Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಸಿಎಂ ಸಿದ್ದರಾಮಯ್ಯ ಅವರಿಗೆ 2 ದಿನ ರಿಲೀಫ್

by KM Shivaraju August 29, 2024
written by KM Shivaraju August 29, 2024 0 comments 2 minutes read
0FacebookTwitterPinterestEmail
222

ವಿಚಾರಣೆ ಆಗಸ್ಟ್ 31 ಕ್ಕೆ ಮುಂದೂಡಿದ ರಾಜ್ಯ ಹೈಕೋರ್ಟ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬಿಡಿ ನಿವೇಶನ ಹಂಚಿಕೆ ಪ್ರಕರಣದ ವಿಚಾರಣೆಯನ್ನುರಾಜ್ಯ ಹೈಕೋರ್ಟ್ ಆಗಸ್ಟ್ 31 ಕ್ಕೆ ಮುಂದೂಡಿದೆ. 

ಮುಂದುವರೆದ ವಿಚಾರಣೆ ಕೈಗೆತ್ತಿಕೊಂಡ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ವಿಚಾರಣೆಯನ್ನು ಮುಂದೂಡಿದಲ್ಲದೆ ಅಲ್ಲಿಯವರೆವಿಗೂ ಜನಪ್ರತಿನಿಧಿಗಳ ನ್ಯಾಯಾಲಯವು ಅಲ್ಲಿಯವರೆಗೂ ವಿಚಾರಣೆ ಕೈಗೆತ್ತಿಕೊಳ್ಳುವಂತಿಲ್ಲ ಎಂದು ಆದೇಶ ಮಾಡಿದ್ದಾರೆ. 

ನ್ಯಾಯಾಲಯದ ಆದೇಶದಿಂದ ಮುಖ್ಯಮಂತ್ರಿ ಅವರಿಗೆ ಮತ್ತೆ 2 ದಿನಗಳ ಕಾಲ ತಾತ್ಕಾಲಿಕ ರಿಲೀಪ್ ದೊರೆತಿದೆ.

ದರ್ಶನ್  ಬಳ್ಳಾರಿ ಜೈಲಿಗೆ ಸ್ಥಳಾಂತರ

ವಿಚಾರಣೆ ಆರಂಭವಾಗುತ್ತಿದ್ದಂತೆ ಸಿದ್ದರಾಮಯ್ಯ ಅವರ ಪರವಾಗಿ ಸುದೀರ್ಘ ವಾದ ಮಂಡಿಸಿದ ಸುಪ್ರೀಂಕೋರ್ಟ್ನ ಹಿರಿಯ ನ್ಯಾಯವಾದಿ ಅಭಿಷೇಕ್ ಮುನುಸಿಂಘ್ವಿ ಅವರು ಮುಖ್ಯಮಂತ್ರಿಯವರು ತಮ್ಮ ಅಧಿಕಾರವನ್ನು ದುರುಪಯೋಗಮಾಡಿಕೊಂಡಿಲ್ಲ. 

ರಾಜ್ಯಪಾಲರು ಯಾವ ಆಧಾರದ ಮೇಲೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೋ ತಿಳಿಯದು ಇದರಲ್ಲಿ ಯಾವುದೇ ಹಗರಣ ನಡೆದಿಲ್ಲ. ಈಗಲಾದರು ರಾಜ್ಯಪಾಲರು ತಮ್ಮ ನಿರ್ಧಾರವನ್ನು ಬದಲಿಸಿ ಪ್ರಾಸಿಕ್ಯೂಷನ್ ಗೆ ನೀಡಿರುವ ಅನುಮತಿಯನ್ನು ಹಿಂದಕ್ಕೆ ಪಡೆಯಬೇಕೆಂದು ಪೀಠಕ್ಕೆ ಮನವಿ ಮಾಡಿದರು.

ರಾಜ್ಯಪಾಲರ ಅನುಮತಿಯಿಂದ ಸಮಸ್ಯೆ ಎದುರಾಗಲಿದೆ. ಅವರು ಪ್ರಾಸಿಕ್ಯೂಷನ್ ನೀಡುವ ಮುನ್ನ ಸೂಕ್ತ ಕಾರಣಗಳನ್ನೇ ನೀಡಿಲ್ಲ.  ಕೇವಲ ನಾಲ್ಕು ಪಟಗಳ ಅನುಮತಿ ನೀಡಿ ಕೈತೊಳೆದುಕೊಂಡಿದ್ದಾರೆ ಎಂದುದ್ದಲ್ಲದೆ, ಮುಖ್ಯಮಂತ್ರಿ ಅವರ ಪತ್ನಿ ಪ್ರಾಧಿಕಾರದ ನಿವೇಶನಗಳನ್ನು ತಮ್ಮ ಪತಿಯ ಅಧಿಕಾರ ದುರ್ಬಳಕೆ ಮಾಡಿಕೊಂಡು ಪಡೆದಿಲ್ಲ. 

ಅವರ ಜಮೀನನ್ನು ಮೂಡಾ ವಶಪಡಿಸಿಕೊಂಡಿತ್ತು. ಅದಕ್ಕೆ ಪರ್ಯಾಯವಾಗಿ 14 ನಿವೇಶನ ನೀಡಿದೆ. ಇದಲ್ಲಿ ಏನು ತಪ್ಪಿಲ್ಲ ಎಂದು ಅವರು ಸಿದ್ದರಾಮಯ್ಯ ಅವರ ಪತ್ನಿಯ ಜಮೀನಿಗೆ ಸಂಬಂಧಿಸಿದಂತೆ ಪೂರ್ಣ ದಾಖಲೆಗಳನ್ನು ಪೀಠದ ಮುಂದೆ ಇಟ್ಟರು.

ಕರ್ನಾಟಕಕ್ಕೆ 80,000 ಕೋಟಿ ರೂ. ಅನುದಾನ ಕಡಿಮೆ : ಸಿಎಂ ಸಿದ್ದರಾಮಯ್ಯ

ಹಿಂದೆ ಹಲವಷ್ಟು ಡೀನೋಟಿಪಿಕೇಷನ್ ಪ್ರಕರಣಗಳಾಗಿವೆ. ಅದರಲ್ಲಿ ಯಾವುದರ ಬಗ್ಗೆಯೂ ತನಿಖೆ ಅಥವಾ ಶಿಕ್ಷೆಯಾಗಿಲ್ಲ ಎಂದರು.

ರಾಜ್ಯಪಾಲರು ಮೊದಲು ದೂರುದಾರನಿಗೆ ದಂಡಹಾಕಬೇಕು.  ದೂರುದಾರ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ಮೊದಲೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹೋಗಿದ್ದಾರೆ. 

ಲೋಕಾಯುಕ್ತ ಪೊಲೀಸರಿಗೂ ದೂರು ಕೊಟ್ಟಿದ್ದಾರೆ. ಸಮಯ ವ್ಯರ್ಥಮಾಡಿರುವ ದೂರುದಾರನಿಗೆ ಮೊದಲು ದಂಡಹಾಕಿ. ನಾನು ಲೋಕಾಯುಕ್ತ ಮತ್ತು ರಾಜ್ಯಪಾಲರನ್ನು ದೋಷಣೆಮಾಡಲ್ಲ.  ದೂರು ಕೊಟ್ಟಿದ್ದ ಇವರು ಪ್ರಾಷ್ಯಕೂಷನ್ಗೂ ಅನುಮತಿ ಕೇಳಿದ್ದಾರೆ.

ಅರ್ಜಿ ರಾಜ್ಯಪಾಲರ ಬಳಿ ಇರಬೇಕಾದರೆ ಕೆಳ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ರಾಜ್ಯಪಾಲರಿಗೆ ದಂಡ ಹಾಕುವ ಅಧಿಕಾರ ಇಲ್ಲ. ಮಾನ್ಯ ನ್ಯಾಯಮೂರ್ತಿಗಳು ದಂಡ ಹಾಕಬೇಕು ಎಂದು ಹೇಳಿದರು.

ಎರಡು ಕಡೆ ಅರ್ಜಿ ಸಲ್ಲಿಸಿದರೆ ರಾಜ್ಯಪಾಲರು ಇದನ್ನು ಪರಿಶೀಲನೆ ಮಾಡಬೇಕು. ಇಂತಹ ಪ್ರಕರಣಗಳ ಬಗ್ಗೆ ಗಂಭೀರವಾಗಿ ತೆಗುದುಕೊಳ್ಳದಿದ್ದರೆ ದಾರಿ ಹೋಕರು ಕೂಡ ಅರ್ಜಿ ಸಲ್ಲಿಸುತ್ತಾರೆ.

ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ನಿಯಮಾನುಸಾರ 5 ಎಕರೆ ಸಿ.ಎ.ನಿವೇಶನ

ಪ್ರಾಸಿಕ್ಯೂಷನ್ ಕೊಡುವಾಗ ರಾಜ್ಯಪಾಲರು ಎಲ್ಲವನ್ನು ಪರಿಶೀಲನೆ ಮಾಡಿಲ್ಲ. ಮುಖ್ಯಮಂತ್ರಿ ಅವರ ವಿರುದ್ಧ ತನಿಖೆಗೆ ಆದೇಶ ನೀಡುವ ಮೊದಲು ರಾಜಭವನಕ್ಕೆ ಬಂದ ದೂರುಗಳ ಬಗ್ಗೆ ಯಾಕೆ ಕ್ರಮಕೊಂಡಿಲ್ಲ ಪ್ರಶ್ನಿಸಿದರು.

ಆಡಳಿತದ ಅತಿ ಉನ್ನತ ಹುದ್ದೆಯಲ್ಲಿ ಇರುವವರ ಬಗ್ಗೆ ಅನುಮತಿ ನೀಡುವಾಗ ಸಾಮಾಜಿಕ ನ್ಯಾಯ ಪಾಲನೆ ಮಾಡಬೇಕಿತ್ತು. ಅದನ್ನು ರಾಜ್ಯಪಾಲರು ಮಾಡಿಲ್ಲ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಾಗ ಒಂದು ಅಂಶವನ್ನು ಮತ್ತು ಕಾನೂನಿನ ಸೂಕ್ಷ್ಮತೆಯನ್ನು ಅರಿತಿಲ್ಲ.  ಕರ್ನಾಟಕ ಸರ್ಕಾರದ ಸಂಪುಟ ಸಭೆ ತೆಗೆದುಕೊಂಡ ನಿರ್ಣಯವನ್ನು ಪಾಲಿಸಿಲ್ಲ ಎಂದರು. 

ಯಾವುದೇ ಪ್ರಕರಣ ಪ್ರಾಸಿಕ್ಯೂಷನ್ಗೆ ಕೊಡುವ ಮೊದಲು ಅದರ ಗಂಭೀರತೆಯನ್ನ ಅರಿಯಬೇಕು. ಆದರೆ ಮುಖ್ಯಮಂತ್ರಿ ಅವರ ವಿಷಯಲ್ಲಿ ರಾಜ್ಯಪಾಲರು ಇತ್ತ ಗಮನ ಹರಿಸಿಲ್ಲ.

ಈ ಹಿಂದೆ ರಾಜ್ಯಪಾಲರ ವಿರುದ್ಧ ಸಂವಿಧಾನ ಪೀಠ ಕೊಟ್ಟ ತೀರ್ಪುಗಳನ್ನು ಸಿಂಘ್ವಿ ಪೀಠದ ಗಮನಕ್ಕೆ ತಂದರು. 

ಭಾರತದ ಕೊನೆಯ ಭಾಗಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು


 

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
adjournedagainstallotment caseAugust 31Chief Ministerhearing Mysore Urban Development Authorityhigh courtkarnatakaSiddaramaiahspare landstate
0 FacebookTwitterPinterestEmail
KM Shivaraju

previous post
ದರ್ಶನ್  ಬಳ್ಳಾರಿ ಜೈಲಿಗೆ ಸ್ಥಳಾಂತರ
next post
ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಚರ್ಚೆ ನಡೆದಿಲ್ಲ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ