27
ಸಿದ್ದರಾಮಯ್ಯ ಹೇಳಿಕೆಗೆ ಡಿ.ಕೆ.ಶಿವಕುಮಾರ್ ಸಮರ್ಥನೆ
ಬೆಂಗಳೂರು:ಕಾಂಗ್ರೆಸ್ನ 50 ಶಾಸಕರಿಗೆ ಬಿಜೆಪಿ ತಲಾ 50 ಕೋಟಿ ರೂ. ಆಮಿಷ ಒಡ್ಡಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಇಂದಿಲ್ಲಿ ಸಮರ್ಥಿಸಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಕಾಂಗ್ರೆಸ್ನ 50 ಶಾಸಕರಿಗೆ ತಲಾ 50 ಕೋಟಿ ರೂ.ನಂತೆ ಬಿಜೆಪಿಯವರು ಆಮಿಷ ಒಡ್ದುತ್ತಿದ್ದಾರೆ, ಆಪರೇಷನ್ ಕಮಲದ ನಮ್ಮ ಪಕ್ಷದ ಶಾಸಕರ ಬಳಿ ಮಾತನಾಡಿದ್ದಾರೆ, ಈ ವಿಚಾರವನ್ನು ಕೆಲವು ಶಾಸಕರು ಮುಖ್ಯಮಂತ್ರಿ ಬಳಿ ತಿಳಿಸಿದ್ದಾರೆ ಎಂದರು.
ಇದನ್ನೇ ಮುಖ್ಯಮಂತ್ರಿ ಅವರು ಮಾಧ್ಯಮದ ಮುಂದೆ ಹೇಳಿದ್ದಾರೆ, ಮಿಕ್ಕ ವಿಚಾರಗಳನ್ನು ಆನಂತರ ನಿಮಗೆ ತಿಳಿಸುತ್ತೇನೆ ಎಂದರು.