Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಭೆ ವಿರೋಧಿಸುವವರಿಗೆ ಉತ್ತರ ಕೊಡುವ ಶಕ್ತಿ ಇದೆ

by admin January 8, 2025
written by admin January 8, 2025 0 comments 2 minutes read
0FacebookTwitterPinterestEmail
148

ಬೆಂಗಳೂರು:ಎಸ್‌ಸಿ, ಎಸ್‌ಟಿ ಸಮಾವೇಶ ಕುರಿತು ಚರ್ಚೆ ಮಾಡುವ ಸಭೆಗಳನ್ನು ಸಹಿಸುವುದಿಲ್ಲ ಎನ್ನುವವರಿಗೆ ತಕ್ಕ ಉತ್ತರ ಕೊಡುವ ಶಕ್ತಿ ನಮಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆ ಸಹಿಸುವುದಿಲ್ಲ ಎಂಬುದಾಗಿ ನನಗೆ ಯಾರು ಹೇಳಿಲ್ಲ, ಆ ರೀತಿ ಯಾರಾದರು ಹೇಳಿದರೆ, ನಾವು ತಲೆ ಕೆಡಿಸಿಕೊಳ್ಳುವುದಿಲ್ಲ, ಅದಕ್ಕೆ ಸರಿಯಾಗಿ ಉತ್ತರ ಕೊಡುತ್ತೇವೆ ಎಂದರು.

ಅನೇಕ ಭರವಸೆ ಈಡೇರಿಸಿದೆ

ವಿಧಾನಸಭೆ ಚುನಾವಣೆಗೂ ಮೊದಲು ಚಿತ್ರದುರ್ಗದಲ್ಲಿ ಎಸ್‌ಸಿ, ಎಸ್‌ಟಿ ಸಮಾವೇಶ ಮಾಡಲಾಗಿತ್ತು, ಸರ್ಕಾರ ಅಧಿಕಾರಕ್ಕೆ ಬಂದರೆ ಅನೇಕ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಹೇಳಿಕೊಂಡಿದ್ದೆವು, ಚಿತ್ರದುರ್ಗ ರೆಸ್ಯುಲ್ಯೂಷನ್ ಅಂತ ಹೆಸರು ಕೊಟ್ಟು ಬೇಡಿಕೆಗಳನ್ನು ಇಟ್ಟಿದ್ದರು, ಅದರಂತೆ ಕಾಂಗ್ರೆಸ್ ಅಧಿಕಾರಕ್ಕೆ ಬಂತು, ಅನೇಕ ಭರವಸೆಗಳನ್ನು ಸರ್ಕಾರ ಈಡೇರಿಸಿದೆ.

ಕೇಂದ್ರ ಸರ್ಕಾರದಿಂದ ಪೋಸ್ಟ್ ಮ್ಯಾಟ್ರಿಕ್ ಸ್ಕಾಲರ್‌ಶಿಪ್, ಎಸ್‌ಸಿಪಿ/ಟಿಎಸ್‌ಪಿ ಅನುದಾನ ಪಾಲು ರಾಜ್ಯಕ್ಕೆ ಬರುತ್ತಿಲ್ಲ, ಎಲ್ಲವನ್ನು ಚರ್ಚೆ ಮಾಡಬೇಕಿದೆ. ಒಟ್ಟಾಗಿ ಸಮಸ್ಯೆಗಳ ಪರಿಹಾರಕ್ಕೆ ಸಭೆ ತೀರ್ಮಾನಿಸಿತ್ತು.

ಈ ವಿಚಾರವನ್ನು ದೆಹಲಿ ನಾಯಕರ ಗಮನಕ್ಕೆ ತಂದಿರಲಿಲ್ಲ, ನಮ್ಮದೇ ಆಂತರಿಕ ವಿಚಾರ ಆಗಿರುವುದರಿಂದ ಹೇಳುವ ಅವಶ್ಯಕತೆ ಇಲ್ಲ ಎಂಬ ಕಾರಣಕ್ಕೆ ತಿಳಿಸಿರಲಿಲ್ಲ, ಪಕ್ಷದ ವಿಚಾರ ಹಾಗೂ ಸರ್ಕಾರದ ತೀರ್ಮಾನಗಳು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಗಮನಕ್ಕೆ ಹೋಗುತ್ತದೆ.

ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತ !
ರಾಜಕೀಯಕ್ಕಾಗಿ ಸಭೆ ಅಲ್ಲ

ಸುರ್ಜೆವಾಲಾ, ನನಗೆ ಕರೆ ಮಾಡಿ ಸಮಾವೇಶದಲ್ಲಿ ತಾವೂ ಭಾಗವಹಿಸಬೇಕು ಎಂದಿದ್ದರು, ಅದಕ್ಕೆ ರಾಜಕೀಯ ಪ್ರೇರಿತ ಅಥವಾ ರಾಜಕೀಯಕ್ಕಾಗಿ ಮಾಡುತ್ತಿರುವ ಸಭೆ ಅಲ್ಲ, ನೀವೂ ಭಾಗವಹಿಸಬಹುದು ಎಂದು ಆಹ್ವಾನಿಸಿದೆ.

ಈಗ ಆಗುವುದಿಲ್ಲ, ಮುಂದೆ ಸಮಯ ನೀಡುತ್ತೇನೆ, ಆಗ ಸಭೆ ಮಾಡಿ ಭಾಗವಹಿಸುತ್ತೇನೆ ಎಂಬುದಾಗಿ ಸುರ್ಜೇವಾಲಾ ತಿಳಿಸಿದರು, ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಹೇಳಿದ್ದರಿಂದ ಸಭೆ ಮುಂದೂಡಿದ್ದೇವೆಯೇ ಹೊರತು ರದ್ದು ಮಾಡಿಲ್ಲ, ಅವರ ಸಮಯ ತೆಗೆದುಕೊಂಡು ಚರ್ಚೆ ಮಾಡುತ್ತೇವೆ ಎಂದರು.

ಡಿನ್ನರ್ ಬಗ್ಗೆ ಏನೇನೋ ವ್ಯಾಖ್ಯಾನ ಮಾಡಲಾಗುತ್ತಿದೆ, ಡಿನ್ನರ್ ಅಂದರೆ ಊಟ, 7 ಗಂಟೆಗೆ ಸಭೆ ಕರೆಯಲಾಗಿತ್ತು, ಚರ್ಚೆ ಎರಡು ಅಥವಾ ಮೂರು ತಾಸುಗಳವರೆಗೂ ನಡೆಯಬಹುದಾದ ಹಿನ್ನೆಲೆಯಲ್ಲಿ ಊಟದ ಸಮಯ ಆಗುವುದರಿಂದ, ಮನೆಗೆ ಹೋಗಿ ಊಟ ಮಾಡಿ ಎನ್ನುವ ಬದಲು, ಊಟಕ್ಕೆ ಏರ್ಪಾಟು ಮಾಡಲಾಗಿತ್ತು.

ಹೈಕಮಾಂಡ್ ವಿರೋಧ ಇಲ್ಲ

ಚಿತ್ರದುರ್ಗ ಸಭೆಯಲ್ಲಿ ಹೈಕಮಾಂಡ್ ಭಾಗವಹಿಸಿತ್ತು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಪ್ರಧಾನ ಕಾರ್ಯದರ್ಶಿ ಭಾಗವಹಿಸಿದ್ದರು, ಸಮಾವೇಶಕ್ಕೆ ಹೈಕಮಾಂಡ್ ವಿರೋಧ ವ್ಯಕ್ತಪಡಿಸಿಲ್ಲ, ವಿರೋಧ ಇದ್ದಿದ್ದರೆ, ಸಭೆ ನಿಲ್ಲಿಸಿ ಎಂದು ಹೇಳುತ್ತಿದ್ದರು, ಅಂತಹ ಬೆಳವಣಿಗೆ ಏನೂ ಆಗಿಲ್ಲ.

ಸಭೆ ಬೇರೆ ರೀತಿ ಆಯಾಮ ಪಡೆದುಕೊಳ್ಳುತ್ತದೆ ಎಂಬುದಾಗಿ ಹೈಕಮಾಂಡ್‌ಗೆ ದೂರು ನೀಡಿರುವ ಬಗ್ಗೆ ನನಗೆ ಗೊತ್ತಿಲ್ಲ, ಸುರ್ಜೆವಾಲಾ ಅವರು ಕರೆ ಮಾಡಿ ಕೇಳಿದಾಗ ರಾಜಕೀಯ ಲೇಪನ ಇಲ್ಲ ಎಂಬುದನ್ನು ಹೇಳಿದ್ದೇನೆ.

ಸಭೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಬೇಕು ಎನ್ನುವುದರ ಬಗ್ಗೆಯೂ ಚರ್ಚಿಸಲಾಗಿತ್ತು, ಇದರಲ್ಲಿ ಮುಚ್ಚಿಡುವಂತದ್ದು ಏನು ಇಲ್ಲ, ಮುಚ್ಚಿಟ್ಟುಕೊಂಡು ರಾಜಕಾರಣ ಮಾಡುವಂತದ್ದು ಏನಿದೆ, ಯಾವ ವಿಷಯದ ಬಗ್ಗೆ ಚರ್ಚೆ ಮಾಡಬೇಕೋ ಬಹಿರಂಗ ಚರ್ಚೆ ಮಾಡುತ್ತೇವೆ, ಯಾರಿಗೂ ಗೊತ್ತಾಗದಂತೆ ನಾಲ್ಕು ಗೋಡೆ ಮಧ್ಯೆ ಚರ್ಚಿಸುವಂತಹ ಅನಿವಾರ್ಯತೆ ಇಲ್ಲ.

ಜ್ವಲಂತ ಸಮಸ್ಯೆಗಳಿವೆ

ಅನೇಕ ಜ್ವಲಂತ ಸಮಸ್ಯೆಗಳಿವೆ, ಅಟ್ರಾಸಿಟಿ ಕೇಸ್ ದಾಖಲಾಗುತ್ತಿವೆ, ದಲಿತ ಸಮುದಾಯದ ತೊಂದರೆಗಳ ಬಗ್ಗೆ ಚರ್ಚೆ ಮಾಡಬೇಕಲ್ಲವೇ.

ಸಮಾವೇಶದಲ್ಲಿ ಹೈಕಮಾಂಡ್‌ನವರು ಭಾಗವಹಿಸುತ್ತೇವೆ ಎಂದಾಗ ಒಳ್ಳೆಯದಲ್ಲವೇ, ಅನೇಕ ತೀರ್ಮಾನಗಳು ಅಲ್ಲೇ ಆಗುತ್ತವೆ.

ಸಮಾವೇಶ ನಡೆಸುವ ಕುರಿತು ಮುಂದಿನ ದಿನಗಳಲ್ಲಿ ನೋಡೋಣ, ಸ್ವಲ್ಪ ದಿನ ಮುಂದಕ್ಕೆ ಹಾಕುವುದಾಗಿ ತಿಳಿಸಿದ್ದೇವೆ, ಮತ್ತೆ ಏರ್ಪಡಿಸುತ್ತೇವೆ, ಆಗ ಗೊತ್ತಾಗುತ್ತದೆ ಎಂದರು.

ವಿಕ್ರಂಗೌಡ ಸಾವಿನ ನಂತರ ನಕ್ಸಲರಿಗೆ ಶರಣಾಗುವಂತೆ ಕರೆ ಕೊಡಲಾಗಿತ್ತು, ಸಮಾಜದ ಮುನ್ನೆಲೆಗೆ ಬನ್ನಿ ಎಂದಿದ್ದೆ, ಎಎನ್‌ಎಫ್ ಹಿರಿಯ ಅಧಿಕಾರಿಗಳೂ ಕರೆ ಕೊಟ್ಟಿದ್ದರು, ನಕ್ಸಲರ ವಿರುದ್ಧ ಅನೇಕ ಪ್ರಕರಣಗಳಿವುದು ನಿಜ, ಶರಣಾಗತಿ ನಂತರ ಕಾನೂನಿನಲ್ಲಿ ಏನು ಅವಕಾಶವಿದೆ ಎಂಬುದನ್ನು ನೋಡುತ್ತೇವೆ, ನಕ್ಸಲರು ಶರಣಾಗುತ್ತಿದ್ದಾರೆ ಎಂಬುದನ್ನು ಮಾತ್ರ ಹೇಳಬಲ್ಲೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres high commanddr.parameshwarsc-st meeting
0 FacebookTwitterPinterestEmail
admin

previous post
ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತ !
next post
ಸಿ.ಟಿ.ರವಿ ಘಟನೆ: ಸಿದ್ದರಾಮಯ್ಯಗೆ ರಾಜ್ಯಪಾಲರ ಪತ್ರ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ