43
ಬೆಂಗಳೂರು:ಅಜೀಂ ಪ್ರೇಮ್‌ಜೀ ಪ್ರತಿಷ್ಟಾನದಿಂದ ಸರ್ಕಾರಿ ಶಾಲಾ ಮಕ್ಕಳಿಗೆ ವಾರ ಪೂರ್ತಿ ಪೌಷ್ಠಿಕ ಆಹಾರವಾಗಿ ಮೊಟ್ಟೆ ವಿತರಿಸುವ ಕಾರ್ಯಕ್ಕೆ ಸೆಪ್ಟೆಂಬರ್ 25 ರಂದು ಚಾಲನೆ ದೊರೆಯಲಿದೆ.
ಇದುವರೆಗೂ ವಾರದಲ್ಲಿ ಎರಡು ದಿನ ಮಾತ್ರ ಪೌಷ್ಠಿಕ ಆಹಾರವಾಗಿ ಮೊಟ್ಟೆ ವಿತರಿಸಲಾಗುತ್ತಿತ್ತು, ಅಜೀಂ ಪ್ರೇಮ್‌ಜೀ ಪ್ರತಿಷ್ಠಾನ ವಾರವಿಡೀ ಮೊಟ್ಟೆ ನೀಡಲು ಮುಂದಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಯೋಜನೆಗೆ ಚಾಲನೆ ನೀಡುತ್ತಿದೆ.
2000 ಕೋಟಿ ರೂ. ವೆಚ್ಚ
ಈ ಕಾರ್ಯಕ್ರಮಕ್ಕೆ ತಗಲುವ ವಾರ್ಷಿಕ ವೆಚ್ಚ 2000 ಕೋಟಿ ರೂ.ಗಳನ್ನು ಪ್ರತಿಷ್ಠಾನ ಭರಿಸಲಿದೆ, ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಪ್ರತಿಷ್ಠಾನ ಮತ್ತು ಸರ್ಕಾರದ ನಡುವೆ ಒಪ್ಪಂದ ಆಗಿದೆ.
ಅಜೀಂ ಪ್ರೇಮ್‌ಜೀ ಪ್ರತಿಷ್ಠಾನದ ತೀರ್ಮಾನಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.