Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರ

ನೂತನ ಕೈಗಾರಿಕಾ ನೀತಿ ಬಿಡುಗಡೆ ಮಾಡಿದ ಡಿಸಿಎಂ

by KM Shivaraju February 11, 2025
written by KM Shivaraju February 11, 2025 0 comments 2 minutes read
0FacebookTwitterPinterestEmail
172

5 ವರ್ಷದಲ್ಲಿ 20 ಲಕ್ಷ ಉದ್ಯೋಗ, ಹಿಂದುಳಿದ ಜಿಲ್ಲೆ/ತಾಲ್ಲೂಕಿಗೆ ಒತ್ತು

ಬೆಂಗಳೂರು: ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳ (2025-30) ಉದ್ಯಮ ಬೆಳವಣಿಗೆಗೆ ರೂಪಿಸಿರುವ ನೂತನ ಕೈಗಾರಿಕಾ ನೀತಿಯನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಂಗಳವಾರ ಅನಾವರಣಗೊಳಿಸಿದರು.

ಹೊಸ ನೀತಿಯು ಇನ್ನು ಐದು ವರ್ಷಗಳಲ್ಲಿ ರಾಜ್ಯಕ್ಕೆ 7.50 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಆಕರ್ಷಿಸುವ, 20 ಲಕ್ಷ ಉದ್ಯೋಗ ಸೃಷ್ಟಿಸುವ ಮತ್ತು ಸನ್-ರೈಸ್ ವಲಯದಲ್ಲಿ ರಾಜ್ಯವನ್ನು ಇಡೀ ದೇಶಕ್ಕೆ ನಂಬರ್ ಒನ್ ಆಗಿ ಪ್ರತಿಷ್ಠಾಪಿಸುವ ಹೆಗ್ಗುರಿಗಳನ್ನು ಹೊಂದಿದೆ. ಇದನ್ನೆಲ್ಲ ಸಾಧಿಸಲು ಬೆಂಗಳೂರಿನ ಆಚೆಗೆ ಹಾಗೂ ಹಿಂದುಳಿದ ಮತ್ತು ಅತೀ ಹಿಂದುಳಿದ ಜಿಲ್ಲೆ/ತಾಲ್ಲೂಕುಗಳಿಗೆ ಆದ್ಯತೆ ಕೊಡಲಾಗಿದೆ. ಇದಕ್ಕಾಗಿ ಕೈಗಾರಿಕಾ ಬೆಳವಣಿಗೆ ಆಧರಿಸಿ ಪ್ರದೇಶವಾರು ಪ್ರೋತ್ಸಾಹಕ ಭತ್ಯೆಗಳನ್ನು ನೀಡಲಾಗುವುದು ಎಂದು ಹೊಸ‌ ನೀತಿಯಲ್ಲಿ ತಿಳಿಸಲಾಗಿದೆ.

ಹೊಸ‌‌ ನೀತಿಯಲ್ಲಿ ಅಂಶಗಳನ್ನು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ವಿವರಿಸಿದ್ದಾರೆ.

ಈ ನೀತಿಯಲ್ಲಿ ಡಿ ಎಂ ನಂಜುಂಡಪ್ಪ ವರದಿ ಆಧರಿಸಿ ಕೈಗಾರಿಕಾ ಬೆಳವಣಿಗೆಯಲ್ಲಿ ಹಿಂದುಳಿದಿರುವ ಜಿಲ್ಲೆ/ತಾಲ್ಲೂಕುಗಳನ್ನು ಝೋನ್-1 ಮತ್ತು 2ರಡಿ ತರಲಾಗಿದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳನ್ನು `ಝೋನ್-3’ ಎಂದು ಗುರುತಿಸಲಾಗಿದೆ. ಉದ್ಯಮಗಳ ಸಾಮರ್ಥ್ಯ ಮತ್ತು ಬೆಳವಣಿಗೆ ನಿಚ್ಚಳತೆಗೆ ಅನುಗುಣವಾಗಿ ವಲಯಗಳನ್ನಾಗಿ ಮಾಡಿದ್ದು, ರಾಜ್ಯದ ಆರ್ಥಿಕ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ಇರುವಂತೆ ಎಚ್ಚರ ವಹಿಸಲಾಗಿದೆ ಎಂದು ಪಾಟೀಲ ಅವರು ನುಡಿದಿದ್ದಾರೆ.

ವಿಶ್ವ ದರ್ಜೆಯ ಮೂಲಸೌಕರ್ಯ ಅಭಿವೃದ್ಧಿ

ಹೈಟೆಕ್ ತಯಾರಿಕೆ ವಲಯದಲ್ಲಿ ರಾಜ್ಯವನ್ನು ದೇಶದಲ್ಲೇ ಪ್ರಥಮ ಸ್ಥಾನಕ್ಕೆ ಏರುವಂತೆ ಮಾಡಲಾಗುವುದು. ಜೊತೆಗೆ ಸುಸ್ಥಿರ, ಪರಿಸರಸ್ನೇಹಿ, ಸಮತೋಲಿತ ಮತ್ತು ಎಲ್ಲರನ್ನೂ ಒಳಗೊಳ್ಳಲಿರುವ ಪ್ರಾದೇಶಿಕ ಬೆಳವಣಿಗೆಯನ್ನು ಉತ್ತೇಜಿಸಲಾಗುವುದು. ಕೈಗಾರಿಕಾ ಕ್ಷೇತ್ರದಲ್ಲಿ ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವದ ಮೂಲಕ ವಿಶ್ವ ದರ್ಜೆಯ ಮೂಲಸೌಕರ್ಯ ಅಭಿವೃದ್ಧಿ ಪಡಿಸುವಂತಹ ವ್ಯವಸ್ಥೆ ಮುಂದೆ ಬರಲಿದೆ. ಭಾರೀ ಹೂಡಿಕೆ ಇರುವ ಕೈಗಾರಿಕಾ ಯೋಜನಗೆಳ ವ್ಯಾಪ್ತಿಯಲ್ಲಿ ಡಾರ್ಮಿಟರಿ ಮತ್ತು ವಸತಿ ವ್ಯವಸ್ಥೆಗೆ ಸರ್ಕಾರ ಕೈಜೋಡಿಸಲಿದೆ ಎಂದು ಅವರು ವಿವರಿಸಿದ್ದಾರೆ.

ಸಂಶೋಧನೆ ಮತ್ತು ಎಂಎಸ್ಎಂಇಗೆ ಗಮನ

ನೂತನ ಕೈಗಾರಿಕಾ ನೀತಿಯಲ್ಲಿ ಜ್ಞಾನ, ಸಂಶೋಧನೆ ಮತ್ತು ಅಭಿವೃದ್ಧಿ, ನಾವೀನ್ಯತೆಯ ಅಭಿವೃದ್ಧಿಗೆ ಕ್ವಿನ್ ಸಿಟಿಯನ್ನು ಅಭಿವೃದ್ಧಿ ಪಡಿಸಲಾಗುವುದು. ಕೆಐಎಡಿಬಿ ಮೂಲಕ ಮಧ್ಯಮ, ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ಶೇಕಡ 30ರಷ್ಟು ಜಾಗವನ್ನು ಮೀಸಲಿಟ್ಟು, ತಂತ್ರಜ್ಞಾನದ ಉನ್ನತೀಕರಣ, ಕೌಶಲ್ಯಾಭಿವೃದ್ಧಿ, ಉತ್ಕೃಷ್ಟತಾ ಪುರಸ್ಕಾರ, ಕ್ಲಸ್ಟರ್ಸ್ ಅಭಿವೃದ್ಧಿ, ಆಕರ್ಷಕ ಪ್ರೋತ್ಸಾಹನಾ ಭತ್ಯೆ ಮತ್ತು ರಿಯಾಯಿತಿಗಳಿಗೆ ಗಮನ ಹರಿಸಲಾಗುವುದು ಎಂದು ಎಂ.ಬಿ.ಪಾಟೀಲ ಅವರು ಇದೇ ಸಂದರ್ಭದಲ್ಲಿ ನುಡಿದರು.

ಕೆಲವು ಪ್ರದೇಶಗಳನ್ನು `ವಿಶೇಷ ಹೂಡಿಕೆ ಪ್ರದೇಶ’ (ಸ್ಪೆಷಲ್ ಇನ್ವೆಸ್ಟ್ಮೆಂಟ್ ರೀಜನ್) ಆಗಿ ಘೋಷಿಸಿ, ಉದ್ಯಮಗಳ ಆರ್ & ಡಿ ವಿಭಾಗ ಮತ್ತು ಉತ್ಪಾದನಾ ಘಟಕಗಳು ಒಂದೇ ಕಡೆ ಇರುವುದನ್ನು ಉತ್ತೇಜಿಸಲಾಗುವುದು. ಹೂಡಿಕೆದಾರರು ತಮ್ಮ ಕೇಪೆಕ್ಸ್ ಸಬ್ಸಿಡಿ ಅಥವಾ ಉತ್ಪಾದನೆ ಆಧರಿತ ಪ್ರೋತ್ಸಾಹನಾ ಭತ್ಯೆ ನಡುವೆ ತಮಗೆ ಯಾವುದು ಅನುಕೂಲವೋ ಅದನ್ನು ಆರಿಸಿಕೊಳ್ಳಲು ಅವಕಾಶ ಇರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಖಾಸಗಿ ಕೈಗಾರಿಕಾ ಪ್ರದೇಶಗಳಿಗೂ ಅವಕಾಶ

ನೂತನ ಕೈಗಾರಿಕಾ ನೀತಿಯಡಿಯಲ್ಲಿ ಖಾಸಗಿ ಕೈಗಾರಿಕಾ ಪ್ರದೇಶಾಭಿವೃದ್ಧಿಗೂ ಅವಕಾಶ ಇರಲಿದೆ. ಇದರಂತೆ ಸಮಗ್ರ ಕೈಗಾರಿಕಾ ಪಾರ್ಕ್, ವಲಯವಾರು ಪಾರ್ಕ್, ಲಾಜಿಸ್ಟಿಕ್ಸ್ ಪಾರ್ಕ್ ಇತ್ಯಾದಿಗಳ ಅಭಿವೃದ್ಧಿ ಮಾಡಲಾಗುವುದು. ಜತೆಗೆ ಕೈಗಾರಿಕಾ ಪ್ರದೇಶಗಳ ಗರಿಷ್ಠ ಪ್ರಯೋಜನ ಪಡೆದುಕೊಳ್ಳಲು ಈಗಿರುವ ನಿರ್ಬಂಧಗಳನ್ನು ನಗರ ಮತ್ತು ಗ್ರಾಮೀಣ ಪ್ರದೇಶ ಎರಡರಲ್ಲೂ ತೆಗೆದು ಹಾಕಲಾಗುವುದು. ಜತೆಗೆ ನೇರ ಉದ್ಯೋಗ ಸೃಷ್ಟಿಗೆ ನೀತಿಯು ಒತ್ತು ಕೊಟ್ಟಿದೆ ಎಂದರು.

ಹಿಂದುಳಿದ ಜಿಲ್ಲೆ/ತಾಲ್ಲೂಕಿಗೆ ರಿಯಾಯಿತಿ/ಭತ್ಯೆ

ಕೈಗಾರಿಕಾ ಬೆಳವಣಿಗೆಯಲ್ಲಿ ಹಿಂದುಳಿದಿರುವ ಜಿಲ್ಲೆ/ತಾಲ್ಲೂಕುಗಳಲ್ಲಿ ಹೂಡಿಕೆ ಮಾಡಿ, ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದಾಗುವ ಮಧ್ಯಮ, ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ನೂತನ ಕೈಗಾರಿಕಾ ನೀತಿಯಲ್ಲಿ ಹಲವು ಸೌಲಭ್ಯಗಳನ್ನು ಒದಗಿಸಲಾಗುವುದು. ಅವು ಹೀಗಿವೆ:

  • ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ಶೇ 10ರಿಂದ 30ರಷ್ಟು ಕ್ಯಾಪಿಟಲ್ ಸಬ್ಸಿಡಿ
  • ಮುದ್ರಾಂಕ ಮತ್ತು ನೋಂದಣಿ ಶುಲ್ಕ ವಿನಾಯಿತಿ
  • ಭೂ ಪರಿವರ್ತನೆ ಶುಲ್ಕ ವಾಪಸ್
  • ಎಂಎಸ್ಎಂಇಗಳಿಗೆ ವಿದ್ಯುತ್ ಬಿಲ್ ಮೇಲಿನ ತೆರಿಗೆಯಿಂದ ವಿನಾಯಿತಿ
  • ಸಣ್ಣ ಮತ್ತು ಸೂಕ್ಷ್ಮ ಉದ್ಯಮಗಳಿಗೆ ವಿದ್ಯುತ್ ಸಬ್ಸಿಡಿ
  • ಮಳೆ ನೀರು ಸಂಸ್ಕರಣೆ ಮತ್ತು ತ್ಯಾಜ್ಯ ನೀರು ಮರುಪೂರಣಕ್ಕೆ ಪ್ರೋತ್ಸಾಹನ ಭತ್ಯೆ
  • ತ್ಯಾಜ್ಯ ಸಂಸ್ಕರಣೆ ಘಟಕ ಸ್ಥಾಪನೆಗೆ ಪ್ರೋತ್ಸಾಹನ ಭತ್ಯೆ

ಮೆಗಾ ಯೋಜನೆಗಳಿಗೆ ಸಿಗುವ ಸೌಲಭ್ಯ

  • ಪಿಎಲ್ಐ ಅಥವಾ ವಿಎಫ್ಎನ ಶೇ. 10ರಿಂದ 25ರಷ್ಟು ಬಂಡವಾಳ ವೆಚ್ಚ ಸಬ್ಸಿಡಿ
  • ನಂಜುಂಡಪ್ಪ ವರದಿಯಲ್ಲಿ ಗುರುತಿಸಿರುವ ಹಿಂದುಳಿದ ಮತ್ತು ಅತೀ ಹಿಂದುಳಿದ ತಾಲ್ಲೂಕುಗಳಲ್ಲಿನ ಹೂಡಿಕೆಗೆ ಕ್ರಮವಾಗಿ ಶೇಕಡ 3 ಮತ್ತು ಶೇಕಡ 5ರಷ್ಟು ಹೆಚ್ಚುವರಿ ಸಬ್ಸಿಡಿ
  • ಖಾಸಗಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿಗೆ ಪ್ರೋತ್ಸಾಹನ ಭತ್ಯೆ ಮತ್ತು ರಿಯಾಯಿತಿ
  • ಉದ್ಯೋಗ ಸೃಷ್ಟಿ ಮತ್ತು ಮಹಿಳಾ ಉದ್ಯೋಗಿಗಳ ಹೆಚ್ಚಿನ ಪಾಲ್ಗೊಳ್ಳುವಿಕೆಗೆ ಸಬ್ಸಿಡಿ
  • ಆರ್ & ಡಿ ಜತೆಗೆ ಉತ್ಪಾದನಾ ಘಟಕ ಸ್ಥಾಪನೆಗೆ ಉತ್ತೇಜನ
  • ಮುದ್ರಾಂಕ ಮತ್ತು ನೋಂದಣಿ ಶುಲ್ಕದಿಂದ ವಿನಾಯಿತಿ
  • ಭೂ ಪರಿವರ್ತನೆ ಶುಲ್ಕ ವಾಪಸ್

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
20 lakh new jobs2025-30DKDyCMFocusGIMIndustrial PolicyInnovationInvest Karnataka 25investmentsRegional GrowthShivakumarSustainabilityUnveils₹7.5 lakh crore
0 FacebookTwitterPinterestEmail
KM Shivaraju

previous post
ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
next post
‘ಫ್ಯೂಚರ್ ಆಫ್ ಇನ್ನೋವೇಶನ್’ ಎಕ್ಸ್-ಪೋಗೆ ಚಾಲನೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ