ಬೆಂಗಳೂರು:ನಗರದ ಅರಮನೆ ಮೈದಾನದಲ್ಲಿ ನಾಳೆಯಿಂದ ಆರಂಭವಾಗಲಿರುವ 2025ನೇ ಸಾಲಿನ ಜಾಗತಿಕ ಹೂಡಿಕೆದಾರರ ಸಮಾವೇಶದ ಸಿದ್ಧತೆಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಇಂದು ಪರಿಶೀಲಿಸಿದರು.
ಸಮಾವೇಶ ನಡೆಯಲಿರುವ ಅರಮನೆ ಮೈದಾನಕ್ಕೆ ಭೇಟಿ ನೀಡಿದ ಸಚಿವರು ಪ್ರದರ್ಶನ ತಾಣಗಳು, ಗೋಷ್ಠಿಗಳು ನಡೆಯಲಿರುವ ಸ್ಥಳಗಳು, ಮಾತುಕತೆ ಮತ್ತು ಒಡಂಬಡಿಕೆಗಳಿಗೆ ಸಹಿ ಹಾಕಲಿರುವ ಸಭಾಂಗಣಗಳು, ಕಂಟ್ರಿ ಪೆವಿಲಿಯನ್, ಫುಡ್ ಕೋರ್ಟ್ ಮುಂತಾದ ಪ್ರದೇಶಗಳನ್ನು ಖುದ್ದಾಗಿ ವೀಕ್ಷಿಸಿ, ಕೊನೆ ಕ್ಷಣದ ಸುಧಾರಣೆಗಳ ಕುರಿತು ಸಲಹೆ-ಸೂಚನೆ ನೀಡಿದರು.
ಉಪಮುಖ್ಯಮಂತ್ರಿ ಹಾಗೂ ಸಚಿವರ ಜೊತೆಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.