Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಉಪನಗರ ರೈಲು ಯೋಜನೆ ಕಾರಿಡಾರ್‌-2 & 4: 2026ಕ್ಕೆ ಪೂರ್ಣ

by KM Shivaraju September 9, 2024
written by KM Shivaraju September 9, 2024 0 comments 2 minutes read
0FacebookTwitterPinterestEmail
474
ರೈಲ್ವೆ ಸಚಿವ ವಿ.ಸೋಮಣ್ಣ, ಸಚಿವ ಎಂ.ಬಿ.ಪಾಟೀಲ ಪ್ರಗತಿ ಪರಿಶೀಲನೆ

ಬೆಂಗಳೂರು : ಚಿಕ್ಕಬಾಣಾವರ- ಬೈಯ್ಯಪ್ಪನಹಳ್ಳಿ (ಕಾರಿಡಾರ್‌-2, 25 ಕಿ.ಮೀ) ಮತ್ತು ಹೀಲಲಗಿ- ರಾಜಾನುಕುಂಟೆ (ಕಾರಿಡಾರ್‌-4, 46.88 ಕಿ.ಮೀ) ಉಪನಗರ ರೈಲ್ವೆ ಯೋಜನೆಗಳನ್ನು 2026ರ ಡಿಸೆಂಬರ್‌ ವೇಳೆಗೆ ಪೂರ್ಣಗೊಳಿಸಿ, ನಾಡಿಗೆ ಸಮರ್ಪಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಸೋಮವಾರ ಇಲ್ಲಿ ಪ್ರಕಟಿಸಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಬ್ಬರೂ ಸಚಿವರು ತಮ್ಮ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಕೆ-ರೈಡ್‌ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಕೆಲವೊಂದು ಕಡೆ ಭೂಸ್ವಾಧೀನದ ಸಮಸ್ಯೆ ಇದ್ದು, ಮೂರು ತಿಂಗಳ ಒಳಗೆ ಭೂಮಿ ಹಸ್ತಾಂತರಕ್ಕೆ ಅಧಿಕಾರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಕಾಮಗಾರಿ ವಿಳಂಬಕ್ಕೆ ಯಾವ ಸಬೂಬು ಹೇಳದೆ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಸಚಿವರಿಬ್ಬರೂ ಸೂಚಿಸಿದರು.

ಒಟ್ಟು ನಾಲ್ಕು ಕಾರಿಡಾರ್‌ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈಗ ಕಾಮಗಾರಿಗೆ ಚುರುಕು ಮುಟ್ಟಿಸಲು ಕ್ರಮ ತೆಗೆದುಕೊಂಡಿದ್ದು, ನಿಗದಿತ ಅವಧಿಯೊಳಗೇ ಈ ಎರಡೂ ಕಾರಿಡಾರ್‌ ಯೋಜನೆಗಳನ್ನು ಉದ್ಘಾಟಿಸಲಾಗುವುದು. ಇದರ ನಂತರ ಇತರ ಎರಡು ಕಾರಿಡಾರ್‌ ಯೋಜನೆಗಳ ಜಾರಿ ಸಂಬಂಧ ಚರ್ಚಿಸಲಾಗುವುದು ಎಂದರು.

ಸಮನ್ವಯ ಸಭೆಗೆ ಸೂಚನೆ:

ಬೆಂಗಳೂರು ಮೆಟ್ರೊ, ಉಪನಗರ ರೈಲು ಯೋಜನೆ ಮತ್ತು ರೈಲ್ವೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕಾಗಿದೆ. ಒಂದಕ್ಕೊಂದು ಸ್ಪರ್ಧೆವೊಡ್ಡಿಕೊಳ್ಳುವುದರ ಬದಲು, ಎಲ್ಲಿ ಯಾರ ಸೇವೆ ಇಲ್ಲವೊ ಅಲ್ಲಿ ಮತ್ತೊಬ್ಬರು ಸೇವೆ ನೀಡುವಂತಾಗಲಿ. ಈ ನಿಟ್ಟಿನಲ್ಲಿ ಬಿಬಿಎಂಪಿ ಅಧಿಕಾರಿಗಳನ್ನೂ ಸೇರಿಸಿಕೊಂಡು ಸಮನ್ವಯದ ಸಭೆಗಳನ್ನು ನಡೆಸಬೇಕು. ಪರಸ್ಪರ ಪೂರಕವಾಗಿ ಕೆಲಸ ಮಾಡುವುದರಿಂದ ಅನಗತ್ಯ ವಿಳಂಬವನ್ನು ತಡೆಯಬಹುದು ಎಂದು ಸಚಿವ ಸೋಮಣ್ಣ ಸಲಹೆ ನೀಡಿದರು.

ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆಪ್ಟೆಂಬರ್ 12ಕ್ಕೆ ಮುಂದೂಡಿಕೆ
ರೈಲ್ವೆ ಬೋಗಿಗಳ ಸಮಸ್ಯೆ:

ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ರೈಲ್ವೆ ಬೋಗಿಗಳನ್ನು ಉತ್ಪಾದಿಸಿ, ಸರಬರಾಜು ಮಾಡಲು ಕೆ-ರೈಡ್ ಟೆಂಡರ್‌ ಕರೆದಿದ್ದು, ಯಾವ ಸಂಸ್ಥೆಯೂ ಇದರಲ್ಲಿ ಭಾಗವಹಿಸಿಲ್ಲ. ಹೀಗಾಗಿ ಈ ವಿಷಯದಲ್ಲಿ ರೈಲ್ವೆಯ ನೆರವು ನೀಡಬೇಕೆನ್ನುವ ಸಚಿವ ಎಂ.ಬಿ.ಪಾಟೀಲ ಅವರ ಮನವಿಗೆ ಸ್ಪಂದಿಸಿದ ಸೋಮಣ್ಣ ಅವರು ಆದಷ್ಟು ಬೇಗ ದೆಹಲಿಯಲ್ಲಿ ಸಭೆ ಆಯೋಜಿಸಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ರೈಲ್ವೆ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಇದಕ್ಕೊಂದು ಪರಿಹಾರ ಸೂಚಿಸುವುದಾಗಿಯೂ ಹೇಳಿದರು.

2026ರ ಅಂತ್ಯದಲ್ಲಿ ಎರಡೂ ಕಾರಿಡಾರ್‌ ಕಾಮಗಾರಿ ಮುಗಿಯಲು ಯೋಜನೆ ರೂಪಿಸಿದ್ದು, ಅದಕ್ಕಿಂತ ಕನಿಷ್ಠ ಆರು ತಿಂಗಳು ಮೊದಲು ರೈಲ್ವೆ ಬೋಗಿಗಳ ಸರಬರಾಜು ಆಗಬೇಕಾಗುತ್ತದೆ. ಇಲ್ಲದಿದ್ದರೆ ಆ ವೇಳೆಗೆ ರೈಲ್ವೆ ಸಂಚಾರ ಆರಂಭಿಸಲು ಕಷ್ಟ ಆಗುತ್ತದೆ ಎಂದು ಅಧಿಕಾರಿಗಳು ಹೇಳಿದ ನಂತರ ಇದರ ಗಂಭೀರತೆಯನ್ನು ಗಮನಿಸಿ, ತಕ್ಷಣ ಕ್ರಮ ತೆಗೆದುಕೊಳ್ಳುವ ಭರವಸೆಯನ್ನು ಸೋಮಣ್ಣ ನೀಡಿದರು.

ಉಪನಗರ ರೈಲ್ವೆ ಯೋಜನೆ ವಿಸ್ತರಣೆ:

ಬೆಂಗಳೂರಿನ ನೆರೆಹೊರೆಯ ನಗರ/ಪಟ್ಟಣಗಳಿಗೆ ಸಂಪರ್ಕ ಕಲ್ಪಿಸಲು ಉಪನಗರ ರೈಲ್ವೆ ಯೋಜನೆಯ ವಿಸ್ತರಣೆ ಅಗತ್ಯ ಇದೆ. ಬೆಂಗಳೂರಿನಿಂದ ಸಮೀಪದ ತುಮಕೂರು, ಮೈಸೂರು, ಮಾಗಡಿ, ಗೌರೀಬಿದನೂರು, ಕೋಲಾರ ನಗರಗಳಿಗೆ ಸಂಪರ್ಕ ಕಲ್ಪಿಸುವ ಬಗ್ಗೆಯೂ ಚರ್ಚೆ ಆಗಿದೆ. ಇದನ್ನು ಯಾವ ರೀತಿ ಕೈಗೆತ್ತಿಕೊಳ್ಳಬೇಕು ಎಂಬುದರ ಬಗ್ಗೆಯೂ ಅಧಿಕಾರಿಗಳ ಮಟ್ಟದಲ್ಲಿ ಮೊದಲು ಸಭೆಗಳನ್ನು ಮಾಡಿ ನಂತರ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದು ಸೋಮಣ್ಣ ಅವರು ಸಚಿವ ಪಾಟೀಲ ಅವರ ಮನವಿಗೆ ಸ್ಪಂದಿಸಿದರು.

ಬೆಂಗಳೂರು- ಯುಲಂಹಕ- ದೇವನಹಳ್ಳಿ ನಡುವೆ ಸಂಪರ್ಕ ಕಲ್ಪಿಸುವ ಕಾರಿಡಾರ್‌-1 ಉಪನಗರ ರೈಲ್ವೆ ಯೋಜನೆಯನ್ನು ಚಿಕ್ಕಬಳ್ಳಾಪುರ ಮೂಲಕ ಕೋಲಾರಕ್ಕೆ ಸಂಪರ್ಕಿಸುವ ಬದಲು ದೇವನಹಳ್ಳಿಯಿಂದಲೇ ನೇರವಾಗಿ ಕೋಲಾರಕ್ಕೆ ಸಂಪರ್ಕ ಕಲ್ಪಿಸುವ ಸಾಧ್ಯಾಸಾಧ್ಯತೆ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ದರ್ಶನ್ ನ್ಯಾಯಾಂಗಬಂಧನ ಸೆ.12ರವರೆಗೆ ವಿಸ್ತರಣೆ

ವರ್ತುಲ ರೈಲ್ವೆಗೆ ಸಂಪರ್ಕ

ಉಪನಗರ ರೈಲ್ವೆ ಯೋಜನೆಯನ್ನು ಬೆಂಗಳೂರು ಸುತ್ತಲಿನ ವರ್ತುಲ ರೈಲ್ವೆ ಹಳಿಗೆ ಸಂಪರ್ಕ ಕಲ್ಪಿಸುವ ಬಗ್ಗೆಯೂ ಈ ಸಭೆಯಲ್ಲಿ ಚರ್ಚಿಸಲಾಯಿತು. ಇದೊಂದು ಒಳ್ಳೆಯ ಪರಿಕಲ್ಪನೆ ಆಗಿದ್ದು, ಇದರಿಂದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ ಎಂದು ಹೇಳಿದರು.
ಸುಮಾರು 21,000 ಕೋಟಿ ರೂ.ವೆಚ್ಚದ 281 ಕಿ.ಮೀ ವರ್ತುಲ ರೈಲ್ವೆ ಯೋಜನೆಗೆ ರೈಲ್ವೆ ಮಂಡಳಿ ಒಪ್ಪಿಗೆ ನೀಡಿದ್ದು, ಉಪನಗರ ರೈಲುಗಳನ್ನೂ ಇದರ ಜತೆ ಸಂಪರ್ಕ ಮಾಡುವುದು ಹೆಚ್ಚು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯಪಡಲಾಯಿತು.

ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾಸ್ತವ, ನಮ್ಮ ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್‌, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ, ಕೆ-ರೈಡ್‌ ವ್ಯವಸ್ಥಾಪಕ ನಿರ್ದೇಶಕಿ ಡಾ.ಎನ್.ಮಂಜುಳಾ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಹಾಜರಿದ್ದರು.

ಡಿಕೆಶಿಗೆ ಮಾತ್ರ ಸಿಎಂ ಹುದ್ದೆಯ ಛಾನ್ಸು?

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
CompletedConduct ProgressCorridor-2 and 4December 2026Infrastructure Developmentmb patilministerministersReview MeetingState for RailwaysSuburban Railunion ministerV. Somanna
0 FacebookTwitterPinterestEmail
KM Shivaraju

previous post
ದರ್ಶನ್ ನ್ಯಾಯಾಂಗಬಂಧನ ಸೆ.12ರವರೆಗೆ ವಿಸ್ತರಣೆ
next post
ರಾಜ್ಯದಲ್ಲಿ ಭಯೋತ್ಪಾದನೆ ತಡೆಗೆ ಕಾರ್ಯಪಡೆ ರಚಿಸಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ