Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಚಿನ್ನ ಸಾಗಿಸಿಲ್ಲ: ಡಿಆರ್‌ಐ ಡಿಜಿಗೆ ರನ್ಯಾ ರಾವ್ ಪತ್ರ

by admin March 15, 2025
written by admin March 15, 2025 0 comments 1 minutes read
0FacebookTwitterPinterestEmail
148

ಬೆಂಗಳೂರು:ನಾನು ಚಿನ್ನ ಕಳ್ಳಸಾಗಣೆ ಮಾಡಿಲ್ಲ, ನನ್ನ ಮೇಲೆ ಬಲವಂತವಾಗಿ ಸುಳ್ಳು ಮೊಕದ್ದಮೆ ದಾಖಲಿಸಲಾಗಿದೆ ಎಂದು ಚಿತ್ರನಟಿ ರನ್ಯಾ ರಾವ್ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಹೆಚ್ಚುವರಿ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ.

ಈ ಸಂಬಂಧ ನಾಲ್ಕು ಪುಟಗಳ ದೂರನ್ನು ಗುಪ್ತಚರ ಎಸ್‌ಪಿ ಮೂಲಕ ಕೇಂದ್ರ ಅಧಿಕಾರಿಗೆ ಜೈಲಿನಿಂದಲೇ ರವಾನೆ ಮಾಡಿದ್ದಾರೆ.

ವಿಮಾನದಲ್ಲೇ ಹಲ್ಲೆ

ವಿಮಾನದಲ್ಲೇ ತನ್ನ ಮೇಲೆ ಹಲ್ಲೆ ನಡೆಸಿದ ಡಿಆರ್‌ಐ ಅಧಿಕಾರಿಗಳು, ಮುಖದ ಮೇಲೆ ಹಲ್ಲೆ ನಡೆಸಿದರು.

ಅಲ್ಲದೆ, ನ್ಯಾಯಾಧೀಶರ ಮುಂದೆ ಹಿಂಸೆ ನೀಡಿದರೆಂದು ಹೇಳಿಕೆ ಕೊಟ್ಟರೆ ನಿಮ್ಮ ತಂದೆಯ ಹೆಸರನ್ನೂ ಈ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದ್ದರು.

ನಿಮ್ಮ ತಂದೆ ಈ ಪ್ರಕರಣದಲ್ಲಿ ಶಾಮೀಲಾಗಿಲ್ಲ ಎಂಬುದು ತಿಳಿದಿದೆ, ಆದರೂ ಅವರ ಹೆಸರನ್ನು ಪ್ರಕರಣದಲ್ಲಿ ಎಳೆದು ತರುವುದಾಗಿ ಬೆದರಿಕೆ ಹಾಕಿದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇಲ್ಲ-ಸಲ್ಲದ ಆರೋಪ

ದುಬೈನಿಂದ ನಾನು ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಲವಂತವಾಗಿ ಬಂಧಿಸಿ, ಇಲ್ಲ-ಸಲ್ಲದ ಆರೋಪ ಹೊರಿಸಿದ್ದಾರೆ.

ನಾನು ಚಿನ್ನವನ್ನೇ ತಂದಿಲ್ಲ, ನಾನು ಅಮಾಯಕಿ, ನನ್ನ ಮೇಲೆ ಆರೋಪ ಮಾಡಲಾಗಿದೆ, ಡಿಆರ್‌ಐ ಅಧಿಕಾರಿಗಳು ಯಾವ ಉದ್ದೇಶದಿಂದ ನನ್ನ ಮೇಲೆ ಆರೋಪ ಹೊರಿಸಿ ಬಲವಂತವಾಗಿ ಹೇಳಿಕೆ ಪಡೆದುಕೊಂಡು, ತಪ್ಪೊಪ್ಪಿಗೆ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದಾರೆ ಎಂಬುದು ತಿಳಿದಿಲ್ಲ.

ನ್ಯಾಯಾಲಯಕ್ಕೆ ನನ್ನನ್ನು ಹಾಜರುಪಡಿಸುವವರೆಗೂ ಅಧಿಕಾರಿಗಳು ಮಾನಸಿಕವಾಗಿ ಹಿಂಸೆ ಕೊಟ್ಟಿದ್ದಾರೆ, ಅಲ್ಲದೆ, ನನ್ನ ಮುಖ ಸೇರಿದಂತೆ ಹತ್ತರಿಂದ 15 ಬಾರಿ ದೈಹಿಕ ಹಲ್ಲೆ ನಡೆಸಿದ್ದಾರೆ.

ನಾನು ನಿರಪರಾಧಿ

ನನ್ನ ವಿರುದ್ಧ ವ್ಯವಸ್ಥಿತ ಪಿತೂರಿ ನಡೆದಿದೆ, ನಾನು ನಿರಪರಾಧಿ, ದುಬೈನಿಂದ ಬೆಂಗಳೂರಿಗೆ ಹಿಂತಿರುಗುವವರೆಗೆ ಏನು ನಡೆದಿದೆ ಎಂಬುದೇ ನನಗೆ ತಿಳಿಯದು.

ನನ್ನ ಮೇಲೆ 14 ಕೆ.ಜಿ.ಗೂ ಹೆಚ್ಚು ಚಿನ್ನ ಕಳ್ಳಸಾಗಣೆ ಆರೋಪ ಮಾಡಲಾಗಿದೆ, ದುಬೈ ವಿಮಾನ ನಿಲ್ದಾಣದಲ್ಲೇ ತಪಾಸಣೆಗೆ ಒಳಗಾಗಿದ್ದೇನೆ, ಅಲ್ಲಿ, ಇಲ್ಲದ ಚಿನ್ನ ಇಲ್ಲಿ ಹೇಗೆ ನನ್ನ ಬಳಿ ಇರಲು ಸಾಧ್ಯ.

ಮೂರು ದಿನಗಳ ಕಾಲ ಅಧಿಕಾರಿಗಳ ವಶದಲ್ಲಿದ್ದಾಗ, ನನಗೆ ಭಾರೀ ಕಿರುಕುಳ ಮತ್ತು ಹಿಂಸೆ ನೀಡಿ, ಬಲವಂತವಾಗಿ ಹೇಳಿಕೆಗಳಿಗೆ ಹಾಗೂ ಸುಮಾರು 40 ಬಿಳಿ ಕಾಗದಗಳ ಮೇಲೆ ಸಹಿ ಹಾಕಿಸಿಕೊಂಡಿದ್ದು, ಅದಕ್ಕೂ ನನಗೂ ಸಂಬಂಧ ಇಲ್ಲ.

ವ್ಯವಸ್ಥಿತ ಪಿತೂರಿ ಸಂಶಯ

ಅಧಿಕಾರಿಗಳು ವ್ಯವಸ್ಥಿತವಾಗಿ ನನ್ನ ವಿರುದ್ಧ ಪಿತೂರಿ ನಡೆಸಿರುವ ಸಂಶಯ ಬರುತ್ತಿದೆ, ಇವರುಗಳು ನನ್ನನ್ನು ಏತಕ್ಕೆ ಗುರಿ ಮಾಡಿಕೊಂಡಿದ್ದಾರೆ ಎಂಬುದು ತಿಳಿದಿಲ್ಲ.

ವಿಚಾರಣೆ ಹೆಸರಿನಲ್ಲಿ ನನಗೆ ಚಿತ್ರಹಿಂಸೆ ನೀಡಿದ್ದು, ಮೂರು-ನಾಲ್ಕು ದಿನ ಸರಿಯಾಗಿ ಆಹಾರ ನೀಡದೆ, ನಿದ್ರೆಯನ್ನೂ ಮಾಡಲು ಬಿಡದೆ ಹಿಂಸೆ ಮಾಡಿದ್ದಾರೆ.

ಕೆಳಹಂತದ ಅಧಿಕಾರಿಗಳ ವರ್ತನೆ ಮತ್ತು ನಡತೆ ಬಗ್ಗೆ ನೀವೇ ತನಿಖೆ ನಡೆಸಿ, ನನ್ನನ್ನು ಬಂಧಮುಕ್ತಗೊಳಿಸಬೇಕು ಎಂಬುದಾಗಿ ಮನವಿ ಮಾಡಿದ್ದಾರೆ.

ನಾಲ್ಕು ಪುಟಗಳ ಪತ್ರದಲ್ಲಿ ಎಲ್ಲಿಯೂ ತಮ್ಮ ಸಾಕುತಂದೆ ಡಿಜಿಪಿ ರಾಮಚಂದ್ರ ರಾವ್ ಹೆಸರನ್ನು ರನ್ಯಾ ರಾವ್ ಪ್ರಸ್ತಾಪಿಸಿಲ್ಲ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
gold smugglingletter to dri dgranya rao
0 FacebookTwitterPinterestEmail
admin

previous post
ಶಿವಕುಮಾರ್ ಬೆಂಬಲದಿಂದ ಸುಭದ್ರ ಸರ್ಕಾರ ರಚನೆ !
next post
ಡ್ರಗ್ಸ್ ಮಾಫಿಯಾ ಕಿತ್ತೊಗೆಯುವುದು ಸರ್ಕಾರದ ಗುರಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ