ಬೆಂಗಳೂರು:ಮಾನಸಿಕ ಆರೋಗ್ಯ ಮತ್ತು ಉತ್ತಮ ಶಿಕ್ಷಣಕ್ಕೆ ಶಾಲಾ ಮಕ್ಕಳಿಗೆ ಗುಣಮಟ್ಟದ ಆಹಾರ ನೀಡುವುದು ಪ್ರಮುಖವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.
ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಉಚಿತ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಉಪಾಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ, ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು ಎಂದರು.
ಅಜೀಂ ಪ್ರೇಮ್ ಜಿ ಫೌಂಡೇಷನ್
ಅಜೀಂ ಪ್ರೇಮ್ ಜಿ ಫೌಂಡೇಷನ್ ವಾರದಲ್ಲಿ ಉಳಿದ ನಾಲ್ಕು ದಿನವೂ ಮಕ್ಕಳಿಗೆ ಮೊಟ್ಟೆ ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವಂತಹ ಪುಣ್ಯಕಾರ್ಯಕ್ಕೆ ಸರ್ಕಾರದೊಂದಿಗೆ ಕೈಜೋಡಿಸಿದ್ದಾರೆ.
ವೈಜ್ಞಾನಿಕ ಹಾಗೂ ವೈಚಾರಿಕವಾಗಿ ವಿದ್ಯಾರ್ಥಿಗಳು ವಿಕಾಸ ಹೊಂದಬೇಕು, ಆಗ ಮಾತ್ರ ಸಮಾಜಮುಖಿ ಆಗಲು ಸಾಧ್ಯ.
ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣ ಅವಕಾಶ ಸೃಷ್ಟಿಸುವುದು ನಮ್ಮ ಆಶಯ, ಇದಕ್ಕಾಗಿಯೇ ಸಮವಸ್ತ್ರ, ಶೂ, ಸಾಕ್ಸ್ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದರು.
