Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಪೋಡಿ ಪ್ರಕರಣ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

by admin August 12, 2024
written by admin August 12, 2024 0 comments 2 minutes read
0FacebookTwitterPinterestEmail
381

ಬೆಂಗಳೂರು:ಪೋಡಿ ಪ್ರಕರಣಗಳ ತ್ವರಿತ ಇತ್ಯರ್ಥ ಹಾಗೂ ಗ್ರಾಮೀಣ ಭಾಗದ ಜನರ ಕಷ್ಟ-ಸುಖಗಳಿಗೆ ಸ್ಪಂದಿಸಲು 1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ‍್ಸ್, 36 ಎಡಿಎಲ್‌ಆರ್‌ಗಳ ನೇಮಕ ಮಾಡುವುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಇಂದಿಲ್ಲಿ ಪ್ರಕಟಿಸಿದ್ದಾರೆ.

ಕಾವೇರಿ, ಕೃಷ್ಣ ಕೊಳ್ಳ ವ್ಯಾಪ್ತಿಯಲ್ಲಿ ಆಗಸ್ಟ್ 15ರ ನಂತರ ಭಾರೀ ಮಳೆ ಬೀಳುವ ಮುನ್ಸೂಚನೆ ಇದ್ದು ಸಾರ್ವಜನಿಕರು ಎಚ್ಚರ ವಹಿಸುವಂತೆ ಮನವಿ ಮಾಡಿದ್ದಾರೆ.

ನೌಕರರ ಕಾರ್ಯಕ್ಕೆ ಅಸಮಾಧಾನ

ರಾಜ್ಯದಲ್ಲಿ ಬಿದ್ದಿರುವ ಮಳೆ ಪರಿಸ್ಥಿತಿ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಗರ್‌ಹುಕುಂ ಸಕ್ರಮಕ್ಕೆ ಅರ್ಜಿ ಸಲ್ಲಿಸಿ 40 ವರ್ಷ ಕಳೆದರೂ ಇಲಾಖಾ ಅರ್ಜಿಗಳ ನೌಕರರು ವಿಲೇವಾರಿ ಮಾಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಸೆಪ್ಟೆಂಬರ್ ತಿಂಗಳಿನಿಂದ ರಾಜ್ಯಾದ್ಯಂತ ಪೋಡಿ ಅಭಿಯಾನ ಆರಂಭಿಸುತ್ತೇವೆ, ಆ ವೇಳೆಗೆ ನಮ್ಮಲ್ಲಿ ಕೊರತೆ ಇರುವ ಈ ಸಿಬ್ಬಂದಿ ನೇಮಕಾತಿ ಕಾರ್ಯ ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದರು.

ಕಾನೂನಿನಲ್ಲಿ ಅವಕಾಶಗಳಿದ್ದರೂ ರೈತರನ್ನು ದಿನನಿತ್ಯ ಕಚೇರಿಗಳಿಗೆ ಅಲೆಸಿ ಅವರಿಗೆ ಕಿರಿಕಿರಿ ಮಾಡುವುದು ಅಧಿಕಾರಿಗಳ ಕಸುಬಾಗಿ ಹೋಗಿದೆ.

ಜನಸಾಮಾನ್ಯರಿಗೆ ಕಿರಿಕಿರಿ

ಪ್ರಕರಣಗಳ ಇತ್ಯರ್ಥಪಡಿಸಲು ಎಷ್ಟೇ ಕಾನೂನುಗಳನ್ನು ಅಳವಡಿಸಿದರೂ ಅವುಗಳನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಅಧಿಕಾರಿಗಳು ಬಳಸಿಕೊಂಡು ಜನಸಾಮಾನ್ಯರಿಗೆ ಕಿರಿಕಿರಿ ಮಾಡುತ್ತಿದ್ದಾರೆ.

ಕೆಲವೆಡೆ 50 ಎಕರೆ ಪೋಡಿ ಮಾಡಿಕೊಡಿ ಎಂದರೆ 100 ಎಕರೆ ಮಾಡಿಕೊಟ್ಟಿದ್ದಾರೆ, ಬಡ ರೈತನೊಬ್ಬ ತಾನು ಮಾಡುತ್ತಿರುವ ಸಾಗುವಳಿ ಭೂಮಿಗೆ ದಾಖಲೆಗಳನ್ನು ಮಾಡಿಕೊಳ್ಳಲು ಹೊರಟರೆ ಆತನನ್ನು ಅಲೆದಾಡಿಸುತ್ತಿದ್ದಾರೆ.

ಇದಕ್ಕೆಲ್ಲಾ ಇತಿಶ್ರೀ ಹಾಡುವ ಉದ್ದೇಶದಿಂದಲೇ ಪೋಡಿ ಅಭಿಯಾನ ಆರಂಭಿಸಿದ್ದೇವೆ, ಈ ಸಂದರ್ಭದಲ್ಲಿ ಇಲಾಖಾ ನೌಕರರು ಮತ್ತು ಅಧಿಕಾರಿಗಳು ಕಾನೂನಿನ ಚೌಕಟ್ಟನಡಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು, ಇಲ್ಲದಿದ್ದರೆ ನಾವು ನಿಮ್ಮ ಮೇಲೆ ಕಠಿಣ ಕ್ರಮ ಜರುಗಿಸಬೇಕಾದೀತು ಎಂದು ಎಚ್ಚರಿಸಿದ್ದೇನೆ ಎಂದರು.

ಜನ ಮತ್ತು ವನ್ಯಜೀವಿಗಳ ಸುರಕ್ಷತೆ ಖಾತ್ರಿಗೆ ಹಲವು ಕ್ರಮ
80 ಸಾವಿರ ಎಕರೆ ಬೆಳೆ ನಾಶ

ಕಳೆದ ವರ್ಷಗಳಿಗೆ ಹೋಲಿಕೆ ಮಾಡಿದರೆ, ಈ ವರ್ಷ ರಾಜ್ಯದ ಎಲ್ಲಾ ಭಾಗದಲ್ಲೂ ವಾಡಿಕೆಗಿಂತ ಶೇಕಡ 20ರಷ್ಟು ಮಳೆ ಹೆಚ್ಚಾಗಿದ್ದು, 80 ಸಾವಿರ ಎಕರೆ ಭೂಮಿಯಲ್ಲಿ ಬೆಳೆ ನಾಶವಾಗಿದೆ.

ಮುಂಜಾಗ್ರತಾ ಕ್ರಮದಿಂದಾಗಿ ಬೆಳೆ ನಷ್ಟ ಕಡಿಮೆಯಾಗಿದೆ, ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ಭರ್ತಿಯಾಗಿರುವುದರಿಂದ ಈ ಬಾರಿ ಕೃಷಿ ಉತ್ಪಾದನೆಯಲ್ಲಿ ದಾಖಲೆ ನಿರ್ಮಿಸುವ ಲಕ್ಷಣಗಳಿವೆ.

ಬೆಳೆ ಹಾನಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ.

ಬೆಳೆ ಪರಿಹಾರ ನೀಡಲು ಸೂಚನೆ

ಎಲ್ಲಿ ಬೆಳೆ ನಷ್ಟವಾಗಿದೆ ಎಂಬುದನ್ನು ಪೋರ್ಟೆಲ್‌ನಲ್ಲಿ ಮಾಹಿತಿ ಅಪ್‌ಲೋಡ್ ಮಾಡಿ, ಅರ್ಜಿ ಪಡೆದು ಬೆಳೆ ನಷ್ಟ ಪರಿಹಾರ ನೀಡುವಂತೆ ಸೂಚಿಸಿದ್ದೇವೆ.

ನಮ್ಮಲ್ಲಿ ಸಾಕಷ್ಟು ಹಣವಿದೆ, ಇದನ್ನೇ ಬೆಳೆ ಕಳೆದುಕೊಂಡ ರೈತರಿಗೆ ವಿತರಿಸಿ ಎಂದು ಹೇಳಿದ್ದೇನೆ.

ಮಳೆಯಿಂದ ಇದುವರೆಗೂ 58 ಮಂದಿ ಅಸುನೀಗಿದ್ದಾರೆ, ಅವರ ಕುಟುಂಬಗಳಿಗೂ ಪರಿಹಾರ ನೀಡುವಂತೆ ಸೂಚಿಸಲಾಗಿದೆ.

ಅಣೆಕಟ್ಟುಗಳ ಸ್ಥಿತಿಗತಿ ಪರಿಶೀಲಿನೆಗೆ ತಜ್ಞರ ಸಮಿತಿ
ಭಾಗಶಃ ಮನೆ ಹಾನಿಗೆ ಲಕ್ಷ ರೂ. ಪರಿಹಾರ

ಭಾಗಶಃ ಮನೆ ಕಳೆದುಕೊಂಡವರಿಗೆ ಒಂದು ಲಕ್ಷ ರೂ. ಪರಿಹಾರ ನೀಡಲಾಗುವುದು, ಸಂಪೂರ್ಣ ಮನೆ ಹಾನಿಗೆ ಸರ್ಕಾರವೇ ಮನೆ ಕಟ್ಟಿಸಿಕೊಡಲಿದೆ.

ಆಗಸ್ಟ್ 15ರ ನಂತರ ಮುಂಗಾರು ಮತ್ತಷ್ಟು ಚುರುಕುಗೊಂಡು ಭಾರೀ ಮಳೆ ಆಗುವ ಸಾಧ್ಯತೆ ಇದ್ದು, ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಶಿಥಿಲ ಮನೆಗಳಲ್ಲಿ ವಾಸವಿರುವವರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸುವಂತೆ ಮತ್ತು ನದಿ ಪಾತ್ರದ ಜನರ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡುವಂತೆ ಸೂಚಿಸಲಾಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
1786 jobs will be filledlands podiminister krishna byregowdaofficers meet
0 FacebookTwitterPinterestEmail
admin

previous post
ಜನ ಮತ್ತು ವನ್ಯಜೀವಿಗಳ ಸುರಕ್ಷತೆ ಖಾತ್ರಿಗೆ ಹಲವು ಕ್ರಮ
next post
ಸ್ವಾತಂತ್ರ್ಯ ಸಂಗ್ರಾಮದ ಜಾಗೃತಿಗಾಗಿ ‘ಹರ್ ಘರ್ ತಿರಂಗ’

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ