Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಸವರಾಜ ಬೊಮ್ಮಾಯಿಯೇ ‘ಯು-ಟರ್ನ್’

by admin November 4, 2024
written by admin November 4, 2024 0 comments 3 minutes read
0FacebookTwitterPinterestEmail
184

216 ಪ್ರಕರಣಗಳಲ್ಲಿ ಬಿಜೆಪಿಯೇ ನೋಟಿಸ್ ಕೊಟ್ಟಿತ್ತು

ಹುಬ್ಬಳ್ಳಿ:ವಕ್ಫ್ ಆಸ್ತಿ ತೆರವುಗೊಳಿಸಲು 216 ಪ್ರಕರಣಗಳಲ್ಲಿ ಬಿಜೆಪಿಯೇ ನೋಟಿಸ್ ಕೊಟ್ಟಿತ್ತಲ್ಲಾ, ವಕ್ಫ್ ಆಸ್ತಿ ಕಾಪಾಡುತ್ತೇನೆಂದಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗ ಉಲ್ಟಾ ಹೊಡೆದು ‘ಯು-ಟರ್ನ್’ ತೆಗೆದುಕೊಂಡಿದ್ದೇಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ರಾಜಕೀಯಕ್ಕಾಗಿ ಡಬ್ಬಲ್ ಗೇಮ್ ಆಡಬಹುದಾ, ಉಲ್ಟಾ ಹೊಡೆಯಬಹುದಾ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿ ಕಾಪಾಡುವುದಾಗಿ ಹೇಳಿದ್ದರು, ಈಗ ರಾಜಕೀಯಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ, ಅವರೇ ಹೇಳಿದ್ದ ಮಾತುಗಳಿಂದ ಉಲ್ಟಾ ಹೊಡೆದಿದ್ದಾರೆ. ಬಿಜೆಪಿಯ ಡಬ್ಬಲ್ ಗೇಮ್ ವಿಚಾರವನ್ನು ಜನರಿಗೆ ತಲುಪಿಸುತ್ತಿದ್ದೇವೆ.

ಎಲ್ಲಾ ಕಾಲದಲ್ಲೂ ನೋಟಿಸ್

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಈ ವಿಚಾರ ಇಟ್ಟುಕೊಂಡು ರಾಜಕಾರಣ ಮಾಡಲು ಹೋರಾಡುತ್ತಿದೆ, ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ, ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್ ಕೊಟ್ಟಿದ್ದಾರೆ, ಎಲ್ಲಾ ಕಾಲದಲ್ಲಿಯೂ ನೋಟಿಸ್ ನೀಡಲಾಗಿದೆ ಎಂಬುದು ಜನರಿಗೆ ಅರ್ಥವಾಗಿದೆ ಎಂದರು.

ಸಚಿವರಾದ ಹೆಚ್.ಕೆ ಪಾಟೀಲ್, ಕೃಷ್ಣಬೈರೇಗೌಡ ಅವರೊಂದಿಗೆ ಸಭೆ ನಡೆಸಿ, ವಕ್ಫ್ ನೋಟಿಸ್ ನೀಡಿದ್ದಲ್ಲಿ ವಾಪಸ್ ಪಡೆಯಬೇಕು, ವಿಚಾರಣೆ ಇಲ್ಲದೆ, ಯಾವುದೇ ಪಹಣಿಯಲ್ಲಿ ಬದಲಾವಣೆ ಮಾಡಿಗಿದ್ದರೆ ರದ್ದು ಮಾಡಬೇಕು ಹಾಗೂ ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಲಾಗಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರ ತಪ್ಪು ಮಾಡಿ ’ಯು-ಟರ್ನ್’
ಯಾರೇ ಇರಲಿ ಒಕ್ಕಲೆಬ್ಬಿಸಬಾರದು

ಮುಸ್ಲಿಂ, ಹಿಂದೂ, ಕ್ರಿಶ್ಚಿಯನ್ ಯಾರೇ ಇರಲಿ, ಒಕ್ಕಲೆಬ್ಬಿಸಬಾರದು, ವಕ್ಫ್ ಆಸ್ತಿ ವಿಚಾರ ಗೊತ್ತಾದ ತಕ್ಷಣ ನೋಟಿಸ್ ಹಿಂಪಡೆಯಲಾಗಿದೆ, ಬಿಜೆಪಿ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟಿಸ್ ಕೊಟ್ಟಿದ್ದರು, ಯಡಿಯೂರಪ್ಪ, ಸದಾನಂದಗೌಡ, ಜಗದೀಶ್ ಶೆಟ್ಟರ್, ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ನೋಟಿಸ್ ಕೊಟ್ಟಿದ್ದಾರೆ.

ತೆರಿಗೆ ವಿಚಾರದಲ್ಲಿ ಕೇಂದ್ರದಿಂದ ಅನ್ಯಾಯವಾಗುತ್ತಿದ್ದು, 16ನೇ ಹಣಕಾಸು ಆಯೋಗ ಬೆಂಗಳೂರಿಗೆ ಭೇಟಿ ನೀಡಿದ್ದಾಗ 15ನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಗಮನ ಸೆಳೆದಿದ್ದೇವೆ, ವರ್ಷಕ್ಕೆ ಸುಮಾರು 4.50 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ತೆರಿಗೆ ನೀಡುತ್ತಿದ್ದೇವೆ, ವಾಪಸ್ ನೀಡುತ್ತಿರುವ ತೆರಿಗೆ ಪಾಲು 55 ರಿಂದ 60 ಸಾವಿರ ಕೋಟಿ ರೂ. ಮಾತ್ರ. ಇದು ನ್ಯಾಯವೇ ಎಂದರು.

ನ್ಯಾಯಕ್ಕಾಗಿ ಹೋರಾಡುತ್ತಿದ್ದೇವೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಈ ಬಗ್ಗೆ ಮಾತನಾಡಿದ್ದಾರೆಯೇ, ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದರೆ ಅದು ರಾಜಕೀಯ, ಇದಕ್ಕೆ ಏನು ಹೇಳಬೇಕು.

ರಾಜ್ಯಗಳ ತೆರಿಗೆ ಪಾಲು ನಿರ್ಧಾರ

ನ್ಯಾಯಾಲಯಕ್ಕೆ ಹೋದರೆ ನ್ಯಾಯ ಸಿಗುತ್ತದೆ ಎಂದು ಭಾವಿಸಿಲ್ಲ, ಏಕೆಂದರೆ, ಸಂವಿಧಾನದ ಪ್ರಕಾರ, ೫ ವರ್ಷಕ್ಕೊಮ್ಮೆ ಹಣಕಾಸಿನ ಆಯೋಗ ರಚನೆಯಾಗುತ್ತದೆ, ಅವರ ಶಿಫಾರಸ್ಸಿನ ಮೇಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸಲ್ಲಬೇಕಾದ ತೆರಿಗೆ ನಿರ್ಧಾರವಾಗುತ್ತದೆ.

15ನೇ ಹಣಕಾಸು ಆಯೋಗ ಕೆಲವು ಶಿಫಾರಸ್ಸು ಮಾಡಿದೆ, 5,495 ಕೋಟಿ ರೂ. ವಿಶೇಷ ಅನುದಾನ ನೀಡಬೇಕೆಂದು ಹೇಳಿದೆ, ಫೆರಿಫೆರಲ್ ರಿಂಗ್‌ರೋಡ್ ಹಾಗೂ ಕೆರೆಗಳ ಅಭಿವೃದ್ಧಿಗೆ ತಲಾ 3,000 ಕೋಟಿ ರೂ. ನೀಡಲು ಶಿಫಾರಸು ಮಾಡಿದ್ದು ಒಟ್ಟು 11,495 ಕೋಟಿ ರೂ.

ಹಣಕಾಸು ಆಯೋಗದ ಶಿಫಾರಸು ಪ್ರಕಾರ ವಿಶೇಷ ಅನುದಾನ ನೀಡಿದ್ದರೆ ರಾಜಕೀಯ ಬಿಟ್ಟುಬಿಡುವೆ, 11,495 ಕೋಟಿ ರೂ. ಕೊಟ್ಟಿದ್ದಾರೆಯೇ, ಕೊಟ್ಟಿದ್ದರೆ ನಾನು ರಾಜಕೀಯ ಬಿಟ್ಟುಬಿಡುವೆ, ಒಂದು ವೇಳೆ ಸುಳ್ಳಾದರೆ ಪ್ರಹ್ಲಾದ ಜೋಶಿ ರಾಜಕೀಯ ಬಿಡುತ್ತಾರೆಯೇ, ಸುಳ್ಳು ಹೇಳಿದ್ದನ್ನು ಕೇಳಿ ಮಾಧ್ಯಮಗಳು ಬರೆಯುತ್ತವೆ ಎಂದರು.

ಚನ್ನಪಟ್ಟಣ ಕ್ಷೇತ್ರದಲ್ಲಿ ರೇವತಿ ನಿಖಿಲ್ ಮತಯಾಚನೆ
ಆರ್ಥಿಕ, ಸಾಮಾಜಿಕ ಶಕ್ತಿ

ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಬರಬಾರದೆಂಬ ತತ್ವದಲ್ಲಿ ಬಿಜೆಪಿಗೆ ನಂಬಿಕೆ ಇದೆ, ಬಿಜೆಪಿ ಗ್ಯಾರಂಟಿಗಳಿಗೆ ವಿರುದ್ಧವಾಗಿದೆ, ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲಾ ಜಾತಿ, ಧರ್ಮದವರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬುತ್ತಿದ್ದೇವೆ, ಅವರೂ ಮುಖ್ಯವಾಹಿನಿಗೆ ಬರಬೇಕೆಂದು ಈ ಕಾರ್ಯ ಮಾಡುತ್ತಿದ್ದೇವೆ.

ಬಿಜೆಪಿಯವರಿಗೆ ಸಮಾನತೆ ಬರಬಾರದು, ಬಡವರು ಇರಬೇಕು, ಅದಕ್ಕೆ ಅವರನ್ನು ಬಡತನ ವಿರೋಧಿಗಳೆಂದು ಕರೆಯುವುದು, ಶಕ್ತಿ ಇಲ್ಲದಿದ್ದರೆ ತಾನೇ ದುರುಪಯೋಗ ಮಾಡಿಕೊಳ್ಳಲು ಸಾಧ್ಯವಾಗುವುದು, 2018ರಲ್ಲಿ ಬಿಜೆಪಿ 600 ಭರವಸೆಗಳನ್ನು ನೀಡಿತ್ತು, ಅವುಗಳಲ್ಲಿ ಎಷ್ಟು ಈಡೇರಿಸಿದ್ದಾರೆ, ನಾವು 165 ಭರವಸೆ ಕೊಟ್ಟು 158 ಈಡೇರಿಸಿದ್ದಕ್ಕೆ ಲೆಕ್ಕ ಕೊಡುತ್ತೇವೆ, ಅವರು ಎಷ್ಟು ಭರವಸೆ ನೀಡಿ ಎಷ್ಟನ್ನು ಈಡೇರಿಸಿದ್ದಾರೆ ಎಂಬ ಲೆಕ್ಕ ಕೊಡುತ್ತಾರೆಯೇ ಎಂದು ಸವಾಲು ಹಾಕಿದರು.

60 ಸಾವಿರ ಕೋಟಿ ರೂ. ಅಭಿವೃದ್ಧಿ ವೆಚ್ಚ

ಬಜೆಟ್‌ನ 3 ಲಕ್ಷದ 71 ಸಾವಿರ ಕೋಟಿ ರೂಪಾಯಿಗಳಲ್ಲಿ 52 ಸಾವಿರ ಕೋಟಿ ಗ್ಯಾರಂಟಿಗಳಿಗೆ ವೆಚ್ಚ ಮಾಡುತ್ತಿದ್ದೇವೆ, ಅಂದರೆ, ಸುಮಾರು 60 ಸಾವಿರ ಕೋಟಿ ರೂ. ಅಭಿವೃದ್ಧಿಗೆ ವೆಚ್ಚ ಮಾಡುತ್ತಿದ್ದೇವೆ, ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ರಸ್ತೆ, ಸೇತುವೆ, ನಿರ್ಮಾಣಕ್ಕಾಗಿ ವೆಚ್ಚವಾಗುತ್ತಿದೆ, ಇವೆಲ್ಲ ಅಭಿವೃದ್ಧಿಯಲ್ಲವೇ ಎಂದರು.

ಮಾಜಿ ಸಂಸದ ಪ್ರತಾಪ್ ಸಿಂಹ ಮಹಾನ್ ಕೋಮುವಾದಿ, ಇಂತಹವರಿಂದ ಇನ್ನೇನು ನಿರೀಕ್ಷೆ ಮಾಡಲಾಗುತ್ತದೆ, ಅವರಿಗೆ ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಗೌರವವಿಲ್ಲ, ಕೋಮುವಾದ ಮಾಡುವುದೇ ಅವರ ಕಸುಬು, ಸಮಾಜವನ್ನು ಜಾತಿ, ಧರ್ಮದ ಹೆಸರಿನಲ್ಲಿ ಒಡೆಯುವುದೇ ಅವರ ರಾಜಕಾರಣ, ಕೋಮುವಾದದಲ್ಲಿ ತೊಡಗಿ ರಾಜಕೀಯದಲ್ಲಿ ಬದುಕಲು ಹಾಗೂ ಮತ ಪಡೆಯಲು ಪ್ರಯತ್ನ ಮಾಡುತ್ತಾರೆ.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನೂರಕ್ಕೆ ನೂರರಷ್ಟು ಗೆಲ್ಲಲಿದೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಲೀಡ್ ಬಂದಿತ್ತು, ಈ ಬಾರಿಯೂ ಕೂಡ ನಮಗೆ ಮುನ್ನಡೆ ದೊರೆಯುವ ಪರಿಸ್ಥಿತಿ ಇದ್ದು ನಾವು ಗೆಲ್ಲುತ್ತೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpby-electioncm siddaramaiahcongresex cm basavaraja bommaih u-turnstate tax
0 FacebookTwitterPinterestEmail
admin

previous post
ರಾಜ್ಯ ಕಾಂಗ್ರೆಸ್ ಸರ್ಕಾರ ತಪ್ಪು ಮಾಡಿ ’ಯು-ಟರ್ನ್’
next post
ಚನ್ನಪಟ್ಟಣ ಕ್ಷೇತ್ರದಲ್ಲಿ ರೇವತಿ ನಿಖಿಲ್ ಮತಯಾಚನೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ