Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ಗಮನ ನೀಡುತ್ತಿಲ್ಲ

by admin February 28, 2025
written by admin February 28, 2025 0 comments 2 minutes read
0FacebookTwitterPinterestEmail
336

ಬೆಂಗಳೂರು:ಅಭಿವೃದ್ಧಿಗೆ ಹಣ ನೀಡದೆ ಸಿಲಿಕಾನ್ ಸಿಟಿ ಗುಂಡಿಗಳ ಆಗರವಾಗಿದೆ ಎಂದು ಬೆಂಗಳೂರು ಉಸ್ತುವಾರಿಯನ್ನೂ ಹೊಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಬಿಜೆಪಿ ದೂರು ನೀಡಿದೆ.

ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಬೆಂಗಳೂರು ನಗರ ಪ್ರತಿನಿಧಿಸುವ ಬಿಜೆಪಿ ಸಂಸದರು ಮತ್ತು ಶಾಸಕರ ನಿಯೋಗ ಇಂದು ಮಖ್ಯಮಂತ್ರಿ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ, ರಾಜಧಾನಿ ಪರಿಸ್ಥಿತಿಯನ್ನು ಎಳೆ ಎಳೆಯಾಗಿ ಬಿಡಿಸಿಟ್ಟಿತು.

ಮುಂಗಡಪತ್ರದಲ್ಲಿ ಹೆಚ್ಚು ಹಣ

ಸರ್ಕಾರದಲ್ಲಿ ಪ್ರಭಾವಿ ಹಾಗೂ ರಾಜಧಾನಿ ನಗರ ಉಸ್ತುವಾರಿ ಹೊತ್ತಿರುವ ಶಿವಕುಮಾರ್ ಅವರಿಗೆ ಅಭಿವೃದ್ಧಿ ಕುರಿತು ಮನವಿ ಮಾಡದೆ, ಮುಂದಿನ ಮುಂಗಡಪತ್ರದಲ್ಲಿ ಹೆಚ್ಚು ಹಣ ಒದಗಿಸಿ ಎಂಬ ನೆಪದಲ್ಲಿ ಮುಖ್ಯಮಂತ್ರಿ ಅವರಿಗೆ ಪರಿಸ್ಥಿತಿ ವಿವರಿಸಿದ್ದಾರೆ.

ಇತ್ತೀಚೆಗಷ್ಟೇ ಐಟಿ ದಿಗ್ಗಜ ಮೋಹನ್ ದಾಸ್ ಪೈ ರಾಜಧಾನಿಯ ಕೆಟ್ಟ ಪರಿಸ್ಥಿತಿಯನ್ನು ಜನರ ಮುಂದಿಟ್ಟು, ಅಧಿಕಾರಿಗಳು ಜನರ ಮಾತನ್ನೇ ಕೇಳುತ್ತಿಲ್ಲ ಎಂದು ಕಿಡಿ ಕಾರಿದ್ದರು.

ಇದರ ಬೆನ್ನಲ್ಲೇ ಬಿಜೆಪಿ ನಿಯೋಗ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮುಂದಿನ ಬಜೆಟ್‌ನಲ್ಲಾದರೂ ಹಣ ನೀಡಿ ಬೆಂಗಳೂರನ್ನು ಉಳಿಸಿ ಎಂದು ಕೋರಿದ್ದಾರೆ.

6 ರಿಂದ 8 ಸಾವಿರ ಕೋಟಿ ರೂ.

ಬೆಂಗಳೂರು ಮಹಾನಗರದ ಅಭಿವೃದ್ಧಿ ದೃಷ್ಟಿಯಿಂದ ಶಾಸಕರಿಗೆ ಹೆಚ್ಚು ಅನುದಾನ ನೀಡಬೇಕು, 2025-26ನೇ ಸಾಲಿನ ಬಜೆಟ್‌ನಲ್ಲಿ 6 ರಿಂದ 8 ಸಾವಿರ ಕೋಟಿ ರೂ. ಮೀಸಲಿಡಬೇಕು ಎಂದು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲಸೌಕರ್ಯ ವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ಹಣ ಕೊಡಬೇಕಿದೆ, ಫ್ಲೈಓವರ್, ವಿವಿಧ ಯೋಜನೆಗಳು ನಿಧಾನಗತಿಯಲ್ಲಿ ಸಾಗುತ್ತಿವೆ, ಅವುಗಳಿಗೆ ಹೆಚ್ಚು ಅನುದಾನ ನೀಡಿ ಹೆಚ್ಚು ಒತ್ತು ಕೊಡಬೇಕೆಂದು ಕೋರಿರುವುದಾಗಿ ವಿವರಿಸಿದರು.

ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಮೆಟ್ರೊ ಪ್ರಯಾಣ ದರದಲ್ಲಿ ಕಡಿತ ಮಾಡುವಂತೆ ಸಲಹೆ ನೀಡಿದರು.

ಅಭಿವೃದ್ಧಿಗೆ ಅನುದಾನವಲ್ಲದೆ, ಮೊದಲ ಬಾರಿ ಗೆದ್ದ ಶಾಸಕರಿಗೂ ಅನುದಾನ ಕೊಡುವಂತೆ ಮನವಿ ಮಾಡಲಾಯಿತು.

ಪೋಕ್ಸೋ: ಖುದ್ದು ಹಾಜರಿಗೆ ಯಡಿಯೂರಪ್ಪಗೆ ಸಮನ್ಸ್
ಅಭಿವೃದ್ಧಿಗೆ ಅನುದಾನ ನೀಡಿಲ್ಲ

ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಪ್ರತಿಸಾರಿಯೂ ಬಿಬಿಎಂಪಿಗೆ 6ರಿಂದ 8 ಸಾವಿರ ಕೋಟಿ ರೂ. ಅನುದಾನ ಬಜೆಟ್‌ನಲ್ಲಿ ಮೀಸಲಿಡಲಾಗುತ್ತಿತ್ತು, ಕಳೆದೆರಡು ವರ್ಷಗಳಿಂದ ಬೆಂಗಳೂರು ಅಭಿವೃದ್ಧಿಗೆ ಅನುದಾನ ನೀಡಿಲ್ಲ ಎಂಬುದನ್ನು ಗಮನಕ್ಕೆ ತರಲಾಗಿದೆ.

ಇತಿ-ಮಿತಿಯೊಳಗೆ ಎಷ್ಟು ಸಾಧ್ಯವೋ ಅಷ್ಟು ಅನುದಾನ ಒದಗಿಸುವುದಾಗಿ ಭರವಸೆ ನೀಡಿದ್ದಾರೆ, ಗ್ರೇಟರ್ ಬೆಂಗಳೂರು ನೆಪದಲ್ಲಿ ಬಿಬಿಎಂಪಿ ಚುನಾವಣೆ ಮುಂದೂಡದೆ, ಶೀಘ್ರ ಚುನಾವಣೆ ನಡೆಸಬೇಕೆಂಬ ಒತ್ತಾಯಕ್ಕೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅವೈಜ್ಞಾನಿಕ ಟನೆಲ್ ಮಾರ್ಗ ವಿಷಯವನ್ನೂ ವಿಧಾನಮಂಡಲದ ಅಧಿವೇಶನದಲ್ಲಿ ಪ್ರಸ್ತಾಪಿಸಲಿದ್ದೇವೆ.

ನಗರದ ದುಸ್ಥಿತಿ

ಈ ಹಿಂದೆ ಬೆಂಗಳೂರು ನಗರಕ್ಕೆ ಇಂಥ ದುಸ್ಥಿತಿ ಬಂದಿರಲಿಲ್ಲ, ಯಡಿಯೂರಪ್ಪ ಅಧಿಕಾರದಲ್ಲಿದ್ದಾಗ ಬಿಜೆಪಿ ಅಲ್ಲದೆ ಕಾಂಗ್ರೆಸ್ ಶಾಸಕರಿಗೂ ಹೆಚ್ಚಿನ ಅನುದಾನ ನೀಡಿದ್ದರು ಎಂದರು.

ಆರ್. ಅಶೋಕ್ ಮಾತನಾಡಿ, ನಗರದ ರಸ್ತೆಗಳ ಅವ್ಯವಸ್ಥೆ, ಪಾರ್ಕ್ ವಾಚ್‌ಮನ್‌ಗಳಿಗೂ ಹಣ ನೀಡಲೂ ಸಾಧ್ಯವಾಗದ ಪರಿಸ್ಥಿತಿ ನೋಡಿ, ಎರಡು ವರ್ಷ ಕಾದು ವಿಧಿಯಿಲ್ಲದೆ ಮುಖ್ಯಮಂತ್ರಿ ಭೇಟಿ ಮಾಡಿದ್ದೇವೆ.

ಒಂದೆಡೆ ಬೆಲೆ ಏರಿಕೆ, ಇನ್ನೊಂದೆಡೆ ಅಭಿವೃದ್ಧಿ ಕುಂಠಿತವಾಗಿದೆ, ಬಿಜೆಪಿ ಆಡಳಿತದಲ್ಲಿ ಪ್ರತೀ ವರ್ಷ ಅನುದಾನ ಕೊಡಲಾಗುತ್ತಿತ್ತು, ಪ್ರಸ್ತುತ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 120 ರಿಂದ 150 ಕೋಟಿ ರೂ. ನೀಡಲು ಮನವಿ ಮಾಡಿರುವುದಾಗಿ ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp delegationcm siddaramaiahmore aid to bengaluru promised
0 FacebookTwitterPinterestEmail
admin

previous post
ಲಿಂಗಾಯತರಿಗೆ ವಿಜಯೇಂದ್ರ ಅದ್ವಿತೀಯ ನಾಯಕ !
next post
ಪೋಕ್ಸೋ: ಖುದ್ದು ಹಾಜರಿಗೆ ಯಡಿಯೂರಪ್ಪಗೆ ಸಮನ್ಸ್

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ