Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಗಂಡಸ್ತನದಿಂದ ರಾಜಕೀಯ ಮಾಡಬೇಕು

by KM Shivaraju August 9, 2024
written by KM Shivaraju August 9, 2024 0 comments 2 minutes read
0FacebookTwitterPinterestEmail
217

ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಸವಾಲು ಹಾಕಿದ ಹೆಚ್ ಡಿಕೆ

ನವದೆಹಲಿ: ತಮ್ಮನ್ನು ಏಕವಚನದಲ್ಲಿ ಕೀಳಾಗಿ ನಿಂದಿಸಿದ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ತೀವ್ರ ಮಟ್ಟದಲ್ಲಿ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಡಿಕೆಶಿಯನ್ನು ನಪುಂಸಕ ಎಂದು ಕರೆದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಗೆ ವ್ಯಕ್ತಿತ್ವ ಎನ್ನುವುದು ಇದೆಯಾ? ಅವರದ್ದು ಒಂದು ನಾಲಿಗೆನಾ. ಆತ ಮನುಷ್ಯನಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧೈರ್ಯ ಎನ್ನುವುದು ಇದ್ದರೆ ಗಂಡಸ್ತನದಿಂದ ರಾಜಕೀಯ ಮಾಡಬೇಕು. ಸಂಪುಸಕ ಮಾಡುವ ಕೆಲಸ ಮಾಡುತ್ತಿದ್ದಾನೆ. ನನ್ನನ್ನು ಪ್ರಶ್ನೆ ಮಾಡುತ್ತಾನೆ. ಯಾರ ಮಗನನ್ನು ಬೆಳೆಸಬೇಕು ಎಂದು ಜನ ನಿರ್ಧಾರ ಮಾಡುತ್ತಾರೆ. ಒಳ್ಳೆಯದು, ಕೆಟ್ಟದು ಏನು ಎನ್ನುವುದು ಅವರಿಗೆ ಗೊತ್ತಿದೆ ಎಂದು ಕೇಂದ್ರ ಸಚಿವರು ಕಿಡಿ ಕಾರಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ನಿರ್ಧಾರ ಮಾಡುತ್ತಾರೆ. ಮೊದಲು ನೆಟ್ಟಗೆ ಬದುಕು. ನನ್ನನ್ನು ಕೆಣಕಬೇಡ ಶಿವಕುಮಾರ್. ಹುಷಾರು! ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ಕೊಟ್ಟರು.

ನಿನ್ನ ಯೋಗ್ಯತೆ, ಹಣೆಬರಹ ನನಗೆ ಬಹಳ ಚನ್ನಾಗಿ ಗೊತ್ತಿದೆ. ನಿನ್ನ ಬಗ್ಗೆ ನನ್ನಲ್ಲಿರುವ ಮಾಹಿತಿ ತೆಗೆದಿಟ್ಟರೆ ನೀನು ಬದುಕಲು ಕಷ್ಟವಾಗುತ್ತದೆ. ನಮ್ಮ ಕುಟುಂಬದ ವಿರುದ್ಧ ನೀನು ಏನೆಲ್ಲಾ ಸಂಚು ಮಾಡಿದೆ. ಮಸಜಿ ಸಚಿವ ಹೆಚ್.ಡಿ. ರೇವಣ್ಣ ಕುಟುಂಬ ಮುಗಿಸಲು ಏನು ಕುತಂತ್ರ ಮಾಡಿದೆ ಎನ್ನುವುದು ನನಗೆ ಗೊತ್ತಿದೆ ಎಂದು ಅವರು ವಾಗ್ದಾಳಿನಡೆಸಿದರು.

ನನ್ನದು ಪಾರಾದರ್ಶಕ ಆಡಳಿತ. ಒಂದು ಕಪ್ಪು ಚುಕ್ಕೆ ಇಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ರೀಡು ಹೆಸರಿನಲ್ಲಿ ಲೂಟಿ ಹೊಡೆದಿದ್ದೀರಿ. ನ್ಯಾ.ಕೆಂಪಣ್ಣ ಆಯೋಗದ ವರದಿ ಏನಾಯಿತು? ಸದನ ಸಮಿತಿ ವರದಿ ಎಲ್ಲಿ ಇಟ್ಕೊಂಡಿದ್ದೀರಿ? ಕೆಟ್ಟ ಪದ ಬಳಸ ಬಾರದು. ಇವತ್ತು ಕಿರು ಹೊತ್ತಿಗೆ ಬಿಡುಗಡೆ ಮಾಡಿದ್ದಾರೆ. ಎ.ಕೆ.ಸುಬ್ಬಯ್ಯ ಕಾಲದಿಂದಲೂ ದೇವೇಗೌಡರನ್ನು ಮುಗಿಸಲು ಯತ್ನ ಮಾಡಲಾಯಿತು. ಯಾವ ಸಂಚು ಮಾಡಿ ಬಿಡುಗಡೆ ಮಾಡಿದ್ದೀಯಾ ಪೊಣ್ಣನ್ನ? ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ನಿವೇಶನ ಕೊಡಿ ಎಂದು 37,000 ರೂಪಾಯಿ ದುಡ್ಡು ಕಟ್ಟಿದ್ದೇನೆ. ನನಗೆ ಈವರೆಗೆ ನಿವೇಶನ ಕೊಟ್ಟಿಲ್ಲ. ನಾನು ಮೈಸೂರಿನಲ್ಲಿದ್ದಾಗ ಸಿನಿಮಾ, ಹಂಚಿಕೆ ನಿರ್ಮಾಣ ಮಾಡುತ್ತಿದ್ದಾಗ ಹಣ ಕಟ್ಟಿದ್ದೆ. ಸತ್ಯ ಸಂಗತಿ ಮುಚ್ಚಿಟ್ಟು ಮೈಸೂರುನಲ್ಲಿ ಬೋರ್ಡ್, ಫ್ಲೆಕ್ಸ್ ಹಾಕಿಕೊಂಡಿದ್ದಾರೆ. ಅದನ್ನು ನಿಮ್ಮ ಶಾಸಕರು ಕೊರಳಿಗೆ ಹಾಕಿಕೊಳ್ಳಲಿ. ಆ ಪ್ರಕರಣಲ್ಲಿ ಏನು ಇಲ್ಲ ಎಂದು ಲೋಕಾಯುಕ್ತ, ಸಿಐಡಿ ಯವರು ಹೇಳಿದ್ದಾರೆ. ಈ ಬೋರ್ಡ್ ಕಾಂಗ್ರೆಸ್ ಸ್ವಂತದ್ದ. ಬಿಜೆಪಿಯಿಂದ ಎರವಲು ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ್ದು ಏನೂ ಇಲ್ಲ ಎಂದು ಅವರು ಟೀಕಾ ಪ್ರಹಾರ ನಡೆಸಿದರು.

ಇವತ್ತಿನ ಕಾಂಗ್ರೆಸ್ ನಾಯಕರ ಜನಾಂದೋಲನ ನಡೆಯಿತು. ಇವರಿಗೆ ನಾಚಿಕೆ ಆಗಬೇಕು. ವಿರೋಧ ಪಕ್ಷದಲ್ಲಿದ್ದಾಗ ಬೊಗಳೆ ಬಿಟ್ಟರು. ಸಾಕ್ಷಿಗಳಿಲ್ಲದೇ ಅವರು ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದರು. ವಿರೋಧ ಪಕ್ಷದ ಸ್ಥಾನದ ಘನತೆ ಮರೆತು ಅತ್ಯಂತ ನಿಷ್ಕೃತವಾಗಿ ವರ್ತಿಸಿದ್ದಾರೆ. ವಿಧಾನಸಭೆಯಲ್ಲಿ ನಮ್ಮ ಶಾಸಕರು ಕಡಿಮೆ ಇದ್ದರೂ ದಾಖಲೆ ಸಮೇತ ಹೋರಾಟ ಮಾಡಿದ್ದೆವು. ದಾಖಲೆ ಸಮೇತ ಮಾತನಾಡಿದೆವು. ಅದರಲ್ಲೇನು ಅವರಿಗೆ ನಾಚಿಕೆ ಇಲ್ಲ ಎಂದು ಅವರು ಹೇಳಿದರು.

ನಾನು ಸಿಎಂ ಆಗಿದ್ದಾಗ ಒಂದು ಅಕ್ರಮ ನಡೆದಿದ್ದರೆ ದಾಖಲೆ ನೀಡಲಿ. ಇವರೇನಾದರೂ ದಾಖಲೆ ನೀಡಿದ್ದರಾ? ನಾನು ವಿರೋಧ ಪಕ್ಷದ ನಾಯಕನಿದ್ದಾಗ ಬಿಜೆಪಿ ವಿರುದ್ಧವೂ ಹೋರಾಟ ಮಾಡಿದ್ದೆ. ಈಗ ಏನೋ ಹೊಸದು ಅಂತ ಬಂದಿದ್ದಾರೆ. ಇದರಲ್ಲಿ ನನ್ನ ಮೇಲೆ ಏನು ಆಪಾದನೆ ಏನೂ ಇಲ್ಲ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಮೋದಿ ಅವರನ್ನು ಭೇಟಿಯಾಗಿದ್ದು, ರಕ್ಷಣೆ ಪಡೆಯಲು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಾವು ಯಾವತ್ತು ಕಾಪಾಡಿ ಎಂದು ಯಾರ ಮನೆ ಬಾಗಿಲಿಗೂ ಹೋಗಿಲ್ಲ. ನೀವು ಲೋಕಾಯಕ್ತ ಮುಚ್ಚಿ ಎಸಿಬಿ ಮಾಡಿದಿರಿ. ಹ್ಯೂಬ್ಲೊಟೊ ವಾಚ್ ಏನಾಯಿತು, ರೀಡು ಹಗರಣ, ನ್ಯಾ.ಕೆಂಪಣ್ಣ ಆಯೋಗದ ವರದಿ ಏನಾಯಿತು? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ಸರ್ಕಾರ ಕೆಡವಲು ಪ್ರಯತ್ನ ನಡೆಯುತ್ತಿದೆಯಂತೆ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಂಚು ನಡೆಯುತ್ತಿದೆ ಎಂದು ಯಾರು ಹೇಳಿದರು? ಅವರಿಗೇನು ಕನಸು ಬಿದ್ದಿತ್ತಾ? ಅಥವಾ ಅಜ್ಜಯ್ಯ ಹೇಳಿದರಾ? ಯಾರು ಹೇಳಿದರಂತೆ ಅವರಿಗೆ? ಎಂದು ಸಚಿವರು ಮರು ಪ್ರಶ್ನೆ ಕೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
challengeddcmDKhdkmenpoliticsShivakumar
0 FacebookTwitterPinterestEmail
KM Shivaraju

previous post
ಬಿಜೆಪಿ-ಜೆಡಿಎಸ್ ಕಪಟ ಷಡ್ಯಂತ್ರಕ್ಕೆ ಹೆದರುವುದಿಲ್ಲ
next post
ರಿಂಗ್ ರೋಡ್ ಯೋಜನೆಗೆ ಕೇಂದ್ರದ 1,769 ಕೋಟಿ ರೂ.

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ