Sunday, May 18, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, May 18, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಬೆಳಗಾವಿ ಏರೋಸ್ಪೇಸ್ ಕೇಂದ್ರ

by KM Shivaraju February 12, 2025
written by KM Shivaraju February 12, 2025 0 comments 2 minutes read
Share 0FacebookTwitterPinterestEmail
63

ವಿಪ್ರೋ ಹೆಲ್ತ್ ಕೇರ್ ನಿಂದ ರಾಜ್ಯದಲ್ಲಿ 8,000 ಕೋಟಿ ರೂ. ಹೂಡಿಕೆ

ಬೆಂಗಳೂರು: ವಿಪ್ರೋ-ಜಿಇ ಹೆಲ್ತ್ ಕೇರ್ ಸಂಸ್ಥೆಯು ಕರ್ನಾಟಕದ ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ ಮುಂದಿನ 5 ವರ್ಷಗಳಲ್ಲಿ ಇನ್ನೂ 8,000 ಕೋಟಿ ರೂ. ಹೂಡಿಕೆ ಮಾಡಲಿದೆ. ಇದು ಕಳೆದ ಎರಡು ದಶಕಗಳಲ್ಲಿ ವಿನಿಯೋಗಿಸಿರುವ 32 ಸಾವಿರ ಕೋಟಿ ರೂ. ಬಂಡವಾಳದ ಮುಂದುವರಿದ ಭಾಗವಾಗಿದೆ ಎಂದು ಕಂಪನಿಯ ದಕ್ಷಿಣ ಏಷ್ಯಾ ವಿಭಾಗದ ಮುಖ್ಯಸ್ಥ ಚೈತನ್ಯ ಸರವಟೆ ಹೇಳಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಬುಧವಾರ ನಡೆದ `ಜಗತ್ತಿನ ಅಗತ್ಯಗಳಿಗೆ ಮೇಕ್ ಇನ್ ಇಂಡಿಯಾ ಉಪಕ್ರಮ’ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ವಿಪ್ರೋ-ಜಿಇ ಕೇವಲ ಕಿಲೋಮೀಟರ್ ಅಂತರದಲ್ಲಿ ನಾಲ್ಕು ಉತ್ಪಾದನಾ ಘಟಕಗಳನ್ನು ಹೊಂದಿದ್ದು, ಇಲ್ಲಿ 30ಕ್ಕೂ ಹೆಚ್ಚು ಔಷಧೋತ್ಪನ್ನಗಳನ್ನು ಸಿದ್ಧಪಡಿಸಲಾಗುತ್ತಿದೆ. ಜೊತೆಗೆ 5 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯಿರುವ ಆರ್ & ಡಿ ಕೇಂದ್ರವನ್ನೂ ವಿಪ್ರೋ ಹೊಂದಿದೆ. ಸಮಾಜದ ಋಣವನ್ನು ತೀರಿಸುವ ನೈತಿಕ ಹೊಣೆಗಾರಿಕೆ ಅರಿತು ಸರ್ಕಾರದ ಹಲವು ಹಲವು ಯೋಜನೆಗಳಲ್ಲೂ ಕಂಪನಿ ಕೈಜೋಡಿಸಿದೆ. ಜತೆಗೆ ರಾಯಚೂರಿನಂತಹ ಹಿಂದುಳಿದ ಜಿಲ್ಲೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ವಿಪ್ರೊ-ಜಿಇ ಹೆಲ್ತ್ ಕೇರ್ ಇದುವರೆಗೆ 300 ಮಿಲಿಯನ್ ರೋಗಿಗಳಿಗೆ ತನ್ನ ಸೇವೆಗಳನ್ನು ಒದಗಿಸಿದೆ. ಬೇಡಿಕೆ, ಸಾಮರ್ಥ್ಯ ಮತ್ತು ಜನಸಂಖ್ಯೆಗಳೇ ಕರ್ನಾಟಕ ಮತ್ತು ಭಾರತದ ಶಕ್ತಿಗಳಾಗಿವೆ. ವಿಶೇಷವಾಗಿ ಬೆಂಗಳೂರು ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಪೋಷಿಸುವ ಸಂಸ್ಕೃತಿ ಹೊಂದಿದೆ. ಇದರಿಂದಾಗಿ ಇಲ್ಲಿಂದ ಆಫ್ರಿಕಾ ಸೇರಿದಂತೆ ಜಗತ್ತಿನ ನಾನಾ ದೇಶಗಳಿಗೆ ರಫ್ತು ವಹಿವಾಟು ಅಗಾಧವಾಗಿದೆ. ಉದ್ಯಮಗಳ ಜಾಗತಿಕ ಸಾಮರ್ಥ್ಯ ಕೇಂದ್ರಗಳು ನೆಲೆಯೂರಿರುವುದು ರಾಜ್ಯದ ಕೈಗಾರಿಕಾಸ್ನೇಹಿ ನೀತಿಯ ಫಲವಾಗಿದೆ ಎಂದು ಸರವಟೆ ನುಡಿದರು.

ಬೆಳಗಾವಿ ಏರೋಸ್ಪೇಸ್ ಕೇಂದ್ರ

ಇದೇ ಗೋಷ್ಠಿಯಲ್ಲಿ ಮಾತನಾಡಿದ ಏಕಸ್ ಕಂಪನಿ ಸಿಇಒ ಅರವಿಂದ್ ಮೆಳ್ಳಿಗೇರಿ, ಬೆಳಗಾವಿಯು ದೇಶದ ವೈಮಾಂತರಿಕ್ಷ ವಲಯದ ಕೇಂದ್ರವಾಗಿ ಹೊರಹೊಮ್ಮಿದ್ದು, ಈ ವಲಯದ ಶೇ. 70ರಷ್ಟು ಬಿಡಿಭಾಗಗಳನ್ನು ಪೂರೈಸುತ್ತಿದೆ. ಇವುಗಳ ಗುಣಮಟ್ಟವು ಯಾವುದೇ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ತಯಾರಾಗುವ ಸಾಧನಗಳಿಗಿಂತ ಕಿಂಚಿತ್ತೂ ಕಡಿಮೆ ಇಲ್ಲ. ಸರಕಾರವು ಮೂಲಸೌಕರ್ಯ ಅಭಿವೃದ್ಧಿಗೆ ಇನ್ನಷ್ಟು ಗಮನ ಹರಿಸಿದರೆ, ಇಡೀ ಜಗತ್ತು ಬೆಳಗಾವಿಯತ್ತ ನೋಡುವ ದಿನ ದೂರವಿಲ್ಲ ಎಂದರು.

ದೇಶದಲ್ಲಿ 15 ವರ್ಷಗಳಲ್ಲಿ ಸಾಕಷ್ಟು ಸುಧಾರಣೆಯಾಗಿದ್ದು, ದ್ವಿತೀಯ ಸ್ತರದ ನಗರಗಳಿಗೂ ವಿಮಾನ ಸಂಪರ್ಕ ಸಾಧ್ಯವಾಗಿದೆ. ಏಕಸ್ ಮೂರು ಜಂಟಿ ಸಹಭಾಗಿತ್ವ ಹೊಂದಿದ್ದು, 2 ಮಿಲಿಯನ್ ಗಂಟೆಗಳಷ್ಟು ಅಗಾಧ ಉತ್ಪಾದನಾ ವ್ಯವಸ್ಥೆಯನ್ನು ರೂಪಿಸಿಕೊಂಡಿದೆ. ಚೀನಾಕ್ಕೆ ಹೋಲಿಸಿದರೆ ನಮ್ಮಲ್ಲಿ ವೆಚ್ಚವು ಮೂರನೇ ಒಂದು ಭಾಗದಷ್ಟು ಕಡಿಮೆ ಇದೆ. ಈ ನಿಟ್ಟಿನಲ್ಲಿ ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ 5,000 ವೃತ್ತಿಪರರು ಹಗಲಿರುಳೂ ದುಡಿಯುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಹಿಟಾಚಿ ಎನರ್ಜಿಎಂಡಿ & ಸಿಇಒ ಎನ್.ವೇಣು ಮಾತನಾಡಿ, ಪಿಎಲ್ಐ, ಗತಿಶಕ್ತಿ, ಸ್ಟಾರ್ಟಪ್ ಇಂಡಿಯಾ, ಜಿಎಸ್ಟಿ ಮುಂತಾದ ಕ್ರಮಗಳಿಂದ ಉತ್ಪಾದನಾ ವಲಯಕ್ಕೆ ದೊಡ್ಡ ಶಕ್ತಿ ಬಂದಿದೆ. ಕೇಂದ್ರ ಮತ್ತು ರಾಜ್ಯಗಳು ಸೇರಿ ಉತ್ಪಾದನಾ ವಲಯವನ್ನು ಉತ್ತೇಜಿಸುತ್ತಿವೆ. ಕರ್ನಾಟಕವು ಕೈಗಾರಿಕಾಸ್ನೇಹಿಯಾಗಿದ್ದು, ಇಲ್ಲಿ ಪೀಣ್ಯ, ದೊಡ್ಡಬಳ್ಳಾಪುರ ಮತ್ತು ಮೈಸೂರಿನಲ್ಲಿ ನಮ್ಮ ಉತ್ಪಾದನಾ ಘಟಕಗಳಿವೆ. ಬೆಂಗಳೂರಿನಲ್ಲಿರುವ ನಮ್ಮ ಆರ್ & ಡಿ ಚಟುವಟಿಕೆಗಳ ಮತ್ತು ಮೈಸೂರು ಘಟಕದ ವಿಸ್ತರಣೆ ಆಗುತ್ತಿದೆ. ನಾವು ಇಲ್ಲಿನ ಅನೇಕ ವಿಶ್ವವಿದ್ಯಾಲಯಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಮಹಿಳೆಯರಿಗೆ ಕೌಶಲ್ಯ ನೀಡುತ್ತಿದ್ದೇವೆ. ಸದ್ಯಕ್ಕೆ ನಾವಿಲ್ಲಿ 1,000 ಕೋಟಿ ರೂ. ಹೂಡಿಕೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಬಾಶ್ ನ ಸಿಇಒ ಗುರುಪ್ರಸಾದ್ ಮುದಲಾಪುರ ಮಾತನಾಡಿ, ಭಾರತದಲ್ಲಿ ಬಾಶ್ ಕಂಪನಿಗೆ ಬೆಂಗಳೂರೇ ಕೇಂದ್ರಸ್ಥಾನ. ನಾವು 72 ವರ್ಷಗಳ ಹಿಂದೆಯೇ ಸ್ಥಳೀಯ ಉತ್ಪಾದನೆ ಆರಂಭಿಸಿದ್ದು, ಈಗ ದೇಶಾದ್ಯಂತ 17 ತಯಾರಿಕಾ ಘಟಕ ಹೊಂದಿದ್ದೇವೆ. ನಮ್ಮಲ್ಲಿನ ತಯಾರಿಕೆಯಲ್ಲಿ ಶೇ.90ರವರೆಗೂ ಸ್ಥಳೀಯತೆ ಇದೆ. ಕರ್ನಾಟಕ ಮತ್ತು ಭಾರತ ಎರಡೂ ಸೇವಾಧಾರಿತ ಆರ್ಥಿಕತೆಯೊಂದ ತಯಾರಿಕಾ ವಲಯವನ್ನು ಆಧರಿಸಿದ ಆರ್ಥಿಕತೆಗೆ ಹೊರಳಿಕೊಳ್ಳಬೇಕಾದ ಕಾಲ ಈಗ ಬಂದಿದೆ ಎಂದರು.

ಟೊಯೋಟಾ ಕಿರ್ಲೋಸ್ಕರ್ ನ ರ್ಸದೀಪ್ ದಳವಿ ಮಾತನಾಡಿ, *ಭಾರತವು ಇಂಧನ ಕ್ಷೇತ್ರದಲ್ಲಿ ಬಹುಮಾದರಿಗಳಲ್ಲಿ ಸ್ವಾವಲಂಬಿಯಾಗಬೇಕು. ಜೊತೆಗೆ ಮಧ್ಯಮ, ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ಆದ್ಯತೆ ಕೊಡಬೇಕು. ಏಕೆಂದರೆ, ಇಲ್ಲೇ ಉದ್ಯೋಗಸೃಷ್ಟಿ ಜಾಸ್ತಿ. ಜೊತೆಗೆ ಪರಿಸರಸ್ನೇಹಿ ಸಾರಿಗೆ ವ್ಯವಸ್ಥೆ ಮತ್ತು ಮಿತವ್ಯಯದ ಕಡೆಗೆ ಗಮನ ಹರಿಸಬೇಕು. ನಮ್ಮ ತಲಾ ಆದಾಯ ಈಗ 2,700 ಡಾಲರ್ ಇದೆ. ಇದು ಏಳು ಪಟ್ಟು ಹೆಚ್ಚಾದರೆ ಮಾತ್ರ ವಿಕಸಿತ ಕರ್ನಾಟಕ ಮತ್ತು ಭಾರತದ ಕನಸು ನನಸಾಗಲಿದೆ ಎಂದು ತಿಳಿಸಿದರು.

Share this:

  • WhatsApp
  • Post
  • Tweet
  • Print
  • Email
000 crore8Aerospace CentreBelgauminvestmentkarnataka stateWipro Health Care
Share 0 FacebookTwitterPinterestEmail
KM Shivaraju

previous post
ಕ್ವಿನ್ ಸಿಟಿ: 15 ವೈದ್ಯಕೀಯ ಸಂಸ್ಥೆಗಳ ಜತೆ ಬಂಡವಾಳ ಹೂಡಿಕೆ ಚರ್ಚೆ
next post
ಹೊಸಕೋಟೆ ವೋಲ್ವೊ ವಿಸ್ತರಣೆಗೆ 1,400 ಕೋಟಿ ರೂ.

You may also like

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

May 3, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (101)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,582)
  • ರಾಜ್ಯ (1,871)
  • ರಾಷ್ಟ್ರ (1,843)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025
  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ...

May 18, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ