Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಜೆಪಿ ಪಾದಯಾತ್ರೆ ಆತ್ಮಹತ್ಯೆ ಪ್ರಯತ್ನ

by admin July 26, 2024
written by admin July 26, 2024 0 comments 2 minutes read
0FacebookTwitterPinterestEmail
301

ಬೆಂಗಳೂರು:ಬಿಜೆಪಿ ಹಗರಣಗಳ ಸರದಾರರು, ಪಾದಯಾತ್ರೆ ಮಾಡುವ ಮೂಲಕ ತಾವೇ ತೋಡಿಕೊಂಡಿರುವ ಬಾವಿಗೆ ಬೀಳಲು ಹೋಗುತ್ತಿದ್ದಾರೆ, ಇದು ಆತ್ಮಹತ್ಯೆ ಪ್ರಯತ್ನವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದಿಲ್ಲಿ ಟೀಕಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಾದಯಾತ್ರೆಯ ಒಂದೊಂದು ದಿನವೂ ಅವರ ಒಂದೊಂದು ಹಗರಣ ಬಯಲು ಮಾಡುತ್ತೇವೆ, ಪಾದಯಾತ್ರೆ ಮಾಡುವ ಮೂಲಕ ಅವರ ಅಕ್ರಮಗಳನ್ನು ಬಯಲು ಮಾಡಲು ನಮಗೆ ಸದವಕಾಶ ಒದಗಿಸಿಕೊಟ್ಟಿದ್ದಾರೆ ಎಂದರು.

ಬಹಿರಂಗ ಚರ್ಚೆಗೆ ಬರಲಿ

ಬಿಜೆಪಿ ಕಾಲದ ಅಕ್ರಮಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ದಾರೋ, ಮಂತ್ರಿಗಳು ಭಾಗಿಯಾಗಿದ್ದರೋ, ಅಧಿಕಾರಿಗಳು ಭಾಗಿಯಾಗಿದ್ದಾರೋ ಎಂದು ಉತ್ತರ ನೀಡಲಿ, ಅಕ್ರಮಗಳ ಕುರಿತು ಯಾವುದೇ ಮಾಧ್ಯಮ ಅಥವಾ ಸಾರ್ವಜನಿಕ ವೇದಿಕೆಗಳಲ್ಲಿ ಬಹಿರಂಗ ಚರ್ಚೆಗೆ ಬರಲಿ.

ಎಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಯಾರಾದರೂ ಚರ್ಚೆಗೆ ಬರಲಿ ನಾನು ಸಿದ್ಧನಿದ್ದೇನೆ ಎಂದು ಸವಾಲು ಹಾಕಿದರು.

ದೇಶಕ್ಕೆ ಪಾದಯಾತ್ರೆ ಹೋರಾಟ ಪರಿಚಯಿಸಿದ್ದೇ ಕಾಂಗ್ರೆಸ್ ಪಕ್ಷ, ದೇಶದಲ್ಲಿ ಕಾಂಗ್ರೆಸ್ ಆಡಳಿತವಿರುವ ಅತಿ ದೊಡ್ಡ ರಾಜ್ಯ ಕರ್ನಾಟಕ, ನಮ್ಮ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಅವರು ಪ್ರಯತ್ನಿಸುತ್ತಿದ್ದಾರೆ, ಅವರು ಏನಾದರೂ ಮಾಡಲಿ, ನಾವು ನಮ್ಮದೇ ರೀತಿಯಲ್ಲಿ ಉತ್ತರ ನೀಡುತ್ತೇವೆ.

ಪ್ರಚಾರ ಪಡೆಯಲು ಪಾದಯಾತ್ರೆ

ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿದು ಪ್ರಚಾರ ಪಡೆಯಲು ಬಿಜೆಪಿಯವರು ಷಡ್ಯಂತ್ರ ರೂಪಿಸಿ ಪಾದಯಾತ್ರೆ ಮಾಡುತ್ತಿದ್ದಾರೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿಗಳು ಅಕ್ರಮ ಎಸಗಿದ್ದಾರೆ ಎಂದು ತಿಳಿದ ತಕ್ಷಣ, ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುತ್ತಿದ್ದು, ಹಲವರನ್ನು ಬಂಧಿಸಿ, ಅಕ್ರಮ ವರ್ಗಾವಣೆಯಾದ ಹಣ ವಾಪಸ್ ಪಡೆದಿದ್ದೇವೆ, ಪ್ರತಿಪಕ್ಷಗಳು ಪ್ರಚಾರಕ್ಕಾಗಿ ಬೇರೆ ತನಿಖಾ ಸಂಸ್ಥೆಗಳನ್ನು ಕರೆತಂದು ನಮ್ಮವರಿಗೆ ಕಿರುಕುಳ ನೀಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ, ಕಾನೂನು ಪ್ರಕಾರ ಅವರ ಪ್ರಯತ್ನ ಅವರು ಮಾಡಲಿ.

ಈ ವಿಚಾರ ಚರ್ಚಿಸಲು ಸದನದಲ್ಲಿ ಅವಕಾಶ ನೀಡಿದೆವು, ಆದರೆ ಅವರು ಮುಖ್ಯಮಂತ್ರಿಗಳಿಗೆ ಉತ್ತರ ನೀಡಲು ಅವಕಾಶವನ್ನೇ ನೀಡಲಿಲ್ಲ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಿ.ಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರು ಮಾತನಾಡುವಾಗ ತಾಳ್ಮೆಯಿಂದ ಕೇಳಿಸಿಕೊಂಡಿದ್ದೇವೆ.

‘ ಸಿದ್ದರಾಮಯ್ಯ ಹಠಾವೋ, ರಾಹುಲ್ ಗಾಂಧಿ ಎಲ್ಲಿದ್ದಾರೆ’
ಚರ್ಚೆಗೆ ಅವಕಾಶ ನೀಡಲಿಲ್ಲ

ಮುಖ್ಯಮಂತ್ರಿಗಳು, ಬಿಜೆಪಿ ಆಡಳಿತಾವಧಿಯಲ್ಲಿ ನಡೆದಿರುವ ಅಕ್ರಮಗಳನ್ನು ಬಯಲು ಮಾಡಿದರು, ಅವರ ಅಕ್ರಮಗಳ ಬಗ್ಗೆ ಸಿಎಜಿ ವರದಿಗಳಿವೆ, ಇವುಗಳ ಬಗ್ಗೆ ಚರ್ಚೆ ಮಾಡಲು ವಿರೋಧ ಪಕ್ಷಗಳು ಅವಕಾಶ ನೀಡಲಿಲ್ಲ ಎಂದರು.

ಮುಡಾ ವಿಚಾರದಲ್ಲೂ ಪ್ರಚಾರ ಪಡೆಯಲು ಬಿಜೆಪಿ ಮುಂದಾಗಿದೆ, ಬಿಜೆಪಿ ಹಾಗೂ ಜೆಡಿಎಸ್ ರಾಜ್ಯದಲ್ಲಿ ಅಸ್ಥಿತ್ವ ಕಳೆದುಕೊಳ್ಳುತ್ತಿರುವ ಕಾರಣಕ್ಕೆ ಒಂದಾಗಿ ಪಾದಯಾತ್ರೆಗೆ ಮುಂದಾಗಿದ್ದಾರೆ, ಅವರ ಕಾಲದಲ್ಲಿ ಅಕ್ರಮವಾಗಿ ಯಾರು ಎಷ್ಟು ನಿವೇಶನಗಳನ್ನು ಪಡೆದಿದ್ದಾರೆ ಎಂಬುದನ್ನು ನಾವು ಬಹಿರಂಗಪಡಿಸುತ್ತೇವೆ.

ದೇಶದಲ್ಲಿ ಮಹಾತ್ಮಾಗಾಂಧಿ ನಾಯಕತ್ವದಲ್ಲಿ ಪಾದಯಾತ್ರೆ ಆರಂಭವಾಯಿತು, ಸ್ವಾತಂತ್ರ್ಯ ಹೋರಾಟದಿಂದ ಭಾರತ ಜೋಡೋ, ಬಳ್ಳಾರಿ, ಮೇಕೆದಾಟು ಪಾದಯಾತ್ರೆ ಮಾಡಿದ್ದೇವೆ. ಪಾದಯಾತ್ರೆ ನಮ್ಮ ಸ್ವತ್ತು.

ಮುಖ್ಯಮಂತ್ರಿಗಳ ಕುಟುಂಬದ ಜಮೀನನ್ನು ನೋಟಿಫಿಕೇಶನ್ ಮಾಡದೇ ಮುಡಾದವರು ಕಬಳಿಸಿದ್ದರು, ಅದಕ್ಕೆ ಪರಿಹಾರವಾಗಿ ನಿವೇಶನಗಳನ್ನು ನೀಡಲಾಗಿದೆ, ನಿಯಮಾವಳಿ ಪ್ರಕಾರ ನೋಟಿಫಿಕೇಶನ್ ಮಾಡದೇ ಭೂಮಿಯನ್ನು ಬಳಸಿಕೊಂಡರೆ ಪರಿಹಾರ ನೀಡಲು ಅವಕಾಶವಿದೆ, ಅದೇ ರೀತಿ ಇಲ್ಲೂ ಆಗಿದೆ.

ಅಧಿಕಾರಿಗಳು ಕೊಟ್ಟ ನಿವೇಶನ

ಕೆಲವು ಕಡೆ50:50ರ ಅನುಪಾತದಲ್ಲಿ ನೀಡಿದರೆ, ಮತ್ತೆ ಕೆಲವೆಡೆ ಶೇ.100 ರಷ್ಟು ಮತ್ತೆ ಕೆಲವೆಡೆ ಶೇ.30ರಷ್ಟು ನೀಡಲಾಗಿದೆ, ಮುಖ್ಯಮಂತ್ರಿಗಳ ಕುಟುಂಬದವರು ಇಂತಹದೇ ಜಾಗದಲ್ಲಿ ನಿವೇಶನ ನೀಡಿ ಎಂದು ಕೇಳಿರಲಿಲ್ಲ, ಮುಡಾ ಅಧಿಕಾರಿಗಳು ಕೊಟ್ಟ ನಿವೇಶನಗಳನ್ನು ಪಡೆದಿದ್ದಾರೆ ಎಂದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ನಿವೇಶನಗಳ ಹಂಚಿಕೆಯಾಗಿದೆ, ಮುಖ್ಯಮಂತ್ರಿಗಳ ಕುಟುಂಬ ಕೇವಲ ಪರಿಹಾರ ಪಡೆದಿದ್ದಾರೆ, ಕಾನೂನು ಚೌಕಟ್ಟಿನಲ್ಲಿ ಪ್ರಕ್ರಿಯೆ ನಡೆದಿವೆ, ಆದರೆ, ಮುಖ್ಯಮಂತ್ರಿಗಳ ಘನತೆಗೆ ಮಸಿ ಬಳಿಯಲು ವಿರೋಧ ಪಕ್ಷದವರು ಪ್ರಯತ್ನ ಮಾಡುತ್ತಿದ್ದಾರೆ.

ವಾಲ್ಮೀಕಿ ನಿಗಮದ ಹಗರಣ ತನಿಖೆಯಲ್ಲಿ ಎಸ್‌ಐಟಿ ಮಧ್ಯಂತರ ವರದಿ ನೀಡುವ ಬಗ್ಗೆ ಮಾಹಿತಿ ಇಲ್ಲ.

ಸಂಸತ್ತಿನಲ್ಲೂ ಕರ್ನಾಟಕದ ಹಗರಣಗಳ ವಿಚಾರವಾಗಿ ಪ್ರತಿಭಟನೆ ಮಾಡುವುದಾಗಿ ಬಿಜೆಪಿ ಹೇಳುತ್ತಿದೆ, ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಷಡ್ಯಂತ್ರ ರೂಪಿಸುತ್ತಿದ್ದಾರೆ, ದೇಶದಲ್ಲಿ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟ ಬಲಿಷ್ಠವಾಗುತ್ತಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp paadayatrecome to open discussionsuicide step - dk shivakumar
0 FacebookTwitterPinterestEmail
admin

previous post
ಮುಡಾ: ಬಿಜೆಪಿ-ಜೆಡಿಎಸ್ ಮೈಸೂರು ಪಾದಯಾತ್ರೆ
next post
‘ ಸಿದ್ದರಾಮಯ್ಯ ಹಠಾವೋ, ರಾಹುಲ್ ಗಾಂಧಿ ಎಲ್ಲಿದ್ದಾರೆ’

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ