Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ಮರಳು ನೀತಿ ಜಾರಿ: ಶ್ರೇಣಿ ಆಧರಿಸಿ ದರ ನಿಗದಿ

by admin December 3, 2024
written by admin December 3, 2024 0 comments 2 minutes read
0FacebookTwitterPinterestEmail
207

ಬೆಂಗಳೂರು:ಕಡೆಗೂ ಮರಳು ನೀತಿ ಜಾರಿಗೊಳಿಸಿರುವ ಸರ್ಕಾರ ಇಂದಿನಿಂದಲೇ ಸಾಮಾನ್ಯ ಮರಳಿನ ಪ್ರತಿ ಮೆಟ್ರಿಕ್ ಟನ್‌ಗೆ 300 ಹಾಗೂ ಉತ್ತಮ ದರ್ಜೆಯ ಮರಳಿಗೆ 850 ರೂ.ನಂತೆ ದರ ನಿಗದಿ ಪಡಿಸಿದೆ.

ನದಿ ಪಾತ್ರದಲ್ಲಿ ದೊರಕುವ ಮರಳನ್ನು ಉತ್ತಮ ದರ್ಜೆ ಎಂದು ಪ್ರತಿ ಟನ್‌ಗೆ 850 ರೂ. ನಿಗದಿ ಪಡಿಸಿರುವ ಸರ್ಕಾರ, ಪಂಚಾಯತ್ ಮಟ್ಟದಲ್ಲಿ ಹಳ್ಳಕೊಳ್ಳದಲ್ಲಿ ತೆಗೆಯುವ ಮರಳಿಗೆ ಪ್ರತಿ ಟನ್‌ಗೆ 300 ರೂ.ನಂತೆ ನಿಗದಿ ಪಡಿಸಿದೆ.

ಕೈಗೆಟಕುವ ಬೆಲೆಗೆ

ಈ ಸಂಬಂಧ ತೋಟಗಾರಿಕೆ ಹಾಗೂ ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪತ್ರಿಕಾ ಹೇಳಿಕೆ ನೀಡಿದ್ದು, ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟಕುವ ದರದಲ್ಲಿ ಮರಳು ಸಿಗಲಿ ಎಬ ಉದ್ದೇಶದಿಂದ ಮರಳು ನೀತಿ ಜಾರಿಗೆ ತಂದಿದ್ದೇವೆ.

ಸಾರ್ವಜನಿಕ ಹಾಗೂ ಸ್ಥಳೀಯ ಸರ್ಕಾರಿ ಕಾಮಗಾರಿಗಳಿಗೆ ನಿಗದಿತ ಕಡಿಮೆ ಬೆಲೆಯಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಮರಳು ಪೂರೈಸಲು ಮೂರು ಶ್ರೇಣಿಗಳಾಗಿ ವಿಂಗಡಿಸಲಾಗಿದೆ ಎಂದಿದ್ದಾರೆ.

ಹಳ್ಳ-ಕೊಳ್ಳದಲ್ಲಿ ಲಭ್ಯ ಮರಳು ತೆಗೆದು ವಿಲೇವಾರಿ ಜವಾಬ್ದಾರಿಯನ್ನು ಆಯಾ ಗ್ರಾಮ ಪಂಚಾಯತ್‌ಗಳಿಗೆ ವಹಿಸಿ ಪ್ರತಿ ಮೆಟ್ರಿಕ್ ಟನ್ ಬೆಲೆಯನ್ನು 300ರೂ.ಗೆ ನಿಗದಿ ಪಡಿಸಲಾಗಿದೆ ಎಂದು ಹೇಳಿದ್ದಾರೆ.

ಖುದ್ದು ಉತ್ತರ ನೀಡಲು ದೆಹಲಿಯಲ್ಲಿ ಯತ್ನಾಳ್ ತಂಡ !
ಖಾಸಗಿ ಗಣಿಗಾರಿಕೆ

ನದಿ ಹಾಗೂ ಅದರ ಪಾತ್ರಗಳಲ್ಲಿ ಲಭ್ಯವಿರುವ ಬ್ಲ್ಯಾಕ್‌ಗಳನ್ನು 4 ಮತ್ತು 5ನೇ ಉನ್ನತ ಶ್ರೇಣಿಯೆಂದು ಗುರುತಿಸಿ ಅಂತಹ ಪ್ರದೇಶ ಅಥವಾ ಗುಡ್ಡಗಳನ್ನು ಖಾಸಗಿ ಗಣಿಗಾರಿಕೆಗೆ ಅವಕಾಶ ಮಾಡಿಕೊಡಲಾಗಿದೆ.

ಸಾರ್ವಜನಿಕ ಹಾಗೂ ಖಾಸಗಿ ಸಂಸ್ಥೆಗಳು ಟೆಂಡರ್ ಮೂಲಕ ಈ ಬ್ಲ್ಯಾಕ್‌ಗಳನ್ನು ಪಡೆದು ಸರ್ಕಾರಕ್ಕೆ ರಾಯಲ್ಟಿ ನೀಡಿ ಗಣಿಗಾರಿಕೆ ಮಾಡಬಹುದಾಗಿದೆ.

ಹೊಸ ನೀತಿಯಂತೆ ಮರಳು ಬ್ಲ್ಯಾಕ್‌ಗಳ ಟೆಂಡರ್ ಅನ್ನು ಆಯಾ ಜಿಲ್ಲಾ ಸಮಿತಿಯಿಂದ ನಡೆಸಲಾಗುವುದು.

ತರುಣ್ ಚುಗ್ ಬೆಂಗಳೂರಿಗೆ ಆಗಮನ
ಪರಿಶಿಷ್ಟರಿಗೆ ಮೀಸಲಾತಿ

ಜಿಲ್ಲಾವಾರು ಗುರುತಿಸಲಾಗುವ ಮರಳು ಬ್ಲ್ಯಾಕ್‌ಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಮತ್ತು ಇತರೆ ಸಾಮಾನ್ಯ ವರ್ಗದವರಿಗೆ ರೋಸ್ಟರ್ ಪದ್ಧತಿಯಡಿ ಮೀಸಲಾತಿ ಕಲ್ಪಿಸಲಾಗಿದೆ.

ಈ ಉನ್ನತ ಶ್ರೇಣಿಯ ಮರಳಿಗೆ ರಾಜ್ಯದ್ಯಾಂತ ಪ್ರತಿ ಮೆಟ್ರಿಕ್ ಟನ್ ಮರಳಿಗೆ 850 ರೂ. ನಿಗದಿ ಪಡಿಸಲಾಗಿದೆ.

ಸರ್ಕಾರ ನಿಗದಿ ಪಡಿಸುವ ಮಾರಾಟ ಬೆಲೆ ಮೊತ್ತದ ಶೇಕಡ 50ರಷ್ಟನ್ನು ಮಾರಾಟ ಬೆಲೆ ಎಂಬುದಾಗಿ ಹಾಗೂ ಇದರಲ್ಲಿ ಶೇಡಕ 60ರಷ್ಟನ್ನು ಕಟ್‌ಆಫ್ ಬೆಲೆಯೆಂದು ನಿಗದಿ ಪಡಿಸಲಾಗಿರುತ್ತದೆ.

ಸೆಲ್ಲಿಂಗ್, ಕಟ್‌ಆಫ್ ದರ

ಸೆಲ್ಲಿಂಗ್ ಮತು ಕಟ್‌ಆಫ್ ಬೆಲೆಗೆ ಸಮನಾದ ಅಥವಾ ನಡುವೆ ಸಲ್ಲಿಸುವ ಕಡಿಮೆ ಟೆಂಡರ್ ಮೊತ್ತ ನಮೂದಿಸುವವರಿಗೆ ಯಶಸ್ವಿ ಬಿಡ್‌ದಾರರೆಂದು ಪರಿಗಣಿಸಲಾಗುವುದು.

ಒಂದಕ್ಕಿಂತ ಹೆಚ್ಚು ಟೆಂಡರ್‌ದಾರರು ಏಕರೂಪ ಟೆಂಡರ್ ದರ ನಮೂದಿಸಿದಲ್ಲಿ ಲಾಟರಿ ಮೂಲಕ ಯಶಸ್ವಿ ಬಿಡ್‌ದಾರರನ್ನು ಆಯ್ಕೆ ಮಾಡಲಾಗುವುದು.

ಗುತ್ತಿಗೆ ಪ್ರಕ್ರಿಯೆಯನ್ನು ಇ-ಪೋರ್ಟಲ್‌ನಲ್ಲಿ ಆಸಕ್ತ ವ್ಯಕ್ತಿ ಇಲ್ಲವೇ ಖಾಸಗಿ ಕಂಪನಿಗಳವರು ಅರ್ಜಿ ಸಲ್ಲಿಸಲು ಜಿಲ್ಲಾವಾರು ಅಧಿಸೂಚನೆ ಜಾರಿ ಮಾಡಲಾಗುವುದು.

ಇಂದಿನಿಂದಲೇ ಜಿಲ್ಲಾಧಿಕಾರಿಗಳು ಹೊಸ ನೀತಿಯಡಿ ಮರಳು ಗುತ್ತಿಗೆ ನೀಡಿ ಗ್ರಾಹಕರಿಗೆ ಸರ್ಕಾರ ನಿಗದಿ ಪಡಿಸಿದ ದರದಲ್ಲಿ ಮಾರಾಟ ಮಾಡಬಹುದು ಎಂದು ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
minister s s mallikarjunsand policystate govt. decision
0 FacebookTwitterPinterestEmail
admin

previous post
ಖುದ್ದು ಉತ್ತರ ನೀಡಲು ದೆಹಲಿಯಲ್ಲಿ ಯತ್ನಾಳ್ ತಂಡ !
next post
ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ದುರುದ್ದೇಶ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ