Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ನನ್ನ ಪಾತ್ರ ಇಲ್ಲ

by admin January 30, 2025
written by admin January 30, 2025 0 comments 2 minutes read
0FacebookTwitterPinterestEmail
161

ಬೆಂಗಳೂರು:ನಾನು ಮುಂದೆ ಮುಖ್ಯಮಂತ್ರಿ ಆಗಬೇಕು ಎಂಬ ಆಲೋಚನೆಯನ್ನು ತಲೆಯಲ್ಲಿಟ್ಟುಕೊಂಡು ಪಕ್ಷ ಸಂಘಟನೆ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಪ್ರತಿಕ್ರಿಯಿಸಿದ್ದಾರೆ.

ಡಾ.ಸುಧಾಕರ್ ನನ್ನ ಬಗ್ಗೆ ಹಗುರವಾಗಿ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ, ಖಂಡಿತ ಆ ರೀತಿ ಮಾತನಾಡಬಾರದು ಎಂಬುದಾಗಿ ಮನವಿ ಮಾಡುತ್ತೇನೆ.

ಲಕ್ಷಾಂತರ ಕಾರ್ಯಕರ್ತರು ದುಡಿಯುತ್ತಿದ್ದಾರೆ

ಅವರನ್ನು ಭೇಟಿ ಮಾಡುತ್ತೇನೆ, ನಾನೂ ತಿದ್ದಿಕೊಳ್ಳುತ್ತೇನೆ, ನಾನು ರಾಜ್ಯಾಧ್ಯಕ್ಷ, ಮಂತ್ರಿ ಅಲ್ಲ, ಮನೆ, ಮಠ ಬಿಟ್ಟು ಕೆಲಸ ಮಾಡುತ್ತಿದ್ದೇನೆ, ಪಕ್ಷ ಅವರ ಸ್ವತ್ತೂ ಅಲ್ಲ, ನನ್ನ ಸ್ವತ್ತೂ ಅಲ್ಲ, ಲಕ್ಷಾಂತರ ಕಾರ್ಯಕರ್ತರು ಪಕ್ಷಕ್ಕೋಸ್ಕರ ದುಡಿಯುತ್ತಿದ್ದಾರೆ.

ಮಾಜಿ ಸಚಿವರಾಗಿ ಅವರಿಗೂ ಜವಾಬ್ದಾರಿಗಳಿವೆ, ಪಕ್ಷ ಏನು ತೀರ್ಮಾನ ಮಾಡಿದೆಯೋ ಅದಕ್ಕೆ ಕೇಂದ್ರದ ಸಮ್ಮತಿ ಇದೆ, ಇದರಲ್ಲಿ ಯಾರೂ ಮೂಗು ತೂರಿಸುವುದಿಲ್ಲ.

ಈ ರೀತಿ ಹೇಳಿಕೆಗಳು ಪಕ್ಷಕ್ಕೂ ಗೌರವ ತರುವುದಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು, ನನ್ನ ನಡವಳಿಕೆಗಳನ್ನು ತಿದ್ದಿಕೊಳ್ಳಬೇಕೆಂದು ಹೇಳಿದ್ದಾರೆ, ತಪ್ಪುಗಳಿದ್ದರೆ ತಿದ್ದಿಕೊಳ್ಳಲು ನಾನು ಸಿದ್ಧ ಎಂದರು.

ಕೇಂದ್ರ ಘಟಕ ಗಮನಿಸುತ್ತಿದೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಘಟಕ ಎಲ್ಲವನ್ನೂ ಗಮನಿಸುತ್ತಿದೆ, ಡಾ.ಸುಧಾಕರ್ ಅವರ ಆಕ್ರೋಶಭರಿತ ಮಾತುಗಳನ್ನು ಕೇಳಿದ್ದೇನೆ, ನಮ್ಮನ್ನು ಸಮಾಧಿ ಮಾಡಲು ಹೊರಟಿದ್ದಾರೆ ಎಂಬ ಮಾತನ್ನು ಆಡಿದ್ದಾರೆ, ಇಂತಹ ಹೇಳಿಕೆಗಳನ್ನು ದಯವಿಟ್ಟು ಕೊಡಬೇಡಿ, ಅದು ನಿಮಗೂ, ನನಗೂ ಗೌರವ ತರುವುದಿಲ್ಲ.

ಚುನಾವಣೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎನ್ನುವುದನ್ನು ಗೌರವಾನ್ವಿತ ಹಿರಿಯರಿಗೆ ತಿಳಿಯಪಡಿಸಲು ಇಚ್ಛಿಸುತ್ತೇನೆ, ರಾಜ್ಯಾಧ್ಯಕ್ಷನಾಗಿ ಜಿಲ್ಲಾ ಚುನಾವಣೆಗೆ ಅಭಿಪ್ರಾಯ ಕೊಟ್ಟಿಲ್ಲ, ಕೊಡುವುದಕ್ಕೆ ಅವಕಾಶವೂ ಇಲ್ಲ.

ಪಕ್ಷದ ಕೇಂದ್ರ ಘಟಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರಿಗೆ ಚುನಾವಣಾ ಜವಾಬ್ದಾರಿ ಕೊಟ್ಟಿದೆ, 13 ಜನ ವೀಕ್ಷಕರನ್ನೂ ನೇಮಿಸಿದೆ, ಪ್ರತಿಯೊಬ್ಬ ವೀಕ್ಷಕರಿಗೂ ತಲಾ ಮೂರು ಜಿಲ್ಲೆಗಳ ಜವಾಬ್ದಾರಿ ನೀಡಲಾಗಿತ್ತು.

ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ
ಮೂರು ಹೆಸರು ಶಿಫಾರಸು

ಪ್ರತಿ ಜಿಲ್ಲೆಗೂ ಚುನಾವಣಾಧಿಕಾರಿ, ರಿಟರ್ನಿಂಗ್ ಆಫೀಸರ್, ಕೋ-ರಿಟರ್ನಿಂಗ್ ಆಫೀಸರ್ ನೇಮಕಾತಿ ಆಗಿದೆ, ಇವರ ಸಮಕ್ಷಮದಲ್ಲಿ ಆಯಾ ಜಿಲ್ಲೆಗಳಲ್ಲಿ ಎಲ್ಲ ಪ್ರಮುಖರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮೂರು ಹೆಸರುಗಳನ್ನು ರಾಜ್ಯಕ್ಕೆ ಕಳುಹಿಸಿಕೊಟ್ಟಿದ್ದಾರೆ.

ಜಿಲ್ಲಾ ತಂಡದಿಂದ ಕಳುಹಿಸಿದ 3 ಹೆಸರುಗಳನ್ನು ಹೈಕಮಾಂಡ್‌ಗೆ ಕಳುಹಿಸಿಕೊಟ್ಟು ಅಲ್ಲಿ ಅಂತಿಮ ತೀರ್ಮಾನದ ಬಳಿಕ ಚುನಾವಣಾ ಪ್ರಕ್ರಿಯೆ ನಡೆದಿದೆ, ಅಧ್ಯಕ್ಷರ ಹೆಸರುಗಳ ಘೋಷಣೆಯಾಗಿದೆ, ಈ ಪ್ರಕ್ರಿಯೆಯಲ್ಲಿ ನನ್ನ ಪಾತ್ರ ಶೂನ್ಯ.

ಪಕ್ಷದ ರಾಜ್ಯಾಧ್ಯಕ್ಷನಾಗಿ ನನ್ನ ಜಿಲ್ಲೆ ಬಗ್ಗೆ ಅಭಿಪ್ರಾಯ ಕೊಡಬಹುದೇ ಹೊರತು ಬೇರೆ ಜಿಲ್ಲಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಅಭಿಪ್ರಾಯ ಕೊಡುವ ಅಧಿಕಾರ ನನಗೂ ಇಲ್ಲ ಎಂದರು.

ಹೊಸ ಪ್ರಕ್ರಿಯೆಗೆ ಅಧಿಕಾರವಿಲ್ಲ

ಸುಧಾಕರ್ ಸೇರಿದಂತೆ ಯಾರನ್ನೂ ದೂಷಿಸುವುದಿಲ್ಲ, ಚುನಾವಣಾ ಪ್ರಕ್ರಿಯೆಯ ಬಗ್ಗೆ ಅವರಲ್ಲಿ ಗೊಂದಲವಿದೆ, ಇಡೀ ದೇಶದಲ್ಲಿ ಪಕ್ಷದ ಸಂಘಟನಾತ್ಮಕ ಚುನಾವಣೆ ಇದೇ ರೀತಿಯಲ್ಲಿ ನಡೆಯುತ್ತಿದೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಹಾಗೆಯೇ ನಡೆದಿದೆ, ಹೊಸದಾಗಿ ಯಾವುದೇ ಪ್ರಕ್ರಿಯೆ ಮಾಡಲು ನನಗೆ ಅಧಿಕಾರವಿಲ್ಲ.

ಅವರ ಜಿಲ್ಲೆಯಲ್ಲಿ ಆಯ್ಕೆಯಾದವರೂ ಪಕ್ಷದ ಒಬ್ಬ ಕಾರ್ಯಕರ್ತ, ಅಲ್ಲದೆ, ಡಾ.ಸುಧಾಕರ್ ಸಂಬಂಧಿ, ಚುನಾವಣಾ ಪ್ರಕ್ರಿಯೆಯನ್ನು ಅರ್ಥ ಮಾಡಿಕೊಳ್ಳಲಿ, ಅವರು ಏನೇ ಟೀಕೆ ಮಾಡಿದರೂ ನಾನು ಟೀಕಿಸುವುದಿಲ್ಲ.

ಚಿಕ್ಕಬಳ್ಳಾಪುರದಲ್ಲಿ ರಾಮಚಂದ್ರ ಸಹಾ ಜಿಲ್ಲಾಧ್ಯಕ್ಷ ಸ್ಥಾನ ಅಪೇಕ್ಷಿತರು, ಚುನಾವಣಾ ಪ್ರಕ್ರಿಯೆಯನ್ನು ಅವರೂ ಗೌರವಿಸಿದ್ದಾರೆ, ಸುಧಾಕರ್ ತಪ್ಪು ತಿಳಿದುಕೊಳ್ಳಬಾರದು, ಒಬ್ಬ ಕಾರ್ಯಕರ್ತನಾಗಿ ಅವರಿಗೂ ಅಧಿಕಾರವಿದೆ.

ಸಲಹೆ ಕೊಡಲಿ

ಜಿಲ್ಲೆಯಲ್ಲಿ ಯಾರ‍್ಯಾರನ್ನು ಪದಾಧಿಕಾರಿಗಳನ್ನಾಗಿ ಮಾಡಬೇಕು ಎಂಬ ಬಗ್ಗೆ ಸಲಹೆ ಕೊಡಲಿ, ಸಚಿವರಾಗಿ ಪಕ್ಷ ಸಂಘಟನೆ ಮಾಡಿದ್ದಾರೆ, ಕೋರ್ ಕಮಿಟಿ ಸಭೆ ನಂತರ ಅವರೊಂದಿಗೆ ಮಾತನಾಡಿದ್ದು, ರಾಜ್ಯಾಧ್ಯಕ್ಷನಾಗಿ ಮಾತನಾಡುವುದು ನನ್ನ ಕರ್ತವ್ಯ.

ಮಾಧ್ಯಮದ ಮುಂದೆ ಅವರು ಚರ್ಚೆ ಮಾಡಬಾರದಿತ್ತು, ಏನೇ ಭಿನ್ನಾಭಿಪ್ರಾಯ ಇದ್ದರೂ ಹಿರಿಯರ ಜತೆಗೆ ಕೂತು ಬಗೆಹರಿಸಿಕೊಳ್ಳೋಣ ಎಂಬುದಾಗಿ ತಿಳಿಸಿದ್ದೇನೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
district party presidents electiondr.k sudhakarstate bjp president b y vijayendra
0 FacebookTwitterPinterestEmail
admin

previous post
ರಾಜ್ಯಾದ್ಯಂತ ದಾಖಲೆಗಳಿಲ್ಲದ ನಿವೇಶನಕ್ಕೆ ’ಬಿ’ ಖಾತಾ
next post
ಕುಮಾರಸ್ವಾಮಿಗೆ ವಿಶಾಖಪಟ್ಟಣದಲ್ಲಿ ಅದ್ದೂರಿ ಸ್ವಾಗತ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ