Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಕುಮಾರಣ್ಣ ನೀವು, ನಿಮ್ಮ ಕುಟುಂಬದವರು ಯಾವ ಈರುಳ್ಳಿ, ಆಲೂಗಡ್ಡೆ ಬೆಳೆದು ಸಾವಿರಾರು ಕೋಟಿ ಸಂಪಾದಿಸಿದ್ದೀರಿ?

by KM Shivaraju August 4, 2024
written by KM Shivaraju August 4, 2024 0 comments 4 minutes read
0FacebookTwitterPinterestEmail
279

ಕೃಷಿ ಜತೆಗೆ ಉದ್ಯಮ ನಡೆಸುತ್ತಿದ್ದೇನೆ : ಡಿಕೆ ಶಿವಕುಮಾರ್

ಬೆಂಗಳೂರು: “ಕುಮಾರಸ್ವಾಮಿ, ನಾನು ಕೃಷಿ ಜತೆಗೆ ಉದ್ಯಮವನ್ನು ನಡೆಸುತ್ತಿದ್ದೇನೆ. ನೀನು ಮತ್ತು ನಿಮ್ಮ ಕುಟುಂಬದವರು ಯಾವ ಈರುಳ್ಳಿ, ಆಲೂಗಡ್ಡೆ ಬೆಳೆದು ಸಾವಿರಾರು ಕೋಟಿ ಸಂಪಾದಿಸಿದ್ದೀರಿ? ನೀನು ಹಿಟ್ ಅಂಡ್ ರನ್, ಬ್ಲಾಕ್ ಮೇಲರ್” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹರಿಹಾಯ್ದಿದ್ದಾರೆ.

ಚನ್ನಪಟ್ಟಣದಲ್ಲಿ ನಡೆದ ಜನಾಂದೋಲನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಿವಕುಮಾರ್ ಅವರು, “ಕುಮಾರಣ್ಣ ನೀನು ನನ್ನ ಆಸ್ತಿ ಬಗ್ಗೆ ಚರ್ಚೆ ಮಾಡುವ ಬದಲು ಮೊದಲಿನಿಂದಲೂ ಚರ್ಚೆ ಮಾಡು. ನಿನ್ನ ಸಹೋದರ ಬಾಲಕೃಷ್ಣಗೌಡ ಅವರ ಕುಟುಂಬ, ಅವರ ತಂದೆ ಹಾಗೂ ಮೈಸೂರು, ಶ್ರೀರಂಗಪಟ್ಟಣದ ಅವರ ಸಂಬಂಧಿಗಳು, ಬೇನಾಮಿಗಳು ಎಷ್ಟೆಷ್ಟು ಜಮೀನು ಹೊಂದಿದ್ದಾರೆ ಎಂಬ ಬಗ್ಗೆ ನೀವು ರಾಮನಗರದಲ್ಲಿ ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಒಬ್ಬ ಸರ್ಕಾರಿ ನೌಕರ ಎಷ್ಟು ಸಾವಿರ ಕೋಟಿಗೆ ಇದ್ದಾನೆ. ಯಾವ ಈರುಳ್ಳಿ, ಆಲೂಗಡ್ಡೆಯಲ್ಲಿ ಅದು ಸಂಪಾದನೆ ಆಯ್ತು? ಎಂದು ಲೆಕ್ಕ ಕೊಡಬೇಕು” ಎಂದು ಅವರು ಸವಾಲೆಸೆದಿದ್ದಾರೆ.

“ನಾನು ಹುಟ್ಟುತ್ತಾ ಕೃಷಿಕ. ವೃತ್ತಿಯಲ್ಲಿ ನಾನು ಉದ್ದಿಮೆದಾರ ಎಂದು ಹೇಳಿಕೊಂಡಿದ್ದೇನೆ. ನೀನು ಆ ರೀತಿ ಹೇಳಿಲ್ಲ. ನಾನು ಪಂಚೆಯುಟ್ಟು ಹೊಲ ಉಳುಮೆ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದೀಯ. ಮಣ್ಣಿನ ಮಗ ಎಂದು ಹೇಳಿದ್ದೀಯ. ನಿಮ್ಮ ತಂದೆ ಮಣ್ಣಿನ ಮಗನಾಗಿರಬಹುದು. ಆದರೆ ನೀವಲ್ಲ” ಎಂದು ಅವರು ಟೀಕಿಸಿದ್ದಾರೆ.

“ನನ್ನ ಮೇಲೆ, ನನ್ನ ಧರ್ಮಪತ್ನಿ, ನನ್ನ ಸಹೋದರಿ, ನನ್ನ ಸಹೋದರನ ಮೇಲೆ ನೀವು ಕೇಸ್ ದಾಖಲಿಸಿ ಏನು ಮಾಡಿದಿರಿ? ಏನು ಮಾಡಲು ಆಗಿಲ್ಲ. ಮಿಲಿಟರಿಯವರು ಬಂದು ನನ್ನನ್ನು ಕರೆದುಕೊಂಡು ಹೋಗಲಿದ್ದಾರೆ ಎಂದು ನೀನು ಹೇಳಿದ್ದೀಯಾ. ಹಾಗಿದ್ದರೆ ನಾನು ಜೈಲಲ್ಲಿ ಇದ್ದಾಗ ಯಾಕೆ ಬಂದು ನನ್ನನ್ನು ನೋಡಿದೆ? ನನ್ನ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ ಅದು ಗೊತ್ತಿದೆಯೇ? ನನ್ನ ಕುಟುಂಬದವರ ಮೇಲೆ ಹಾಕಿಸಿದ್ದ ಕೇಸು ವಜಾ ಆಗಿದೆ ಗೊತ್ತಿದೆಯಾ?” ಎಂದು ಕುಟುಕಿದ್ದಾರೆ.

“ನಾನು ನಿನ್ನ ಡಿನೋಟಿಫಿಕೇಶನ್ ಪ್ರಕರಣ ಇನ್ನು ಚರ್ಚೆ ಮಾಡಿಲ್ಲ. ನಿನ್ನ ಗಣಿ ಕೇಸ್ ಇನ್ನು ಚರ್ಚೆ ಮಾಡಿಲ್ಲ. ನಿನ್ನ ಕುಟುಂಬದವರ ಆಸ್ತಿ ಇನ್ನು ಬಿಡುಗಡೆ ಮಾಡಿಲ್ಲ. ಪಟ್ಟಿ ಬಿಡುಗಡೆ ಮಾಡುತ್ತೇನೆ” ಎಂದು ಸವಾಲು ಹಾಕಿದ್ದಾರೆ.

ಹುಟ್ಟಿದ ಕರುಗಳೆಲ್ಲ ಬಸವ ಆಗಲ್ಲ; ಎಲ್ಲರೂ ರೈತನ ಮಗ ಆಗುವುದಿಲ್ಲ

“ನೀವು ರೈತನ ಮಗ ಎಂದು ಹೇಳುತ್ತೀರಿ. ನಮ್ಮ ಹಳ್ಳಿ ಕಡೆ ಒಂದು ಮಾತು ಹೇಳುತ್ತಾರೆ. ‘ಹುಟ್ಟಿದವೆಲ್ಲಾ ಬಸವ ಆಗುವುದಿಲ್ಲ’ ಎಂದು. ಅಂದರೆ ಹಳ್ಳಿಗಳಲ್ಲಿ ಹುಟ್ಟುವ ಎಲ್ಲಾ ಕರುಗಳು ಬಸವ ಆಗಲು ಸಾಧ್ಯವಿಲ್ಲ. ಅದೇ ರೀತಿ ಎಲ್ಲರೂ ರೈತರು, ರೈತರ ಮಕ್ಕಳಾಗಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ರೈತರ ರಕ್ಷಣೆಗೆ ಅನೇಕ ಕಾರ್ಯಕ್ರಮಗಳನ್ನು ನೀಡಿದೆ. ಉಳುವವನಿಗೆ ಭೂಮಿ ಕೊಟ್ಟಿದ್ದೇವೆ. ಬಗರ್ ಹುಕುಂ ಸಾಗುವಳಿ ಜಮೀನು ನೀಡಿದ್ದೇವೆ. ಅರಣ್ಯ ಕಾಯ್ದೆಯಲ್ಲಿ ರೈತರಿಗೆ ಜಮೀನು ನೀಡಿದ್ದೇವೆ. ಕುಮಾರಸ್ವಾಮಿ ಅವರೇ, ನೀವು ಒಂದು ಸಭೆ ಮಾಡಿ ಒಬ್ಬ ರೈತನಿಗೆ ಬಗರ್ ಹುಕುಂ ಜಮೀನು ನೀಡಿಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

“ನಾನು ಚನ್ನಪಟ್ಟಣದ ವಿವಿಧ ಕಡೆಗಳಲ್ಲಿ ಸರ್ಕಾರವನ್ನು ಜನರ ಮನೆ ಬಾಗಿಲಿಗೆ ಕರೆದುಕೊಂಡು ಬಂದು ಅವರ ಕಷ್ಟ ಕೇಳಿದ್ದೇನೆ. ಈ ಕ್ಷೇತ್ರದಲ್ಲಿ 22 ಸಾವಿರ ಜನ ತಮ್ಮ ಕಷ್ಟ ಬಗೆಹರಿಸುವಂತೆ ಅರ್ಜಿ ನೀಡಿದ್ದಾರೆ. ನಿವೇಶನ, ಮನೆ, ಪಿಂಚಣಿ, ಜಮೀನಿನ ಖಾತೆ ಇಲ್ಲ ಎಂದು ಅರ್ಜಿ ಕೊಟ್ಟಿದ್ದಾರೆ. ಆಗಿದ್ದರೆ ನೀವು ಯಾವ ಆಡಳಿತ ಮಾಡಿದ್ದೀರಿ? ಯಾರಿಗೆ ಸಹಾಯ ಮಾಡಿದ್ದೀರಿ? ಇದಕ್ಕೆ ಈ ಕ್ಷೇತ್ರದ ಜನ ಮುಂದಿನ ಉಪ ಚುನಾವಣೆಯಲ್ಲಿ ಉತ್ತರ ನೀಡಬೇಕು. ನೀವೆಲ್ಲರೂ ಉತ್ತರ ನೀಡುತ್ತೀರಿ ಅಲ್ಲವೇ? ಬೆಂಗಳೂರು ದಕ್ಷಿಣ ನಿಮ್ಮ ಜಿಲ್ಲೆಯಲ್ಲವೇ? ಆ ಸ್ವಾಭಿಮಾನ ನಿಮ್ಮದಲ್ಲವೇ?” ಎಂದು ತಿಳಿಸಿದ್ದಾರೆ.

ಕುಮಾರಸ್ವಾಮಿ ಹಿಡ್ ಅಂಡ್ ರನ್, ಬ್ಲಾಕ್ ಮೇಲರ್

“ನನ್ನ ಅಧ್ಯಕ್ಷತೆಯಲ್ಲಿ ನನ್ನ ಪಕ್ಷಕ್ಕೆ 136 ಸೀಟು ಬಂದಿದೆ. ನಿನ್ನ ಅಧ್ಯಕ್ಷತೆಯಲ್ಲಿ ನಿನ್ನ ಪಕ್ಷಕ್ಕೆ 19 ಸೀಟು ಬಂದಿದೆ. ಈಗ ನಿನ್ನ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಸೇರಿದ್ದೀಯ. ಕುಮಾರಸ್ವಾಮಿ ನೀನು ಕೇವಲ ಹಿಟ್ ಅಂಡ್ ರನ್. ನೀನು ಬ್ಲಾಕ್ ಮೇಲ್ ಕುಮಾರಸ್ವಾಮಿ. ಎಲ್ಲರನ್ನು ಹೆದರಿಸಿದಂತೆ ಬಿಜೆಪಿಯವರನ್ನು ಹೆದರಿಸಲು ಹೋದೆ. ಪಾದಯಾತ್ರೆ ವಿಚಾರವಾಗಿ ಜಿ.ಟಿ ದೇವೆಗೌಡರ ಕೈಯಲ್ಲಿ ಒಂದು ಹೇಳಿಕೆ ಕೊಡಿಸಿದೆ. ನಿನ್ನ ಮಗನ ಕೈಯಲ್ಲಿ ಒಂದು ಹೇಳಿಕೆ ಕೊಡಿಸಿದೆ. ನೀನು ಒಂದು ಹೇಳಿಕೆ ನೀಡಿದೆ. ಈ ನಾಟಕ ಏಕೆ?” ಎಂದು ಪ್ರಶ್ನಿಸಿದ್ದಾರೆ.

“ಪಾದಯಾತ್ರೆಗೆ ಬರಲ್ಲ ಎಂದು ಹೇಳಿದವನು, ಈಗ ಯಾಕೆ ಪಾದಯಾತ್ರೆಯಲ್ಲಿ ಭಾಗವಹಿಸಿದ್ದೀಯಾ? ಕೇವಲ ನಿನ್ನ ಅಧಿಕಾರಕ್ಕೋಸ್ಕರ. ನಿನ್ನ ಪಕ್ಷವನ್ನು ಮುಳುಗಿಸಲು ಹೊರಟಿದ್ದೀಯಾ” ಎಂದು ಮಾತಿನ ಮೂಲಕ ತಿವಿದಿದ್ದಾರೆ.

ಪೆನ್ ಡ್ರೈವ್ ವಿಚಾರದಲ್ಲಿ ದಿನಕ್ಕೊಂದು ಹೇಳಿಕೆ

“ಇನ್ನು ಪೆನ್ ಡ್ರೈವ್ ಪ್ರಕರಣದಲ್ಲಿ ಕುಮಾರಸ್ವಾಮಿ ಅವರು ದಿನಕ್ಕೊಂದು ಮಾತನಾಡಿದ್ದಾರೆ. ಮೊದಲು ರೇವಣ್ಣ ಕುಟುಂಬ ಬೇರೆ, ನಮ್ಮ ಕುಟುಂಬ ಬೇರೆ ಎಂದರು. ಮೊದಲು ಡಿ.ಕೆ.ಶಿವಕುಮಾರ್ ಪೆನ್ ಡ್ರೈವ್ ಹಂಚಿದ್ದಾರೆ ಎಂದರು. ಕುಮಾರಸ್ವಾಮಿ ಶಿವಕುಮಾರ್ ಎಂದಿಗೂ ನೇರವಾಗಿ ಹೋರಾಟ ಮಾಡುವವನು. ಈ ರೀತಿ ಹಿಂದೆ ನಿಂತು ಯುದ್ಧ ಮಾಡುವುದಿಲ್ಲ ಎಂದು ನಿಮಗೂ ಗೊತ್ತಿದೆ. ಈಗಾಗಲೇ ನೀನು ನನ್ನ ವಿರುದ್ಧ ಹೋರಾಡಿ ಸೋತಿದ್ದೀಯಾ. ದೇವರು ಅವಕಾಶ ಕೊಟ್ಟರೆ ಮತ್ತೊಮ್ಮೆ ಸೆಣೆಸಾಡೋಣ” ಎಂದು ತಿಳಿಸಿದ್ದಾರೆ.

ಹಾಸನದ ಪೆನ್ ಡ್ರೈವ್ ಪ್ರಕರಣವನ್ನು ಬಿಜೆಪಿಯವರು ಯಾಕೆ ಚರ್ಚೆ ಮಾಡುತ್ತಿಲ್ಲ? ಆ ಹೆಣ್ಣುಮಕ್ಕಳ ರಕ್ಷಣೆ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಡಿ.ಕೆ. ಶಿವಕುಮಾರ್ ಬಗ್ಗೆ ಮಾತನಾಡಿದೆ, ಈಗ ಪ್ರೀತಂ ಗೌಡ ಬಗ್ಗೆ ಮಾತನಾಡುತ್ತಿದ್ದೀಯಾ? ನನಗೂ ಅವರಿಗೂ ಸಂಬಂಧವಿಲ್ಲ ಎಂದು ಹೇಳಿದ್ದೆ. ಈಗ ನಮ್ಮ ದೇವೇಗೌಡರ ಕುಟುಂಬ ಎಂದು ಹೇಳುತ್ತಿದ್ದೀಯಾ? ಈ ಬಗ್ಗೆ ಚರ್ಚೆ ಮಾಡಬೆಡಕಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ನವರಂಗಿ ಬಣ್ಣ ಬಯಲಾಗಬೇಕು
“ಕುಮಾರಸ್ವಾಮಿ ಅವರು ಮಂಡ್ಯ ಚುನಾವಣೆ ವೇಳೆ ಎನ್ ಡಿಎ ಸರ್ಕಾರ ಬಂದರೆ ಐದು ನಿಮಿಷದಲ್ಲಿ ಮೋದಿ ಅವರ ಜತೆ ಮಾತಾಡಿ ಮೇಕೆದಾಟಿಗೆ ಅನುಮತಿ ಕೊಡಿಸುತ್ತೇನೆ ಎಂದು ಹೇಳಿದ್ದರು. ಈಗ ನಾನು ಹಾಗೆ ಹೇಳಿಲ್ಲ ಎಂದು ಹೇಳುತ್ತಿದ್ದಾರೆ. ಅವರು ಏನೆಲ್ಲಾ ಹೇಳಿದ್ದಾರೆ ಅವುಗಳನ್ನು ದೊಡ್ಡ ಪರದೆಯಲ್ಲಿ ಹಾಕಿಸಬೇಕು. ಅವರ ನವರಂಗಿ ಬಣ್ಣ ರಾಜ್ಯದ ಜನತೆಗೆ ಅರ್ಥವಾಗಬೇಕು” ಎಂದು ತಿಳಿಸಿದ್ದಾರೆ.
ಕುಮಾರಸ್ವಾಮಿ ಟೂರಿಂಗ್ ಟಾಕೀಸ್ ಮುಂದುವರಿಯಲಿ

“ಕುಮಾರಸ್ವಾಮಿ ಅವರೇ ನೀವು ನಿಮ್ಮ ಟೂರಿಂಗ್ ಟಾಕೀಸ್ ರಾಜಕಾರಣ ಮಾಡಿ ನಮ್ಮ ಅಭ್ಯಂತರವಿಲ್ಲ. ಮಧುಗಿರಿ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಚನ್ನಪಟ್ಟಣ ಮಾಡಿ, ಮುಂದೆ ಕನಕಪುರಕ್ಕೂ ಬನ್ನಿ. ಕೆಲವರು ನಿಮ್ಮನ್ನು ತಿರಸ್ಕರಿಸಿದ್ದಾರೆ, ಮತ್ತೆ ಕೆಲವರು ಗೆಲ್ಲಿಸಿದ್ದಾರೆ. ಎಲ್ಲಾ ದಿನ ಒಂದೇ ಆಗಿರುವುದಿಲ್ಲ. ಜನ ತೀರ್ಮಾನ ಮಾಡುತ್ತಾರೆ” ಎಂದು ತಿಳಿಸಿದ್ದಾರೆ

“ಕುಮಾರಣ್ಣ ನೀನು ಬಿಜೆಪಿಗೂ ಬ್ಲಾಕ್ ಮೇಲೆ ಮಾಡಲು ಶುರು ಮಾಡಿದ್ದೀಯ. ನೀವಿಬ್ಬರೂ ಚೆನ್ನಾಗಿರಿ. ಒಂದಾಗಿರಿ. ನಿಮ್ಮ ಪಕ್ಷ ಬಿಜೆಪಿ ಜತೆ ವಿಲೀನವಾದರೂ ಮಾಡಿಕೊಳ್ಳಿ. ನಮಗೂ ಒಳ್ಳೆಯದು. ನಮ್ಮ ಪಕ್ಷ ಅಧಿಕಾರಕ್ಕೆ ಬರದಿದ್ದರೆ ಪಕ್ಷ ವಿಸರ್ಜನೆ ಮಾಡುತ್ತೇನೆ ಎಂದು ಈಗಾಗಲೇ ಹೇಳಿದ್ದೀರ. ಆ ಕೆಲಸವನ್ನು ಶುಭಮುಹೂರ್ತ, ಶುಭ ಗಳಿಗೆಯಲ್ಲಿ ಮಾಡಿದರೆ ಎಲ್ಲರಿಗೂ ಉತ್ತಮ” ಎಂದು ಟೀಕಿಸಿದ್ದಾರೆ..

“ಕೇಂದ್ರ ಸರ್ಕಾರ ನಿನಗೆ ಎರಡು ಖಾತೆ ನೀಡಿದೆ. ನೀನು 10 ಸಾವಿರ ಜನರಿಗೆ ಕೆಲಸ ಕೊಡುವ ಕಾರ್ಖಾನೆ ಆರಂಭಿಸುತ್ತೇನೆ ಎಂದು ಹೇಳಿಕೆ ನೀಡಿದ್ದೀಯ. ಸಂತೋಷ ಆ ಕೆಲಸ ಮಾಡು. ನಮ್ಮ ಸರ್ಕಾರದಿಂದ ನಾವು ಸಹಕಾರ ನೀಡುತ್ತೇವೆ. ನೀವು ಎಲ್ಲೆಲ್ಲಿ ಅಂಗಡಿ ಇಟ್ಟಿದ್ದೀರಿ ನನಗೆ ಗೊತ್ತಿದೆ. ನೀನು ಅಧಿಕಾರದಲ್ಲಿದ್ದಾಗ ನಿನ್ನ ಜನರಿಗೆ ಒಂದು ಮನೆ, ನಿವೇಶನ ನೀಡಲಿಲ್ಲ. ನಿಮ್ಮ ಕಾರ್ಯಕರ್ತರಿಗೆ ಅಧಿಕಾರ ನೀಡಲಿಲ್ಲ. ನೀನು ನಿನ್ನ ಕುಟುಂಬ ಮಾತ್ರ ಅಧಿಕಾರ ಅನುಭವಿಸಿದ್ದೇ ಆಯ್ತು. ಯಡಿಯೂರಪ್ಪನವರು ಸದನದಲ್ಲಿ ನಿನ್ನ ಬಗ್ಗೆ ಮಾಡಿರುವ ಭಾಷಣದ ಬಗ್ಗೆ ನೀನು ಉತ್ತರ ನೀಡು ಸಾಕು” ಎಂದು ಸವಾಲೆಸೆದಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್ ನವರದ್ದು ಪಾಪ ವಿಮೋಚನಾ ಯಾತ್ರೆ

“ಬಿಜೆಪಿ ಹಾಗೂ ಜೆಡಿಎಸ್ ನವರದ್ದು ಪಾಪವಿಮೋಚನಾ ಪಾದಯಾತ್ರೆ ಮಾಡುತ್ತಿದ್ದಾರೆ. ಅವರು ಮಾಡಿರುವ ಎಲ್ಲಾ ಪಾಪಗಳನ್ನು ಕಳೆದುಕೊಳ್ಳಲು ಈ ಪಾದಯಾತ್ರೆ ಮಾಡುತ್ತಿದ್ದಾರೆ. ಇದು ಭ್ರಷ್ಟಾಚಾರದಿಂದ ಭ್ರಷ್ಟಾಚಾರಕ್ಕೋಸ್ಕರ, ಭ್ರಷ್ಟಾಚಾರಿಗಳೇ ನಡೆಸುತ್ತಿರುವ ಪಾದಯಾತ್ರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

“ಕುಮಾರಸ್ವಾಮಿ ಅವರ ಅಕ್ರಮಗಳ ಬಗ್ಗೆ ಬಿಜೆಪಿಯವರು ಮಾಧ್ಯಮಗಳಲ್ಲಿ ಪ್ರಕಟಿಸಿದ್ದ ಜಾಹೀರಾತಿನ ಬಗ್ಗೆ ಪಾದಯಾತ್ರೆ ಮಾಡುತ್ತಿರುವವರು ಉತ್ತರ ಕೊಡಬೇಕು. ಬಿಜೆಪಿಯ ಶಾಸಕರಾದ ಯತ್ನಾಳ್ ಅವರು ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಬಗ್ಗೆ ಅನೇಕ ಪ್ರಶ್ನೆಗಳನ್ನು ಕೇಳಿದ್ದಾರೆ. ಅವರ ಪ್ರಶ್ನೆಗಳಿಗೆ ಉತ್ತರ ನೀಡಿ ಎಂದು ನಾವೆಲ್ಲರೂ ಆಗ್ರಹಿಸುತ್ತಿದ್ದೇವೆ” ಎಂದಿದ್ದಾರೆ.

ಬಿಜೆಪಿ ಮುಖ್ಯಮಂತ್ರಿಗಳು ಏಕೆ ರಾಜೀನಾಮೆ ನೀಡಲಿಲ್ಲ

“ಬಿಜೆಪಿ ಅವಧಿಯಲ್ಲಿ 25 ಹಗರಣಗಳಿವೆ. ನಮ್ಮ ಸಚಿವರು ನಿಮ್ಮ ಅವಧಿಯಲ್ಲಿ ಆಗಿರುವ ಹಗರಣದ ಬಗ್ಗೆ ಕೇಳಿರುವ ಪ್ರಶ್ನೆಗೆ ಉತ್ತರಿಸಿ. ಕಿಯೋನಿಕ್ಸ್ ಹಾಗೂ ಪಂಚಾಯ್ತಿಗಳಲ್ಲಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದರಲ್ಲಾ ಅದೆಲ್ಲವನ್ನು ಹೊರಗೆ ತೆಗೆಯಬೇಕು. ನಿಮ್ಮ ಅವಧಿಯಲ್ಲಿ ನಡೆದ ಪಿಎಸ್ಐ ಹಗರಣ ನಡೆದಾಗ ಸಿಎಂ ಹಾಗೂ ಗೃಹ ಸಚಿವರು ಯಾಕೆ ರಾಜೀನಾಮೆ ನೀಡಲಿಲ್ಲ? ಹಗರಣವೇ ಇಲ್ಲದ ಪ್ರಕರಣದಲ್ಲಿ ಮುಖ್ಯಮಂತ್ರಿಗಳಿಂದ ರಾಜೀನಾಮೆ ಕೇಳುತ್ತಿದ್ದೀರಿ. ಭೋವಿ ನಿಗಮ, ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ ನಡೆದಾಗ ನಿಮ್ಮ ಮುಖ್ಯಮಂತ್ರಿಗಳು, ಮಂತ್ರಿಗಳು ಯಾಕೆ ರಾಜೀನಾಮೆ ನೀಡಲಿಲ್ಲ” ಎಂದು ಪ್ರಶ್ನಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
agriculturebusinessDKearnfamilygrowKumarannaonionspotatoesShivakumar
0 FacebookTwitterPinterestEmail
KM Shivaraju

previous post
ಪ್ರಾಮಾಣಿಕ ಎಂದು ಅಜ್ಜಯ್ಯನ ಮೇಲೆ ಡಿಕೆಶಿ ಪ್ರಮಾಣ ಮಾಡಲಿ
next post
ರಾಜ್ಯದಿಂದ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ: ವಿಜಯೇಂದ್ರ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ