Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮುಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲ

by admin July 30, 2024
written by admin July 30, 2024 0 comments 1 minutes read
0FacebookTwitterPinterestEmail
348

ಬೆಂಗಳೂರು:ಮುಡಾ ಹಗರಣದಲ್ಲಿ ಯಾವುದೇ ಅವ್ಯವಹಾರವಾಗಲೀ, ಭ್ರಷ್ಟಾಚಾರವಾಗಲೀ ನಡೆದಿಲ್ಲ, ಇದರಲ್ಲಿ ತಮ್ಮ ಯಾವುದೇ ಪಾತ್ರವಿಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನದಟ್ಟು ಮಾಡುವ ಪ್ರಯತ್ನ ಮಾಡಿದ್ದಾರೆ.

ದೆಹಲಿಗೆ ಒಂದು ದಿನದ ಭೇಟಿ ನೀಡಿರುವ ಅವರು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಅಧಿನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವು ಮುಖಂಡರಿಗೆ ತಮ್ಮ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳನ್ನು ನೀಡಿದ್ದಾರೆ.

ಜಮೀನಿಗೆ ಬದಲಾಗಿ 14 ನಿವೇಶನ

ಮುಡಾ ಹಗರಣದಲ್ಲಿ ತಮ್ಮ ಯಾವುದೇ ಪಾತ್ರವಿಲ್ಲ, ಮುಡಾ ಸ್ವಾಧೀನಪಡಿಸಿಕೊಂಡ ತಮ್ಮ ಧರ್ಮಪತ್ನಿಯ ಜಮೀನಿಗೆ ಬದಲಾಗಿ 14 ನಿವೇಶನಗಳನ್ನು ಮೈಸೂರು ಅಭಿವೃದ್ಧಿ ಪ್ರಾಧಿಕಾರ ತಮ್ಮ ಕುಟುಂಬಕ್ಕೆ ನೀಡಿದ್ದು, ಇದರಲ್ಲಿ ಯಾವುದೇ ಅವ್ಯವಹಾರ ಅಥವಾ ಭ್ರಷ್ಟಾಚಾರ ನಡೆದಿಲ್ಲ.

ಮುಡಾ ನಿವೇಶನ ಪಡೆಯಲು ಮುಖ್ಯಮಂತ್ರಿಯಾಗಿ ಅಧಿಕಾರ ದುರುಪಯೋಗ ಪಡಿಸಿಕೊಂಡಿಲ್ಲ, ಪ್ರಾಧಿಕಾರದ ತೀರ್ಮಾನದಂತೆ ತಮ್ಮ ಕುಟುಂಬಕ್ಕೆ ನಿವೇಶನ ಹಂಚಿಕೆಯಾಗಿದೆ, ಇದರಲ್ಲಿ ಸರ್ಕಾರದ ಪಾತ್ರವೂ ಇಲ್ಲ ಎಂದು ಪಕ್ಷದ ವರಿಷ್ಠರಿಗೆ ಸ್ಪಷ್ಟಪಡಿಸಿದ್ದಾರೆ.

ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಜಾಯಿಷಿ ನೀಡಿರುವ ಮುಖ್ಯಮಂತ್ರಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಈಗಾಗಲೇ ತನಿಖೆ ನಡೆಸುತ್ತಿದೆ, ಆರೋಪ ಎದುರಿಸುತ್ತಿರುವ ಕೆಲವು ಅಧಿಕಾರಿಗಳ ಬಂಧನವೂ ಆಗಿದ್ದು, ಆರೋಪಿಗಳಿಂದ ಬಹಳಷ್ಟು ಪ್ರಮಾಣದಲ್ಲಿ ಹಣವನ್ನೂ ವಾಪಸ್ ಪಡೆಯಲಾಗಿದೆ.

ಅಹಿಂದಾ ನಾಯಕನ ಮುಖವಾಡ ಕಳಚಿಬಿದ್ದಿದೆ
ಹೈಕಮಾಂಡ್‌ಗೆ ಪೂರ್ಣ ವಿವರ

ಹಗರಣದ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಸಂಬಂಧಪಟ್ಟ ಸಚಿವರ ರಾಜೀನಾಮೆಯನ್ನೂ ಪಡೆಯಲಾಗಿದೆ, ಅಲ್ಲದೆ, ಅವರನ್ನು ತನಿಖಾ ಸಂಸ್ಥೆ ವಿಚಾರಣೆಗೂ ಒಳಪಡಿಸಿದೆ ಎಂಬುದಾಗಿ ಪ್ರಕರಣದ ಪೂರ್ಣ ವಿವರಗಳನ್ನು ಹೈಕಮಾಂಡ್ ಮುಂದಿಟ್ಟಿದ್ದಾರೆ.

ಹಗರಣ ಸಂಬಂಧ ಕೇಂದ್ರ ಸರ್ಕಾರ ರಾಜಕೀಯ ಸೇಡಿನ ಕ್ರಮಕೈಗೊಳ್ಳುತ್ತಿದ್ದು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ದೂರಿನ ಆಧಾರದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ಮತ್ತು ಸಿಬಿಐ ತನಿಖೆ ನೆಪದಲ್ಲಿ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ಮಾಡುತ್ತಿವೆ.

ಮುಡಾ ಆಡಳಿತ ಲೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೂ ಆದೇಶ ಮಾಡಿದ್ದೇನೆ
ಎಂದು ಮುಖ್ಯಮಂತ್ರಿ ಸಮಜಾಯಿಷಿ ನೀಡಿದ್ದಾರೆ.

ವರ್ಚಸ್ಸಿಗೆ ಮಸಿ ಬಳಿಯುವ ಯತ್ನ

ಕರ್ನಾಟಕದಲ್ಲಿನ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ನಿರಾಧಾರ ಹಗರಣಗಳನ್ನೇ ಮುಂದಿಟ್ಟುಕೊಂಡು, ರಾಜಕೀಯ ದುರುದ್ದೇಶದಿಂದ ಬೀದಿಗಿಳಿದು ಹೋರಾಡುವ ನೆಪದಲ್ಲಿ ತಮ್ಮ ವರ್ಚಸ್ಸಿಗೆ ಮಸಿ ಬಳಿಯುವ ಯತ್ನದಲ್ಲಿ ತೊಡಗಿವೆ ಎಂದು ದೂರಿದ್ದಾರೆ.

ಕರ್ನಾಟಕ ವಿಧಾನಮಂಡಲದ ಅಧಿವೇಶನ ಸಂದರ್ಭದಲ್ಲೂ ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಎತ್ತಿದ ವಾಲ್ಮೀಕಿ ಹಗರಣ ಚರ್ಚೆಗೆ ಸದನದಲ್ಲೇ ಸಮರ್ಪಕ ಉತ್ತರ ನೀಡಿದ್ದು, ಆದಾಗ್ಯೂ ವಿರೋಧ ಪಕ್ಷಗಳು ಪ್ರಕರಣಗಳನ್ನು ಅನಗತ್ಯವಾಗಿ ಸಾರ್ವಜನಿಕವಾಗಿ ಚರ್ಚೆಯ ವಿಷಯವನ್ನಾಗಿಸುತ್ತಿವೆ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
14 sites for land acquisitiondocuments submitted to high commandno part in muda scam - siddaramaiah
0 FacebookTwitterPinterestEmail
admin

previous post
ಜೆಡಿಎಸ್ ಗೆ ಎಲ್ಲಾ ಹಂತಗಳಲ್ಲಿ ಕಾಯಕಲ್ಪ ನೀಡಲು ನಾಯಕರ ಪ್ರವಾಸ
next post
ಅಹಿಂದಾ ನಾಯಕನ ಮುಖವಾಡ ಕಳಚಿಬಿದ್ದಿದೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ