೆ ಗೊತ್ತಿದೆ

ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಂಚನೆ ನಡೆದಿರುವುದು ಸತ್ಯ, ಇದರ ಸತ್ಯಾಸತ್ಯತೆ ನಮಗೆ ಗೊತ್ತಿದೆ, ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುತ್ತಿದೆ, ಅಕ್ರಮವಾಗಿ ವರ್ಗಾವಣೆಯಾದ ಹಣವನ್ನು ಈಗಾಗಲೇ ವಶಪಡಿಸಿಕೊಳ್ಳಲಾಗುತ್ತಿದೆ.

ಯಾವುದೇ ದೂರು ಇಲ್ಲದೆ ಇ.ಡಿ. ದಾಳಿ ನಡೆಸುವ ಅಗತ್ಯವಿರಲಿಲ್ಲ, ಅವರು ಯಾವ ರೀತಿ ತನಿಖೆ ಮಾಡುತ್ತಿದ್ದಾರೆ, ಯಾವ ಪ್ರಕ್ರಿಯೆ ಮೇಲೆ ಮಾಡುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲ, ಎಸ್‌ಐಟಿ ತನಿಖೆ ಮುಕ್ತವಾಗಿ ನಡೆಯುತ್ತಿದ್ದು, ತನಿಖೆಗೆ ಅಡಚಣೆಯಾಗಬಾರದು ಎಂಬ ಉದ್ದೇಶಕ್ಕೆ ಮಂತ್ರಿಗಳು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರೆ.

ತನಿಖೆ ನಂತರ ಮಾತನಾಡುತ್ತೇನೆ

ನಾವು ಸಹಾ ಕ್ರಾಸ್ ಚೆಕ್ ಮಾಡಿದ್ದು, ಸಚಿವರು ಯಾವುದೇ ಸಹಿ ಮಾಡಿಲ್ಲ, ಅವರ ಹಸ್ತಕ್ಷೇಪವಿಲ್ಲ, ಕಾನೂನು ಪ್ರಕಾರ ತನಿಖೆ ನಡೆಯುತ್ತಿದ್ದು, ಈ ಮಧ್ಯೆ ಇ.ಡಿ ದಾಳಿ ಮಾಡಿದೆ, ಮುಂದೆ ಏನು ಮಾಡುತ್ತಾರೆ ನೋಡೋಣ, ಅವರ ತನಿಖೆ ಮುಗಿಯಲಿ ನಂತರ ಮಾತನಾಡುತ್ತೇನೆ ಎಂದರು.

ನಿರ್ದಿಷ್ಟ ಮೊತ್ತಕ್ಕಿಂತ ಹೆಚ್ಚಿನ ಪ್ರಮಾಣದ ಅವ್ಯವಹಾರವಾದರೆ ಸಿಬಿಐ ತನಿಖೆ ಮಾಡುವ ಅಧಿಕಾರವಿದೆ, ಎಲ್ಲಾ ತನಿಖೆಗಳ ಮುಕ್ತಾಯದ ನಂತರ ತನಿಖೆಗಳು ಸರಿಯಾಗಿ ನಡೆದಿವೆಯೇ ಎಂಬ ಬಗ್ಗೆ ಇ.ಡಿ ಪರಾಮರ್ಶೆ ಮಾಡಬಹುದಿತ್ತು ಎಂದರು.

ಮೈತ್ರಿ ಎದುರಿಸಲು ಸಿದ್ಧತೆ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿ ಎಡವಿದೆ ಎಂಬ ಕುರಿತು ಪರಾಮರ್ಶೆ ನಡೆಸಿ, ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗುವುದು.

ಲೋಕಸಭಾ ಚುನಾವಣೆಯಲ್ಲಿ 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ, 14 ರಿಂದ 15 ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಇತ್ತು, ಅದು ಸಾಧ್ಯವಾಗಲಿಲ್ಲ, ಎಲ್ಲಿ ಎಡವಿದ್ದೇವೆ ಎಂದು ಎಐಸಿಸಿಯ ಸಮಿತಿ ಸಮ್ಮುಖದಲ್ಲಿ ಪರಾಮರ್ಶೆ ನಡೆಯಲಿದೆ.

ಕೆಪಿಸಿಸಿ ಅಧ್ಯಕ್ಷನಾಗಿ ವರದಿ ಕೊಡುವೆ

ಕರ್ನಾಟಕವಲ್ಲದೇ ದೇಶದೆಲ್ಲೆಡೆ ಪಕ್ಷದ ಫಲಿತಾಂಶ ಪರಾಮರ್ಶೆ ನಡೆಯಲಿದೆ, ಕೆಪಿಸಿಸಿ ಅಧ್ಯಕ್ಷನಾಗಿ ನಾನೂ ನಾಲ್ಕು ವಿಭಾಗಗಳ ವರದಿ ಕಳುಹಿಸಿಕೊಡಲಿದ್ದೇನೆ, ನಾನು ಹಾಗೂ ಮುಖ್ಯಮಂತ್ರಿ ಸೇರಿ ಪಕ್ಷದ ನಾಯಕರ ಜತೆ ಪರಾಮರ್ಶೆ ಮಾಡುತ್ತೇವೆ.

ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಉತ್ತಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೆವು, ಆದರೆ, ಮತದಾರರನ್ನು ಯಾವ ವಿಚಾರ ಪರಿವರ್ತನೆ ಮಾಡಿದೆ ಎಂಬುದನ್ನು ಪತ್ತೆ ಹಚ್ಚಬೇಕು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪರಿಣಾಮಕಾರಿಯಾಗಲಿದೆ ಎಂದು ನಾವು ಮೊದಲೇ ಅಂದಾಜಿಸಿದ್ದೆವು, ಮುಂದಿನ ದಿನಗಳಲ್ಲೂ ಅವರು ಒಟ್ಟಾಗಿರುತ್ತಾರೆ ಎಂದು ನಮಗೆ ಗೊತ್ತಿದೆ, ಅವರು ಹಾಗೆಯೇ ಇರಲಿ, ನಾವು ಏನು ಸಿದ್ಧತೆ ಮಾಡಿಕೊಳ್ಳಬೇಕೋ ಮಾಡುತ್ತೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dk shivakumarloka sabha electionreport to high commandscp/tsp money
0 FacebookTwitterPinterestEmail
admin

previous post
ಮಾಜಿ ಸಚಿವ ಬಿ.ನಾಗೇಂದ್ರ, ಶಾಸಕ ದದ್ದಲ್ ಇಡಿ ವಶಕ್ಕೆ?
next post
ಆರ್ಕಿಟೆಕ್ಚರ್ ಕೋರ್ಸ್ ಅರ್ಹತಾ ಅಂಕ ಶೇ.45ಕ್ಕೆ ಇಳಿಕೆ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ