Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವಿರೋಧ ಪಕ್ಷದವರಿಗೆ ಮನೆ ಒಡೆಯುವುದೇ ಕೆಲಸ

by admin November 1, 2024
written by admin November 1, 2024 0 comments 1 minutes read
0FacebookTwitterPinterestEmail
153

ಬೆಂಗಳೂರು:ನಾವು ಜಾರಿಗೆ ತಂದಿರುವ ಜನಪರ ಗ್ಯಾರಂಟಿ ಯೋಜನೆಗಳನ್ನು ವಿರೋಧ ಪಕ್ಷದವರಿಂದ ಮಾಡಲು ಆಗಲಿಲ್ಲ, ಅಕ್ಕ-ತಂಗಿ, ತಂದೆ-ಮಗ, ಅಪ್ಪ-ಮಕ್ಕಳ ನಡುವೆ ಜಗಳ ತಂದಿಟ್ಟು, ಭಾವನೆಗಳ ಮೇಲೆ ಆಟವಾಡುವುದೇ ಅವರ ಕೆಲಸ, ಹೀಗೆ ಮಾಡಿ ಎಷ್ಟೋ ಮನೆಗಳನ್ನು ಒಡೆದು ಹಾಕಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಕಟುವಾಗಿ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರಿಗೆ ರಾಜಕೀಯ ಹೊರತಾಗಿ ಯಾವ ವಿಚಾರಗಳೂ ಸಿಗುತ್ತಿಲ್ಲ, ಗ್ಯಾರಂಟಿ ಯೋಜನೆಗಳು ಸಂಸಾರಗಳನ್ನು ಹಾಳು ಮಾಡುತ್ತವೆ ಎಂದಿದ್ದರು, ಆದರೆ, ಅವರು ಹೇಳಿದಂತೆ ಆಗಲಿಲ್ಲ, ನಮ್ಮ ಕೆಲಸಗಳನ್ನು ನೋಡಿ, ಹೊಟ್ಟೆಕಿಚ್ಚು ಪಡುತ್ತಿದ್ದಾರೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಬುದ್ಧಿಮಾತು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಿರಿಯರು, ಅವರು ಬುದ್ಧಿಮಾತು ಹೇಳಿದರೆ ನಾವು ಕೇಳಬೇಕು, ನಾನು ಶಕ್ತಿ ಯೋಜನೆ ವಿಚಾರ ಹೇಳಿರುವ ಮಾತುಗಳನ್ನು ಮತ್ತೊಮ್ಮೆ ಎಲ್ಲರು ಮೆಲುಕುಹಾಕಿ ನೋಡಿ, ಶಕ್ತಿ ಯೋಜನೆ ಕುರಿತು ಶೇ.5-10ರಷ್ಟು ಮಹಿಳೆಯರ ಅಭಿಪ್ರಾಯಗಳನ್ನು ನಾನು ಹೇಳಿದ್ದೇನೆಯೇ ಹೊರತು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ.

ಒಂದಷ್ಟು ಮಹಿಳೆಯರು ಬಸ್ ಪ್ರಯಾಣಕ್ಕೆ ಟಿಕೆಟ್ ತೆಗೆದುಕೊಳ್ಳುತ್ತೇವೆ ಎಂದರೂ ಬಸ್ ನಿರ್ವಾಹಕರು ಹಣ ತೆಗೆದುಕೊಳ್ಳಲು ಹೆದರುತ್ತಿದ್ದಾರೆ ಎಂದಿದ್ದು, ಇದರ ಬಗ್ಗೆ ಯೋಚನೆ ಮಾಡಬೇಕಿದೆ ಎಂದಷ್ಟೇ ಹೇಳಿದ್ದೆ.

ಮಲ್ಲಿಕಾರ್ಜುನ ಖರ್ಗೆ ಅವರು, ವಿವಿಧ ಸಂದರ್ಭಗಳನ್ನು ವಿವರಿಸಿ ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ, ನಾನು ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಆದ ನಂತರ ಪಕ್ಷ ಹಾಗೂ ಸರ್ಕಾರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ, ನಾವು ಅಚ್ಚುಕಟ್ಟಾಗಿ ಸರ್ಕಾರ ಹಾಗೂ ಪಕ್ಷ ನಡೆಸಿಕೊಂಡು ಹೋಗುತ್ತಿದ್ದೇವೆ.

ಸಿದ್ದರಾಮಯ್ಯ, ಶಿವಕುಮಾರ್‌ಗೆ ಖರ್ಗೆ ತರಾಟೆ
ಮಧ್ಯಪ್ರವೇಶ ಮಾಡಿಲ್ಲ

ರಾಜ್ಯದ ಯಾವ ನಾಯಕರೂ ದೆಹಲಿಗೆ ತೆರಳಿಲ್ಲ, ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಯಾವುದೇ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿಲ್ಲ, ಇದುವರೆಗೂ ಅಂತಹ ಘಟನೆ ನಡೆದಿಲ್ಲ, ಅವರು ಹಿರಿಯರಾಗಿ ಸಲಹೆ ನೀಡಿದ್ದಾರೆ, ರಾಷ್ಟ್ರ ರಾಜಕಾರಣ ವಿಚಾರ ಗಮನದಲ್ಲಿಟ್ಟುಕೊಂಡು ಮಾತನಾಡಿದ್ದಾರೆ.

ಮೀಸಲಾತಿ ವಿಚಾರವಾಗಿ ಒಂದೊಂದು ರಾಜ್ಯ ಒಂದೊಂದು ನೀತಿ ಅಳವಡಿಸಿಕೊಂಡಿವೆ, ಸ್ಥಳೀಯವಾಗಿ ನಿಮ್ಮ ನೀತಿ ನೀವು ರೂಪಿಸಿಕೊಳ್ಳಿ, ಅದರಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂಬುದಾಗಿ ಹೇಳಿದ್ದಾರೆ ಎಂದರು.

ಎಲ್ಲಾ ರಾಜ್ಯಗಳಿಗೆ ಕರ್ನಾಟಕ ಮಾದರಿ

ಮಹಾರಾಷ್ಟ್ರದಲ್ಲಿ ಕರ್ನಾಟಕ ಮಾದರಿ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಪ್ರತಿಕ್ರಿಯಿಸಿ, ಕರ್ನಾಟಕ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳು, ದೇಶದ ಎಲ್ಲಾ ರಾಜ್ಯಗಳಿಗೂ ಮಾದರಿಯಾಗಿವೆ, ಬಿಜೆಪಿ ಹಾಗೂ ಇತರೇ ಪಕ್ಷಗಳ ಆಡಳಿತವಿರುವ ರಾಜ್ಯಗಳು ಸಹಾ ನಮ್ಮದೇ ಯೋಜನೆಗಳನ್ನು ಅನುಕರಿಸಿವೆ, ಇದು ನಮಗೆ ಹೆಮ್ಮೆ ಹಾಗೂ ಗರಿಮೆಯ ವಿಚಾರ.

ವಕ್ಫ್ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಕುರಿತು ಮಾತನಾಡಿ, ಮಾನಸಿಕವಾಗಿ ಅಸ್ವಸ್ಥರಾಗಿರುವ, ಹುಚ್ಚಾಸ್ಪತ್ರೆ ಸೇರಬೇಕಿರುವ ವ್ಯಕ್ತಿಗಳ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dcm dk shivakumar blames oppositionguaranty will continue for longkarnataka model to all state
0 FacebookTwitterPinterestEmail
admin

previous post
ಸಿದ್ದರಾಮಯ್ಯ, ಶಿವಕುಮಾರ್‌ಗೆ ಖರ್ಗೆ ತರಾಟೆ ಸರಿ
next post
ನಿಖಿಲ್ ಪರ ಸೋಮವಾರದಿಂದ ದೇವೇಗೌಡರ ಪ್ರಚಾರ

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ