ಬೆಂಗಳೂರು:ರಾಜಧಾನಿ ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ, ಐಟಿ ಹಬ್ ಸ್ಥಾನ ಒದಗಿಸಿ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಮರಣೋತ್ತರ ’ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಎಸ್.ಎಂ.ಕೃಷ್ಣ ಅವರ ಕೊಡುಗೆ ಗುರುತಿಸಿ, ಕರ್ನಾಟಕದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ’ಕರ್ನಾಟಕ ರತ್ನ’ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ತಮ್ಮ ಅಭಿಪ್ರಾಯ ಎಂದಿದ್ದಾರೆ.
ಮುಖ್ಯಮಂತ್ರಿ ಅವರು, ಈ ಸಲಹೆ ಪರಿಗಣಿಸಿ ಕೃಷ್ಣ ಅವರಿಗೆ ’ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವ ಸಲ್ಲಿಸಬೇಕೆಂದು ಮನವಿ ಮಾಡಿದ್ದಾರೆ.