Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆ

by admin December 20, 2024
written by admin December 20, 2024 0 comments 1 minutes read
0FacebookTwitterPinterestEmail
194

ನವದೆಹಲಿ:ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರು ಎಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ, ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮೇಲೆ ಸುವರ್ಣಸೌಧದಲ್ಲೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ ಅಶ್ಲೀಲ ಪದ ಬಳಸಿದ್ದರೆ, ಅದನ್ನು ನಾನು ಸಮರ್ಥಿಸುವುದಿಲ್ಲ, ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಕದ್ದು ಎಂದಿದ್ದಾರೆ.

ಕೆಟ್ಟ ನಡವಳಿಕೆಗಳು ಆಘಾತಕಾರಿ

ಎಲ್ಲದ್ದಕ್ಕೂ ಡಾ.ಅಂಬೇಡ್ಕರ್ ಸಂವಿಧಾನದಡಿ ರೂಪಿತ ಕಾನೂನಿದೆ, ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ, ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ, ಸರಕಾರದಲ್ಲಿರುವ ಕೆಲವರು ಈ ಘಟನೆಗೆ ಜ್ವಾಲೆ ಸ್ವರೂಪ ನೀಡಿ ಪ್ರಚೋದಿಸುತ್ತಿರುವುದು ಕಳವಳಕಾರಿ.

ಮೀಸಲಾತಿಗಾಗಿ ಪಂಚಮಸಾಲಿ ಮುಖಂಡರು ಸುವರ್ಣಸೌಧದ ಮುಂದೆ ಪ್ರತಿಭಟಿಸಿದ್ದಕ್ಕೆ ಪೊಲೀಸರಿಂದ ಲಾಠಿ ಚಾರ್ಜ್ ಮಾಡಿಸಿ ಪೌರುಷ ಮೆರೆದಿತ್ತು ಕರ್ನಾಟಕ ಕಾಂಗ್ರೆಸ್ ಸರ್ಕಾರ, ಅಂದು ಪೊಲೀಸರ ಪ್ರತಾಪ ಹೇಳತೀರದು, ಗೇಟಿನ ಬಳಿಯೇ ತಡೆದು ಪಂಚಮಸಾಲಿ ಜನರಿಗೆ ರಕ್ತ ಬರುವಂತೆ ಲಾಠಿ ಬೀಸಿದ ಪೊಲೀಸರೇ, ಈ ಗೂಂಡಾಗಳು ಸುವರ್ಣಸೌಧದೊಳಕ್ಕೆ ಹೇಗೆ ಬಂದರು ಅಥವಾ ಅವರೇ ನಿಮ್ಮ ಕಣ್ತಪ್ಪಿಸಿ ಒಳನುಸಳಿದರೋ ಅಥವಾ ಸರ್ಕಾರವೇ ಷಡ್ಯಂತ್ರ ಮಾಡಿ ಒಳ ನುಗ್ಗಿಸಿತೋ, ಇಲ್ಲವೇ ಯಾವುದಾದರೂ ಕಲ್ಲು ಬಂಡೆಯ ಕರಾಮತ್ತು, ಕುಮ್ಮಕ್ಕು ಇದೆಯಾ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಸದನದ ಕಾರಿಡಾರಿನಲ್ಲಿಯೇ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್‌ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ಬಂಡೆ ಬೆಂಬಲವಿದೆ ಎಂದೇ ಅರ್ಥ.

ಕರ್ನಾಟಕದಲ್ಲಿ ಪೊಲೀಸ್ ದುರ್ಬಳಕೆ ಹೆಚ್ಚುತ್ತಿದೆ
ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ

ಆ ಗೌರವಾನ್ವಿತ ಸಚಿವೆಯ ಆಪ್ತ ಸಹಾಯಕ ಶಾಸಕರ ಮೇಲೇರಿ ಹೋಗುವ, ಕಾರಿಡಾರಿನ ಕಬ್ಬಿಣದ ಬಾಗಿಲನ್ನೇ ಮುರಿಯಲೆತ್ನಿಸಿ ಹಲ್ಲೆಗೆ ಯತ್ನಿಸುವ ದೃಶ್ಯಗಳು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ, ರಾಜ್ಯದಲ್ಲಿ ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ ಎನ್ನುವುದಕ್ಕೆ ಆ ದೃಶ್ಯಗಳೇ ಸಾಕ್ಷಿ.

ಸುವರ್ಣಸೌಧಕ್ಕೆ ನುಗ್ಗಿದ ಗೂಂಡಾಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ರೌಡಿಪಟ್ಟಿ ತೆರೆಯಬೇಕು, ಸಮಾಜದ ಶಾಂತಿಗೆ ಬೆದರಿಕೆಯಾಗಿರುವ ಆ ಕಿಡಿಗೇಡಿಗಳನ್ನು ಸುವರ್ಣಸೌಧ, ವಿಧಾನಸೌಧದಿಂದ ಶಾಶ್ವತವಾಗಿ ನಿರ್ಬಂಧಿಸಬೇಕು.

ಇಡೀ ಪ್ರಕರಣದ ಬಗ್ಗೆ ಪೊಲೀಸರೇ ಉತ್ತರಿಸಬೇಕಾಗುತ್ತದೆ, ಇಡೀ ರಾತ್ರಿ ಸಿ.ಟಿ.ರವಿ ಅವರನ್ನು ಪೊಲೀಸ್ ಜೀಪಿನಲ್ಲಿ ಸುತ್ತಿಸುತ್ತೀರಿ ಎಂದರೆ, ಇದಕ್ಕೆ ಯಾರ ಫರ್ಮಾನು ಕಾರಣ, ಈ ಗೂಂಡಾಗಳ ಗ್ಯಾಂಗ್ ಲೀಡರ್ ಯಾರು, ನಿಮಗೆ ಎಲ್ಲಾ ಮಾಹಿತಿ ಇರುತ್ತದೆ, ನೀವೂ ಸತ್ಯ ಹೇಳಬೇಕಾಗುತ್ತದೆ ಎಂದು ಒತ್ತಾಯಿಸಿದ್ದಾರೆ.

ಸಚಿವೆ ಬಗ್ಗೆ ಸಿ.ಟಿ.ರವಿ ಪದ ಬಳಕೆ ವಿಡಿಯೊ ನೋಡಿಲ್ಲ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
balagavi incidentc t ravicentral minister h d kumara swamydemocracy is dying in karnataka
0 FacebookTwitterPinterestEmail
admin

previous post
ಕರ್ನಾಟಕದಲ್ಲಿ ಪೊಲೀಸ್ ದುರ್ಬಳಕೆ ಹೆಚ್ಚುತ್ತಿದೆ
next post
ಸಿದ್ದರಾಮಯ್ಯ ಬಗ್ಗೆಯೂ ರವಿ ಹೀನ ಮಾತು ಆಡಿದ್ದಾರೆ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ