Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ರಾಷ್ಟ್ರೀಯ ಶಿಕ್ಷಣ ನೀತಿ ಹಿಂಪಡೆಯಲು ಕೇಂದ್ರಕ್ಕೆ ಒತ್ತಡ

by admin February 5, 2025
written by admin February 5, 2025 0 comments 2 minutes read
0FacebookTwitterPinterestEmail
326

ಬೆಂಗಳೂರು:ಕೇಂದ್ರ ಸರ್ಕಾರ ಹಾಗೂ ಯುಜಿಸಿ (ವಿಶ್ವವಿದ್ಯಾಲಯ ಧನಸಹಾಯ ಆಯೋಗ) ಮೇಲೆ ಒತ್ತಡ ತಂದು ಅನೇಕ ಲೋಪದೋಷ ಹೊಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ ಹಿಂಪಡೆಯಲು ಎಲ್ಲರೂ ಸೇರಿ ಆಗ್ರಹಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ದಕ್ಷಿಣ ರಾಜ್ಯಗಳ ಉನ್ನತ ಶಿಕ್ಷಣ ಸಚಿವರ ಸಮ್ಮೇಳನದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಲೋಪಗಳಿದ್ದವು, ಕರ್ನಾಟಕ ಸರ್ಕಾರ ಧೈರ್ಯದಿಂದ ಒಂದಷ್ಟು ತಿದ್ದುಪಡಿ ಮಾಡುವ ತೀರ್ಮಾನ ತೆಗೆದುಕೊಂಡಿದೆ ಎಂದರು.

ಕೇಂದ್ರ ಸರ್ಕಾರಕ್ಕೆ ಮುಟ್ಟಬೇಕು

ಸಮ್ಮೇಳನದಿಂದ ಹೊರ ಹೊಮ್ಮುವ ವಿಚಾರಗಳು ಕೇಂದ್ರ ಸರ್ಕಾರಕ್ಕೆ ಮುಟ್ಟಬೇಕು, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಶೈಕ್ಷಣಿಕ ಗುಣಮಟ್ಟ ಅತ್ಯುತ್ತಮವಾಗಿದ್ದು, ಸೌಲಭ್ಯ ಕೊಡುವುದರಲ್ಲೂ ಮುಂದಿದ್ದೇವೆ, ಕಳೆದ 30 ವರ್ಷಗಳ ಹಿಂದೆಯೇ ಉತ್ತರ ಭಾರತದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ದಕ್ಷಿಣ ಭಾರತ ರಾಜ್ಯಗಳಿಗೆ ವಲಸೆ ಬರುತ್ತಿದ್ದುದ್ದನ್ನು ಗಮನಿಸಿದ್ದೇನೆ.

ಕರ್ನಾಟಕದಲ್ಲಿ ಸುಮಾರು 70ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು,250ಕ್ಕೂ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳಿವೆ, ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರಪ್ರದೇಶಗಳೂ ಹೆಚ್ಚು ಕಾಲೇಜುಗಳನ್ನು ಹೊಂದಿವೆ, ಆದರೆ ನಮ್ಮ ಶಿಕ್ಷಣ ನೀತಿಗಳನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ ಎಂಬುದೇ ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದೆ.

ನಮ್ಮ ಗಣತಂತ್ರ ವ್ಯವಸ್ಥೆ ವಿನೂತನವಾದುದು, ಸಂವಿಧಾನ ಹಲವು ಹಕ್ಕುಗಳನ್ನು ನೀಡಿದೆ, ಭಾಷೆಗಳ ವಿಚಾರದಲ್ಲಿಯೂ ನಾವು ವೈವಿದ್ಯತೆ ಹೊಂದಿದ್ದೇವೆ, ನಾವು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಬೇಕಿದೆ.

ಯುವಜನತೆಗೆ ಅವಕಾಶ

ಈ ಕಾರಣಕ್ಕಾಗಿ ವ್ಯವಸ್ಥೆಯನ್ನು ನಾವುಗಳೆಲ್ಲ ಸೇರಿ ಬದಲಾಯಿಸಬೇಕಿದೆ, ಕಳೆದ 30 ವರ್ಷಗಳಲ್ಲಿ ಇಡೀ ಶಿಕ್ಷಣ ವ್ಯವಸ್ಥೆಯೇ ಬದಲಾಗಿದೆ, ಜೊತೆಗೆ ಸಾಕಷ್ಟು ಬದಲಾವಣೆಗಳನ್ನೂ ನಾವು ನೋಡಿದ್ದೇವೆ, ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬೆರಗು ಹುಟ್ಟಿಸಿದೆ, ಯುವಜನತೆಗೆ ಅವಕಾಶ ಸೃಷ್ಟಿಸುವುದು ನಮ್ಮೆಲ್ಲರ ಗುರಿಯಾಗಬೇಕು.

ವಿಶ್ವವಿದ್ಯಾಲಯಗಳ ಆಡಳಿತ ವಿಚಾರದಲ್ಲೂ ಸಾಕಷ್ಟು ಸುಧಾರಣೆ ಮಾಡಬೇಕಾಗಿದೆ, ಕುಲಪತಿಗಳ ನೇಮಕ ಸೇರಿದಂತೆ ಹಲವು ವಿಷಯಗಳು ನಮ್ಮ ಮುಂದಿವೆ, ಕುಲಪತಿಗಳು ಹಾಗೂ ಶೈಕ್ಷಣಿಕ ಸಿಬ್ಬಂದಿಗಳ ನೇಮಕಾತಿಗೆ ಕನಿಷ್ಠ ಮಾನದಂಡ, ಅರ್ಹತೆಗಳನ್ನು ನಿಗದಿ ಮಾಡಬೇಕಿದೆ, ಎಲ್ಲಕ್ಕಿಂತ ಮುಖ್ಯವಾಗಿ ಉನ್ನತ ಶಿಕ್ಷಣ ವ್ಯವಸ್ಥೆ ಗಟ್ಟಿಯಾಗಬೇಕಿದೆ, ಅನೇಕ ದೇಶಗಳ ವಿಶ್ವವಿದ್ಯಾಲಯಗಳಲ್ಲಿ ಭಾರತೀಯರು ಉತ್ತಮ ಸ್ಥಾನಗಳನ್ನು ಅಲಂಕರಿಸಿದ್ದಾರೆ, ಜಾಗತಿಕ ಮಟ್ಟಕ್ಕೆ ನಮ್ಮ ಶಿಕ್ಷಣ ವ್ಯವಸ್ಥೆ ಬೆಳೆಯಲು ಅನೇಕ ತಜ್ಞರ ಸಲಹೆ ಉಪಯುಕ್ತವಾಗುತ್ತವೆ ಎಂದರು.

ಬೆಂಗಳೂರು, ಚೆನ್ನೈ, ಹೈದರಾಬಾದ್ ತಾಂತ್ರಿಕ ಪರಿಣಿತರ ಸೃಷ್ಟಿಯಲ್ಲಿ ಮುಂಚೂಣಿಯಲ್ಲಿವೆ, ದಕ್ಷಿಣ ಭಾರತದ ರಾಜ್ಯಗಳಿಗೆ ಸರಿಸಮಾನವಾಗಿ ಯಾರೂ ನಿಲ್ಲಲು ಸಾಧ್ಯವಿಲ್ಲ, ರಾಜ್ಯಗಳು ತಮ್ಮದೇ ಆದ ಶಕ್ತಿಗಳನ್ನು ಹೊಂದಿವೆ.

ಸರ್ಕಾರಿ ಕಚೇರಿಗಳಲ್ಲಿ ಪ್ಲ್ಯಾಸ್ಟಿಕ್ ಬಾಟಲ್ ನಿಷೇಧ
ಗುಣಮಟ್ಟದ ಅಡಿಪಾಯ

ನಮ್ಮ ದೇಶ ಶಿಕ್ಷಣ ವಿಚಾರದಲ್ಲಿ ಮಹತ್ತರ ಸಾಧನೆ ಮಾಡಿದೆ, ಕೆಲಸ ಮಾಡಲು, ಕಲಿಯಲು, ದುಡಿಯಲು ಪ್ರಸಕ್ತವಾಗಿವೆ, ಹಿಂದಿನವರು ಶಿಕ್ಷಣ ಕ್ಷೇತ್ರಗಳಿಗೆ ಹಾಕಿಕೊಟ್ಟಿರುವ ಗುಣಮಟ್ಟದ ಅಡಿಪಾಯ ಕಾಪಾಡಬೇಕು.

ಜೊತೆಗೂಡುವುದು ಆರಂಭ, ಜೊತೆಗೂಡಿ ಆಲೋಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಯಶಸ್ಸು, ಶಿಕ್ಷಣ ಕ್ಷೇತ್ರದ ಯುವಜನತೆ ಭವಿಷ್ಯ ಉತ್ತಮವಾಗಿರಬೇಕು ಎಂಬ ಕಾರಣಕ್ಕೆ ನಾವೆಲ್ಲ ಇಲ್ಲಿ ಸೇರಿದ್ದೇವೆ ಮತ್ತು ಗುಣಮಟ್ಟದ ಶಿಕ್ಷಣ ಪರ ದನಿ ಎತ್ತಲು ಒಂದುಗೂಡಿದ್ದೇವೆ ಎಂದರು.

ಶಿಕ್ಷಣ ಕ್ಷೇತ್ರದಲ್ಲಿನ ಅನಾನುಕೂಲತೆಗಳ ಬಗ್ಗೆ ತಿಳಿದಿದೆ, ಕರ್ನಾಟಕ ಹಾಗೂ ತೆಲಂಗಾಣಕ್ಕೆ ಹೋಲಿಸಿದಲ್ಲಿ ಮಹಾರಾಷ್ಟ್ರ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಪ್ರತ್ಯೇಕ ಮಾದರಿ ಹೊಂದಿದೆ, ಕೇಂದ್ರ ಹಾಗೂ ರಾಜ್ಯಗಳಲ್ಲಿ ಬೇರೆ ಬೇರೆ ರಾಜಕೀಯ ಪಕ್ಷಗಳು ಅಧಿಕಾರದಲ್ಲಿದ್ದಾಗ ಕುಲಪತಿ ಹಾಗೂ ಉಪಕುಲಪತಿಗಳ ವಿಚಾರದಲ್ಲಿ ತೀರ್ಮಾನ ಮಾಡುವುದು ಕಷ್ಟವಾಗುತ್ತದೆ, ಆದರೂ ನಿಭಾಯಿಸುತ್ತಿದ್ದೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dcm d k shivakumardr.g.parameshwarhigher education ministers conferencenational education policy
0 FacebookTwitterPinterestEmail
admin

previous post
ಸರ್ಕಾರಿ ಕಚೇರಿಗಳಲ್ಲಿ ಪ್ಲ್ಯಾಸ್ಟಿಕ್ ಬಾಟಲ್ ನಿಷೇಧ
next post
ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಕೆ !

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ