Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ದಬ್ಬಾಳಿಕೆ ನಿಲ್ಲದಿದ್ದರೆ ಪೋಲಿಸ್ ಠಾಣೆಗೆ ಬಿಜೆಪಿ ಮುತ್ತಿಗೆ

by admin September 25, 2024
written by admin September 25, 2024 0 comments 1 minutes read
0FacebookTwitterPinterestEmail
142

ಬೆಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರ ಪದೇ ಪದೇ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸುವುದು ಮುಂದುವರೆದರೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ದಬ್ಬಾಳಿಕೆ ಮಾಡುತ್ತಿದ್ದಾರೆ, ವಿನಾಕಾರಣ ಎಫ್‌ಐಆರ್ ದಾಖಲಿಸಲಾಗುತ್ತಿದೆ, ಆಡಳಿತ ಪಕ್ಷ ಕಾಂಗ್ರೆಸ್ಸನ್ನು ಖುಷಿ ಪಡಿಸಲು ಪೋಲಿಸ್ ಅಧಿಕಾರಿಗಳ ನಡವಳಿಕೆ ಅಕ್ಷಮ್ಯ ಅಪರಾಧ ಎಂದರು.

ಅಧಿಕಾರಿಗಳಿಗೆ ತಿಳಿಹೇಳಬೇಕು

ತಪ್ಪು ಮಾಡುವ ಅಧಿಕಾರಿಗಳಿಗೆ ತಿಳಿಹೇಳುವ ಕೆಲಸವನ್ನು ಗೃಹ ಸಚಿವರು ಮಾಡಬೇಕು, ನಿನ್ನೆ ನಡೆದಿರುವುದು ಸಣ್ಣ ಘಟನೆಯಲ್ಲ, ವಿನಾಕಾರಣ ಪಕ್ಷದ ಕಾರ್ಯಕರ್ತೆಯನ್ನು ಪೊಲೀಸ್ ಠಾಣೆಯಲ್ಲಿ ಮಧ್ಯರಾತ್ರಿವರೆಗೆ ಕೂರಿಸಿದ್ದು ಅಕ್ಷಮ್ಯ ಅಪರಾಧ, ಜನರಿಗೆ ರಕ್ಷಣೆ ಕೊಡಬೇಕಾದ ಪೊಲೀಸರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತೆ ಛಾಯಾ ಅವರು ಪಕ್ಷದ ಸದಸ್ಯತ್ವ ಅಭಿಯಾನ ಮಾಡುತ್ತಿದ್ದ ಸಂದರ್ಭದಲ್ಲಿ ರಾತ್ರಿ ಏಕಾಏಕಿ ಪೊಲೀಸರು ಅವರನ್ನು ಕರೆದುಕೊಂಡು ಹೋಗಿ ಪೊಲೀಸ್ ಠಾಣೆಯಲ್ಲಿ ಕೂರಿಸಿದ್ದಾರೆ.

ಎಫ್‌ಐಆರ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ, ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಪೊಲೀಸ್ ಠಾಣೆಗೆ ತೆರಳಿ ಮಹಿಳೆ ಬಂಧನಕ್ಕೆ ಕಾರಣ ಕೇಳಿದಾಗ, ಒಟಿಪಿಗಳನ್ನು ಡೌನ್‌ಲೋಡ್ ಮಾಡುತ್ತಿದ್ದಾರೆಂಬ ಆರೋಪ ಹೊರಿಸಿ ಮಹಿಳೆಯನ್ನು ರಾತ್ರಿ 12ರವರೆಗೆ ಪೊಲೀಸ್ ಠಾಣೆಯಲ್ಲಿ ಕೂರಿಸಿ ದಬ್ಬಾಳಿಕೆ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.

ಯುಪಿಎಸ್‌ಸಿ ಮಾದರಿ ಕೆಪಿಎಸ್‌ಸಿ ವೇಳಾಪಟ್ಟಿ
ಹೈಕೋರ್ಟ್ ತೀರ್ಪು ಗೌರವಿಸಿ

ಮುಡಾ ಹಗರಣವನ್ನು ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರವಿಸಬೇಕು, ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು, ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ತಮ್ಮ ಕುಟುಂಬಕ್ಕೆ ಪಡೆದುಕೊಂಡಿದ್ದು, ಇದರಲ್ಲಿ ಅಕ್ರಮ ನಡೆದಿದೆ, ಭಂಡತನ ಬದಿಗಿಟ್ಟು ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ಬಾರದೇ ಇಷ್ಟು ದೊಡ್ಡ ಭ್ರಷ್ಟಾಚಾರ ನಡೆಯಲು ಸಾಧ್ಯ ಇರಲಿಲ್ಲ, ಕಾನೂನಿನ ಪ್ರಕಾರ 4,600 ಚದರಡಿಯ ಒಂದು ನಿವೇಶನ ಸಿಗಬೇಕಿತ್ತು, ಆದರೆ, ಇವರಿಗೆ 56 ಕೋಟಿ ರೂ. ಬೆಲೆ ಬಾಳುವ 14 ನಿವೇಶನಗಳು ಸಿಕ್ಕಿರುವುದು ಕಾನೂನುಬಾಹಿರ, ಇದರ ಸಮಗ್ರ ತನಿಖೆ ಆಗಬೇಕಿದೆ ಎಂಬ ವಿಚಾರವನ್ನು ಹೈಕೋರ್ಟ್ ನಮೂದಿಸಿದೆ.

ಹೈಕೋರ್ಟ್ ತೀರ್ಪಿನ ನಂತರ ಮುಖ್ಯಮಂತ್ರಿ ಹೇಳಿಕೆ ಗಮನಿಸಿದ್ದು, ಭಂಡತನದ ಬುದ್ಧಿಯಿಂದ ಹೊರಗೆ ಬರದೆ, ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ.

ರಾಜಭವನ ದುರುಪಯೋಗ ಆರೋಪ

ರಾಜಭವನ ದುರುಪಯೋಗ ಆಗುತ್ತಿದೆ ಎಂಬುದಾಗಿ ಆರೋಪಿಸಿದ್ದು, ಮತ್ತೊಂದೆಡೆ ತಾನೇನೂ ತಪ್ಪು ಮಾಡಿಲ್ಲ, ರಾಜೀನಾಮೆ ಕೊಡುವ ಪ್ರಶ್ನೆ ಉದ್ಭವವಿಸುವುದಿಲ್ಲ ಎಂದು ಮುಖ್ಯಮಂತ್ರಿ ಹೇಳುತ್ತಿರುವುದು ಸರಿಯಲ್ಲ.

ರಾಜ್ಯಪಾಲರ ಕ್ರಮ ಪ್ರಶ್ನಿಸಿದ ಸಿದ್ದರಾಮಯ್ಯ ಅವರ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿದೆ, ಹೈಕೋರ್ಟ್ ತೀರ್ಪನ್ನು ರಾಜಕೀಯಪ್ರೇರಿತ ಎಂದು ಬಿಂಬಿಸುವ ಕೆಲಸ ತಾವು ಮಾಡಿದ್ದೀರಿ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp seize to police stationbjp state president by vijayendraharassment to bjp workersmuda scam high court judgement
0 FacebookTwitterPinterestEmail
admin

previous post
ದಸರಾ ನಂತರ ಸಿದ್ದರಾಮಯ್ಯ ರಾಜೀನಾಮೆ ಇಂಗಿತ
next post
ಯುಪಿಎಸ್‌ಸಿ ಮಾದರಿ ಕೆಪಿಎಸ್‌ಸಿ ವೇಳಾಪಟ್ಟಿ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ