Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಕಪ್ಪುಚುಕ್ಕೆ ರಿಮೂವಡ್ ಫ್ರಮ್ ವೈಟ್ನರ್

by KM Shivaraju August 22, 2024
written by KM Shivaraju August 22, 2024 0 comments 2 minutes read
0FacebookTwitterPinterestEmail
354
ಬೇಲಿಕೇರಿಯಲ್ಲಿ ಅದಿರು ಕದ್ದ ಅಸಾಮಿಗಳ ಜತೆ ‘ಸಿದ್ಧಹಸ್ತ’ ಶಾಮೀಲು : ಹೆಚ್.ಡಿ.ಕುಮಾರಸ್ವಾಮಿ ಆರೋಪ

ಬೆಂಗಳೂರು: ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೇರ ಪ್ರಶ್ನೆ ಹಾಕಿದ್ದಾರೆ.

ತಮ್ಮ ಬಗ್ಗೆ ಎಕ್ಸ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿರುವ ಸಚಿವರು, ಕಳ್ಳನ ಜಾಗದಲ್ಲಿ ನಿಂತು ಊರಿಗೆಲ್ಲ ಗೀತೆ ಬೋಧಿಸುತ್ತಿದ್ದೀರಿ ಎಂದು ಲೇವಡಿ ಮಾಡಿದ್ದಾರೆ.

ನಿಮ್ಮ ವಿರುದ್ಧ ಬಂದ ಮೂಡಾ ಕೊಚ್ಚೆಯ ಗಮನ ಬೇರೆಡೆಗೆ ಸೆಳೆಯುವ ನಿಮ್ಮ ಹುನ್ನಾರ ನನಗೆ ಅರ್ಥವಾಗುತ್ತದೆ. ಹೇಗಾದರೂ ಅಧಿಕಾರದಲ್ಲೇ ಉಳಿದು ಲೂಟಿ ಹೊಡೆಯಬೇಕೆನ್ನುವ ನಿಮ್ಮ ಧನದಾಹದ ಹಪಾಹಪಿಯನ್ನೂ ಅರ್ಥ ಮಾಡಿಕೊಳ್ಳಬಲ್ಲೆ.

ಕಳ್ಳನ ಜಾಗದಲ್ಲಿ ನಿಂತು ಊರಿಗೆಲ್ಲ ಗೀತೆ ಬೋಧಿಸುವ ನಿಮ್ಮ ಪ್ರಾರಬ್ಧ ಎಂಥಾ ಕೀಳುಮಟ್ಟಕ್ಕೆ ಇಳಿದಿದೆ ಎನ್ನುವುದನ್ನೂ ಅರ್ಥ ಮಾಡಿಕೊಂಡಿದ್ದೇನೆ. ಎಷ್ಟೇ ಆದರೂ ನೀವು ಸಕಲ ಕಲೆಗಳ ಸಿದ್ದಕರ್ಮಿ. ಇಂಥ ಗಲೀಜು ಕೆಲಸ ನಿಮಗೆ ಬೆಣ್ಣೆಯಿಂದ ಬಂದ ವಿದ್ಯೆ! ಎಂದು ಅವರು ಕಿಡಿಕಾರಿದ್ದಾರೆ.flowers

ಸಾಯಿ ವೆಂಕಟೇಶ್ವರ ಕಂಪನಿಗೆ 550 ಎಕರೆ ಮಂಜೂರು ಮಾಡಿದ್ದೇನೆ ಎಂದು ಬೊಗಳೆ ಬಿಟ್ಟಿದ್ದೀರಿ. ನನ್ನ ಬರವಣಿಗೆ ಪೋರ್ಜರಿ ಆಗಿದೆ. ಪತ್ರಿಕೆಗಳ ವರದಿಗೆ ನಾನು ಉತ್ತರ ಕೊಡುತ್ತೇನೆ. ಪಲಾಯನ ನನ್ನ ಜಾಯಮಾನವಲ್ಲ.

ಎಚ್.ಡಿ.ಕೆ, ಜೊಲ್ಲೆ, ನಿರಾಣಿ, ರೆಡ್ಡಿ ವಿರುದ್ಧ ತನಿಖೆ ಆದೇಶಕ್ಕೆ ಆಗ್ರಹ

ಆದರೆ, ಆ ವರದಿಯನ್ನೇ ನೆತ್ತಿ ಮೇಲಿಟ್ಟುಕೊಂಡು ಉಪ್ಪಿನಕಾಯಿ ಚಪ್ಪರಿಸುವ ದೈನೇಸಿ ಸ್ಥಿತಿ ನಿಮಗೇಕೆ? 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ? ಎಂದಿರುವ ಸಚಿವರು, Kappu chukke removed from whitenerಎಂದು ಕುಟುಕಿದ್ದಾರೆ.

ಮೂಡದಲ್ಲಿ ನೀವು, ನಿಮ್ಮ ಸಕುಟುಂಬ ಪರಿವಾರ ಸರ್ಕಾರಿ ಭೂಮಿಯನ್ನು ಹೇಗೆಲ್ಲಾ ಮುಕ್ಕಿತು ಎನ್ನುವುದಕ್ಕೆ ದಂಡಿದಂಡಿ ದಾಖಲೆಗಳೇ ಇವೆ. ನಿಮ್ಮ ಪಟಾಲಂ ಹೆಲಿಕಾಪ್ಟರ್ ನಲ್ಲಿ ಕದ್ದು ಸಾಗಿಸಿದ ದಾಖಲೆಗಳು ಸುಳ್ಳಾ? ಕಪ್ಪುಚುಕ್ಕೆಯನ್ನು ನಿಮ್ಮ ವೈಟ್ನರ್ ಅಳಿಸೀತಾ ಸಿದ್ದರಾಮಯ್ಯನವರೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ನನ್ನ ಸಹಿ ಇಲ್ಲ, ಟಿಪ್ಪಣಿಯೂ ಇಲ್ಲ ಅಂತೀರಿ. ಅಪ್ಪಣೆಯನ್ನಷ್ಟೇ ಕೊಟ್ಟಿದ್ದೀರಿ! 14 ಸೈಟಿಗೆ 62 ಕೋಟಿ ರೂ. ಪರಿಹಾರ ಕೇಳಲು ಹೇಳಿದ್ದು ಯಾವ ಟಿಪ್ಪಣಿ? ನಿಮ್ಮದು ನಾಲಿಗೆಯೋ.. ಇನ್ನೇನೋ.. ಆಚಾರವಿಲ್ಲದ ನಾಲಿಗೆ ನನ್ನ ತಟ್ಟೆಯತ್ತ ಚಾಚಿದೆ ಸತ್ತ ಜೀವದ ರುಚಿ ನೆಕ್ಕಲು ಎಂದು ಅವರು ಟೀಕಿಸಿದ್ದಾರೆ.

ಸಿದ್ದರಾಮಯ್ಯನವರೇ, ನಾನು ಕಾನೂನು ಪಂಡಿತ, ವಕೀಲ ಎನ್ನುತ್ತೀರಿ. 2011ರಲ್ಲಿ ಸುಪ್ರೀಂ ಕೋರ್ಟ್ ಎಸ್ಐಟಿಗೆ ಕೊಟ್ಟ ಆದೇಶವೇನು? ಎಂದು ನಿಮಗೆ ಗೊತ್ತಿಲ್ಲವೇ? ನಾನು ವಕೀಲ. ನಾನು ವಕೀಲ.. ಎಂದು ಪದೇಪದೆ ಹೇಳಬೇಡಿ ಎಂದು ಹಿಂದೆಯೇ ಸಲಹೆ ಮಾಡಿದ್ದೆ. ಬುದ್ಧಿಗೇಡಿಗಳಿಗೆ ಬುದ್ಧಿವಾದ ರುಚಿಸದು ಎಂದು ಹೇಳಿದ್ದಾರೆ.

ರಾಜ್ಯಪಾಲರಿಗೆ ಎಸ್ಐಟಿ ಬರೆದ ಪತ್ರ ಇಟ್ಟುಕೊಂಡು ಹಾರಾಟ ಮಾಡುತ್ತಿದ್ದೀರಿ ನೀವು. ಪತಂಗದ ಹಾರಾಟ ನೋಡಲಿಕ್ಕೆ ಚೆಂದ. ಕೆಳಗಿರುವ ಬೆಂಕಿಜ್ವಾಲೆ ಅದಕ್ಕೆ ಅರಿವಿರುವುದಿಲ್ಲ. ನಿಮ್ಮ ಬಗ್ಗೆ ನನಗೆ ಕನಿಕರವಿದೆ. ನಿಮ್ಮ ಆನಂದ ತಾತ್ಕಾಲಿಕ ಸಿದ್ದರಾಮಯ್ಯನವರೇ.
ಎಂದು ಕೇಂದ್ರ ಸಚಿವರು ಪ್ರಶ್ನೆ ಮಾಡಿದ್ದಾರೆ.

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯಲೇಬೇಕು

ಸುತ್ತಲೂ ಪಟಾಲಂ ಕಟ್ಟಿಕೊಂಡು, ಹೈಕಮಾಂಡ್ ಅನ್ನೇ ಕಾಲಕಸ ಮಾಡಿಕೊಂಡು, ನಂಬಿ ಕೈಹಿಡಿದವರ ಬೆನ್ನಿಗೆ ಚೂರಿ ಹಾಕಿ ಕುರ್ಚಿಗಾಗಿ ಪಾಲಿಟಿಕ್ಸ್ ಮಾಡುವ ನಿಮ್ಮ ದಿಕ್ಕೆಟ್ಟ ದುಸ್ಥಿತಿ ನನಗಿಲ್ಲ ಸಿದ್ದರಾಮಯ್ಯನವರೇ.

ನನ್ನ ರಾಜಕಾರಣ ನಿಮ್ಮಂತೆಯೇ ಹಣಕ್ಕೆ, ಅಧಿಕಾರಕ್ಕೆ ಅಲ್ಲ. ಅಧಿಕಾರ ಇದ್ದರೂ, ಇಲ್ಲದಿದ್ದರೂ ನಾನು ನಾನೇ. ‘ಸೋತರೆ ಸೋಲಬೇಕು ಬಾಹುಬಲಿಯಂತೆ.’ ಆ ಮಹಾನ್ ವಿರಾಗಿಯೇ ನನ್ನ ಆದರ್ಶ. 20 ತಿಂಗಳ ಅಧಿಕಾರ,14 ತಿಂಗಳ ಸರ್ಕಾರ ತ್ಯಜಿಸುವಾಗಲೂ ನಾನು ನಿರ್ಭಾವುಕ. ಇದು ನಿಮಗೆ ಸಾಧ್ಯವೇ? ಎಂದು ಕುಮಾರಸ್ವಾಮಿ ಅವರು ಕೇಳಿದ್ದಾರೆ.

ಪ್ರಧಾನಮಂತ್ರಿಗಳ ರಕ್ಷಣೆ ಪಡೆದುಕೊಳ್ಳುವ, ಅವರ ಗೌರವಕ್ಕೆ ಧಕ್ಕೆ ತರುವ ಕೆಲಸ ನಾನೆಂದೂ ಮಾಡಲಾರೆ. ನನ್ನನ್ನು ನಾನು ರಕ್ಷಣೆ ಮಾಡಿಕೊಳ್ಳುವುದೂ ಗೊತ್ತು. ನಿಮ್ಮ ದುಷ್ಟತನದ ಭಕ್ಷಣೆಯೂ ಗೊತ್ತು.

ನನ್ನ ಪುರಾಣ ಕಂತುಗಳಲ್ಲಿ ಬರುತ್ತದೆ ಎನ್ನುವ ಸಿದ್ದರಾಮಯ್ಯನವರೇ; ನಿಮ್ಮ ಹೆಣೆಬರಹ ನಿರ್ಧರಿಸುವ ನೂರಾರು ಪುರಾಣಗಳು ನನ್ನಲ್ಲಿವೆ. ಸಾವಿರಾರು ಚಾಪ್ಟರುಗಳ ಪ್ಯಾನ್ ಇಂಡಿಯಾ ಸಿನಿಮಾವನ್ನೇ ಮಾಡಬಹುದು ಎಂದು ಸಿದ್ದರಾಮಯ್ಯ ಅವರಿಗೆ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಬೇಲಿಕೇರಿಯಲ್ಲಿ ಅದಿರು ಕದ್ದ ಅಸಾಮಿಗಳ ಜತೆ ನಿಮ್ಮ ‘ಸಿದ್ಧಹಸ್ತ’ ಶಾಮೀಲಾಗಿರುವ ಗಣಿಪುರಾಣ ಬಿಚ್ಚಿದರೆ ನಿಮ್ಮ ಮನೆಯ ಮುಂದೆ ಕಾನ್ಸ್ ಟೇಬಲ್ ಗಳು ಸಾಲುಗಟ್ಟಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ರಾಜ್ಯಪಾಲರನ್ನು ದಲಿತ ಗುರಾಣಿಯಾಗಿ ಬಿಜೆಪಿ ಬಳಕೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
BelikeriBlack spotHdinvolvedkumaraswamyremovedSiddhahastastole orewhitener
0 FacebookTwitterPinterestEmail
KM Shivaraju

previous post
ಎಚ್.ಡಿ.ಕೆ, ಜೊಲ್ಲೆ, ನಿರಾಣಿ, ರೆಡ್ಡಿ ವಿರುದ್ಧ ತನಿಖೆ ಆದೇಶಕ್ಕೆ ಆಗ್ರಹ
next post
ಸಿಎಂ-ಡಿಸಿಎಂಗೆ ದೆಹಲಿಗೆ ಬುಲಾವ್

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ