Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ದುರ್ಬಲ : ಸಿ.ಟಿ.ರವಿ

by admin October 23, 2024
written by admin October 23, 2024 0 comments 2 minutes read
0FacebookTwitterPinterestEmail
145

ಯೋಗೇಶ್ವರ್  ಹುಲಿ ಬೋನಿಗೆ ಹೋಗಿದ್ದಾರೆ

ಬೆಂಗಳೂರು:  ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚನ್ನಪಟ್ಟಣದಲ್ಲಿ ದುರ್ಬಲವೆಂದು ಕಾಂಗ್ರೆಸ್ ಪಕ್ಷ ಒಪ್ಪಿಕೊಂಡಂತಾಗಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ವಿಶ್ಲೇಷಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ ಅವರು,  ಯೋಗೇಶ್ವರ್ ಅವರು ಕಾಂಗ್ರೆಸ್ಸಿಗೆ ಹೋದುದರಿಂದ ಒಂದಂತೂ ನಾವು ಊಹಿಸಬಹುದು. 136 ಶಾಸಕರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರಂಥ  ಪ್ರಬಲ ನಾಯಕರನ್ನು ಹೊಂದಿರುವ ಕಾಂಗ್ರೆಸ್ ಪಕ್ಷ ಚನ್ನಪಟ್ಟಣದಲ್ಲಿ ದುರ್ಬಲ ಎಂದು ಅವರೇ ಒಪ್ಪಿಕೊಂಡಂತಾಗಿದೆ ಎಂದು ಟೀಕಿಸಿದರು.

ನಿನ್ನೆ ಮೊನ್ನೆಯವರೆಗೂ ನಾನೇ ಅಭ್ಯರ್ಥಿ  ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಿದ್ದರು. ಪೂರ್ವ ತಯಾರಿ ಮಾಡಿ ಓಡಾಡುತ್ತಿದ್ದರು. ಮಾಜಿ ಸಂಸದ ಡಿ.ಕೆ. ಸುರೇಶ್ ಅಲ್ಲಿ ಅಭ್ಯರ್ಥಿ ಎಂದು ಬಹಳ ಜನ ಅಂದುಕೊಂಡಿದ್ದರು. ಅಲ್ಲಿ ಯೋಗೇಶ್ವರ್‍ಗೇ ಟಿಕೆಟ್ ಕೊಟ್ಟು ಅಸಹಾಯಕತೆ ತೋರಿಸುತ್ತಾರೋ, ಅಥವಾ ಯೋಗೇಶ್ವರ್ ಜತೆಗಿಟ್ಟುಕೊಂಡು ಡಿ.ಕೆ.ಸುರೇಶ್ ಅಭ್ಯರ್ಥಿ ಆಗುತ್ತಾರೋ ನೋಡಬೇಕಿದೆ. ಆದರೆ, ಕಾಂಗ್ರೆಸ್ ತಾನು ಚನ್ನಪಟ್ಟಣದಲ್ಲಿ ದುರ್ಬಲ ಎಂದು ಒಪ್ಪಿಕೊಂಡಂತಾಗಿದೆ ಎಂದರು.

ಯೋಗೇಶ್ವರ್ ಅವರು ಮಹತ್ವಾಕಾಂಕ್ಷೆ ಇಟ್ಟುಕೊಂಡ ರಾಜಕಾರಣಿ. ಸುದೀರ್ಘ ಅವಧಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿ ರಾಜಕಾರಣ ಮಾಡಿದವರು. ಡಿ.ಕೆ.ಶಿವಕುಮಾರ್  ಮತ್ತು ಅವರ ನಡುವಿನ ಶತ್ರುತ್ವ ಇವತ್ತು ನಿನ್ನೆಯದಲ್ಲ. ಹುಲಿ ಬೋನಿಗೆ ಹೋಗಿದ್ದಾರೆ. ಒಂದೋ ಹುಲಿಯನ್ನು ಮಣಿಸಬೇಕು, ಇಲ್ಲವೇ ಹುಲಿಗೆ ಬಲಿ ಆಗಬೇಕು ಎಂದು ತಿಳಿಸಿದರು.

ಯೋಗೇಶ್ವರ್ ರಾಜೀನಾಮೆ ನೀಡಿರುವುದರಲ್ಲಿ ಆಶ್ಚರ್ಯವಿಲ್ಲ

ಇವತ್ತೇ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ. ನಮ್ಮ ರಾಜಕಾರಣ ಮತ್ತು ಯೋಗೇಶ್ವರ್  ರಾಜಕಾರಣದ ಚಿಂತನೆಯ ನಡುವೆ ಅಗಾಧವಾದ ಅಂತರವಿದೆ. ಯೋಗೇಶ್ವರ್ ಅವರು ವೈಯಕ್ತಿಕ ನೆಲೆಯಲ್ಲಿ ರಾಜಕಾರಣ ಮಾಡುತ್ತಾರೆ. ಸದಾಕಾಲ ರಾಜಕೀಯ ಕ್ಷೇತ್ರದ ಲಾಭ- ನಷ್ಟದ ಲೆಕ್ಕ ಹಾಕುತ್ತಾರೆ. ನಮ್ಮದು ಸೈದ್ಧಾಂತಿಕ ಬದ್ಧತೆಯ ರಾಜಕಾರಣ. ಲಾಭ- ನಷ್ಟದ ಲೆಕ್ಕಾಚಾರಕ್ಕೆ ಅವಕಾಶವೂ ಇಲ್ಲ. ಆ ಚಿಂತನೆಯೂ ನಮ್ಮಲ್ಲಿಲ್ಲ ಎಂದು ನುಡಿದರು.

ಯೋಗೇಶ್ವರ್ ರಾಜೀನಾಮೆ ಕೊಟ್ಟ ಮೇಲೆ ಸೋದರಿಕೆ ಸಂಬಂಧವೇನೂ ಇಲ್ಲ. ನಾವು ಎನ್‍ಡಿಎ ಆಗಿ ಚನ್ನಪಟ್ಟಣದಲ್ಲಿ ಹೋರಾಟ ಮಾಡುತ್ತೇವೆ. ನಾವು ನಿರ್ಣಯಿಸಿ ಚರ್ಚೆ ಮಾಡುವುದಿಲ್ಲ. ಚರ್ಚಿಸಿ ನಿರ್ಣಯಕ್ಕೆ ಬರುತ್ತೇವೆ. ಒಂದೂವರೆ ಎರಡು ತಿಂಗಳ ಹಿಂದೆಯೇ ನಾವು ಚನ್ನಪಟ್ಟಣದ ಕುರಿತು ಕೇಂದ್ರ ಸಚಿವ ಕುಮಾರಸ್ವಾಮಿಯವರ ಜೊತೆ ಚರ್ಚಿಸಿದ್ದೇವೆ. ಚನ್ನಪಟ್ಟಣ ಕುಮಾರಸ್ವಾಮಿಯವರು ಪ್ರತಿನಿಧಿಸಿದ ಕ್ಷೇತ್ರ. ಏಕಪಕ್ಷೀಯ ನಿರ್ಣಯ ಹೇರುವುದು, ನಮ್ಮ ನಿರ್ಣಯ ಹೇರುವುದಾಗಲೀ ಮೈತ್ರಿ ಅನಿಸುವುದಿಲ್ಲ. ಇಬ್ಬರೂ ಸೇರಿ ನಿರ್ಣಯಿಸಬೇಕಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಗೆ ಎಲ್ಲಿಲ್ಲದ ಬೇಡಿಕೆ

ಬೆಂಗಳೂರಿನಲ್ಲಿ ಜನರ ಬದುಕು ಬೀದಿಗೆ ಬಿದ್ದಿದೆ. ಇವತ್ತು ಜನಹಿತ ಮರೆತ ಸರ್ಕಾರ ರಾಜ್ಯದಲ್ಲಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಿಗೆ ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿಯನ್ನು ಸ್ವಾಗತ ಮಾಡುವುದು ಜನರ ಬದುಕಿಗೆ ಸ್ಪಂದಿಸುವುದಕ್ಕಿಂತ ಮುಖ್ಯವಾಗಿದೆ. ಜನರ ಸಮಸ್ಯೆಗಳಿಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಸ್ಪಂದಿಸುತ್ತಿಲ್ಲ. ಇಂಥ ಸರ್ಕಾರ ಏಕಿರಬೇಕು  ಎಂದು ಪ್ರಶ್ನಿಸಿದರು.

ಮಳೆಯಿಂದ ಕಟ್ಟಡ ಕುಸಿತ ಸೇರಿ ಮಳೆ ಕಾರಣಕ್ಕೆ 8ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸರ್ಕಾರಕ್ಕೆ ಮಾನವೀಯತೆ ಇದೆಯೇ? ಸ್ಪಂದನೆ ಏನು? ಭ್ರಷ್ಟಾಚಾರದಲ್ಲಿ ತೊಡಗಿದ್ದು, ಬದುಕಿದ್ದೂ ಸತ್ತಂತಿರುವ ಸರ್ಕಾರ ಇಲ್ಲಿದೆ ಎಂದು ಟೀಕಿಸಿದರು.

ಭಾರತದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಬೇಕು. ಆಗ ಎಲ್ಲರೂ ಸಮಾನರಾಗುತ್ತಾರೆ. ಆಗ ಸಂವಿಧಾನದ ಆಶಯವನ್ನು ಎತ್ತಿ ಹಿಡಿದಂತಾಗಲಿದೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ವಯನಾಡಿನಲ್ಲಿ ನಾಳೆ ಪ್ರಿಯಾಂಕಾ ಗಾಂಧಿ ನಾಮಪತ್ರ


Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
channapatnaCongress weakCT Ravitigertiger cageYogeshwar
0 FacebookTwitterPinterestEmail
admin

previous post
ಯೋಗೇಶ್ವರ್ ರಾಜೀನಾಮೆ ನೀಡಿರುವುದರಲ್ಲಿ ಆಶ್ಚರ್ಯವಿಲ್ಲ
next post
ಸೈನಿಕ ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ