Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಎಚ್.ಡಿ.ಕೆ, ಜೊಲ್ಲೆ, ನಿರಾಣಿ, ರೆಡ್ಡಿ ವಿರುದ್ಧ ತನಿಖೆ ಆದೇಶಕ್ಕೆ ಆಗ್ರಹ

by KM Shivaraju August 22, 2024
written by KM Shivaraju August 22, 2024 0 comments 2 minutes read
0FacebookTwitterPinterestEmail
265

ಸಂಪುಟ ಸಭೆಯಲ್ಲಿ ರಾಜ್ಯಪಾಲರ ಅನುಮತಿ ಕೋರುವ ನಿರ್ಣಯ

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜರ್ನಾದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರನ್ನು ಕೋರಿ ರಾಜ್ಯ ಸಚಿವ ಸಂಪುಟ ಇಂದಿಲ್ಲಿ ಮಹತ್ವದ ನಿರ್ಣಯ ಕೈಗೊಂಡಿದೆ.

ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ.ಪಾಟೀಲ್, ಇವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯಿದೆಯಡಿ ತನಿಖಾ ಸಂಸ್ಥೆಗಳು ಆರೋಪ ಪಟ್ಟಿ ಸಹಿತ ಸಲ್ಲಿಸಿರುವ ಅರ್ಜಿಗಳಿಗೆ ತನಿಖೆಗೆ ಆದೇಶ ನೀಡಿ ಎಂಬ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎಂದರು.

ಸಾರ್ವಜನಿಕರ ದೃಷ್ಟಿಯಲ್ಲಿ ರಾಜ್ಯಪಾಲರ ಕಚೇರಿ ತಪ್ಪು ಮಾಡಬಾರದೆಂಬ ಉದ್ದೇಶದಿಂದ ಸಂವಿಧಾನ ವಿಧಿ ೧೬೩ರಡಿ ಸಂಪುಟಕ್ಕೆ ಇರುವ ಅಧಿಕಾರವನ್ನು ಬಳಕೆ ಮಾಡಿಕೊಂಡು ಸಲಹೆ ಮಾಡುವ ನಿರ್ಣಯ ಕೈಗೊಂಡಿದ್ದೇವೆ.

ರಾಜ್ಯಪಾಲರನ್ನು ದಲಿತ ಗುರಾಣಿಯಾಗಿ ಬಿಜೆಪಿ ಬಳಕೆ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ವ್ಯಕ್ತಿ ನೀಡಿದ ದೂರನ್ನು ಆಧಾರವಾಗಿ ಇಟ್ಟುಕೊಂಡು ನೀವು ತನಿಖೆಗೆ ಆದೇಶ ಮಾಡಿದ್ದೀರಿ.

ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿಮ್ಮ ಮುಂದೆ ಅನೇಕ ಪ್ರಕರಣಗಳಿವೆ ಅದರಲ್ಲಿ ಈ ನಾಲ್ವರ ವಿರುದ್ಧ ತನಿಖಾ ಸಂಸ್ಥೆಗಳು ತನಿಖೆ ನಡೆಸಿ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ನಿಮ್ಮ ಉತ್ತರಕ್ಕೆ ಕಾಯುತ್ತಿವೆ.

ತನಿಖೆ ನಡೆಸಲು ಅನುಮತಿ ನೀಡಬೇಕೆಂಬ ಸಲಹೆ

ಸಿದ್ದರಾಮಯ್ಯ ಅವರ ವಿಷಯದಲ್ಲಿ ರಾಜಭವನ ತೆಗೆದುಕೊಂಡ ತರಾತುರಿ ಇವರುಗಳ ಬಗ್ಗೆ ಏಕೆ ಇಲ್ಲ ಎಂದು ಸಭೆ ಪ್ರಶ್ನೆ ಮಾಡಿರುವುದಲ್ಲದೆ, ಸಾರ್ವಜನಿಕ ಹಿತದೃಷ್ಟಿಯಿಂದ ಈ ನಾಲ್ಕೂ ಪ್ರಕರಣಗಳಲ್ಲಿ ತನಿಖೆ ನಡೆಸಲು ಅನುಮತಿ ನೀಡಬೇಕು ಎಂದು ಸಲಹೆ ಮಾಡುತ್ತೇವೆ.

197, 17ಎಅಡಿ ಕೆಲವು ಕೇಸ್ ಬಾಕಿ ಇವೆ, ಅದರಲ್ಲಿ ವಿಶೇಷವಾಗಿ ಶಶಿಕಲಾ ಜೊಲ್ಲೆಗೆ ಸಂಬಂಧಿಸಿದ ಅರ್ಜಿ 9/12/2021 ರಿಂದ ಇದೆ. ಮುರುಗೇಶ್ ನಿರಾಣಿ ಅವರಿಗೆ ಸಂಬಂಧಿಸಿ ಅರ್ಜಿ 26/02 24ರಿಂದ ಇದೆ. 21/11/2023ರಿಂದ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಹಾಗೂ ಜನಾರ್ದನ ರೆಡ್ಡಿ ವಿರುದ್ಧದ ಅರ್ಜಿಗಳು ಬಾಕಿ ಇವೆ.

ಲೋಕಾಯುಕ್ತ ಮತ್ತು ಎಸ್‌ಐಟಿ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿವೆ

ಅದರಲ್ಲೂ ಕುಮಾರಸ್ವಾಮಿ ಹಾಗೂ ಜನಾರ್ದನ ರೆಡ್ಡಿ ವಿರುದ್ಧ ಲೋಕಾಯುಕ್ತ ಮತ್ತು ಎಸ್‌ಐಟಿ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿವೆ.

ಕುಮಾರಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಭವನ 2024ರ ಜುಲೈ 29ರಂದು ಸ್ಪಷ್ಟೀಕರಣ ಕೇಳಿರುವ ಪತ್ರ ಎಸ್‌ಐಟಿಗೆ ಆಗಸ್ಟ್ 8ರಂದು ತಲುಪಿದೆ.

ರಾಜಭವನದ ಪತ್ರಕ್ಕೆ ಎಸ್‌ಐಟಿ ಆಗಸ್ಟ್ 16 ರಂದು ಸ್ಪಷ್ಟೀಕರಣ ನೀಡಿದ್ದಾರೆ. ಅದರ ನಂತರವೂ ನೀವು ಯಾವುದೇ ತೀರ್ಮಾನ ಕೈಗೊಂಡಿಲ್ಲ.

ಉಪಕಾರ ಸ್ಮರಣೆಯೇ ಇಲ್ಲದ ನಾಗರಿಕರು

ಸಾರ್ವಜನಿಕರ ಮನೋಭಾವನೆ ಅರ್ಥ ಮಾಡಿಕೊಂಡಿರುವ ಸಂಪುಟ, ತನಗಿರುವ ಅಧಿಕಾರ ಬಳಕೆ ಮಾಡಿ, ಈ ನಾಲ್ಕೂ ವಿಶೇಷ ಪ್ರಕರಣಗಳನ್ನು ಪ್ರಾಸಿಕ್ಯೂಷನ್‌ಗೆ ನೀಡುವಂತೆ ಸಂಪುಟ ಸಲಹೆ ಮಾಡಿದೆ.

ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ಗೆ ನೋಟಿಸ್ ನೀಡಿದ ನಂತರ ಆಗಸ್ಟ್ 1ರಂದು ಮಂತ್ರಿ ಪರಿಷತ್ ಸಭೆ ತೆಗೆದುಕೊಂಡ ಖಂಡನಾ ನಿರ್ಣಯಕ್ಕೆ ಇಂದಿನ ಸಭೆ ಘಟನೋತ್ತರ ಅನುಮೋದನೆ ನೀಡಿದೆ ಎಂದು ತಿಳಿಸಿದರು.

ವಿವಾದಾತ್ಮಕವಾಗಿದ್ದ ಜೆಎಸ್‌ಡಬ್ಲ್ಯೂ ಸ್ಟೀಲ್ ಕಂಪನಿಗೆ ಸಂಡೂರು ತಾಲ್ಲೂಕಿನಲ್ಲಿ 3,666 ಎಕರೆ ಭೂಮಿಗೆ ಶುದ್ಧ ಕ್ರಯಪತ್ರ ನೀಡುವ ನಿರ್ಧಾರ ಸಭೆ ಕೈಗೊಂಡಿತೆಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಹೆಬ್ಬಾಳದಿಂದ ಸಿಲ್ಕ್‌ಬೋರ್ಡ್ ವೃತ್ತದವರೆಗೂ12,690 ಕೋಟಿ ರೂ. ವೆಚ್ಚದಲ್ಲಿ ಸುರಂಗ ರಸ್ತೆ ಮಾರ್ಗಕ್ಕೆ ಸಂಪುಟ ಅನುಮೋದನೆ ನೀಡಿದೆ.

ರಾಜಧಾನಿಯಲ್ಲಿ 250 ಅಡಿ ಎತ್ತರದ ಆಕಾಶಗೋಪುರ ನಿರ್ಮಾಣಕ್ಕೆ 500 ಕೋಟಿ ರೂ. ವೆಚ್ಚ ಹಾಗೂ 52 ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಸಂಪುಟ ಅನುಮೋದನೆ ನೀಡಿದೆ ಎಂದು ಅವರು ತಿಳಿಸಿದರು.

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯಲೇಬೇಕು

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
askingformer ministersgive permissiongovernorhd kumaraswamyJarnadana ReddyMurugesh NiraniprosecutionResolutionSasikala Jollestate cabinetunion minister
0 FacebookTwitterPinterestEmail
KM Shivaraju

previous post
ರಾಜ್ಯಪಾಲರನ್ನು ದಲಿತ ಗುರಾಣಿಯಾಗಿ ಬಿಜೆಪಿ ಬಳಕೆ
next post
ಕಪ್ಪುಚುಕ್ಕೆ ರಿಮೂವಡ್ ಫ್ರಮ್ ವೈಟ್ನರ್

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ