Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್‌ನಲ್ಲೇ ಶಾಸಕರ ಖರೀದಿ, ಬಿಜೆಪಿಯಿಂದಲ್ಲ

by admin November 15, 2024
written by admin November 15, 2024 0 comments 2 minutes read
0FacebookTwitterPinterestEmail
164

ಬೆಂಗಳೂರು:ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಹಿನ್ನಡೆ ಖಾತ್ರಿಯಿಂದ ಕಾಂಗ್ರೆಸ್ಸಿನ ಘಟಾನುಘಟಿಗಳು ಸಾವಿರಾರು ಕೋಟಿ ರೂ.ಗಳಿಗೆ ತಮ್ಮದೇ ಪಕ್ಷದ ಶಾಸಕರನ್ನು ಖರೀದಿ ಮಾಡುತ್ತಿದ್ದಾರೆ ಎಂಬ ಮಾಹಿತಿ ನಮಗೂ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯ ಅವರಿಗೂ ಈ ಮಾಹಿತಿ ಇದೆ, ಕಾಂಗ್ರೆಸ್ ಪಕ್ಷದ ಮುಖಂಡರ ಮೇಲೇ ಆರೋಪ ಮಾಡಲು ಸಾಧ್ಯವಾಗದೇ ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಕಾಲವೇ ಉತ್ತರಿಸಲಿದೆ

ಶಾಸಕರ ಖರೀದಿ ವಿಚಾರಕ್ಕೆ ಬರುವ ದಿನಗಳಲ್ಲಿ ಕಾಲವೇ ಉತ್ತರಿಸಲಿದೆ, ರಾಜೀನಾಮೆ ಕೊಡುವ ಕಾಲ ಸನ್ನಿಹಿತವಾಗಿದೆ ಎಂಬುದು ಸ್ವತಃ ಸಿದ್ದರಾಮಯ್ಯ ಅವರಿಗೆ ಮನವರಿಕೆ ಆಗಿದ್ದು, ಬಿಜೆಪಿ ವಿರುದ್ಧ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.

ಯಾವತ್ತು ರಾಜೀನಾಮೆ ಕೊಡುತ್ತಾರೆ, ಯಾರು ಹೊಸ ಮುಖ್ಯಮಂತ್ರಿ ಎಂಬುದೇ ಈಗಿರುವ ಪ್ರಶ್ನೆ, ಕಾಂಗ್ರೆಸ್ ಪಕ್ಷದೊಳಗೇ ಕುದುರೆವ್ಯಾಪಾರ ನಡೆದಿದೆ.

ಬಿಜೆಪಿಯಲ್ಲಿರುವುದು ೬೬ ಶಾಸಕರು, ಸರ್ಕಾರ ಉರುಳಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ, ಸಿದ್ದರಾಮಯ್ಯ ತಮ್ಮ ಅಕ್ಕಪಕ್ಕ ಇರುವ ಹಿರಿಯ ಸಚಿವರಿಗೆ ಭಯ ಪಡಬೇಕಿದೆ, ಬಿಜೆಪಿ ಬಗ್ಗೆ ಅಲ್ಲ.

‘ಕುಳ್ಳ’ ಎಂದು ಕರೆಯುವ ವಾತಾವರಣದಿಂದ ಬಂದಿಲ್ಲ
ಸಿದ್ದರಾಮಯ್ಯ ರಾಜೀನಾಮೆ

ಸಿದ್ದರಾಮಯ್ಯ ರಾಜೀನಾಮೆ ವಿಚಾರದಲ್ಲಿ ಬದಲಾವಣೆ ಇಲ್ಲ, ಮಹಾರಾಷ್ಟ್ರ ಚುನಾವಣೆ ಫಲಿತಾಂಶ ಬಳಿಕ ಯಾವುದೇ ಕ್ಷಣದಲ್ಲಿ ಈ ಬೆಳವಣಿಗೆ ನಡೆಯಲಿದೆ, ಸಿದ್ದರಾಮಯ್ಯ ಅತಿ ಶೀಘ್ರದಲ್ಲೇ ರಾಜೀನಾಮೆ ನೀಡುತ್ತಾರೆ ಎಂದರು.

ಉಪಚುನಾವಣೆ ನಡದ ಮೂರು ಕ್ಷೇತ್ರಗಳಲ್ಲೂ ಬಿಜೆಪಿ-ಎನ್‌ಡಿಎ ಗೆದ್ದು ಹೊಸ ಇತಿಹಾಸ ಸೃಷ್ಟಿ ಆಗಲಿದೆ, ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರಿನ ವಿಧಾನಸಭಾ ಉಪಚುನಾವಣೆಯಲ್ಲಿ ಎನ್‌ಡಿಎ ಗೆಲ್ಲಲಿದೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿನ ಭ್ರಮೆಯಲ್ಲಿತ್ತು, ಆದರೆ, ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲ್ಲುವ ವಾತಾವರಣ ಇದೆ, ಸಂಡೂರಿನಲ್ಲೂ ಬಿಜೆಪಿಗೆ ಐತಿಹಾಸಿಕ ಗೆಲುವಿನ ವಿಶ್ವಾಸವಿದೆ, ಶಿಗ್ಗಾಂವಿಯಲ್ಲೂ ಭರತ್ ಬೊಮ್ಮಾಯಿ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ.

ಕುಟುಂಬವೇ ಭ್ರಷ್ಟಾಚಾರದಲ್ಲಿ

ಕಾಂಗ್ರೆಸ್‌ನಲ್ಲಿ ಸ್ವತಃ ಮುಖ್ಯಮಂತ್ರಿಗಳ ಕುಟುಂಬವೇ ಭ್ರಷ್ಟಾಚಾರದಲ್ಲಿ ಮುಳುಗಿದೆ, ಮುಖ್ಯಮಂತ್ರಿ ಕುರ್ಚಿ ಅಲ್ಲಾಡುತ್ತಿದೆ ಎಂಬುದು ಮನವರಿಕೆಯಾಗಿದೆ, ಕಾಂಗ್ರೆಸ್ಸಿನ ಕೆಲವು ಹಿರಿಯ ಮುಖಂಡರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಲು ಮುಂದಾಗಿದ್ದಾರೆ.

ಹೊರಗಡೆಯಿಂದ ಬಂದವರಿಗೆ 5 ವರ್ಷ ಅವಕಾಶ ಕೊಟ್ಟಿದ್ದು, ಈಗ ಮತ್ತೆ 2 ವರ್ಷವಾಗಿದೆ ಎಂಬ ಭಾವನೆ ಇದೆ.

ಹರಿಯಾಣದಲ್ಲಿ ಕಾಂಗ್ರೆಸ್ ಗೆಲ್ಲುವ ಭ್ರಮೆಯಲ್ಲಿದ್ದರು, ಕರ್ನಾಟಕದಲ್ಲಿನ ಭ್ರಷ್ಟ ಆಡಳಿತದ ಪರಿಣಾಮ ಆ ರಾಜ್ಯದಲ್ಲಿ ಸೋಲಯಿತು, ಈಗ ಮಹಾರಾಷ್ಟ್ರದಲ್ಲೂ ಸೋಲಲಿದ್ದಾರೆ ಎಂದರು.

ರೈತರ ಬೃಹತ್ ಪ್ರತಿಭಟನೆ

ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಬೆಳಗಾವಿಯಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಸುತ್ತೇವೆ, ಎರಡು ಹಂತದಲ್ಲಿ ಹೋರಾಟಕ್ಕೆ ನಿರ್ಧರಿಸಿದ್ದೇವೆ, ಅದರ ಪ್ರಕಾರ 3 ತಂಡಗಳನ್ನು ರಚಿಸಿದ್ದೇವೆ.

ರೈತರ ಪರ ಹೋರಾಟಕ್ಕೆ ನಮ್ಮ ತಕರಾರಿಲ್ಲ, ವಕ್ಫ್ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಅಯೋಗ್ಯತನ ಪ್ರದರ್ಶಿಸುತ್ತಿದೆ, ರೈತರ ಜಮೀನು ಕಿತ್ತುಕೊಳ್ಳುತ್ತಿದ್ದು, ರಾಜ್ಯದ ರೈತರು ಆತಂಕದಲ್ಲಿದ್ದಾರೆ, ಮಠಮಾನ್ಯಗಳ ಜಮೀನು, ದೇವಸ್ಥಾನಗಳ ಜಮೀನು ಕಿತ್ತುಕೊಳ್ಳಲಾಗುತ್ತಿದೆ.

ರಾಜ್ಯ ಸರ್ಕಾರ ಸ್ಪಷ್ಟ ಉತ್ತರ ಕೊಡುವವರೆಗೆ, ರೈತರಿಗೆ ನಿರಾಳತೆ ಸಿಗುವವರೆಗೆ ದೃಢ ಹೋರಾಟ ಮುಂದುವರೆಯಲಿದೆ.

ಶಾಸಕರು, ವಿಧಾನಪರಿಷತ್ ಸದಸ್ಯರು, ಕೇಂದ್ರ ಸಚಿವರೂ ಹೋರಾಟದಲ್ಲಿ ಪಾಲ್ಗೊಂಡು ರೈತರ ಪರ ಧ್ವನಿ ಎತ್ತಲಿದ್ದಾರೆ, ಯಡಿಯೂರಪ್ಪ ಅವರು ರೈತರ ಹೆಸರಿನಲ್ಲೇ ಪ್ರಮಾಣವಚನ ಸ್ವೀಕರಿಸಿ ಆಡಳಿತ ನಡೆಸಿದವರು, ರೈತರ ವಿಚಾರದ ಹೋರಾಟದಲ್ಲಿ ಬಿಜೆಪಿ ಹಿಂದೆ ಬೀಳುವ ಪ್ರಶ್ನೆಯೇ ಇಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpby vijayendracm siddaramaiahcongrescourrption
0 FacebookTwitterPinterestEmail
admin

previous post
‘ಕುಳ್ಳ’ ಎಂದು ಕರೆಯುವ ವಾತಾವರಣದಿಂದ ಬಂದಿಲ್ಲ
next post
ಮಹಾರಾಷ್ಟ್ರದಲ್ಲೂ ಕರ್ನಾಟಕವೇ ರಾಜಕೀಯ ಅಸ್ತ್ರ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ