Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸೈನಿಕ ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ

by admin October 23, 2024
written by admin October 23, 2024 0 comments 3 minutes read
0FacebookTwitterPinterestEmail
186

ಯೋಗೇಶ್ವರ್ ಷರತ್ತಿಲ್ಲದೆ ಕಾಂಗ್ರೆಸ್ ಗೆ ಮರಳಿದ್ದಾರೆ : ಡಿಕೆಶಿ

ಬೆಂಗಳೂರು: “ಮಾಜಿ ಸಿಚಿವ ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ  ಅವರು ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ” ಎಂದು ಉಪ ಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಿ.ಪಿ.ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷದಿಂದಲೇ ಅವರ ರಾಜಕಾರಣ ಪ್ರಾರಂಭವಾಗಿತ್ತು. ಮತ್ತೊಮ್ಮೆ ಇದೇ ಪಕ್ಷದಿಂದಲೇ ರಾಜಕಾರಣ ಪ್ರಾರಂಭ ಮಾಡಬೇಕು ಎಂದು ಸಿ.ಪಿ.ಯೋಗೇಶ್ವರ್ ಅವರು ಬೆಳಿಗ್ಗೆ ಭೇಟಿ ಮಾಡಿ ತಮ್ಮ ಅಭಿಪ್ರಾಯ ತಿಳಿಸಿದರು. ಇಷ್ಟು ದಿನ ಎನ್ ಡಿಎಯಲ್ಲಿದ್ದೂ, ಮತ್ತೆ ಕಾಂಗ್ರೆಸ್ಸಿಗನಾಗಿ ಮುಂದುವರೆಯಬೇಕು ಎಂದು ಪಕ್ಷ ಸೇರ್ಪಡೆಯಾಗುತ್ತಿದ್ದಾರೆ” ಎಂದರು.

“ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ವಿಚಾರವನ್ನು ಮುಖ್ಯಮಂತ್ರಿಗಳ ಬಳಿ ದೂರವಾಣಿಯಲ್ಲಿ ಚರ್ಚೆ ಮಾಡಿದ್ದೆ. ನಂತರ ಪಕ್ಷದ ಎಲ್ಲ ಮುಖಂಡರ ಬಳಿ ಸಮಾಲೋಚನೆ ನಡೆಸಿದೆ. ನಮ್ಮ ಬಳಿ ಹೆಚ್ಚು ಸಮಯವಿಲ್ಲದೇ ಇರುವ ಕಾರಣಕ್ಕೆ ಇಂದು ಬೆಳಿಗ್ಗೆಯೇ ಮುಖ್ಯಮಂತ್ರಿಗಳ ನಿವಾಸದಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಿದೆ. ಇವರ ಪಕ್ಷ ಸೇರ್ಪಡೆ ಬಗ್ಗೆ ವರಿಷ್ಠರ ಗಮನಕ್ಕೂ ತಂದು ಎಲ್ಲರ ಒಪ್ಪಿಗೆ ಮೇರೆಗೆ ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೀಡಲಾಗಿದೆ” ಎಂದು ಹೇಳಿದರು.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ದುರ್ಬಲ : ಸಿ.ಟಿ.ರವಿ

“ರಾಜಕಾರಣ ಸಾಧ್ಯತೆಗಳ ಕಲೆ. ಮತ್ತೆ ಯೋಗೇಶ್ವರ್ ಅವರು ಮರಳಿ ಗೂಡಿಗೆ ಬಂದಿದ್ದಾರೆ. ಎಸ್ ಪಿ, ಬಿಜೆಪಿ, ಸ್ವತಂತ್ರ ಅಭ್ಯರ್ಥಿಯಾಗಿ ಕೆಲಸ ಮಾಡಿದ್ದಾರೆ. ಜೆಡಿಎಸ್ ಜೊತೆಗೂ ಜಿಲ್ಲೆಯಲ್ಲಿ ಮೈತ್ರಿ ಮಾಡಿಕೊಂಡು ಎನ್ ಡಿಎ ಅಭ್ಯರ್ಥಿಯನ್ನು ಗೆಲ್ಲಿಸಿದ್ದರು. ರಾಜಕೀಯ ಸನ್ನಿವೇಶ ಬದಲಾದ ಕಾರಣಕ್ಕೆ ಮತ್ತೆ ನಮ್ಮೊಡನೆ ಕೈಜೋಡಿಸಿದ್ದಾರೆ” ಎಂದರು.

“ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣದಿಂದ ಕುಮಾರಸ್ವಾಮಿ ಅವರು ಗೆದ್ದಿದ್ದರು. ನಮ್ಮ ಪಕ್ಷ 16 ಸಾವಿರ ಮತಗಳನ್ನು ಚನ್ನಪಟ್ಟಣದಲ್ಲಿ ಗಳಿಸಿತ್ತು. ಲೋಕಸಭಾ ಚುನಾವಣೆಯಲ್ಲಿ ಸುರೇಶ್ ಅವರು 85 ಸಾವಿರ ಮತಗಳನ್ನು ಪಡೆದಿದ್ದೆವು. ಅನೇಕ ಮಂದಿ ಜನತಾದಳದಿಂದ ಬಂದು ನಮಗೆ ಸಹಾಯ ಮಾಡಿದ್ದರು. ನಂತರ ಸ್ಥಾನ ತೆರವುಗೊಂಡ ನಂತರ ಸುಮಾರು 15 ಕ್ಕೂ ಹೆಚ್ಚು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದೆ” ಎಂದು ಅವರು ತಿಳಿಸಿದರು.

ನಮ್ಮ ಕಾರ್ಯಕರ್ತರು ಕ್ಷೇತ್ರದಲ್ಲಿ ಪಕ್ಷವನ್ನು ತಳಮಟ್ಟದಿಂದ ಗಟ್ಟಿ ಮಾಡಲು ಶ್ರಮವಹಿಸಿದ್ದರು. ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಮುಜುಗರಕ್ಕೆ ಒಳಗಾಗುವ ಪ್ರಮೇಯವನ್ನು ನಾವು ಉಂಟು ಮಾಡುವುದಿಲ್ಲ. ನಿಮ್ಮ ಜೊತೆ ನಾನು ಹಾಗೂ ಡಿ.ಕೆ.ಸುರೇಶ್ ಇದ್ದೇವೆ. ನಿಮ್ಮನ್ನು ಉತ್ತಮವಾದ ರೀತಿಯಲ್ಲಿ ನಡೆಸಿಕೊಳ್ಳುತ್ತೇವೆ, ಇದೇ ಮಾತನ್ನು ಯೋಗೇಶ್ವರ್ ಅವರಿಗೆ ಸೂಚನೆ ಕೊಟ್ಟಿದ್ದೇವೆ. ಅವರೂ ಸಹ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಟ್ಟಿಗೆ ಕೆಲಸ ಮಾಡುತ್ತಾರೆ. ಚನ್ನಪಟ್ಟಣಕ್ಕೆ ವಿಶೇಷ ಸ್ಥಾನಮಾನ ನೀಡುತ್ತೇವೆ. ಕಾರ್ಯಕರ್ತರು ಎಲ್ಲಾ ಭಿನ್ನಾಭಿಪ್ರಾಯಗಳನ್ನು ಮರೆತು ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ” ಎಂದು ಸೂಚನೆ ನೀಡಿದರು.

ಯೋಗೇಶ್ವರ್ ರಾಜೀನಾಮೆ ನೀಡಿರುವುದರಲ್ಲಿ ಆಶ್ಚರ್ಯವಿಲ್ಲ

“ಇಂದೇ ಹೈಕಮಾಂಡ್ ಗೆ ಸ್ಪರ್ಧಿಸುವವರ ಪಟ್ಟಿಯನ್ನು ಕಳುಹಿಸಲಾಗುವುದು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಟ್ಟಿ ಅಂತಿಮ ಮಾಡುತ್ತಾರೆ. ಚನ್ನಪಟ್ಟಣದ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರವನ್ನು ಡಿ.ಕೆ.ಸುರೇಶ್ ಅವರ ಜವಾಬ್ದಾರಿಗೆ ವಹಿಸಲಾಗಿತ್ತು. ಅವರು ಈಗಾಗಲೇ ಖರ್ಗೆ ಅವರ ಬಳಿ ಮಾತನಾಡಿದ್ದಾರೆ. ಗುರುವಾರ ಬೆಳಿಗ್ಗೆ 11 ಗಂಟೆಗೆ ನಡೆಯುವ ನಾಮಪತ್ರ ಸಲ್ಲಿಕೆ ವೇಳೆ ಎಲ್ಲರೂ ಭಾಗವಹಿಸಬೇಕು” ಎಂದು ಮನವಿ ಮಾಡಿದರು.

ಅಭ್ಯರ್ಥಿ ಕೊರತೆಯಿಂದ ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತೇ ಎಂದು ಕೇಳಿದಾಗ “ಕಾಂಗ್ರೆಸ್ ಪಕ್ಷಕ್ಕೆ ಎಂದಿಗೂ ಅಭ್ಯರ್ಥಿಗಳ ಕೊರತೆ ಕಾಣುವುದಿಲ್ಲ. ನಾನು ಇಲ್ಲದಿದ್ದರೂ ಪಕ್ಷ ನಡೆಯುತ್ತದೆ” ಎಂದರು.

ಡಿ.ಕೆ.ಸುರೇಶ್ ಅವರನ್ನು ಸೋಲಿಸಿದವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದೀರಿ ಎಂದು ಕೇಳಿದಾಗ, “ಇದರ ಬಗ್ಗೆ ನಮ್ಮ ಕಾರ್ಯಕರ್ತರ ಬಳಿ ಚರ್ಚೆ ನಡೆಸಿದ್ದೇವೆ. ಇದು ಎಲ್ಲಾ ಪಕ್ಷದಲ್ಲಿಯೂ ಇದ್ದಿದ್ದೇ. ನಮ್ಮಲ್ಲಿ ಮಾತ್ರ ಇದು ನಡೆದಿಲ್ಲ. ಇದೊಂದು ರಾಜಕೀಯ ವಿದ್ಯಮಾನವಷ್ಟೇ” ಎಂದರು.

ಬಿಜೆಪಿ ಅಭ್ಯರ್ಥಿಗೆ ಕ್ಷೇತ್ರ ಬಿಟ್ಟುಕೊಡಲು ಕುಮಾರಸ್ವಾಮಿ ಅವರು ಮುಂದಾಗಿದ್ದರು ಎನ್ನುವ ಬಗ್ಗೆ ಕೇಳಿದಾಗ, “ತಮ್ಮ ಸ್ವಂತ ಕ್ಷೇತ್ರವನ್ನೇ ಬಿಜೆಪಿಗೆ ಬಿಟ್ಟುಕೊಡಲು ಕುಮಾರಸ್ವಾಮಿ ಸಿದ್ದರಾಗಿದ್ದರು. ಎರಡು ಬಾರಿ ಸಿಎಂ, ಪ್ರಸ್ತುತ ಕೇಂದ್ರ ಸಚಿವರಾಗಿರುವ ಅವರು ಎಷ್ಟು ದುರ್ಬಲರಾಗಿದ್ದಾರೆ ಎಂಬುದು ಇದರಿಂದ ತಿಳಿಯುತ್ತದೆ. ಅವರು ಚನ್ನಪಟ್ಟಣವನ್ನು ಗೆಲ್ಲುತ್ತೇವೆ ಎಂದು ಹೇಳಲು ಸಾಧ್ಯವೇ” ಎಂದರು.

ಯೋಗೇಶ್ವರಗೆ ಜೆಡಿಎಸ್ ಟಿಕೆಟ್ ಕೇಳಿದ ನಡ್ಡಾ, ಪ್ರಹ್ಲಾದ್ ಜೋಷಿ

“ಪ್ರಿಯಾಂಕ ಗಾಂಧಿ ಅವರು ವಯನಾಡಿನಲ್ಲಿ ನಾಮಪತ್ರ ಸಲ್ಲಿಸುತ್ತಿದ್ದು. ಈ ಕಾರ್ಯಕ್ರಮಕ್ಕೆ ತೆರಳಬೇಕಾಗಿತ್ತು. ಪಕ್ಷ ಸೇರ್ಪಡೆ ಕಾರ್ಯಕ್ರಮ ತುರ್ತಾಗಿ ನಡೆದ ಕಾರಣಕ್ಕೆ ಮುಖ್ಯಮಂತ್ರಿಗಳು ಅಲ್ಲಿ ಭಾಗವಹಿಸುತ್ತಿದ್ದು, ನಾನು ತೆರಳಲಿಲ್ಲ. ಅಲ್ಲದೇ ಬೆಂಗಳೂರು ನಗರದಲ್ಲಿ ಉಂಟಾಗಿರುವ ಮಳೆ ಹಾನಿ ವೀಕ್ಷಣೆಗೆ ಒಂದಷ್ಟು ಕಡೆ ಭೇಟಿ ನೀಡುವ ಕಾರಣಕ್ಕೆ ವಯನಾಡಿಗೆ ತೆರಳುವುದನ್ನು ರದ್ದು ಮಾಡಿದೆ” ಎಂದರು.

“ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಗೆ ಬಾಬುಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತವಾಗಿಲ್ಲ. ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದ ಈ ಘಟನೆ ನಡೆದಿದೆ. ಈ ಘಟನೆಗೆ ಕಾರಣರಾದ ಮನೆ ಮಾಲೀಕ, ನಿರ್ಮಾಣ ಗುತ್ತಿಗೆದಾರ, ಅಧಿಕಾರಿಗಳು ಸೇರಿದಂತೆ ಎಲ್ಲರ ಮೇಲೂ ಪ್ರಕರಣ ದಾಖಲಿಸಲಾಗುವುದು. ಸಣ್ಣ ಜಾಗದಲ್ಲಿ ಎತ್ತರದ ಕಟ್ಟಡ ಕಟ್ಟಿದ್ದೇ ಇದಕ್ಕೆ ಕಾರಣ” ಎಂದರು.



 


Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
CandidatechannapatnacongressdksreturnedSainikunconditionallyYogeshwar
0 FacebookTwitterPinterestEmail
admin

previous post
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ದುರ್ಬಲ : ಸಿ.ಟಿ.ರವಿ
next post
ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ : ಅಶೋಕ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ