Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯಗೆ ಕೊನೆಗೂ ಪ್ರಾಸಿಕ್ಯೂಷನ್ ಉರುಳು !

by KM Shivaraju August 17, 2024
written by KM Shivaraju August 17, 2024 0 comments 2 minutes read
0FacebookTwitterPinterestEmail
406

ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬಿಡಿ ನಿವೇಶನಗಳ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ.

ನಿನ್ನೆ ರಾತ್ರಿಯೇ ಇದರ ಸುಳಿವರಿತ ಮುಖ್ಯಮಂತ್ರಿ ಅವರು, ಕಾನೂನು ತಜ್ಞರೊಂದಿಗೆ ಮುಂಜಾನೆವರೆಗೂ ಸಮಾಲೋಚನೆ ನಡೆಸಿ, ಅವರುಗಳ ಸಲಹೆಯಂತೆ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲು ಏರಲು ತೀರ್ಮಾನಿಸಿದ್ದಾರೆ.

ಭ್ರಷ್ಟಾಚಾರ ಆರೋಪ ಹಗರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಆಡಳಿತ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿತ್ತು.

ಎರಡನೇ ಮುಖ್ಯಮಂತ್ರಿ

ಕರ್ನಾಟಕ ಸರ್ಕಾರದ ಇತಿಹಾಸದಲ್ಲಿ ಬಿ.ಎಸ್.ಯಡಿಯೂರಪ್ಪ ನಂತರ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ ಎದುರಿಸಿದ ಎರಡನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಿದ್ದಾರೆ.

78ನೇ ಸ್ವಾತಂತ್ರ್ಯ ದಿನಾಚರಣೆಗೆ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ ಮರುದಿನವೇ ರಾಜ್ಯಪಾಲರು, ಮುಡಾ ಹಗರಣ ಸಂಬಂಧ ಬಂದಿದ್ದ ದೂರಿನ ಕಡತಕ್ಕೆ ಸಹಿ ಹಾಕಿ ಪ್ರಾಸಿಕ್ಯೂಷನ್‌ಗೆ ಹಸಿರು ನಿಶಾನೆ ನೀಡಿದ್ದಾರೆ.

ರಾಜ್ಯಪಾಲರ ಆದೇಶ ರವಾನೆ

ರಾಜ್ಯಪಾಲರ ಆದೇಶದ ಪ್ರತಿಯನ್ನು ಅವರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್, ಇಂದು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ರವಾನಿಸಿದ್ದಾರೆ.

ಮುಡಾ ವತಿಯಿಂದ ತಮ್ಮ ಪತ್ನಿ ಹೆಸರಿನಲ್ಲಿ 14 ಬದಲಿ ನಿವೇಶನಗಳನ್ನು ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ ಪಡೆದಿರುವ ಬಗ್ಗೆ ಫಿರ‍್ಯಾದುದಾರರು ಸಲ್ಲಿಸಿರುವ ದಾಖಲೆಗಳಿಂದ ಆರೋಪ ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ದಾವೆಗೆ ಅನುಮತಿ ನೀಡಿರುವುದಾಗಿ ರಾಜ್ಯಪಾಲರು ಸರ್ಕಾರಕ್ಕೆ ಕಳುಹಿಸಿರುವ ಆರು ಪುಟಗಳ ಪತ್ರದಲ್ಲಿ ತಿಳಿಸಿದ್ದಾರೆ.

ದೂರುದಾರರಾದ ಪ್ರದೀಪ್ ಕುಮಾರ್ ಎಸ್.ಪಿ., ಟಿ.ಜೆ.ಅಬ್ರಹಾಂ ಹಾಗೂ ಮೈಸೂರಿನ ಸ್ನೇಹಮಯಿ ಕೃಷ್ಣ ಅವರು, ಮುಡಾದ ವತಿಯಿಂದ ಮುಖ್ಯಮಂತ್ರಿ ಅವರು ತಮ್ಮ ಕುಟುಂಬಕ್ಕೆ 14 ನಿವೇಶನಗಳನ್ನು ಪಡೆದು ಅಧಿಕಾರ ದುರುಪಯೋಗ ಮಾಡಿಕೊಂಡು ರಾಜ್ಯ ಬೊಕ್ಕಸಕ್ಕೆ ದೊಡ್ಡ ಪ್ರಮಾಣದಲ್ಲಿ ನಷ್ಟ ಉಂಟು ಮಾಡಿದ್ದಾರೆ ಎಂದು ಪ್ರತ್ಯೇಕ ದೂರುಗಳು ಸಲ್ಲಿಕೆಯಾಗಿದ್ದವು.

ಜನರ ಋಣ ತೀರಿಸಿ, ಸ್ವಾಸ್ಥ್ಯ ಸಮಾಜ ರೂಪಿಸೋಣ
ಭ್ರಷ್ಟಾಚಾರ ಆರೋಪ ಮೊಕದ್ದಮೆ

ದೂರಿನ ಜೊತೆಗೆ ಪೂರಕ ದಾಖಲೆಗಳನ್ನೂ ಸಲ್ಲಿಸಿದ್ದರು. ಇವೆಲ್ಲವನ್ನೂ ಕೂಲಂಕಷವಾಗಿ ಪರಿಶೀಲಿಸಿ, ಭ್ರಷ್ಟಾಚಾರ ನಿಯಂತ್ರಣ ಕಾಯಿದೆ 1988ರ ಸೆಕ್ಷನ್ 17ಎ ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023ರ ಸೆಕ್ಷನ್ 218ರಡಿ ಮೊಕದ್ದಮೆ ದಾಖಲಿಸಲು ಅನುಮತಿ ನೀಡಿರುವುದಾಗಿ ಮುಖ್ಯಕಾರ್ಯದರ್ಶಿ ಅವರಿಗೆ ಬರೆದಿರುವ ಪತ್ರದಲ್ಲಿ ಸ್ಪಷ್ಟಪಡಿಸಲಾಗಿದೆ.

ಹಗರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿ ದೂರು ನೀಡಿದ ನಂತರ ಹಾಗೂ ಪೂರಕ ದಾಖಲೆಗಳನ್ನು ಪರಿಶೀಲಿಸಿದ ರಾಜ್ಯಪಾಲರು, ಜೂನ್ 27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯಕಾರ್ಯದರ್ಶಿ ಮೂಲಕ ಶೋಕಾಸ್ ನೋಟಿಸ್ ನೀಡಿದ್ದರು.

ಈ ನೋಟಿಸ್‌ಗೆ ಮುಖ್ಯಮಂತ್ರಿ ಅವರು, 70 ಪುಟಗಳ ಸವಿಸ್ತಾರವಾದ ಉತ್ತರವನ್ನು ರಾಜ್ಯಪಾಲರಿಗೆ ನೀಡಿ, ಸದರಿ ಪ್ರಕರಣದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ, ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಮನವಿ ಮಾಡಿದ್ದರು.

ಸಂಪುಟ ಸಭೆ ನಿರ್ಣಯ

ಪತ್ರ ಬರೆಯುವುದಕ್ಕೂ ಮುನ್ನ ಪಕ್ಷದ ವರಿಷ್ಠರು ಹಾಗೂ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ, ಅವರ ಸಲಹೆಯಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಸಿ, ರಾಜ್ಯಪಾಲರ ಪತ್ರದ ಬಗ್ಗೆ ಸವಿಸ್ತಾರ ಚರ್ಚೆ ನಡೆಸಿ, ಮುಖ್ಯಮಂತ್ರಿ ಅವರಿಗೆ ನೀಡಿರುವ ಶೋಕಾಸ್ ನೋಟಿಸ್ ಅನ್ನು ಹಿಂದಕ್ಕೆ ಪಡೆಯುವ ನಿರ್ಣಯ ತೆಗೆದುಕೊಳ್ಳಲಾಗಿತ್ತು.

ಸಂಪುಟದ ನಿರ್ಣಯವನ್ನು ಅಂದಿನ ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ರಾಜಭವನಕ್ಕೆ ರವಾನಿಸಿದ್ದರು.

ಇದರ ನಡುವೆಯೇ ಮುಖ್ಯಮಂತ್ರಿ ಅವರು, ಬಿಜೆಪಿ ಆಡಳಿತದಲ್ಲಿ ಕೆಲವು ಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಕ್ರಮ ಜರುಗಿಸಲು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜಭವನಕ್ಕೆ ಬಂದ ದೂರುಗಳ ಬಗ್ಗೆ ಏನು ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದ್ದರು.

ಸುದೀರ್ಘ ಸಮಾಲೋಚನೆ

ಮುಖ್ಯಮಂತ್ರಿ ಹಾಗೂ ಸರ್ಕಾರದ ಪತ್ರಗಳು ರಾಜಭವನಕ್ಕೆ ತಲುಪಿದ ನಂತರ ರಾಜ್ಯಪಾಲರು, ಕಾನೂನು ತಜ್ಞರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ್ದಲ್ಲದೆ, ದೂರುದಾರರನ್ನೂ ಕರೆಸಿಕೊಂಡು ಹೆಚ್ಚಿನ ವಿವರಣೆ ಪಡೆದಿದ್ದರು.

ಈ ಎಲ್ಲಾ ಬೆಳವಣಿಗೆಯ 20 ದಿನಗಳ ನಂತರ ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
governor permitsletter to chief secretaryprosecution against cm siddaramaiah
0 FacebookTwitterPinterestEmail
KM Shivaraju

previous post
ಜನರ ಋಣ ತೀರಿಸಿ, ಸ್ವಾಸ್ಥ್ಯ ಸಮಾಜ ರೂಪಿಸೋಣ
next post
ಪ್ರಾಸಿಕ್ಯೂಷನ್ ಷಡ್ಯಂತ್ರ, ರಾಜೀನಾಮೆ ನೀಡುವುದಿಲ್ಲ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ