Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವೀಲ್ ಚೇರ್, ಆಂಬ್ಯುಲೆನ್ಸ್ ನಲ್ಲಿ ಬಂದಿದ್ದೇನೆಯೇ? ಹೆಚ್.ಡಿ.ದೇವೇಗೌಡರ ಕಿಡಿ

by KM Shivaraju November 5, 2024
written by KM Shivaraju November 5, 2024 0 comments 2 minutes read
0FacebookTwitterPinterestEmail
261
ಕೊನೆ ಉಸಿರು ಇರೋ ತನಕ ಜನರ ಕೆಲಸ ಮಾಡುತ್ತೇನೆ

ಬೆಂಗಳೂರು: ನನ್ನ ಆರೋಗ್ಯ ಚೆನ್ನಾಗಿದೆ. ನಾನು ಆಂಬುಲೆನ್ಸ್ ನಲ್ಲಿ ಬಂದಿಲ್ಲ, ವ್ಹೀಲ್ ಚೇರ್ ಮೇಲೆ ಬಂದಿಲ್ಲ. ನಾನು ನಿಮ್ಮೆಲ್ಲರ ಆಶೀರ್ವಾದದಿಂದ ಚೆನ್ನಾಗಿದ್ದೇನೆ. ಆರೋಗ್ಯವಾಗಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದರು‌.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವಿರೂಪಾಕ್ಷಪುರ, ಕೊಡಂಬಹಳ್ಳಿ ಗ್ರಾಮಗಳಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದ ಅವರು, ಆರೋಗ್ಯವಾಗಿ ಇರುವುದನ್ನು ತೋರಿಸಲು ಇಲ್ಲಿಗೆ ಬಂದಿದ್ದೇನೆ. ನೀವೇ ನನ್ನನ್ನು ನೋಡುತ್ತಿದ್ದೀರಿ, ಹೇಗೆ ಇದ್ದೇನೆ ಎಂದು ಗಮನಿಸುತ್ತಿದ್ದೀರಿ ಅಲ್ಲವೇ? ಎಂದು ಹೇಳಿದರು.

ತಮ್ಮ ಆರೋಗ್ಯ ಹಾಗೂ ನಿಖಿಲ್ ಅವರ ಕಣ್ಣೀರಿನ ಬಗ್ಗೆ ಲಘುವಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಗುಡುಗಿದ ಅವರು, ಕಟುಕರಿಗೆ ಕಣ್ಣೀರು ಬರುವುದಿಲ್ಲ, ಹೃದಯವಿರುವ ಭಾವುಕ ಜೀವಿಗಳಿಗೆ ಮಾತ್ರ ಕಣ್ಣೀರು ಬರುತ್ತದೆ ಎಂದರು.

ಕಾಂಗ್ರೆಸ್‌ ನಾಯಕರು ನನ್ನನ್ನು ಹೊರಗಿನವರು ಎನ್ನುತ್ತಿದ್ದಾರೆ. ನಾನು ಅವರಿಗೆ ಹೊರಗಿನವನು ಎಂದು ಈಗ ಅನ್ನಿಸುತ್ತಿದೆ. ಆದರೆ, ನಾನು ಚನ್ನಪಟ್ಟಣ ತಾಲ್ಲೂಕಿಗೆ ಶಾಶ್ವತ ನೀರಾವರಿ ಒದಗಿಸಲು ಇಗ್ಗಲೂರು ಬ್ಯಾರೇಜ್ ಕಟ್ಟಿಸಿದಾಗ ಹಾಗೆಂದು ಅನಿಸಲಿಲ್ಲವೇ? ರಾಜಕೀಯಕ್ಕಾಗಿ ಕಾಂಗ್ರೆಸ್ ನಾಯಕರು ಜನರಿಗೆ ಬರೀ ಸುಳ್ಳನ್ನೇ ಹೇಳುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ನನಗೆ ಮಂಡಿ ನೋವು, ನಿಂತುಕೊಂಡು ಮಾತಾಡೋಕೆ ಆಗಲ್ಲ. ನನಗೀಗ 92 ವರ್ಷ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮತ್ತು ನಾನು ಒಂದೇ ವಯಸ್ಸಿನವರು. ಆದರೆ, ನಾವು ಈಗಲೂ ಕೆಲಸ ಮಾಡುತ್ತಿದ್ದೇವೆ. ದೇಹಕ್ಕೆ ವಯಸ್ಸಾಗುತ್ತದೆ, ಇಚ್ಛಾಶಕ್ತಿಗೆ ಅಲ್ಲ ಎಂದು ಮಾಜಿ ಪ್ರಧಾನಿ ಹೇಳಿದರು.

ಮುದ್ದೆ ಸೊಪ್ಪಿನ ಸಾಂಬಾರು ಹಾಕಿ ಅಡುಗೆ ಮಾಡಿ ಬಡಿಸಿದ ತಾಯಂದಿರು ಇಲ್ಲಿದ್ದೀರಿ. ನಿಮ್ಮನ್ನು ಎಂದಿಗೂ ಮರೆಯೋಕೆ ಸಾಧ್ಯವಿಲ್ಲ. ನಿಮ್ಮ ಪಾದಕ್ಕೆ ನಾನು ನಮಸ್ಕಾರ ಮಾಡ್ತೀನಿ. ನಾನು ಈ ತಾಲೂಕಿಗೆ ಏನೇನು ಮಾಡಿದ್ದೇನೆ, ಹೇಗೆಲ್ಲಾ ಶ್ರಮಪಟ್ಟು ಇಗ್ಗಲೂರು ಅಣೆಕಟ್ಟು ಕಟ್ಟಿದ್ದೇನೆ, ಆ ಬಗ್ಗೆ ನಾನು ಚರ್ಚೆ ಮಾಡಲ್ಲ, ಆದರೆ ಇಗ್ಗಲೂರು ಅಣೆಕಟ್ಟು ನಿಮ್ಮ ಮುಂದೆ ಇದೆ ಎಂದರು.

ನಿಮ್ಮ ಆಶೀರ್ವಾದ ಇದ್ದರೆ ನೂರು ವರ್ಷ ಬದುಕುತ್ತೇನೆ

ನನಗೆ ನಿಮ್ಮ ಆಶೀರ್ವಾದ ಇದೆ. ನಾನು ಶತಾಯು ಆಗುತ್ತೇನೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ಬದುಕಿರುತ್ತೇನೆ ಎನ್ನುವ ಭರವಸೆ ಹೊಂದಿದ್ದೇನೆ. ದೇವರ, ನಿಮ್ಮೆಲ್ಲರ ಆಶೀರ್ವಾದ ಇದ್ದರೆ ನೂರು ವರ್ಷ ಬದುಕುತ್ತೇನೆ. ಆದರೆ, ಕಾಂಗ್ರೆಸ್ ನಾಯಕರಿಗೆ ನನ್ನ ಆರೋಗ್ಯದ ಬಗ್ಗೆಯೇ ಚಿಂತೆಯಾಗಿದೆ ಎಂದು ಗೌಡರು ಅತೀವ ನೋವು ವ್ಯಕ್ತಪಡಿಸಿದರು.

ನನ್ನ ಮೊಮ್ಮಗ ಈ ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತಾನೆ. ಅವರ ತಂದೆ ಕುಮಾರಸ್ವಾಮಿ ಕೇಂದ್ರದಲ್ಲಿ ಮಂತ್ರಿ ಆಗಿದ್ದಾರೆ. ನನ್ನ ಅರವತ್ತು ವರ್ಷದ ರಾಜಕಾರಣದಲ್ಲಿ ಇಂತಹ ಕೆಟ್ಟ ರಾಜಕಾರಣವನ್ನು ನಾನು ನೋಡಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು ಮಾಜಿ ಪ್ರಧಾನಿಗಳು.

ನಿಮ್ಮ ಮುಂದೆ ಎದೆ ಚಾಚಿ ಮಾತನಾಡುತ್ತಿದ್ದೇನೆ

ಇಂತಹ ಕೆಟ್ಟ ರಾಜಕಾರಣ ಮತ್ತೆ ಈ ರಾಜ್ಯದಲ್ಲಿ ಇರಬಾರದು. ನಾನು ಇದನ್ನು ಅಸೂಯೆ ದ್ವೇಷದಿಂದ ಹೇಳುತ್ತಿಲ್ಲ. ವೈಯಕ್ತಿಕವಾಗಿ ನಾನು ಯಾರ ಬಗ್ಗೆಯೂ ಮಾತಾಡಲ್ಲ. ನಾನು ‌11ನೇ ತಾರೀಕಿನ ವರೆಗೂ ಬರುತ್ತೇನೆ. ಮೊಮ್ಮಗನ ಗೆಲ್ಲಿಸೋಕೆ ಬರುತ್ತಿಲ್ಲ. ನನಗೆ ಜೀವನದಲ್ಲಿ ಒಂದೇ ಒಂದು ಗುರಿ ಇದೆ. ಋಣಾನುಬಂಧವೋ ಏನೋ, ಈಗ ಯಾರ ಮನೆ ಅನ್ನ ತಿನ್ನುತ್ತೇನೆಯೋ ಗೊತ್ತಿಲ್ಲ. ಅನ್ನದ ಋಣ ಯಾರ ಮನೆಗೆ ಕರೆದುಕೊಂಡು ಹೋಗುತ್ತದೊ ಗೊತ್ತಿಲ್ಲ. ಮಾಧ್ಯಮದವರು ದೇವೇಗೌಡರು ಮಾತಾಡ್ತಾರಾ ಎಂದು ಕೇಳುತ್ತಿದ್ದರು. ದೇವೇಗೌಡ್ರು ಏನು ಇಂಟರ್ ನ್ಯಾಷನಲ್ ಅಪರಾಧಿ ಆಗಿದ್ನಾ? ಮೂರು ತಿಂಗಳು ನನ್ನ ಮನೆ ಮುಂದೆ ಇದ್ದರಲ್ಲ. ಇವತ್ತು ನಿಮ್ಮ ಮುಂದೆ ಎದೆ ಚಾಚಿ ಮಾತನಾಡುತ್ತಿದ್ದೇನೆ. ಇನ್ನೂ ನಾಲ್ಕಾರು ವರ್ಷ ನಿಮ್ಮ ಆಶೀರ್ವಾದದಿಂದ ಇರುತ್ತೇನೆ. ನನ್ನ ಕೊನೆ ಉಸಿರು ಇರೋ ತನಕ ನನ್ನ‌ ಶರೀರ ಇರೋ ತನಕ ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಆಂಬ್ಯುಲೆನ್ಸ್ ನಲ್ಲಿ ಬಂದು ಪ್ರಚಾರ ಮಾಡುತ್ತಾರೆ ಎಂದಿದ್ದ ಮಾಜಿ ಸಂಸದ ಡಿ.ಕೆ. ಸುರೇಶ್ ಮಾತಿಗೆ ತಿರುಗೇಟು ಕೊಟ್ಟರು ದೇವೇಗೌಡರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
ambulancecampaignchannapatnacongressCongress leadersconstituencydevegowdaEmotionFormer Prime MinisterHdhealthNikhilTearsWheelchair
0 FacebookTwitterPinterestEmail
KM Shivaraju

previous post
ಮುಡಾ ಸಿಬಿಐ ತನಿಖೆ ಅರ್ಜಿ: ಸಿದ್ದರಾಮಯ್ಯಗೆ ನೋಟಿಸ್
next post
ವಕ್ಫ್ ಹೆಸರಲ್ಲಿ ಆಸ್ತಿ ಕಬಳಿಕೆ: ಅಧಿಕಾರಿಗಳು ಶಾಮೀಲು ?

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ