Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ನೆರವು ನೀಡಲು ಸಿದ್ದ

by KM Shivaraju December 1, 2024
written by KM Shivaraju December 1, 2024 0 comments 1 minutes read
0FacebookTwitterPinterestEmail
153

ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ಮೀಸಲು : ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ನಾನು ಸದಾ ಸಿದ್ದ. ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದೆ. ರಾಜ್ಯದಿಂದ ಯಾರಾದರೂ ಒಲಂಪಿಕ್ಸ್ ನಲ್ಲಿ ದೇಶಕ್ಕೆ ಒಂದು ಚಿನ್ನ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕರ್ನಾಟಕ ಒಲಂಪಿಕ್ ಸಂಸ್ಥೆ ಯವನಿಕಾದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಪ್ರಶಸ್ತಿಗಳನ್ನು ವಿತರಿಸಿ ಅವರು ಮಾತನಾಡಿದರು.

ಚಿನ್ನದ ಪದಕ ಪಡೆದವರಿಗೆ 6 ಕೋಟಿ ಹಣ ಮೀಸಲಿಟ್ಟಿದ್ದೀವಿ. ಬೆಳ್ಳಿ ಪದಕ ಪಡೆದವರಿಗೆ 4 ಕೋಟಿ ಹಣ ಇಟ್ಟಿದ್ದೇವೆ. ಆದರೆ ಯಾರೂ ಪದಕ ತರ್ತಾನೇ ಇಲ್ಲ. ದೇಶಕ್ಕೆ ಯಾರಾದರೂ ಚಿನ್ನ ತನ್ನಿ ಎಂದು ಕರೆ ನೀಡಿದರು.

ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಬೇಕು ಎನ್ನುವ ಪ್ರೋತ್ಸಾಹದಾಯಕ ಉದ್ದೇಶದಿಂದ ಕರ್ನಾಟಕ ಒಲಂಪಿಕ್ ಸಂಸ್ಥೆ 22 ವರ್ಷಗಳಿಂದ ಈ ಪ್ರಶಸ್ತಿಗಳನ್ನು ನೀಡುತ್ತಿದೆ.

ಗೋವಿಂದರಾಜು ಅವರು ಒಲಂಪಿಕ್ ಸಂಸ್ಥೆ ಅಧ್ಯಕ್ಷರಾಗಿ ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ನಿರಂತರ ಶ್ರಮಿಸುತ್ತಿದ್ದಾರೆ. ನಾನು ಬಜೆಟ್ ರೂಪಿಸುವಾಗ ಚರ್ಚೆಯಲ್ಲಿ ಕುಳಿತು ಕ್ರೀಡಾಕ್ಷೇತ್ರಕ್ಕೆ ಅಗತ್ಯವಾದ ಎಲ್ಲವನ್ನೂ ಸೇರಿಸುತ್ತಾರೆ. ನಾನು ಕ್ರೀಡಾಪಟು ಅಲ್ಲದಿದ್ದರೂ ಕ್ರೀಡಾಪ್ರೇಮಿ. ನಾನು ಶಾಲಾ, ಕಾಲೇಜಿನಲ್ಲಿ ಎಲ್ಲಾ ಕ್ರೀಡೆಗಳಲ್ಲೂ ಭಾಗವಹಿಸುತ್ತಿದ್ದೆ. ಒಂದೂ ಪ್ರಶಸ್ತಿ ಬರಲಿಲ್ಲ. ಆದರೆ ಶಾಸಕರ ಕ್ರೀಡಾಕೂಟದಲ್ಲಿ ಸಿಕ್ಕಾಪಟ್ಟೆ ಪ್ರಶಸ್ತಿ ಬಂತು ಎಂದು ಸ್ಮರಿಸಿದರು.

ಕ್ರೀಡೆಯಲ್ಲಿ ಸಣ್ಣ ಪುಟ್ಟ ದೇಶಗಳೆಲ್ಲಾ ಬಹಳ‌ ಮುಂದಿವೆ. ಆದರೆ, ಭಾರತದಂತಹ ದೊಡ್ಡ ದೇಶಕ್ಕೆ ಒಲಂಪಿಕ್ ನಲ್ಲಿ ಒಂದೂ ಚಿನ್ನ ಬರಲಿಲ್ಲ ಎನ್ನುವುದು ಬೇಸರದ ಸಂಗತಿ ಎಂದರು.

ಹೀಗಾಗಿ ನಾನು ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಇರುವ ಎಲ್ಲಾ ಅನುಕೂಲ ಕಲ್ಪಿಸಿಕೊಡಲು ನಾನು ಸಿದ್ಧ. ರಾಜ್ಯದ ಪಟುಗಳು ದೇಶಕ್ಕೆ ಒಲಂಪಿಕ್ಸ್ ನಲ್ಲಿ ಚಿನ್ನ ತರಲಿ ಎಂದು ಆಶಿಸಿದರು.

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಒಲಂಪಿಕ್ ಸಂಸ್ಥೆ ಅಧ್ಯಕ್ಷರಾದ ಗೋವಿಂದರಾಜು ಅವರು ಶಾಲಾ ಮಕ್ಕಳು ಕ್ರೀಡೆಯಲ್ಲಿ ಹೆಚ್ಚೆಚ್ಚು ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ಕ್ರೀಡಾ ಮಕ್ಕಳಿಗೆ ಶೇ.25 ರಷ್ಡು ಹಾಜರಾತಿ ಮತ್ತು 10 ಗ್ರೇಸ್ ಮಾರ್ಕ್ ನೀಡುವಂತೆ ನಿಯಮ ರೂಪಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಈ ಬಗ್ಗೆ ಪ್ರಸ್ತಾಪಿಸಿದ ಸಿಎಂ, ಈ ಬೇಡಿಕೆಗಳು ನ್ಯಾಯೋಚಿತವಾಗಿವೆ. ಈ ಬಗ್ಗೆ ಗಂಭೀರವಾಗಿ ಪರಿಶೀಲನೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
6 crorescmgold medalistsnecessary assistanceprovidereserveSiddaramaiah
0 FacebookTwitterPinterestEmail
KM Shivaraju

previous post
ಜಿಲ್ಲಾ, ತಾಲ್ಲೂಕು, ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ
next post
ರಾಜ್ಯಾದ್ಯಂತ ಪಕ್ಷದ ಬಲವರ್ಧನೆ ಜವಾಬ್ದಾರಿ ನಿಖಿಲ್ ಗೆ : ಕುಮಾರಸ್ವಾಮಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ