145
ಪತ್ನಿ ಖಾತೆಯಿಂದ ಹೆಚ್ಚು ಹಣ ವರ್ಗಾವಣೆ
ಬೆಂಗಳೂರು:ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಡಾಲರ್ಸ್ ಕಾಲೋನಿಯ ನಿವಾಸದಿಂದ ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆ ನಂತರ ಇಡೀ ದಿನ ಶಾಂತಿನಗರದ ತಮ್ಮ ಕಚೇರಿಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಅವರ ವಿಚಾರಣೆ ನಡೆಸಲಾಗಿದೆ.
ಬೇನಾಮಿ ಖಾತೆಗಳಿಗೆ ವರ್ಗಾವಣೆ
ನಿಗಮದಿಂದ ನೂರಾರು ಕೋಟಿ ರೂ.ಗಳನ್ನು ಅಕ್ರಮವಾಗಿ ಬೇನಾಮಿ ಖಾತೆಗಳಿಗೆ ವರ್ಗಾವಣೆ ಮಾಡಿದ್ದು ಇದರಲ್ಲಿ ಅಂದಿನ ಸಚಿವರಾಗಿದ್ದ ನಾಗೇಂದ್ರ ಅವರು ಪ್ರಮುಖ ರೂವಾರಿ ಎಂಬ ಆರೋಪವಿದೆ.
ನಾಗೇಂದ್ರ ಅವರ ಬ್ಯಾಂಕ್ ಖಾತೆ ಜೊತೆಗೆ ಅವರ ಪತ್ನಿ ಖಾತೆಯಿಂದಲೂ ಹೆಚ್ಚು ಮೊತ್ತದ ಹಣ ವರ್ಗಾವಣೆ ಆಗಿರುವ ವಿಚಾರ ತನಿಖೆಯಿಂದ ಕಂಡುಬಂದ ಹಿನ್ನೆಲೆಯಲ್ಲಿ ಮಂಜುಳಾ ಅವರನ್ನು ವಶಕ್ಕೆ ಪಡೆಯಲಾಗಿದೆ.